Skip to main content

Posts

Showing posts from July, 2010

ಬಸವಣ್ಣನ ವಚನಗಳು - 91 ರಿಂದ 100 ರವರೆಗೆ

ಬಸವಣ್ಣನ ವಚನಗಳು - 91 ರಿಂದ 100 ರವರೆಗೆ ೯೧. ಪರಷ ಮುಟ್ಟಿದ ಬಳಿಕ ಕಬ್ಬುನವಾಗದು ನೋಡಾ! ಲಿಂಗ(ವ) ಮುಟ್ಟಿದ ಬಳಿಕ ಕುಚಿತ್ತಾಚಾರವಾಗದು ನೋಡಾ ಕೂಡಲಸಂಗನ ಶರಣರು ಅನ್ಯವನರಿಯರಾಗಿ. ೯೨. ದೇವಲೋಕ ಮರ್ತ್ಯಲೋಕವೆಂಬುದು ಬೇರೆ ಮತ್ತುಂಟೆ ? ಇಹಲೋಕದೊಳಗೇ ಮತ್ತನಂತಲೋಕ! ಶಿವಲೋಕ ಶಿವಾಚಾರವಯ್ಯ, ಶಿವಭಕ್ತನಿದ್ದ ಠಾವೇ ದೇವಲೋಕ, ಭಕ್ತನಂಗಳವೇ ವಾರಣಾಸಿ, ಶಿವಭಕ್ತನ ಕಾಯವೇ ಕೈಲಾಸ, ಇದು ಸತ್ಯ ಕೂಡಲಸಂಗಮದೇವ. ೯೩. ಕಟ್ಟಿದಿರಲ್ಲಿ ಶಿವಭಕ್ತನ ಕಂಡು, ದೃಷ್ಟಿಯಾರೆ ಮನಮುಟ್ಟಿ ನೋಡಿ ಶರಣೆಂದರೆ ಹುಟ್ಟೇಳು ಜನ್ಮದ ಪಾಪ ಬಿಟ್ಟು ಹೋಹವು ನೋಡಾ! ಮುಟ್ಟಿ ಚರಣಕ್ಕೆರಗಿದರೆ, ತನು ಒಪ್ಪಿದಂತಿಹುದು ಪರುಷ ಮುಟ್ಟಿದಂತೆ. ಕರ್ತೃ ಕೂಡಲಸಂಗನ ಶರಣರ ಸಂಗವು! ಮತ್ತೆ ಭವಮಾಲೆಯ ಹೊದ್ದಲೀಯದು ನೋಡಾ! ೯೪. ಆರಾರ ಸಂಗವೇನೇನ ಮಾಡದಯ್ಯ! ಕೀಡೆ ಕುಂಡಲಿಗನಾಗದೇನಯ್ಯ ? ಚಂದನದ ಸನ್ನಿಧಿಯಲ್ಲಿ, ಪರಿಮಳ ತಾಗಿ ಬೇವು-ಬೊಬ್ಬುಲಿ-ತರಿಯ ಗಂಧಂಗಳಾಗವೆ ? ನಮ್ಮ ಕೂಡಲಸಂಗನ ಶರಣರ ಸನ್ನಿಧಿಯಲ್ಲಿದ್ದು ಕರ್ಮ ನಿರ್ಮಳವಾಗದಿಹುದೇ ? ೯೫. ಹಾವಿನ ಡೊಂಕು ಹುತ್ತಕ್ಕೆ ಸಸಿನ. ನದಿಯ ಡೊಂಕು ಸಮುದ್ರಕ್ಕೆ ಸಸಿನ. ನಮ್ಮ ಕೂಡಲಸಂಗನ ಶರಣರ ಡೊಂಕು ಲಿಂಗಕ್ಕೆ ಸಸಿನ. ೯೬. ಆಳಿಗೊಂಡಿಹರೆಂದು ಅಂಜಲದೇಕೆ ? ನಾಸ್ತಿಕವಾಡಿಹರೆಂದು ನಾಚಲದೇಕೆ ? ಆರಾದಡಾಗಲಿ ಶ್ರೀ ಮಹಾದೇವಂಗೆ ಶರಣೆನ್ನಿ. ಏನೂ ಅರಿಯೆನೆಂದು ಮೋನಗೊಂಡಿರಬೇಡ ಕೂಡಲಸಂಗಮದೇವರ

ಬಸವಣ್ಣನ ವಚನಗಳು - 81 ರಿಂದ 90 ರವರೆಗೆ

ಬಸವಣ್ಣನ ವಚನಗಳು - 81 ರಿಂದ 90 ರವರೆಗೆ ೮೧. ಏತ ತಲೆವಾಗಿದರೇನು ? ಗುರುಭಕ್ತನಾಗಬಲ್ಲುದೆ ? ಇಕ್ಕುಳ ಕೈ ಮುಗಿದರೇನು ? ಭೃತ್ಯಾಚಾರಿಯಾಗಬಲ್ಲುದೆ ? ಗಿಳಿಯೋದಿದರೇನು ? ಲಿಂಗವೇದಿಯಾಗಬಲ್ಲುದೆ ? ಕೂಡಲಸಂಗನ ಶರಣರು ಬಂದ ಬರವ, ನಿಂದ ನಿಲವ ಅನಂಗಸಂಗಿಗಳೆತ್ತ ಬಲ್ಲರು ? ೮೨. ಒಲವಿಲ್ಲದ ಪೂಜೆ, ನೇಹವಿಲ್ಲದ ಮಾಟ; ಆ ಪೂಜೆಯು, ಆ ಮಾಟವು ಚಿತ್ರದ ರೂಹು ಕಾಣಿರಣ್ಣ! ಚಿತ್ರದ ಕಬ್ಬು ಕಾಣಿರಣ್ಣ! ಅಪ್ಪಿದರೆ ಸುಖವಿಲ್ಲ, ಮೆಲಿದರೆ ಸವಿಯಿಲ್ಲ; ಕೂಡಲಸಂಗಮದೇವ, ನಿಜವಿಲ್ಲದವನ ಭಕ್ತಿಯಿಂತುಟು! ೮೩. ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇಯಿತ್ತು! ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ ಹೋಯಿತ್ತು! ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು. ಕೊಂದವರುಳಿದರೆ ಕೂಡಲಸಂಗಮದೇವ ? ೮೪. ಹಾವಿನ ಬಾಯಿ ಕಪ್ಪೆ ಹಸಿದು ತಾ ಹಾರುವ ನೊಣಕಾಸೆ ಮಾಡುವಂತೆ, ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು ಮೇಲಿನ್ನೇಸು ಕಾಲ ಬದುಕುವನೋ ?! ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ. ೮೫. ಅರತವಡಗದು. ಕ್ರೋಧ ತೊಲಗದು; ಕ್ರೂರಕುಭಾಷೆ ಕುಹುಕ ಬಿಡದನ್ನಕ ನೀನೆತ್ತಲು ? ಶಿವನೆತ್ತಲು ? ಹೋಗತ್ತ ಮರುಳೆ! ಭವರೋಗವೆಂಬ ತಿಮಿರ ತಿಳಿಯದನ್ನಕ ಕೂಡಲಸಂಗಯ್ಯನೆತ್ತ ? ನೀನೆತ್ತ ? ಮರುಳೇ! ೮೬. ಹಾವು ತಿಂದವರ ನುಡಿಸ ಬಹುದು! ಗರ ಹೊಡೆದವರ ನುಡಿಸ ಬಹುದು! ಸಿರಿಗರ ಹೊ

ಬಸವಣ್ಣನ ವಚನಗಳು - 71 ರಿಂದ 80 ರವರೆಗೆ

ಬಸವಣ್ಣನ ವಚನಗಳು - 71 ರಿಂದ 80 ರವರೆಗೆ ೭೧. ಅಳೆಯುತ್ತ ಅಳೆಯುತ್ತ ಬಳಲುವರಲ್ಲದೆ ಕೊಳಗ ಬಳಲುವುದೇ ? ನಡೆಯುತ್ತ ನಡೆಯುತ್ತ ಬಳಲುವರಲ್ಲದೆ, ಬಟ್ಟೆ ಬಳಲುವುದೆ ? ಶ್ರವವ ಮಾಡುತ್ತ ಮಾಡುತ್ತ ಬಳಲುವರಲ್ಲದೆ ಕೋಲು ಬಳಲುವುದೆ ? ನಿಜವನರಿಯದ ಭಕ್ತ ಬಳಲುವನಲ್ಲದೆ, ಲಿಂಗ ಬಳಲುವುದೆ ? ಕೂಡಲಸಂಗಮದೇವ, ಅರಸರಿಯದ ಬಿಟ್ಟಿಯೋಪಾದಿ! ೭೨. ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ ಹರದ ಕುಳ್ಳಿರ್ದ ನಮ್ಮ ಮಹದೇವಸೆಟ್ಟಿ. ಒಮ್ಮನವಾದರೆ ಒಡನೆ ನುಡಿವನು; ಇಮ್ಮನವಾದರೆ ನುಡಿಯನು. ಕಾಣಿಯ ಸೋಲ; ಅರ್ಧ ಕಾಣಿಯ ಗೆಲ್ಲ. ಜಾಣ ನೋಡವ್ವ ನಮ್ಮ ಕೂಡಲಸಂಗಮದೇವ. ೭೩. ನಂಬರು, ನಚ್ಚರು; ಬರಿದೆ ಕರೆವರು; ನಂಬಲರಿಯರೀ ಲೋಕದ ಮನುಜರು! ನಂಬಿ ಕರೆದಡೆ, "ಓ" ಎನ್ನನೇ ಶಿವನು ? ನಂಬದೆ, ನಚ್ಚದೆ ಬರಿದೆ ಕರೆವರ ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ. ೭೪. ಹುತ್ತವ ಬಡಿದರೆ ಉರಗ ಸಾವುದೆ ಘೋರತಪವ ಮಾಡಿದರೇನು ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ ಕೂಡಲಸಂಗಮದೇವ ? ೭೫. ಮೇರು ಗುಣವನರಸುವುದೇ ಕಾಗೆಯಲ್ಲಿ ? ಪರುಷ ಗುಣವನರಸುವುದೇ ಕಬ್ಬುನದಲ್ಲಿ ? ಸಾಧು ಗುಣವನರಸುವನೇ ಅವಗುಣಿಯಲ್ಲಿ ? ಚಂದನ ಗುಣವನರಸುವುದೇ ತರುಗಳಲ್ಲಿ ? ಸರ್ವಗುಣಸಂಪನ್ನ ಲಿಂಗವೇ, ನೀನೆನ್ನಲ್ಲಿ ಅವಗುಣವನರಸುವುದೇ, ಕೂಡಲಸಂಗಮದೇವ! ೭೬ ಸಾರ, ಸಜ್ಜನರ ಸಂಗವ ಮಾಡುವುದು! ದೂರ, ದುರ್ಜನರ ಸಂಗ ಬೇಡವಯ್ಯ! ಆವ ಹಾವಾದರೇನು

ಬಸವಣ್ಣನ ವಚನಗಳು - 61 ರಿಂದ 70 ರವರೆಗೆ

ಬಸವಣ್ಣನ ವಚನಗಳು - 61 ರಿಂದ 70 ರವರೆಗೆ  ೬೧. ಓಡೆತ್ತ ಬಲ್ಲುದೋ ಅವಲಕ್ಕಿಯ ಸವಿಯ ? ಕೋಡಗ ಬಲ್ಲುದೇ ಸೆಳೆಮಂಚದ ಸುಖವ ? ಕಾಗೆ ನಂದನವನದೊಳಗಿದ್ದರೇನು, ಕೋಗಿಲೆಯಾಗಬಲ್ಲುದೇ ? ಕೊಳನ ತಡಿಯಲೊಂದು ಹೊರಸು ಕುಳಿತಿದ್ದರೇನು ಕಳಹಂಸೆಯಾಗಬಲ್ಲುದೇ ಕೂಡಲಸಂಗಮದೇವ ? ೬೨. ಎನಿಸು ಕಾಲ ಕಲ್ಲು ನೀರೊಳಗಿದ್ದರೇನು, ನೆನೆದು ಮೃದುವಾಗಬಲ್ಲುದೆ ? ಎನಿಸುಕಾಲ ನಿಮ್ಮ ಪೂಜಿಸಿ ಏವೆನಯ್ಯಾ ಮನದಲ್ಲಿ ದೃಢವಿಲ್ಲದನ್ನಕ ? ನಿಧಾನವ ಕಾಯ್ದಿದ್ದ ಬೆಂತರನ ವಿಧಿ ಎನಗಾಯಿತ್ತು ಕಾಣಾ ಕೂಡಲಸಂಗಮದೇವ. ೬೩. ಕೂಸುಳ್ಳ ಸೂಳೆ ಧನದಾಸೆಗೊತ್ತೆಗೊಂಡರೆ ಕೂಸಿಂಗಿಲ್ಲ, ಬೊಜಗಂಗಿಲ್ಲ; ಕೂಸನೊಮ್ಮೆ ಸಂತವಿಡುವಳು, ಬೊಜಗನನೊಮ್ಮೆ ನೆರೆವಳು; ಧನದಾಸೆ ಬಿಡದು ಕೂಡಲಸಂಗಮದೇವ. ೬೪. ಎರದೆಲೆಯಂತೆ ಒಳಗೊಂದು ಹೊರಗೊಂದಾದರೆ ಮೆಚ್ಚುವನೆ ? ತಾನು ತನ್ನಂತೆ! ನುಡಿ ಎರಡಾದರೆ ಮೆಚ್ಚುವನೆ ? ತಾನು ತನ್ನಂತೆ! ನಡೆ ಎರಡಾದರೆ ಮೆಚ್ಚುವನೆ ? ತಾನು ತನ್ನಂತೆ! ಉಡುವಿನ ನಾಲಗೆಯಂತೆ ಎರಡಾದರೆ ಮೆಚ್ಚುವನೇ ? ಕೂಡಲಸಂಗಮದೇವ ತಾನು ತನ್ನಂತೆ! ೬೫. ಭಕ್ತರ ಕಂಡರೆ ಬೋಳಪ್ಪಿರಯ್ಯ; ಸವಣರ ಕಂಡರೆ ಬತ್ತಲೆಯಪ್ಪಿರಯ್ಯ ಹಾರುವರ ಕಂಡರೆ ಹರಿನಾಮವೆಂಬಿರಯ್ಯ; ಅವರವರ ಕಂಡರೆ ಅವರವರಂತೆ ಸೂಳೆಗೆ ಹುಟ್ಟಿದವರ ತೋರದಿರಯ್ಯ. ಕೂಡಲಸಂಗಯ್ಯನ ಪೂಜಿಸಿ ಅನ್ಯದೈವಂಗಳಿಗೆರಗಿ ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯ! ೬೬. ಗಂಡ ಶಿವಲಿಂಗದೇವರ ಭಕ್ತ,

ಸರ್ವಜ್ಞನ ವಚನಗಳು - 61 ರಿಂದ 70

ಸರ್ವಜ್ಞನ ವಚನಗಳು -  61 ರಿಂದ 70 ೬೧. ಒಮ್ಮನದ ಶಿವಪೂಜೆ ಗಮ್ಮನೆ ಮಾಡುವದು ಇಮ್ಮನವ ಪಿಡಿದು ಕೆಡಬೇಡ ವಿಧಿವಶವು ಸರಿಮ್ಮನೇ ಕೆಡಗು ಸರ್ವಜ್ಞ ೬೨. ಅಷ್ಟವಿಧದರ್ಚನೆಯ ನೆಷ್ಟು ಮಾಡಿದರೇನು? ನಿಷ್ಠೆ ನೆಲೆಗೊಳದೆ ಭಜಿಸುವಾ ಪೂಜೆ ತಾ ನಷ್ಟ ಕಾಣಯ್ಯ ಸರ್ವಜ್ಞ ೬೩. ಇಷ್ಟಲಿಂಗದಿ ಮನವ ನೆಟ್ಟನೆಯ ನಿಲಿಸದಲೆ ಕಷ್ಟಭ್ರಮೆಗಳಲಿ ಮುಳುಗಿದನು ಕರ್ಮದಾ ಬಟ್ಟೆಗೆ ಹೋಹ ಸರ್ವಜ್ಞ ೬೪. ಎಷ್ಟು ಬಗೆಯಾರತಿಯ ಮುಟ್ಟಿಸಿದ ಫಲವೇನು? ನಿಷ್ಠೆಯಿಲ್ಲದವನ ಶಿವಪೂಜೆ ಹಾಳೂರ ಕೊಟ್ಟಗುರಿದಂತೆ ಸರ್ವಜ್ಞ ೬೫. ಒಸೆದೆಂಟು ದಿಕ್ಕಿನಲ್ಲಿ ಮಿಸುನಿ ಗಿಣ್ಣಲು ಗಿಂಡಿ ಹಸಿದು ಮಾಡುವನ ಪೂಜೆಯದು ಬೋಗಾರ ಪಸರ ವಿಟ್ಟಂತೆ ಸರ್ವಜ್ಞ ೬೬. ಬತ್ತಿ ಹೆತ್ತುಪ್ಪವನು ಹತ್ತಿಸಿದ ಫಲವೇನು? ನಿತ್ಯ ನೆಲೆಗೊಳದೆ ಭಜಿಸುವಾ ಪೂಜೆ ತಾ ಹತ್ತಿಗೇಡೆಂದ ಸರ್ವಜ್ಞ ೬೭. ಎಣಿಸುತಿರ್ಪುದು ಬಾಯಿ ಪೊಣರುತಿರ್ಪುದು ಬೆರಳು ಕ್ಷಣಕ್ಕೊಮ್ಮೆ ಒಂದನೆಣಿಸುವಾ ಜಪಕೊಂದು ಕುಣಿಕೆಯುಂಟೆಂದ ಸರ್ವಜ್ಞ ೬೮. ಎಣಿಸುತಿರ್ಪುದು ಬೆರಳು ಗುಣಿಸುತಿರ್ಪುದು ಜಿಹ್ವೆ ಮನಹೋಗಿ ಹಲವ ನೆನೆದರದು ಹಾಳೂರ ಶುನಕನಂತಕ್ಕು ಸರ್ವಜ್ಞ ೬೯. ಕೊಲುವ ಕೈಯೊಳು ಪೂಜೆ, ಮೆಲುವ ಬಾಯೊಳು ಮಂತ್ರ ಸಲೆ ಪಾಪವೆರೆದ ಮನದೊಳಗೆ ಪೂಜಿಪನೆ ಹೊಲೆಯ ಕಾಣಯ್ಯ ಸರ್ವಜ್ಞ ೭೦. ಲಿಂಗಪೂಜಿಸುವಾತ ಜಂಗಮಕ್ಕೆ ನೀಡಿದೊಡೆ ಲಿಂಗದಾ ಕ್ಷೇಮ ಘನವಾಗಿ ಆ ಲಿಂಗ ಹಿಂಗದಿರುತಿಹುದು ಸರ್ವಜ್ಞ

ಬಸವಣ್ಣನ ವಚನಗಳು - 51 ರಿಂದ 60 ರವರೆಗೆ

ಬಸವಣ್ಣನ ವಚನಗಳು - 51 ರಿಂದ 60 ರವರೆಗೆ ೫೧. ನೀರಿಂಗೆ ನೈದಿಲೇ ಶೃಂಗಾರ, ಊರಿಂಗೆ ಆರವೆಯೇ ಶೃಂಗಾರ, ಸಮುದ್ರಕ್ಕೆ ತೆರೆಯೇ ಶೃಂಗಾರ ನಾರಿಗೆ ಗುಣವೇ ಶೃಂಗಾರ ಗಗನಕ್ಕೆ ಚಂದ್ರಮನೇ ಶೃಂಗಾರ ನಮ್ಮ ಕೂಡಲಸಂಗನ ಶರಣರಿಗೆ ನೊಸಲ ವಿಭೂತಿಯೇ ಶೃಂಗಾರ. ೫೨. ಅಕಟಕಟಾ ಬೆಡಗುಬಿನ್ನಾಣವೇನೋ ?! 'ಓಂ ನಮಶ್ಶಿವಾಯ' ಎಂಬುದೇ ಮಂತ್ರ! 'ಓಂ ನಮಶ್ಶಿವಾಯ' ಎಂಬುದೇ ತಂತ್ರ! ನಮ್ಮ ಕೂಡಲಸಂಗಮದೇವರ ಮಾಣದೆ ನೆನವುದೇ ಮಂತ್ರ! ೫೩. ಎಮ್ಮವರು ಬೆಸಗೊಂಡರೆ ಶುಭಲಗ್ನವೆಂದೆನ್ನಿರಯ್ಯ ರಾಶಿ ಕೂಟ ಋಣ ಸಂಬಂಧ ಉಂಟೆಂದು ಹೇಳಿರಯ್ಯ ನಾಳಿನ ದಿನಕಿಂದಿನ ದಿನ ಲೇಸೆಂದು ಹೇಳಿರಯ್ಯ ಚಂದ್ರಬಲ ತಾರಾಬಲ ಉಂಟೆಂದು ಹೇಳಿರಯ್ಯ ಕೂಡಲಸಂಗಮದೇವನ ಪೂಜಿಸಿದ ಫಲ ನಿಮ್ಮದಯ್ಯ. ೫೪. ತಾಳಮರದ ಕೆಳಗೆ ಒಂದು ಹಾಲ ಹರವಿಯಿದ್ದರೆ ಅದ ಹಾಲ ಹರವಿಯೆನ್ನರು: ಸುರೆಯ ಹರವಿಯೆಂಬರು. ಈ ಭಾವಸಂದೆಯವ ಮಾಣಿಸಾ ಕೂಡಲಸಂಗಮದೇವ. ೫೫. ಕುಂಬಳ ಕಾಯಿಗೆ ಕಬ್ಬುನದ ಕಟ್ಟ ಕೊಟ್ಟರೆ ಕೊಳೆವುದಲ್ಲದೆ ಅದು ಬಲುಹಾಗ ಬಲ್ಲುದೆ ? ಅಳಿಮನದವಂಗೆ ದೀಕ್ಷೆಯ ಕೊಟ್ಟರೆ ಭಕ್ತಿಯೆಂತಹುದು ? ಮುನ್ನಿನಂತೆ, ಕೂಡಲಸಂಗಯ್ಯ! ಮನಹೀನನ ಮೀಸಲ ಕಾಯ್ದಿರಿಸಿದಂತೆ!! ೫೬. ಸಗಣಿಯ ಬೆನಕನ ಮಾಡಿ ಸಂಪಿಗೆಯರಳಲ್ಲಿ ಪೂಜಿಸಿದರೆ ರಂಜನೆಯಹುದಲ್ಲದೆ, ಅದರ ಗಂಜಳ ಬಿಡದಣ್ಣ! ಮಣ್ಣ ಪ್ರತಿಮೆಯ ಮಾಡಿ ಮಜ್ಜನಕ್ಕೆರೆದರೆ ನಿಚ್ಚ ಕೆಸರಹುದಲ್ಲದೆ ಅದರಚ್ಚಿಗ ಬಿಡದಣ್ಣ!! ಲೋಕದ

ಬಸವಣ್ಣನ ವಚನಗಳು - 41 ರಿಂದ 50 ರವರೆಗೆ

ಬಸವಣ್ಣನ ವಚನಗಳು - 41 ರಿಂದ 50 ರವರೆಗೆ ೪೧. ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯ ತಂದೆ, ಸುತ್ತಿ ಸುಳಿದು ನೋಡದಂತೆ ಅಂಧಕನ ಮಾಡಯ್ಯ ತಂದೆ. ಮತ್ತೊಂದ ಕೇಳದಂತೆ ಕಿವುಡನ ಮಾಡಯ್ಯ ತಂದೆ. ನಿಮ್ಮ ಶರಣರ ಪಾದವಲ್ಲದೆ ಅನ್ಯವಿಷಯಕ್ಕೆಳಸದಂತೆ ಇರಿಸು ಕೂಡಲಸಂಗಮದೇವ. ೪೨. ಎನ್ನ ವಾಮ-ಕ್ಷೇಮ ನಿಮ್ಮದಯ್ಯ ಎನ್ನ ಹಾನಿ-ವೃದ್ಧಿ ನಿಮ್ಮದಯ್ಯ ಎನ್ನ ಮಾನಾಪಮಾನವು ನಿಮ್ಮದಯ್ಯ ಬಳ್ಳಿಗೆ ಕಾಯಿ ದಿಮ್ಮಿತ್ತೆ ? ಕೂಡಲಸಂಗಮದೇವ. ೪೩. ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯ. ಇವ ನಮ್ಮವ, ಇವ ನಮ್ಮವ, ಇವನಮ್ಮವನೆಂದೆನಿಸಯ್ಯ ಕೂಡಲಸಂಗಮದೇವಯ್ಯ ನಿಮ್ಮ ಮನೆಯ ಮಗನೆಂದೆನಿಸಯ್ಯ. ೪೪. ನರ ಕೂರಂಬಿನಲೆಚ್ಚ; ಅವಂಗೊಲಿದೆಯಯ್ಯ ಅರಳಂಬಿನಲೆಚ್ಚ ಕಾಮನನುರಹಿದೆಯಯ್ಯ. ಇರುಳು ಹಗಲೆನ್ನದೆ ಪ್ರಾಣಘಾತವ ಮಾಡಿದ ಬೇಡನ ಕೈಲಾಸಕೊಯ್ದೆಯಯ್ಯ. ಎನ್ನನೇತಕೆ ಒಲ್ಲೆ ಕೂಡಲಸಂಗಮದೇವ ? ೪೫. ನೀನೊಲಿದರೆ ಕೊರಡು ಕೊನರುವುದಯ್ಯ. ನೀನೊಲಿದರೆ ಬರಡು ಹಯನಹುದಯ್ಯ. ನೀನೊಲಿದರೆ ವಿಷವಮೃತವಹುದಯ್ಯ. ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು ಕೂಡಲಸಂಗಮದೇವ. ೪೬. ಆಶೆಯೆಂಬ ಪಾಶದಲ್ಲಿ ಭವಬಂಧನವಾಗಿದ್ದೆನಯ್ಯ. ಸಕೃತೂ ನಿಮ್ಮ ನೆನೆಯಲೆನಗೆ ತೆರೆಹಿಲ್ಲವಯ್ಯ. ಕರುಣಾಕರ, ಅಭಯಕರ, ವರದಾನಿ ಕರುಣಿಸಯ್ಯ. ಸಂಸಾರಬಂಧವನು ಮಾಣಿಸಿ ಎನಗೆ ಕೃಪೆ ಮಾಡಿ ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸಯ್ಯ ಭಕ್ತಜನಮನೋವಲ್ಲಭ ಕೂಡಲಸಂಗಮದೇವ. ೪೭.

ಬಸವಣ್ಣನ ವಚನಗಳು - 31 ರಿಂದ 40 ರವರೆಗೆ

ಬಸವಣ್ಣನ ವಚನಗಳು - 31 ರಿಂದ 40 ರವರೆಗೆ ೩೧. ಆನು ಒಬ್ಬನು; ಸುಡುವರೈವರು. ಮೇಲೆ ಕಿಚ್ಚು ಘನ, ನಿಲಲು ಬಾರದು. ಕಾಡುಬಸವನ ಹುಲಿ ಕೊಂಡೊಯ್ದರೆ ಆರೈಯಲಾಗದೆ ಕೂಡಲಸಂಗಮದೇವ ? ೩೨. ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ, ತಿಳಿಯಲೀಯದು; ಎಚ್ಚರಲೀಯದು. ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯ ಲಿಂಗತಂದೆ. ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ. ೩೩. ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯ; ಪಶುವೇನ ಬಲ್ಲುದು ಹಸುರೆಂದೆಳಸುವುದು ವಿಷಯರಹಿತನ ಮಾಡಿ, ಭಕ್ತಿರಸವ ದಣಿಯ ಮೇಯಿಸಿ ಸುಬುದ್ಧಿಯೆಂಬುದಕವನೆರೆದು ನೋಡಿ ಸಲಹಯ್ಯ ಕೂಡಲಸಂಗಮದೇವ. ೩೪. ಅಯ್ಯ, ಎಳಗರು ತಾಯನರಸಿ ಬಳಲುವಂತೆ ಅಯ್ಯ, ನಿಮ್ಮನರಸಿ ಬಳಲುತ್ತಿದ್ದೇನೆ, ಅಯ್ಯ, ನೀವೆನ್ನ ಮನಕ್ಕೆ ಪ್ರಸನ್ನವ ಮಾಡಿ ಕಾರುಣ್ಯವ ಮಾಡಿರಯ್ಯ! ನೀವೆನ್ನ ಮನಕ್ಕೆ ನೆಲೆವನೆಯಾಗಿ ಕಾರುಣ್ಯವ ಮಾಡಿರಯ್ಯ! ನೀವಿನಿತು ಲೇಸನೀಯಯ್ಯ, ಅಂಬೇ, ಅಂಬೇ, ಕೂಡಲಸಂಗಮದೇವ! ೩೫. ಕೆಸರಲ್ಲಿ ಬಿದ್ದ ಪಶುವಿನಂತೆ ಅನು ದೆಸೆದೆಸೆಗೆ ಬಾಯ ಬಿಡುತಿದ್ದೇನಯ್ಯ ಅಯ್ಯಾ, ಆರೈವರಿಲ್ಲ-- "ಅಕಟಕಟಾ! ಪಶು" ವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ. ೩೬. ಬಡಪಶು ಪಂಕದಲ್ಲಿ ಬಿದ್ದರೆ ಕಾಲ ಬಡಿವುದಲ್ಲದೆ, ಬೇರೆ ಗತಿಯುಂಟೆ ? ಶಿವ ಶಿವಾ! ಹೋದಹೆ, ಹೋದಹೆನಯ್ಯ! ನಿಮ್ಮ ಮನದೆತ್ತಲೆನ್ನ ತೆಗೆಯಯ್ಯ ಪಶುವಾನು, ಪಶುಪತಿ ನೀನು. ತುಡುಗುಣಿಯೆಂ

ಬಸವಣ್ಣನ ವಚನಗಳು - 21 ರಿಂದ 30 ರವರೆಗೆ

ಬಸವಣ್ಣನ ವಚನಗಳು - 21 ರಿಂದ 30 ರವರೆಗೆ ೨೧. ಅಂದಣವನೇರಿದ ಸೊಣಗನಂತೆ ಕಂಡರೆ ಬಿಡದು ತನ್ನ ಮುನ್ನಿನ ಸ್ವಭಾವವನು ಸುಡು, ಸುಡು; ಮನವಿದು ವಿಷಯಕ್ಕೆ ಹರಿವುದು, ಮೃಡ, ನಿಮ್ಮನನುದಿನ ನೆನೆಯಲೀಯದು. ಎನ್ನೊಡೆಯನೇ, ಕೂಡಲಸಂಗಮದೇವ, ನಿಮ್ಮ ಚರಣವ ನೆನೆವಂತೆ ಕರುಣಿಸು, ಸೆರಗೊಡ್ಡಿ ಬೇಡುವೆ ನಿಮ್ಮ ಧರ್ಮ. ೨೨. ತುಪ್ಪದ ಸವಿಗೆ ಅಲಗ ನೆಕ್ಕುವ ಸೊಣಗನಂತೆನ್ನ ಬಾಳುವೆ ಸಂಸಾರಸಂಗವ ಬಿಡದು ನೋಡೆನ್ನ ಮನವು. ಈ ನಾಯಿತನವ ಮಾಣಿಸು ಕೂಡಲಸಂಗಮದೇವಯ್ಯ ನಿಮ್ಮ ಧರ್ಮ. ೨೩. ಒಂದು ಮೊಲಕ್ಕೆ ನಾಯನೊಂಬತ್ತ ಬಿಟ್ಟಂತೆ ಎನ್ನ ಬಿಡು, ತನ್ನ ಬಿಡೆಂಬುದು ಕಾಯವಿಕಾರ; ಎನ್ನ ಬಿಡು, ತನ್ನ ಬಿಡೆಂಬುದು ಮನೋವಿಕಾರ. ಕರಣೇಂದ್ರಿಯಗಳೆಂಬ ಸೊಣಗ ಮುಟ್ಟದ ಮುನ್ನ ಮನ ನಿಮ್ಮನೆಯ್ದುಗೆ ಕೂಡಲಸಂಗಮದೇವ. ೨೪. ತನ್ನ ವಿಚಾರಿಸಲೊಲ್ಲದು ಇದಿರ ವಿಚಾರಿಸ ಹೋಹುದೀ ಮನವು. ಏನು ಮಾಡುವೆನೀ ಮನವನು: ಎಂತು ಮಾಡುವೆನೀ ಮನವನು- ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಬೆಂದ ಮನವನು ? ೨೫. ತನ್ನಿಚ್ಛೆಯ ನುಡಿದರೆ ಮೆಚ್ಚುವುದೀ ಮನವು. ಇದಿರಿಚ್ಛೆಯ ನುಡಿದರೆ ಮೆಚ್ಚದೀ ಮನವು ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಮನವನು ಕಿಚ್ಚಿನೊಳಿಕ್ಕುವೆನು. ೨೬. ಸುಡಲೀ ಮನವೆನ್ನ (ಮುಡುಬನ) ಮಾಡಿತ್ತು ನಡೆವಲ್ಲಿ; ನುಡಿವಲ್ಲಿ ಅಧಿಕನೆಂದೆನಿಸಿತ್ತು. ಬೆಡಗಿನ ಕೀಲು ಕಳೆದು, ಕೆಡೆದ ಬಳಿಕ, ಕಡುಗೂಪ ಮಡದಿ ತಾ ಮುಟ್ಟಲಮ್ಮಳು; ಒಡಲನುರಿಗೊಂಬುದು: ಒಡವೆಯನರಸು

ಬಸವಣ್ಣನ ವಚನಗಳು - 11 ರಿಂದ 20 ರವರೆಗೆ

ಬಸವಣ್ಣನ ವಚನಗಳು - 11 ರಿಂದ 20 ರವರೆಗೆ ೧೧. ಸಂಸಾರವೆಂಬ ಸರ್ಪ ಮುಟ್ಟಲು ಪಂಚೇಂದ್ರಿಯವಿಷಯವೆಂಬ ವಿಷದಿಂದಾನು ಮುಂದುಗೆಟ್ಟೆನಯ್ಯ, ಆನು ಹೊರಳಿ ಬೀಳುತ್ತಿದ್ದೆನಯ್ಯ; "ಓಂ ನಮಶ್ಶಿವಾಯ" ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ ಕೂಡಲಸಂಗಮದೇವ. ೧೨. ಎಂದೋ, ಸಂಸಾರದ ದಂದುಗ ಹಿಂಗುವುದೆನಗೆಂದೋ ? ಮನದಲ್ಲಿ ಪರಿಣಾಮವಹುದೆನಗಿನ್ನೆಂದೊ ? ಕೂಡಲಸಂಗಮದೇವಾ ಇನ್ನೆಂದೋ ಪರಮಸಂತೋಷದಲಿಹುದೆನಗೆಂದೋ ? ೧೩. ಕಾಲಲಿ ಕಟ್ಟಿದ ಗುಂಡು, ಕೊರಳಲಿ ಕಟ್ಟಿದ ಬೆಂಡು! ತೇಲಲೀಯದು ಗುಂಡು, ಮುಳುಗಲೀಯದು ಬೆಂಡು! ಇಂತಪ್ಪ ಸಂಸಾರಶರಧಿಯ ದಾಂಟಿಸಿ ಕಾಲಾಂತಕನೇ ಕಾಯೋ, ಕೂಡಲಸಂಗಯ್ಯ! ೧೪. ಲೇಸ ಕಂಡು ಮನ ಬಯಸಿ ಬಯಸಿ ಆಶೆ ಮಾಡಿದರಿಲ್ಲ ಕಂಡಯ್ಯ. ತಾಳಮರಕ್ಕೆ ಕೈಯ್ಯ ನೀಡಿ, ಮೇಲ ನೋಡಿ ಗೋಣು ನೊಂದುದಯ್ಯ. ಕೂಡಲಸಂಗಮದೇವ ಕೇಳಯ್ಯ ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯ. ೧೫. ಚಂದ್ರೋದಯಕ್ಕೆ ಅಂಬುಧಿ ಹೆಚ್ಚುವುದಯ್ಯ. ಚಂದ್ರ ಕುಂದೆ ಕುಂದುವುದಯ್ಯ, ಚಂದ್ರಂಗೆ ರಾಹು ಅಡ್ಡ ಬಂದಲ್ಲಿ ಅಂಬುಧಿ ಬೊಬ್ಬಿಟ್ಟಿತ್ತೇ ಅಯ್ಯ ? ಅಂಬುಧಿಯ ಮುನಿ ಆಪೋಶನವ ಕೊಂಡಲ್ಲಿ ಚಂದ್ರಮನಡ್ಡ ಬಂದನೆ ಅಯ್ಯ ? ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ ಜಗದ್ ನಂಟ ನೀನೇ ಅಯ್ಯ ಕೂಡಲಸಂಗಮದೇವ. ೧೬. ಒಲೆ ಹತ್ತಿ ಉರಿದರೆ ನಿಲ ಬಹುದಲ್ಲದೆ ಧರೆ ಹತ್ತಿ ಉರಿದರೆ ನಿಲ ಬಾರದು. ಏರಿ ನೀರುಂಬಡೆ, ಬೇಲಿ ಕೈಯ ಮೇವಡೆ ನಾರಿ ತನ್ನ ಮನೆಯಲ್ಲಿ ಕಳ

ಬಸವಣ್ಣನ ವಚನಗಳು - 1 ರಿಂದ 10 ರವರೆಗೆ

ಬಸವಣ್ಣನ ವಚನಗಳು - 1 ರಿಂದ 10 ರವರೆಗೆ ೧. ಉದಕದೊಳಗೆ ಬೈಚಿಟ್ಟ ಬೈಕೆಯ ಕಿಚ್ಚಿನಂತೆ ಇದ್ದಿತ್ತು; ಸಸಿಯೊಳಗಣ ರಸದ ರುಚಿಯಂತೆ ಇದ್ದಿತ್ತು; ನನೆಯೊಳಗಣ ಪರಿಮಳದಂತೆ ಇದ್ದಿತ್ತು; ಕೂಡಲಸಂಗಮದೇವರ ನಿಲವು ಕನ್ನೆಯ ಸ್ನೇಹದಂತೆ ಇದ್ದಿತ್ತು. ೨. ಕಾಳಿಯ ಕಂಕಾಳದಿಂದ ಮುನ್ನ ತ್ರಿಪುರ ಸಂಹಾರದಿಂದ ಮುನ್ನ ಹರಿವಿರಿಂಚಿಗಳಿಂದ ಮುನ್ನ ಉಮೆಯ ಕಲ್ಯಾಣದಿಂದ ಮುನ್ನ ಮುನ್ನ, ಮುನ್ನ, ಮುನ್ನ, ಅಂದಂದಿಗೆ ಎಳೆಯ ನೀನು, ಹಳೆಯ ನಾನು ಮಹಾದಾನಿ ಕೂಡಲಸಂಗಮದೇವ. ೩. ಅಯ್ಯಾ, ನೀನು ನಿರಾಕಾರವಾದಲ್ಲಿ ನಾನು ಜ್ಞಾನವೆಂಬ ವಾಹನವಾಗಿದ್ದೆ ಕಾಣಾ. ಅಯ್ಯಾ, ನೀನು ನಾಂಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿದ್ದೆ ಕಾಣಾ. ಅಯ್ಯಾ, ನೀನು ಸಾಕಾರವಾಗಿದ್ದಲ್ಲಿ ನಾನು ವೃಷಭನೆಂಬ ವಾಹನವಾಗಿದ್ದೆ ಕಾಣಾ. ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು ಜಂಗಮಲಾಂಛನವಾಗಿ ಬಂದಲ್ಲಿ ನಾನು ಭಕ್ತನೆಂಬ ವಾಹನವಾಗಿದ್ದೆ ಕಾಣಾ ಕೂಡಲಸಂಗಮದೇವ. ೪. ಕರಿ ಘನ, ಅಂಕುಶ ಕಿರಿದೆನ್ನಬಹುದೆ ? ಬಾರದಯ್ಯ! ಗಿರಿ ಘನ, ವಜ್ರ ಕಿರಿದೆನ್ನಬಹುದೆ ? ಬಾರದಯ್ಯ! ತಮಂಧ ಘನ, ನಿಮ್ಮ ನೆನೆವ ಮನ ಕಿರಿದೆನ್ನಬಹುದೆ ? ಬಾರದಯ್ಯ! ಮರಹು ಘನ, ನಿಮ್ಮ ನೆನೆವ ಮನ ಕಿರಿದೆನ್ನಬಹುದೆ ? ಬಾರದಯ್ಯ! ಕೂಡಲಸಂಗಮದೇವ. ೫. ಸಂಸಾರಸಾಗರದ ತೆರೆ ಕೊಬ್ಬಿ ಮುಖದ ಮೇಲೆ ಅಲೆವುತ್ತಿದೆ ನೋಡಾ! ಸಂಸಾರಸಾಗರ ಉರದುದ್ದವೇ ಹೇಳಾ ? ಸಂಸಾರಸಾಗರ ಕೊರಲುದ್ದವೇ ಹೇಳಾ
ವಚನಗಳು ನನ್ನ ಬ್ಲಾಗ್ನಲ್ಲಿ ಸದ್ಯಕ್ಕೆ ಬಸವಣ್ಣ ಅಕ್ಕಮಹಾದೇವಿ ಅಲ್ಲಮಪ್ರಭು ಸರ್ವಜ್ಞ ಇವರುಗಳು ಸುಮಾರು 1200+ ವಚನಗಳು ಲಭ್ಯವಿವೆ. ಬಸವಣ್ಣ, ಅಕ್ಕಮಹಾದೇವಿ, ಮತ್ತು ಅಲ್ಲಮಪ್ರಭುಗಳ ವಚನಗಳನ್ನು "ಪಂಪ ಪ್ರಶಸ್ತಿ" ಪುರಸ್ಕೃತ ಡಾ. ಎಲ್. ಬಸವರಾಜುರವರು ಸಂಪಾದಿಸಿರುವ "ಬಸವಣ್ಣನವರ ವಚನಗಳು", "ಅಕ್ಕನ ವಚನಗಳು", ಮತ್ತು "ಅಲ್ಲಮನ ವಚನಗಳು" ಪುಸ್ತಕದ ಆಧಾರ ಮತ್ತು ಅನುಕ್ರಮದಲ್ಲಿ ಕೊಡಲಾಗಿದೆ. ಪ್ರಕಟಣೆಗೆ ಸಂತೋಷದಿಂದ ಒಪ್ಪಿಗೆಯಿತ್ತ ಡಾ. ಎಲ್. ಬಸವರಾಜುರವರಿಗೆ ವಿಚಾರಮಂಟಪ ಹೃತ್ಪೂರ್ವಕ ಧನ್ಯವಾದಗಳನ್ನರ್ಪಿಸುತ್ತದೆ. ವಿ.ಸೂ.: ಇಲ್ಲಿನ ಹಲವಾರು ವಚನಗಳಲ್ಲಿ, ವಿಶೇಷವಾಗಿ ಅಲ್ಲಮನ ವಚನಗಳಲ್ಲಿ ಹಳಗನ್ನಡದ 'ರ' ಅಕ್ಷರವನ್ನು ಬಳಸಲಾಗಿದೆ. ಹಳೆಗನ್ನಡದ `ಱ'ವನ್ನು 'ರ' ಎಂದು ಓದಿಕೊಳ್ಳುವುದು. ವಿ.ಸೂ.:ಪ್ರಿಯ ಗೆಳೆಯರೇ ನನ್ನ ಬ್ಲಾಗ್ ಸೇರಿಕೊಂಡು ನನ್ನು ಹೆಚ್ಹು ಹೆಚ್ಹು ವಚನ ನೀಡಲು ಸಹಕರಿಸಿ ನಿಮ್ಮ ನಾಗ