Skip to main content

Posts

Showing posts from September, 2010

ಬಸವಣ್ಣನ ವಚನಗಳು - 191 ರಿಂದ 200 ರವರೆಗೆ

೧೯೧. ಓತಿ ಬೇಲಿವರಿದಂತೆನ್ನ ಮನವಯ್ಯ, ಹೊತ್ತಿಗೊಂದು ಪರಿಯಪ್ಪ ಗೋಸುಂಬೆಯಂತೆನ್ನ ಮನವು. ಬಾವಲ ಬಾಳುವೆಯಂತೆನ್ನ ಮನವು. ನಡುವಿರುಳೆದ್ದ ಕುರುಡಂಗಗುಸೆಯಲ್ಲಿ ಬೆಳಗಾದಂತೆ ನಾನಿಲ್ಲದ ಭಕ್ತಿಯ ಬಯಸಿದರುಂಟೆ ಕೂಡಲಸಂಗಮದೇವ. ೧೯೨. ಶಬ್ದ-ಸಂಭಾಷಣೆಯ ನುಡಿಯ ವರ್ಚ್ಚಿಸಿ ನುಡಿವೆ ತೊಡೆಹದ ಕೆಲಸದ ಬಣ್ಣದಂತೆ! ಕಡಿಹಕ್ಕೆ ಒರಗೆ ಬಾರದು ನೋಡಾ! ಎನ್ನ ಮನದಲೊಂದು, ಹೃದಯದಲೊಂದು, ವಚನದಲೊಂದು ನೋಡಾ! ಕೂಡಲಸಂಗಮದೇವ, ಆನು ಭಕ್ತನೆಂಬ ಹುಸಿಯ ಮಸಕವನೇನ ಬಣ್ಣಿಸುವೆನಯ್ಯ! ೧೯೩. ಏನನೋದಿ, ಏನ ಕೇಳಿ, ಏನ ಮಾಡಿಯೂ ಫಲವೇನು ನಿನ್ನವರೊಲಿಯದನ್ನಕ ? ಶಿವ ಶಿವ ಮಹಾದೇವ! ಬಾಳಿಲ್ಲದವಳ ಒಲೆಯಂತಾಯಿತ್ತೆನಗೆ ಕೂಡಲಸಂಗಮದೇವ. ೧೯೪. ಮುನ್ನೂರರವತ್ತು ದಿನ ಶರವ ಮಾಡಿ, ಕಳನೇರಿ ಕೈಮರೆದಂತಾಯಿತ್ತೆನ್ನ ಭಕ್ತಿ! ಎನಿಸು ಕಾಲ ಲಿಂಗಾರ್ಚನೆಯ ಮಾಡಿ ಏವೆನಯ್ಯ ಮನದಲ್ಲಿ ದೃಢವಿಲ್ಲದನ್ನಕ ? ಕೊಡನ ತುಂಬಿದ ಹಾಲ ಕೆಡಹಿ ಉಡುಗಲೆನ್ನಳವೆ ಕೂಡಲಸಂಗಮದೇವ. ೧೯೫. ಅಂಕ ಓಡಿದರೆ ತೆತ್ತಿಗಂಗೆ ಭಂಗವಯ್ಯ, ಕಾದಿ ಗೆಲಿಸಯ್ಯ-ಎನ್ನನು ಕಾದಿ ಗೆಲಿಸಯ್ಯ, ಕೂಡಲಸಂಗಮದೇವಯ್ಯ, ಎನ್ನ ತನು-ಮನ-ಧನದಲ್ಲಿ ವಂಚನೆಯಿಲ್ಲದಂತೆ ಮಾಡಯ್ಯ. ೧೯೬. ಅಂಕ ಕಳನೇರಿ ಕೈಮರೆದಿದ್ದರೆ ಮಾರಂಕ ಬಂದಿರಿವುದು ಮಾಬನೆ ? ನಿಮ್ಮ ನೆನವ ಮತಿ ಮರೆದಿದ್ದರೆ ಪಾಪ ತನುವನಂಡಲೆವುದ ಮಾಬುದೆ

ಬಸವಣ್ಣನ ವಚನಗಳು - 181 ರಿಂದ 190 ರವರೆಗೆ

೧೮೧. ಉದಯಾಸ್ತಮಾನವೆನ್ನ ಬೆಂದ ಬಸಿರಿಂಗೆ ಕುದಿಯಲಲ್ಲದೆ, ನಿಮ್ಮ ನೆನೆಯಲು ತೆರಹಿಲ್ಲವಯ್ಯ. ಎಂತೊ ಲಿಂಗ ತಂದೆ, ಎಂತಯ್ಯ ಎನ್ನ ಪೂರ್ವಲಿಖಿತ ? ಬೆರಣಿಯನಾಯಲಲ್ಲದೆ ಅಟ್ಟುಣ್ಣ ತೆರಹಿಲ್ಲೆನಗೆ! ನೀ ಕರುಣಿಸು ಕೂಡಲಸಂಗಮದೇವ. ೧೮೨. ಬೆಲ್ಲವ ತಿಂದ ಕೋಡಗದಂತೆ ಸಿಹಿಯ ನೆನೆಯದಿರಾ ಮನವೆ! ಕಬ್ಬ ತಿಂದ ನರಿಯಂತೆ ಹಿಂದಕ್ಕೆಳಸದಿರಾ ಮನವೇ! ಗಗನವನಡರಿದ ಕಾಗೆಯಂತೆ ದೆಸೆದೆಸೆಗೆ ಹಂಬಲಿಸದಿರಾ ಮನವೇ! ಕೂಡಲಸಂಗನ ಶರಣರ ಕಂಡು ಲಿಂಗವೆಂದೇ ನಂಬು ಮನವೇ! ೧೮೩. ಒಡೆಯನ ಕಂಡರೆ ಕಳ್ಳನಾಗದಿರಾ ಮನವೆ! ಭವದ ಬಾಧೆಯ ತಪ್ಪಿಸಿಕೊಂಬಡೆ ನೀನು ನಿಯತವಾಗಿ ಭಯಭರಿತನಾಗಿ, ಅಹಂಕಾರಿಯಾಗದೆ ಶರಣೆನ್ನು ಮನವೇ! ಕೂಡಲಸಂಗನ ಶರಣರಲ್ಲಿ ಭಕ್ತಿಯ ನೋನುವಡೆ ಕಿಂಕರನಾಗಿ ಬದುಕು ಮನವೇ. ೧೮೪. ಕೋಟ್ಯನುಕೋಟಿ ಜಪವ ಮಾಡಿ ಕೋಟಲೆಗೊಳ್ಳಲೆದೇಕೆ ಮನವೇ ?! ಕಿಂಚಿತು ಗೀತ ಒಂದನಂತಕೋಟಿ ಜಪ! ಜಪವೆಂಬುದೇಕೆ ಮನವೇ ? ಕೂಡಲಸಂಗನ ಶರಣರ ಕಂಡು ಆಡಿ, ಹಾಡಿ ಬದುಕು ಮನವೇ! ೧೮೫. ಮನವೇ ನಿನ್ನ ಜನನದ ಪರಿಭವವ ಮರೆದೆಯಲ್ಲಾ! ಮನವೇ, ಲಿಂಗವ ನಂಬು ಕಂಡಾ! ಮನವೇ, ಜಂಗಮವ ನಂಬು ಕಂಡಾ! ಮನವೇ, ಕೂಡಲಸಂಗಮದೇವರ ಬಿಡದೆ ಬೆಂಬತ್ತು ಕಂಡಾ! ೧೮೬. ಕೊಡುವಾತ ಸಂಗ, ಕೊಂಬಾತ ಸಂಗ ಕಾಣಿರೆಲವೋ! ನರಮಾನವರು ಕೊಡುವರೆಂಬವನ ಬಾಯಲ್ಲಿ ಬಾಲಹುಳುಗಳು ಸುರಿಯವೆ ? ಮೂರು

ಬಸವಣ್ಣನ ವಚನಗಳು - 171 ರಿಂದ 180 ರವರೆಗೆ

೧೭೧. ಇತ್ತ ಬಾರೈ ಇತ್ತ ಬಾರೈಯೆಂದು ಭಕ್ತರೆಲ್ಲರು ಕೂರ್ತು ಹತ್ತಿರಕೆ ಕರೆವುತಿರಲು, ಮತ್ತೆ ಕೆಲಸಕ್ಕೆ ಹೋಗಿ, ಶರಣೆಂದು ಹಸ್ತಬಾಯನೆ ಮುಚ್ಚಿ, ಕಿರಿದಾಗಿ; ಭೃತ್ಯಾಚಾರವ ನುಡಿದು ವಿನಯ ತದ್ಧ್ಯಾನ ಉಳ್ಳವರನೆತ್ತಿಕೊಂಬನಯ್ಯ ಕೂಡಲಸಂಗಮದೇವ ಪ್ರಮಥರ ಮುಂದೆ. ೧೭೨. ತನಗೆ ಮುನಿವರಿಗೆ ತಾ ಮುನಿಯಲೇಕಯ್ಯ ? ತನಗಾದ ಆಗೇನು ? ಅವರಿಗಾದ ಚೇಗೇನು ? ತನುವಿನ ಕೋಪ ತನ್ನ ಹಿರಿಯತನದ ಕೇಡು. ಮನದ ಕೋಪ ತನ್ನ ಅರಿವಿನ ಕೇಡು. ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲಸಂಗಮದೇವ. ೧೭೩. ಭಕ್ತನು ಕಾಣದ ಠಾವಿನಲ್ಲಿ ಜರಿದನೆಂದರೆ ಕೇಳಿ ಪರಿಣಾಮಿಸಬೇಕು! ಅದೇನು ಕಾರಣವೆಂದರೆ-- ಕೊಡದೆ ಕೊಳದೆ ಅವಂಗೆ ಸಂತೋಷವಹುದಾಗಿ! ಎನ್ನ ಮನದ ತದ್ವೇಷವಳಿದು ನಿಮ್ಮ ಶರಣರಿಗೆ ಶರಣೆಂಬುದ ಕರುಣಿಸು, ಕೂಡಲಸಂಗಮದೇವ! ೧೭೪. ಕರಗಿಸಿ ಎನ್ನ ಮನದ ಕಾಳಿಕೆಯ ಕಳೆಯಯ್ಯ. ಒರೆ ಬಣ್ಣಕ್ಕೆ ತಂದೆನ್ನ ಪುಟವಿಕ್ಕಿ ನೋಡಯ್ಯ, ಕಡಿಹಕ್ಕೆ ಬಡಿಹಕ್ಕೆ ತಂದೆನ್ನ ಕಡೆಯಾಣಿಯ ಮಾಡಿ ನಿಮ್ಮ ಶರಣರ ಪಾದಕ್ಕೆ ತೊಡಿಗೆಯ ಮಾಡಿ ಸಲಹಯ್ಯ ಕೂಡಲಸಂಗಮದೇವ. ೧೭೫. ಅವರಿವರೆನ್ನದೆ ಚರಣಕ್ಕೆರಗಲು ಅಯ್ಯತನವೇರಿ ಬೆಬ್ಬನೆ ಬೆರೆವೆ ನಾನು ಕೆಚ್ಚು ಬೆಳೆಯಿತಯ್ಯ ಎನ್ನ ಎದೆಯಲ್ಲಿ! ಆ ಕೆಚ್ಚಿಂಗೆ ಕಿಚ್ಚನಿಕ್ಕಿ ಸುಟ್ಟು ಬೆಳುಕನ ಮಾಡಿ ಬೆಳುಗಾರದಂತೆ ಮಾಡು ಕೂಡಲಸಂಗಮದೇವ.

ಬಸವಣ್ಣನ ವಚನಗಳು - 161 ರಿಂದ 170 ರವರೆಗೆ

೧೬೧. ಮಾಡಿದೆನೆಂಬುದು ಮನದಲ್ಲಿ ಹೊಳೆದರೆ ಏಡಿಸಿ ಕಾಡಿತ್ತು ಶಿವನ ಡಂಗುರ. ಮಾಡಿದೆನೆನ್ನದಿರಾ ಲಿಂಗಕ್ಕೆ! ಮಾಡಿದೆನೆನ್ನದಿರಾ ಜಂಗಮಕ್ಕೆ! ಮಾಡಿದೆನೆಂಬುದು ಮನದಲಿಲ್ಲದಿದ್ದರೆ ಬೇಡಿದ್ದನೀವ ಕೂಡಲಸಂಗಮದೇವ!! ೧೬೨. ಮಾಡುವಂತಿರಬೇಕು ಮಾಡದಂತಿರಬೇಕು! ಮಾಡುವ ಮಾಟದೊಳಗೆ ತಾನಿಲ್ಲದಿರಬೇಕು!! ನೋಡುವಂತಿರಬೇಕು, ನೋಡದಂತಿರಬೇಕು! ನೋಡುವ ನೋಟದೊಳಗೆ ತಾನಿಲ್ಲದಿರಬೇಕು!! ನಮ್ಮ ಕೂಡಲಸಂಗಮದೇವರ ನೆನೆವುತ್ತ ನೆನೆವುತ್ತ ನೆನೆಯದಂತಿರಬೇಕು! ೧೬೩. ಭಕ್ತನು ಶಾಂತನಾಗಿರಬೇಕು. ತನ್ನ ಕುರಿತು ಬಂದ ಠಾವಿನಲ್ಲಿ ಸತ್ಯನಾಗಿರಬೇಕು. ಭೂತಹಿತವಹ ವಚನವ ನುಡಿಯಬೇಕು. ಲಿಂಗ-ಜಂಗಮದಲ್ಲಿ ನಿಂದೆಯಿಲ್ಲದಿರಬೇಕು. ಸಕಲ ಪ್ರಾಣಿಗಳ ತನ್ನಂತೆ ಭಾವಿಸಬೇಕು. ತನು-ಮನ-ಧನವ ಗುರು-ಲಿಂಗ-ಜಂಗಮಕ್ಕೆ ಸವೆಸಬೇಕು. ಅಪಾತ್ರದಾನವಂ ಗೆಯ್ಯದಿರಬೇಕು. ಸಕಲೇಂದ್ರಿಯಂಗಳೂ ತನ್ನ ವಶಗತವಾಗಿರಬೇಕು. ಇದೇ ಮೊದಲಲ್ಲಿ ಬೇಹ ಶೌಚ ನೋಡಾ! ಲಿಂಗವ ಪೂಜಿಸಿ ಪ್ರಸಾದವ ಪಡೆವಡೆ ಎನಗಿದೇ ಸಾಧನ ಕೂಡಲಸಂಗಮದೇವ! ೧೬೪ ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯ ಬೇಡ, ಅನ್ಯರಿಗೆ ಅಸಹ್ಯಪಡಬೇಡ. ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ. ಇದೇ ಅಂತರಂಗಶುದ್ಧಿ! ಇದೇ ಬಹಿರಂಗಶುದ್ಧಿ! ಇದೆ ನಮ್ಮ ಕೂಡಲಸಂಗನನೊಲಿಸುವ ಪರಿ. ೧೬೫. ದೇವಲೋಕ ಮರ್ತ್ಯಲೋಕವೆಂಬುದು ಬೇರಿಲ್ಲ ಕಾಣಿರಣ್ಣ. ಸತ್ಯವ ನುಡಿವುದೇ ದೇವಲೋಕ! ಮಿಥ್ಯವ ನುಡಿವುದೇ ಮರ್ತ

ಬಸವಣ್ಣನ ವಚನಗಳು - 151 ರಿಂದ 160 ರವರೆಗೆ

೧೫೧. ಬರಬರ ಭಕ್ತಿ ಅರೆಯಾಯಿತ್ತು ಕಾಣಿರಣ್ಣ! ಮೊದಲ ದಿನ ಹಣೆ ಮುಟ್ಟಿ, ಮರುದಿನ ಕೈ ಮುಟ್ಟಿ, ಮೂರೆಂಬ ದಿನಕೆ ತೂಕಡಿಕೆ ಕಾಣಿರಣ್ಣಾ. ಹಿಡಿದುದ ಬಿಡದಿದ್ದರೆ ತಡಿಗೆ ಚಾಚುವ ಅಲ್ಲದಿದ್ದರೆ ನಡುನೀರಲದ್ದುವ ನಮ್ಮ ಕೂಡಲಸಂಗ್ದೇವ. ೧೫೨. ಬೆಟ್ಟದ ಬಿದಿರೇ ನೀನು ಅಟ್ಟಕ್ಕೆ ಏಣಿಯಾದೆ! ಕಾಲು ಮುರಿದವರಿಗೆ ಊರುಗೋಲಾದೆ! ಬಿದಿರಿಂ ಭೋ! ಅಯ್ಯ, ಬಿದಿರಿಂ ಭೋ! ಬಿದಿರ ಫಲವನುಂಬರೆ ಬಿದಿರಿಂ ಭೊ; ಬಿದಿರಲಂದಣವಕ್ಕು ಬಿದಿರೆ ಸತ್ತಿಗೆಯಕ್ಕು, ಬಿದಿರಲೀ ಗುಡಿಯು ಗುಡಾರಂಗಳಕ್ಕು, ಬಿದಿರಲೀ ಸಕಲಸಂಪದವೆಲ್ಲ! ಬಿದಿರದವರ ಮೆಚ್ಚ ನಮ್ಮ ಕೂಡಲಸಂಗಮದೇವ. ೧೫೩. ಉಂಬಾಗಳಿಲ್ಲೆನ್ನ, ಉಡುವಾಗಳಿಲ್ಲೆನ್ನ ಬಂಧುಗಳು ಬಂದಾಗಳಿಲ್ಲೆನ್ನ; ಲಿಂಗಕ್ಕೆ ಇಲ್ಲೆಂಬ, ಜಂಗಮಕ್ಕೆ ಇಲ್ಲೆಂಬ, ಬಂದ ಪುರಾತರಿಗೆ ಇಲ್ಲೆಂಬ; ಸಾವಾಗ ದೇಹವ ದೇಗುಲಕ್ಕೊಯ್ಯೆಂಬ ದೇವರಿಗೆ ಹೆಣ ಬಿಟ್ಟಿ ಹೇಳಿತ್ತೆ, ಕೂಡಲಸಂಗಮದೇವ ? ೧೫೪. ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ, ಸತ್ಪಾತ್ರಕ್ಕೆ ಸಲ್ಲದಯ್ಯ! ನಾಯ ಹಾಲು ನಾಯಿಂಗಲ್ಲದೆ, ಪಂಚಾಮೃತಕ್ಕೆ ಸಲ್ಲದಯ್ಯ! ನಮ್ಮ ಕೂಡಲಸಂಗನ ಶರಣರಿಗಲ್ಲದೆ ಮಾಡುವ ಅರ್ಥ ವ್ಯರ್ಥ ಕಂಡಯ್ಯ. ೧೫೫. ಹತ್ತು ಮತ್ತರ ಭೂಮಿ, ಬತ್ತುವ ಹಯನ, ನಂದಾದೀವಿಗೆಯ ನಡೆಸಿಹೆನೆಂಬವರ ಮುಖವ ನೋಡಲಾಗದು! ಅವರ ನುಡಿಯ ಕೇಳಲಾಗದು; ಅಂಡಜ-ಸ್ವೇದಜ-ಉದ್ಬಿಜ-ಜರಾಯುಜವೆಂಬ ಚತುರಶೀತಿ ಲಕ್ಷಪ್ರಾಣಿಗಳಿಗೆ ಭವಿತವ್ಯವ ಕೊಟ್ಟವರಾರೋ ?! ಒಡೆಯರಿ

ಬಸವಣ್ಣನ ವಚನಗಳು - 141 ರಿಂದ 150 ರವರೆಗೆ

೧೪೧. ಆಡಿದರೇನೋ, ಹಾಡಿದರೇನೋ, ಓದಿದರೇನೋ- ತ್ರಿವಿಧ ದಾಸೋಹವಿಲ್ಲದನ್ನಕ ? ಆಡದೇ ನವಿಲು ? ಹಾಡದೇ ತಂತಿ ? ಓದದೇ ಗಿಳಿ ? ಭಕ್ತಿಯಿಲ್ಲದವರನೊಲ್ಲ ಕೂಡಲಸಂಗಮದೇವ! ೧೪೨. ವೇದದಂತುಟಲ್ಲ, ಶಾಸ್ತ್ರದಂತುಟಲ್ಲ, ಗೀತ-ಮಾತಿನಂತುಟಲ್ಲ ಕೇಳಿರಯ್ಯ ! ಮಾತಿನ ಮಾತಿನ ಕೌಳುಗೋಲ ಶ್ರವದಲ್ಲಿ ಸತ್ತವರೊಳರೇ ಅಯ್ಯ ? ದಿಟದಲಗಿನ ಕಾಳೆಗವಿತ್ತಲಿದ್ದುದೇ ಕೂಡಲಸಂಗನ ಶರಣರು ಬಂದಲ್ಲಿ !? ೧೪೩. ಮಾತಿನ ಮಾತಿನಲಪ್ಪುದೇ ಭಕ್ತಿ ? ಮಾಡಿ ತನು ಸವೆಯದನ್ನಕ, ಧನ ಸವೆಯದನ್ನಕ, ಮನ ಸವೆಯದನ್ನಕ, ಅಪ್ಪುದೇ ಭಕ್ತಿ ? ಕೂಡಲಸಂಗಮದೇವನೆಲುದೋರ ಸರಸವಾಡುವನು; ಸೈರಿಸದನ್ನಕ ಅಪ್ಪುದೇ ಭಕ್ತಿ ? ೧೪೪. ಹಾವಸೆಗಲ್ಲ ಮೆಟ್ಟಿ ಹರಿದು ಗೊತ್ತ ಮುಟ್ಟ ಬಾರದಯ್ಯ. ನುಡಿದಂತೆ ನಡೆಯಲು ಬಾರದಯ್ಯ. ಕೂಡಲಸಂಗನ ಶರಣರ ಭಕ್ತಿ ಬಾಳ ಬಾಯಿಧಾರೆ. ೧೪೫. ಭಕ್ತಿಯೆಂಬುದ ಮಾಡಬಾರದು. ಗರಗಸದಂತೆ ಹೋಗುತ್ತ ಕೊರೆವುದು; ಬರುತ್ತ ಕೊಯ್ವುದು. ಘಟಸರ್ಪನಲ್ಲಿ ಕೈದುಡುಕಿದರೆ ಹಿಡಿಯದೆ ಮಾಬುದೆ ? ಕೂಡಲಸಂಗಮದೇವ. ೧೪೬. ಹಲವು ಕಾಲ ಧಾವತಿಗೊಂಡು ಒಟ್ಟಿದ ಹಿದಿರೆಯು ಒಂದು ಮಿಡುಕುರಲ್ಲಿ ಬೇವಂತೆ ಸಲೆನೆಲೆ ಸನ್ನಿಹಿತನಾಗಿಪ್ಪ ಶರಣನ ಭಕ್ತಿ ಒಂದನಾಯತದಿಂದ ಕೆಡುವುದು! ಸ್ವಧರ್ಮದಲ್ಲಿ ಗಳಿಸಿದ ಪಿತನ ಧನವ ಅಧರ್ಮದಲ್ಲಿ ಕೆಡಿಸುವ ಸುತನಂತೆ ಶಿವನ ಸೊಮ್ಮ ಶಿವಂಗೆ ಮಾಡದೆ ಅನ್

ಬಸವಣ್ಣನ ವಚನಗಳು - 131 ರಿಂದ 140 ರವರೆಗೆ

೧೩೧. ಎರೆದರೆ ನೆನೆಯದು, ಮರೆದರೆ ಬಾಡದು ಹುರುಳಿಲ್ಲ ಹುರುಳಿಲ್ಲ ಲಿಂಗಾರ್ಚನೆ! ನೋಡಯ್ಯ, ಕೂಡಲಸಂಗಮದೇವಯ್ಯ, "ಜಂಗಮ"ಕ್ಕೆರೆದರೆ, "ಸ್ಥಾವರ" ನೆನೆಯಿತ್ತು. ೧೩೨. ಅಗ್ನಿಯಾಧಾರದಲ್ಲಿ ಕಬ್ಬುನ ನೀರುಂಬುದಯ್ಯ; ಭೂಮಿಯಧಾರದಲ್ಲಿ ವೃಕ್ಷ ನೀರುಂಬುದಯ್ಯ. ಜಂಗಮಾಪ್ಯಾಯನವಾದರೆ ಲಿಂಗಸಂತುಷ್ಟಿಯಹುದಯ್ಯ "ವೃಕ್ಷಸ್ಯ ವದನಂ ಭೂಮಿಃ ಸ್ಥಾವರಸ್ಯ ತು ಜಂಗಮಃ! ಅಹಂ ತುಷ್ಟಿರುಮೇ ದೇವ್ಯು- ಭಯೋರ್ಜಂಗಮಲಿಂಗಯೋಃ ||" ಇದು ಕಾರಣ ಕೂಡಲಸಂಗನ ಶರಣರಲ್ಲಿ ಜಂಗಮಾಪ್ಯಾಯನವಾದರೆ ಲಿಂಗಸಂತುಷ್ಟಿ. ೧೩೩. ಬಂಡವ ತುಂಬಿದ ಬಳಿಕ ಸುಂಕವ ತೆತ್ತಲ್ಲದೆ ಹೊಗಬಾರದು. ಕಳ್ಳನಾಣ್ಯ ಸಲಿಕೆಗೆ ಸಲ್ಲದು, ಕಳ್ಳನಾಣ್ಯವ ಸಲಲೀಯರಯ್ಯ. ಭಕ್ತಿಯೆಂಬ ಬಂಡಕ್ಕೆ ಜಂಗಮವೇ ಸುಂಕಿಗ ಕೊಡಲಸಂಗಮದೇವ. ೧೩೪. ಮಾಡಿ, ನೀಡಿ, ಲಿಂಗವ ಪೂಜಿಸಿಹೆವೆಂಬವರು ನೀವೆಲ್ಲ ಕೇಳಿರಣ್ಣ; ಹಾಗದ ಕೆರಹ ಹೊರಗೆ ಕಳೆದು ದೇಗುಲಕ್ಕೆ ಹೋಗಿ, ನಮಸ್ಕಾರವ ಮಾಡುವನಂತೆ, ತನ್ನ ಕೆರಹಿನ ಧ್ಯಾನವಲ್ಲದೆ, ದೇವರ ಧ್ಯಾನವಿಲ್ಲ; ಧನವನಿರಿಸದಿರಾ ! ಇರಿಸಿದರೆ ಭವ ಬಪ್ಪುದು ತಪ್ಪದು! ಕೂಡಲಸಂಗನ ಶರಣರಿಗೆ ಸವೆಸಲೇಬೇಕು. ೧೩೫. ಉಂಡುದು ಬಂದೀತೆಂಬ ಸಂದೇಹಿಮಾನವ ನೀ ಕೇಳ! ಉಂಡುದೇನಾಯಿತೆಂಬುದ ನಿನ್ನ ನೀ ತಿಳಿದು ನೋಡಾ! ಉಂಡುದಾಗಳೇ ಆ ಪೀಯವಾಯಿತ್ತು! ಆ ಉಂಡುದನುಣಬಂದ ಹಂದಿಯ ಬಾಳುವೆಯವರ ಕಂಡು ಆನು ಮರುಗುವೆನಯ್ಯ ಕೂಡಲಸಂಗಮದೇವ.

ಬಸವಣ್ಣನ ವಚನಗಳು - 121 ರಿಂದ 130 ರವರೆಗೆ

೧೨೧. ಸುಪ್ರಭಾತ ಸಮಯದಲ್ಲಿ ಅರ್ತಿಯಲ್ಲಿ ಲಿಂಗವ ನೆನೆದರೆ ತಪ್ಪುವುದು ಅಪಮೃತ್ಯು ಕಾಲಕರ್ಮಂಗಳಯ್ಯ! ದೇವಪೂಜೆಯ ಮಾಟ ದುರಿತಬಂಧನದೋಟ! ಶಂಭು ನಿಮ್ಮಯ ನೋಟ ಹೆರೆಹಿಂಗದ ಕಣ್ಬೇಟ!! ಸದಾ ಶಿವಲಿಂಗಸನ್ನಿಹಿತನಾಗಿಪ್ಪುದು, ಶರಣೆಂದು ನಂಬುವುದು. ಜಂಗಮಾರ್ಚನೆಯ ಮಾಟ ಕೂಡಲಸಂಗನ ಕೂಟ!!! ೧೨೨. ನಾದಪ್ರಿಯ ಶಿವನೆಂಬರು, ನಾದಪ್ರಿಯ ಶಿವನಲ್ಲಯ್ಯ! ವೇದಪ್ರಿಯಶಿವನೆಂಬರು ವೇದಪ್ರಿಯ ಶಿವನಲ್ಲಯ್ಯ! ನಾದವ ಮಾಡಿದ ರಾವಣಂಗೆ ಆರೆಯಾಯುಷವಾಯಿತ್ತು. ವೇದವನೋದಿದ ಬ್ರಹ್ಮನ ಶಿರ ಹೋಯಿತ್ತು. ನಾದಪ್ರಿಯನೂ ಅಲ್ಲ, ವೇದಪ್ರಿಯನೂ ಅಲ್ಲ, ಭಕ್ತಿಪ್ರಿಯ ನಮ್ಮ ಕೂಡಲಸಂಗಮದೇವ. ೧೨೩. ತನ್ನಾಶ್ರಯದ ರತಿಸುಖವನು ತಾನುಂಬ ಊಟವನು ಬೇರೊಬ್ಬರ ಕೈಯಲು ಮಾಡಿಸಬಹುದೇ ? ತನ್ನ ಲಿಂಗಕ್ಕೆ ಮಾಡುವ ನಿತ್ಯ ನೇಮವನು ತಾ ಮಾಡಬೇಕಲ್ಲದೆ, ಬೇರೆ ಮತ್ತೊಬ್ಬರ ಕೈಯಲು ಮಾಡಿಸಬಹುದೇ ? ಕೆಮ್ಮನುಪಚಾರಕ್ಕೆ ಮಾಡುವರಲ್ಲದೆ ನಿಮ್ಮನೆತ್ತ ಬಲ್ಲರು ಕೂಡಲಸಂಗಮದೇವ. ೧೨೪. ಬಂಡಿ ತುಂಬಿದ ಪತ್ರೆಯ ತಂದು ಕಂಡ ಕಂಡಲ್ಲಿ ಮಜ್ಜನಕ್ಕೆರೆವಿರಯ್ಯ. ತಾಪತ್ರಯವ ಕಳೆದು ಪೂಜಿಸಿ: ತಾಪತ್ರಯವ ಲಿಂಗನೊಲ್ಲ! ಕೂಡಲಸಂಗಮದೇವ ಬರಿಯುದಕದಲ್ಲಿ ನೆನೆವನೆ ? ೧೨೫. ಕನ್ನಡಿಯ ನೋಡುವ ಅಣ್ಣಗಳಾ, ಜಂಗಮವ ನೋಡಿರೇ! ಜಂಗಮದೊಳಗೆ ಲಿಂಗಯ್ಯ ಸನ್ನಿಹಿತನಾಗಿಪ್ಪ. ಸ್ಥಾವರ ಜಂಗಮ ಒಂದೆಂದುದು ಕೂಡಲಸಂಗನ ವಚನ. ೧೨೬. ಗೀತವ ಹಾಡಿದರೇನು, ಶಾಸ್ತ್ರ ಪುರಾಣವ ಕೇಳಿ

ಬಸವಣ್ಣನ ವಚನಗಳು - 111 ರಿಂದ 120 ರವರೆಗೆ

೧೧೧. ಎಲೆಯೆಲೆ ಮಾನವಾ, ಅಳಿಯಾಸೆ ಬೇಡವೋ, ಕಾಳ-ಬೆಳುದಿಂಗಳು-ಸಿರಿ ಸ್ಥಿರವಲ್ಲ! ಕೇಡಿಲ್ಲದ ಪದವಿಯನೀವ ಕೂಡಲಸಂಗಮದೇವಯ್ಯನ ಮರೆಯದೆ ಪೂಜಿಸು. ೧೧೨. ಎಂತಕ್ಕೆ ಎಂತಕ್ಕೆ ಹಡೆದ ಕಾಯ ಬೀಯವಾಗದ ಮುನ್ನ ಅಟ್ಟುಣ್ಣವೋ! ಬೆರಣಿಯುಳ್ಳಲ್ಲಿ ಹೊತ್ತು ಹೋಗದ ಮುನ್ನ ಅಟ್ಟುಣ್ಣವೋ! ಮರಳಿ ಭವಕ್ಕೆ ಬಹೆ ಬಾರದಿಹೆ! ಕರ್ತೃ ಕೂಡಲಸಂಗಂಗೆ ಶರಣೆನ್ನವೋ! ೧೧೩. ಶಕುನವೆಂದೆಂಬೆ ಅಪಶಕುನವೆಂದೆಂಬೆ, ನಿಮ್ಮವರು ಅಳಲಿಕಂದೇಕೆ ಬಂದೆ ? ನಿಮ್ಮವರು ಅಳಲಿಕಿಂದೇಕೆ ಹೋದೆ ? ನೀ ಹೋಹಾಗಳಕ್ಕೆ! ನೀ ಬಾಹಾಗಳಕ್ಕೆ! ಅಕ್ಕೆ ಬಾರದ ಮುನ್ನ ಪೂಜಿಸು ಕೂಡಲಸಂಗಮದೇವನ. ೧೧೪. ನಿಮಿಷಂ ನಿಮಿಷಂ ಭೋ! ಕ್ಷಣದೊಳಗರ್ಧಂ ಭೋ! ಕಣ್ಣ ಮುಚ್ಚಿ ಬಿಚ್ಚುವಿನಿಸು ಬೇಗಂ ಭೋ ಸಂಸಾರದಾಗುಂ ಭೋ! ಸಂಸಾರದ ಹೋಗುಂ ಭೋ! ಸಂಸಾರದೊಪ್ಪಂ ಭೊ! ಕೂಡಲಸಂಗಮದೇವ ಮಾಡಿದ ಮಾಯಂ ಭೋ! ಅಭ್ರಚ್ಛಾಯಂ ಭೋ! ೧೧೫. ಹರನೀವ ಕಾಲಕ್ಕೆ ಸಿರಿಯು ಬೆನ್ನಲಿ ಬಕ್ಕು- ಹರಿದು ಹೆದ್ದೊರೆಯು ಕೆರೆ ತುಂಬಿದಂತಯ್ಯ; ನೆರೆಯದ ವಸ್ತು ನೆರೆವುದು ನೋಡಯ್ಯ; ಅರಸು ಪರಿವಾರ ಕೈವಾರ ನೋಡಯ್ಯ. ಪರಮನಿರಂಜನ ಮರೆವ ಕಾಲಕ್ಕೆ ತುಂಬಿದ ಹರವಿಯ ಕಲ್ಲು ಕೊಂಡಂತೆ ಕೂಡಲಸಂಗಮದೇವ. ೧೧೬. ಪುಣ್ಯಗಳಹ ಕಾಲಕ್ಕೆ ಹಗೆಗಳು ತನ್ನವರಹರು! ಪುಣ್ಯಗಳಹ ಕಾಲಕ್ಕೆ ಮಣ್ಣು ಹೊನ್ನಹುದು! ಪುಣ್ಯಗಳಹ ಕಾಲಕ್ಕೆ ಹಾವು ನ

ಬಸವಣ್ಣನ ವಚನಗಳು - 101 ರಿಂದ 110 ರವರೆಗೆ

೧೦೧. ಲೇಸೆನಿಸಿಕೊಂಡು ಐದು ದಿನ ಬದುಕಿದರೇನು ? ಲೇಸೆನಿಸಿಕೊಂಡು ನಾಲ್ಕು ದಿನ ಬದುಕಿದರೇನು ? ಲೇಸೆನಿಸಿಕೊಂಡು ಮೂರು ದಿನ ಬದುಕಿದರೇನು ? ಲೇಸೆನಿಸಿಕೊಂಡು ಎರಡು ದಿನ ಬದುಕಿದರೇನು ? ಲೇಸೆನಿಸಿಕೊಂಡು ಒಂದು ದಿನ ಬದುಕಿದರೇನು ? ಕೂಡಲಸಂಗನ ಶರಣರ ವಚನದಲ್ಲಿ ಲೇಸೆನಿಸಿಕೊಂಡು ಒಂದು ದಿನ ಬದುಕಿದರೆ ಸಾಕು. ೧೦೨. ಮರ್ತ್ಯಲೋಕವೆಂಬುದು ಕರ್ತಾರನ ಕಮ್ಮಟವಯ್ಯ. ಇಲ್ಲಿ ಸಲ್ಲುವರು ಅಲ್ಲಿಯೂ ಸಲ್ಲುವರಯ್ಯ. ಇಲ್ಲಿ ಸಲ್ಲದವರು ಅಲ್ಲಿಯೂ ಸಲ್ಲರಯ್ಯ ಕೂಡಲಸಂಗಮದೇವ. ೧೦೩. ಹೊತ್ತಾರೆಯೆದ್ದು ಶಿವಲಿಂಗದೇವನ ದೃಷ್ಟಿಯಾರೆ ನೋಡದವನ ಸಂಸಾರವೇನವನ ?! ಬಾಳುವೆಣನ ಬೀಳುವೆಣನ ಸಂಸಾರವೇನವನ ?! ನಡೆವೆಣನ ನುಡಿವೆಣನ ಸಂಸಾರವೇನವನ ?! ಕರ್ತೃ ಕೂಡಲಸಂಗ, ನಿಮ್ಮ ತೊತ್ತಗೆಲಸಮಾಡದವನ ಸಂಸಾರವೇನವನ ?! ೧೦೪. ವ್ಯಾಧನೊಂದು ಮೊಲನ ತಂದರೆ ಸಲುವ ಹಾಗಕ್ಕೆ ಬಿಲಿವರಯ್ಯ. ನೆಲನಾಳ್ದನ ಹೆಣನೆಂದರೆ ಒಂದಡಕೆಗೆ ಕೊಂಬವರಿಲ್ಲ ನೋಡಯ್ಯ. ಮೊಲನಿಂದ ಕರಕಷ್ಟ ನರನ ಬಾಳುವೆ! ಸಲೆ ನಂಬೋ ನಮ್ಮ ಕೂಡಲಸಂಗಮದೇವನ. ೧೦೫. ಉತ್ಪತ್ತಿ ಶುಕ್ಲ-ಶೋಣಿತದಿಂದಾದ ಲಜ್ಜೆ ಸಾಲದೆ ? ಅಂತು ಬಲಿದ ಸಪ್ತಧಾತುವಿನ ನರಕದೇಹದೊಳಿಪ್ಪ ಹೇಸಿಕೆ ಸಾಲದೆ ? ಮತ್ತೆಯು ಪಾಪಂಗಳ ಮಾಡಿ ದುರಿತಂಗಳ ಹೆರುವ ಹೇಗತನವೇಕಯ್ಯ ? ಕಾಲನ ಕೈಯ ಬಡಿಸಿಕೊಂಡು ನರಕವನುಂಬುದು ವಿಧಿಯೇ, ಎಲೆ ಮನುಜ ? ಒತ್ತೊತ್ತೆಯ ಜನನವ ಗೆಲುವಡೆ ಕರ್ತನ ಪೂಜಿಸು ನಮ್ಮ ಕೂಡಲಸಂಗಮದೇವನ!