ನಿನ್ನ ಪ್ರೀತಿ -ರಾಜು ಅನಂತಸ್ವಾಮಿ
ಸರ್ವಜ್ಞನ ವಚನಗಳು - 91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ
Comments
Post a Comment