Skip to main content

Posts

Showing posts from October, 2010

hinde hege

ಅಕ್ಕನ ವಚನಗಳು - 191 ರಿಂದ 200 ರವರೆಗೆ

೧೯೧. ಆವ ವಿದ್ಯೆಯ ಕಲಿತಡೇನು ಶವ ವಿದ್ಯೆ ಮಾಣದನ್ನಕ? ಅಶನವ ತೊಡೆದಡೇನು? ವ್ಯಸನವ ಮರೆದೆಡೇನು? ಉಸಿರಗಿಡಿದರೇನು? ಬಸಿರ ಕಟ್ಟಿದರೇನು? ಚೆನ್ನಮಲ್ಲಿಕಾರ್ಜುನದೇವಯ್ಯ ನೆಲದಳವಾರನಾದಡೆ ಕಳ್ಳನೆಲ್ಲಿ ಅಡಗುವ? ೧೯೨. ಹಡೆವುದರಿದು ನರಜನ್ಮವ ಹಡೆವುದರಿದು ಗುರುಕಾರುಣ್ಯವ ಹಡೆವುದರಿದು ಲಿಂಗಜಂಗಮಸೇವೆಯ ಚೆನ್ನಮಲ್ಲಿಕಾರ್ಜುನಯ್ಯನ ಶರಣ ಸಂಗದಲ್ಲಿ ನಲಿದಾಡು ಕಂಡೆಯಾ ಎಲೆ ಮನವೇ ೧೯೩. ಮಾಟಕೂಟ ಬಸವಣ್ಣಂಗಾಯಿತ್ತು ನೋಟಕೂಟ ಪ್ರಭುದೇವರಿಗಾಯಿತ್ತು ಭಾವಕೂಟ ಅಜಗಣ್ಣಂಗಾಯಿತ್ತು ಸ್ನೇಹಕೂಟ ಬಾಚಿರಾಜಂಗಾಯಿತ್ತು ಇವರೆಲ್ಲರ ಕೂಟ ಬಸವಣ್ಣಂಗಾಯಿತ್ತು ಎನಗೆ ನಿಮ್ಮಲ್ಲಿ ಅವಿರಳದ ಕೂಟ ಚೆನ್ನಮಲ್ಲಿಕಾರ್ಜುನಯ್ಯ ೧೯೪. ಮಾಟಕೂಟದಲ್ಲಿ ಬಸವಣ್ಣನಿಲ್ಲ ನೋಟಕೂಟದಲ್ಲಿ ಪ್ರಭುದೇವರಿಲ್ಲ ಭಾವಕೂಟದಲ್ಲಿ ಅಜಗಣ್ಣನಿಲ್ಲ ಸ್ನೇಹಕೂಟದಲ್ಲಿ ಬಾಚಿರಾಜನಿಲ್ಲ ಇವರೆಲ್ಲರ ಕೂಟದಲ್ಲಿ ಬಸವಣ್ಣನಿಲ್ಲ ಎನಗಿನ್ನೇವೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ? ೧೯೫. ಕದಳಿಯೆಂಬುದು ತನು! ಕದಳಿಯೆಂಬುದು ಮನ! ಕದಳಿಯೆಂಬುದು ವಿಷಯಂಗಳು ಕದಳಿಯೆಂಬುದು ಭವಘೋರಾರಣ್ಯ ಕದಳಿಯೆಂಬುದ ಗೆದ್ದು ತವ ಬದುಕೆ ಬಂದು ಕದಳಿಯ ಬನದಲ್ಲಿ ಭವಹರನ ಕಂಡೆನು ಭವಗೆಟ್ಟು ಬಂದ ಮಗಳೆಂದು ಕರುಣದಿಂ ತೆಗೆದು ಬಿಗಿಯಪ್ಪಿದರೆ ಚೆನ್ನಮಲ್ಲಿಕಾರ್ಜುನನ ಹೃದಯಕಮಲದಲ್ಲಿ ಅಡಗಿದೆನು ೧೯೬. ಕರ್

ಅಕ್ಕನ ವಚನಗಳು - 181 ರಿಂದ 190 ರವರೆಗೆ

೧೮೧. ಗಟ್ಟಿದುಪ್ಪಕ್ಕೆ ತಿಳಿದುಪ್ಪಕ್ಕೆ ಭೇದವುಂಟೇ ಅಯ್ಯ? ದೀಪಕ್ಕೆ ದೀಪ್ತಿಗೆ ಭೇದವುಂಟೇ ಅಯ್ಯ? ಆತ್ಮಕ್ಕೆ ಅಂಗಕ್ಕೆ ಭೇದವುಂಟೇ ಅಯ್ಯ ಎನ್ನಂಗವನು ಶ್ರೀಗುರು ಮಂತ್ರವ ಮಾಡಿ ತೋರಿದನಾಗಿ ಸಾವಯವಕ್ಕೆ ನಿರವಯವಕ್ಕೆ ಭಿನ್ನವಿಲ್ಲವಯ್ಯ! ಚೆನ್ನಮಲ್ಲಿಕಾರ್ಜುನದೇವರ ಬೆರೆಸಿ ಮತಿಗೆಟ್ಟವಳ ಏನ ನುಡಿಸುವಿರಯ್ಯ? ೧೮೨. ಕೆಂಡವ ಶವದಂತೆ ಸೂತ್ರ ತಪ್ಪಿದ ಬೊಂಬೆಯಂತೆ ಜಲವರತ ತಟಾಕದಂತೆ ಬೆಂದ ನುಲಿಯಂತೆ- ಮತ್ತೆ ಹಿಂದಣಂಗ ಉಂಟೇ ಅಣ್ಣ ಚೆನ್ನಮಲ್ಲಿಕಾರ್ಜುನನಂಗವೇ ಆಶ್ರಯವಾದವಳಿಗೆ?! ೧೮೩. ಫಲ ಒಳಗೆ ಪಕ್ವವಾಗಿಯಲ್ಲದೆ ಹೊರಗಣ ಸಿಪ್ಪೆ ಒಪ್ಪಗೆಡದು ಕಾಮನ ಮುದ್ರೆಯ ಕಂಡು ನಿಮಗೆ ನೋವಾದೀತೆಂದು ಆ ಭಾವದಿಂದ ಮುಚ್ಚಿದೆ ಇದಕೆ ನೋವೇಕೆ? ಕಾಡದಿರಣ್ಣ ಚೆನ್ನಮಲ್ಲಿಕಾರ್ಜುನದೇವನ ಒಳಗಾದವಳ ೧೮೪. ನಾಣ ಮರೆಯ ನೂಲು ಸಡಿಲೆ ನಾಚುವರು ನೋಡಾ ಗಂಡು-ಹೆಣ್ಣೆಂಬ ಜಾತಿ ಪ್ರಾಣದೊಡೆಯ ಜಗದೊಳಗೆ ಮುಳುಗುತ್ತ ತೆರಹಿಲ್ಲದಿರಲು ದೇವರ ಮುಂದೆ ನಾಚಲುಂಟೆ? ಚೆನ್ನಮಲ್ಲಿಕಾರ್ಜುನಂಗೆ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು ಮುಚ್ಚಿ ಮೆರೆಸಬಹುದೆ ಹೇಳಯ್ಯ ೧೮೫. ಎಲ್ಲಿ ಹೋದರೂ ಕಲಿಗೆ ಭಯವಿಲ್ಲ ಹಂದೆಗೆ ಸುಖವಿಲ್ಲ ಕೇಳಿರಣ್ಣ! ಈವಂಗವಗುಣವಿಲ್ಲ, ಕರುಣ ಉಳ್ಳವಂಗೆ ಪಾಪವಿಲ್ಲ ಇನ್ನು ಪರಧನ-ಪರಸ್ತ್ರೀಯ ತೊರೆದಾತಂಗೆ ಮುಂದೆ ಭವವಿಲ್ಲ, ಚೆನ್ನಮಲ್ಲಿಕಾರ್ಜುನ

ಅಕ್ಕನ ವಚನಗಳು - 171 ರಿಂದ 180 ರವರೆಗೆ

೧೭೧. ಮರ ಮರ ಮಥನಿಸಿ ಕಿಚ್ಚು ಹುಟ್ಟಿ ಸುತ್ತಣ ತರುಮರಾದಿಗಳ ಸುಡಲಾಯಿತ್ತು ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು ಇಂತಪ್ಪ ಮಹಾನುಭಾವರ ಅನುಭಾವವ ತೋರಿ ಎನ್ನನುಳುಹಿಕೊಳ್ಳಾ, ಚೆನ್ನ ಮಲ್ಲಿಕಾರ್ಜುನ ೧೭೨. ಸಂಗದಿಂದಲ್ಲದೇ ಅಗ್ನಿ ಹುಟ್ಟದು ಸಂಗದಿಂದಲ್ಲದೇ ಬೀಜ ಮೊಳೆದೋರದು ಸಂಗದಿಂದಲ್ಲದೇ ದೇಹವಾಗದು ಸಂಗದಿಂದಲ್ಲದೇ ಸರ್ವಸುಖದೋರದು ಚೆನ್ನಮಲ್ಲಿಕಾರ್ಜುನದೇವಯ್ಯ, ನಿಮ್ಮ ಶರಣರ ಅನುಭವದ ಸಂಗದಿಂದಾನು ಪರಮಸುಖಿಯಯ್ಯಾ ೧೭೩. ಶಿವಭಕ್ತನ ಮನೆಯಂಗಳ ವಾರಣಾಸಿ ಎಂಬುದು ಹುಸಿಯೆ? ಶಿವಭಕ್ತನ ಮನೆಯಂಗಳದಲ್ಲಿ ಅಷ್ಟಷಷ್ಟಿ ತೀರ್ಥಂಗಳು ನೆಲಸಿಪ್ಪವಾಗಿ ಸುತ್ತಿಬರಲು ಶ್ರೀಶೈಲ, ಕಲಬಲದಲ್ಲಿ ಕೇದಾರ, ಅಲ್ಲಿಂದ ಹೊರಗೆ ಶ್ರೀ ವಾರಣಾಸಿ ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ ಎನ್ನ ದೇವ ಚೆನ್ನಮಲ್ಲಿಕಾರ್ಜುನ, ನಿಮ್ಮ ಭಕ್ತನ ಮನೆಯಂಗಳ ವಾರಣಾಸಿಯಿಂದಧಿಕ ನೋಡಾ! ೧೭೪. ಕಾಮನ ಗೆಲಿದೆನು, ಬಸವ, ನಿಮ್ಮ ದಯೆಯಿಂದ ಸೋಮಧರನ ಹಿಡಿಪ್ಪೆತನು, ಬಸವ, ನಿಮ್ಮ ಕೃಪೆಯಿಂದ ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು? ಭಾವಿಸಲು ಗಂಡು-ರೂಪು, ಬಸವ, ನಿಮ್ಮ ದಯದಿಂದದ ಅತಿಕಾಮಿ ಚೆನ್ನಮಲ್ಲಿಕಾರ್ಜುನಯ್ಯಂಗೆ ತೊಡರನಿಕ್ಕಿ ಎರಡರಿಯೆದೆ ಕೂಡಿದೆನು, ಬಸವ, ನಿಮ್ಮ ಕೃಪೆಯಿಂದ ೧೭೫. ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ ಮನದ ಭಂಗವ ಅರಿವಿನ ಮುಖದಿಂದ ಗೆಲಿದೆ ಜೀವದ ಭಂಗವ ಶಿವಾನುಭವದಿಂದ ಗೆಲಿದೆ

ಅಕ್ಕನ ವಚನಗಳು - 161 ರಿಂದ 170 ರವರೆಗೆ

೧೬೧. ಆಯತ-ಸ್ವಾಯತ-ಅನುಭಾವವ ನಾನೆತ್ತ ಬಲ್ಲೆನಯ್ಯಾ ಗುರು-ಲಿಂಗ-ಜಂಗಮಕ್ಕೆ ಅರ್ಥಪ್ರಾಣಾಭಿಮಾನಂಗಳನಿತ್ತ ನಿನ್ನ ಭಕ್ತರ ಭೃತ್ಯರಿಗಾಳಾಗಿಪ್ಪೆನಯ್ಯಾ ನಿಮ್ಮ ಶರಣರ ಸಂಗವನಲ್ಲದೆ ಬೇರೊಂದ ಬಯಸೆನಯ್ಯ ಚೆನ್ನಮಲ್ಲಿಕಾರ್ಜುನ ೧೬೨. ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ [ಕೂರುಮ ದಿಗುದಂತಿ] ದಿಗುವಳಯವ ನುಂಗಿ ನಿಜ ಶೂನ್ಯ ತಾನಾದ ಬಳಿಕ ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬರಬಹುದೇ? ಕಂಗಳ ನೋಟದಲ್ಲಿ ಮನ ಸೊಗಸಿನಲ್ಲಿ ಅನಂಗನ ಧಾಳಿಯನಗಲಿದೆವಣ್ಣ ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಗೊಳಗಹುದೇ? ಎನ್ನ ದೇವ ಚೆನ್ನಮಲ್ಲಿಕಾರ್ಜುನನಲ್ಲದ ಪರಪುರುಷರು ನಮಗಾಗದಣ್ಣ! ೧೬೩. ನಮಗೆ ನಮ್ಮ ಲಿಂಗದ ಚಿಂತೆ ನಮಗೆ ನಮ್ಮ ಭಕ್ತರ ಚಿಂತೆ, ಮನಗೆ ನಮ್ಮ ಆದ್ಯರ ಚಿಂತೆ ನಮಗೆ ನಮ್ಮ ಚೆನ್ನಮಲ್ಲಿಕಾರ್ಜುನನ ಚಿಂತೆಯಲ್ಲದೆ ಲೋಕದ ಮಾತು ನಮಗೇಕಣ್ಣ? ೧೬೪. ನಿಮ್ಮ ನಿಲುವಿಂಗೆ ನೀವು ನಾಚಬೇಡವೆ? ಅನ್ಯರ ಕೈಲಿ ಅಲ್ಲ ಎನಿಸಿಕೊಂಬ ನಡೆ-ನುಡಿಯೇಕೆ? ಅಲ್ಲ ಎನಿಸಿಕೊಂಬುದರಿಂದ, ಆ ಕ್ಷಣವೇ ಸಾವುದು ಲೇಸು ಕಾಣಾ ಚೆನ್ನಮಲ್ಲಿಕಾರ್ಜುನ ೧೬೫. ಶಿವಭಕ್ತರ ರೋಮ ನೊಂದರೆ ಒಡನೆ ಶಿವನು ನೋವ ನೋಡಾ ಶಿವಭಕ್ತರು ಪರಿಣಾಮಿಸಿದರೆ, ಒಡನೆ ಶಿವ ಪರಿಣಆಮಿಸುವ ನೋಡಾ ! ಭಕ್ತದೇಹಿಕ ದೇವ ಎಂಬ ಶ್ರುತಿ ಹೊಗಳುವ ಕಾರಣ ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು ತಾಯಿ ನೊಂದರೆ ಒಡಲ ಶಿಶು ನೋವ ತೆರನಂತೆ ಚೆನ್ನಮಲ್ಲಿಕಾರ್ಜುನ-ತನ್ನ ಭಕ್ತ

ಅಕ್ಕನ ವಚನಗಳು - 151 ರಿಂದ 160 ರವರೆಗೆ

೧೫೧. ಎನ್ನಂಗದಲಿ ಆಚಾರವ ತೋರಿದನಯ್ಯ ಬಸವಣ್ಣನು [ಆ] ಆಚಾರವೇ ಲಿಂಗವೆಂದರುಹಿದನಯ್ಯ ಬಸವಣ್ಣನು ಎನ್ನ ಪ್ರಾಣದಲ್ಲಿ ಅರುಹ ತೋರಿದನಯ್ಯ ಬಸವಣ್ಣನು ಆ ಅರುಹೇ ಜಂಗಮವೆಂದರುಹಿದನಯ್ಯ ಬಸವಣ್ನನು [ಚೆನ್ನಮಲ್ಲಿಕಾರ್ಜುನ] [ಎನ್ನ] ಹೆತ್ತ ತಂದೆ ಸಂಗಬಸವಣ್ನನು ಎನಗೀ ಕ್ರಮವನರುಹಿದನಯ್ಯ ೧೫೨. ಗಂಗೆಯೊಡನಾಡಿದ ಗಟ್ಟ-ಬೆಟ್ಟಂಗಳು ಕೆಟ್ಟ ಕೇಡ ನೋಡಯ್ಯ ಅಗ್ನಿಯೊಡನಾಡಿದ ಕಾಷ್ಟಂಗಳು ಕೆಟ್ಟ ಕೇಡ ನೋಡಯ್ಯ ಜ್ಯೋತಿಯೊಡನಾಡಿದ ಕತ್ತಲೆ ಕೆಟ್ಟ ಕೇಡ ನೋಡಯ್ಯ ಇಂತೀ ಪರಶಿವಮೂರ್ತಿ ಹರನೇ ನಿಮ್ಮ ಜಂಗಮಲಿಂಗದೊಡನಾಡಿ ಎನ್ನ ಭವಾದಿಭವಂಗಳು ಕೆಟ್ಟ ಕೇಡ ನೋಡಾ ಚೆನ್ನಮಲ್ಲಿಕಾರ್ಜುನ ೧೫೩. ಮರ್ತ್ಯಲೋಕದ ಭಕ್ತರ ಮನವ ಬೆಳಗಲೆಂದು ಇಳಿತಂದನಯ್ಯ ಶಿವನು ಕತ್ತಲೆಯ ಪಾತಾಳವ ರವಿ ಹೊಕ್ಕಂತಾಯಿತಯ್ಯ ಚಿತ್ತದ ಪ್ರವೃತ್ತಿಯ ಹಿಂಗಿಸಿ ಮುಕ್ತಿಪಥವ ತೋರಿದನಲ್ಲಾ ಅಸಂಖ್ಯಾತರುಗಳಿಗೆ ತನುವೆಲ್ಲ ಸ್ವಯಂಲಿಂಗ, ಮನವೆಲ್ಲ ಚರಲಿಂಗ ಭಾವವೆಲ್ಲ ಮಹಾಘನದ ಬೆಳಗು ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣಸಮ್ಯಜ್ಞಾನಿ ಚೆನ್ನಬಸವಣ್ಣನ ಶ್ರೀಪಾದಕ್ಕೆ ಶರಣೆಂದು ಎನ್ನ ಭಾವಂ ನಾಸ್ತಿಯಾಯಿತ್ತಯ್ಯ ಪ್ರಭುವೇ ೧೫೪. ಕಲ್ಯಾಣವೆಂಬುದಿನ್ನಾರಿಗೂ ಹೊಗಬಾರದು ಆಶೆ-ಆಮಿಷವನಳಿದವಂಗಲ್ಲದೆ ಕಲ್ಯಾಣದತ್ತಲಡಿಯಿಡಬಾರದು ಒಳಗು-ಹೊರಗೂ ಶುದ್ಧವಾದಂಗಲ್ಲದೆ ಕಲ್ಯಾಣವ ಹೊಗಬಾರದು ನಾನೆಂಬುದು ಹರಿದವಂಗಲ್ಲದೆ ಕಲ್ಯಾಣವ ಹೊಗಬಾರದು ಒಳಗು ತಿಳಿದು ಚೆನ್ನಮಲ್ಲಿಕಾರ್ಜುನಂಗೊಲಿದು

ಅಕ್ಕನ ವಚನಗಳು - 141 ರಿಂದ 150 ರವರೆಗೆ

೧೪೧. ಐದು ಪರಿಯ ಬಣ್ಣವ ತಂದುಕೊಟ್ಟರೆ ನಾಲ್ಕು ಮೊಲೆಯ ಹಸುವಾಯಿತ್ತು ಹಸುವಿನ ಬಸರಲ್ಲಿ ಕರು ಹುಟ್ಟಿತ್ತು ಕರುವ ಮುಟ್ಟಲೀಯದೆ ಹಾಲು ಕರೆದುಕೊಂಡರೆ ಕರ ರುಚಿಯಾಗಿತ್ತು ಮಧುರ ತಲೆಗೇರಿ, ಅರ್ಥ ನೀಗಾಡಿ ಆ ಕರುವಿನ ಬೆಂಬಳಿವಿಡಿದು ಭವ ಹರಿಯಿತ್ತು ಚೆನ್ನಮಲ್ಲಿಕಾರ್ಜುನ ೧೪೨. ರವಿಯ ಕಾಳಗವ ಗೆಲಿದು ಒಂಬತ್ತು ಬಾಗಿಲ ಮುರಿದು ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ ಅಲ್ಲ-ಅಹುದು, ಉಂಟು-ಇಲ್ಲ, ಬೇಕು-ಬೇಡ ಎಂಬ ಆರರತಾತನೇ ಗುರು ಗುರು ತಾನೇ ಬೇರಿಲ್ಲ ದ್ವಯಕಮಲದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣ ಸಂಗನ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು ೧೪೩. ಹುಟ್ಟದ ಯೋನಿಯಲ್ಲಿ ಹುಟ್ಟಿಸಿ, ಬಾರದ ಭವಂಗಳಲಿ ಬರಿಸಿ, ಉಣ್ಣದ ಊಟವನುಣಿಸಿ ವಿಧಿಯೊಳಗಾಗಿಸುವ ಕೇಳಿರಣ್ಣ! ತನ್ನವರೆಂದರೆ ಮನ್ನಿಸುವನೇ ಶಿವನು? ಹತ್ತಿರಿದ್ದ ಭೃಂಗಿಯ ಚರ್ಮವ ಕಿತ್ತೀಡಾಡಿಸಿದನು ಮತ್ತೆ ಕೆಲವರ ಬಲ್ಲನೇ? ಇದನರಿದು ಬಿಡದಿರು ಚೆನ್ನಮಲ್ಲಿಕಾರ್ಜುನನಿಂತಹ ಸಿತಗನವ್ವ! ೧೪೪. ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ ಐವರು ಮಕ್ಕಳು ಜನಿಸಿದರೆಂತೆಂಬೆ?! ಒಬ್ಬ ಭಾವದರೂಪ, ಒಬ್ಬ ಪ್ರಾಣದರೂಪ, ಒಬ್ಬನೈಮುಖನಾಗಿ ವಿಶ್ವಕ್ಕೆ ಕಾಯರೂಪಾದ ಇಬ್ಬರು ಉತ್ಪತ್ತಿಸ್ಥಿತಿಗೆ ಕಾರಣರಾದರು ಐಮುಗನರಮನೆ ಸುಖವಿಲ್ಲೆಂದರಿದವನಾಗಿ ಇನ್ನು ಕೈಲಾಸವನು ಹೊಗೆ ಹೊಗೆ! ಮರ್ತ್ಯಕ್ಕೆ ಅಡಿಯಿಡೆನು ಚೆನ್ನಮಲ್ಲಿಕಾರ್ಜುನದೇವ ನೀನೆ ಸಾ

ಅಕ್ಕನ ವಚನಗಳು - 131 ರಿಂದ 140 ರವರೆಗೆ

೧೩೧. ದೃಶ್ಯವಾದ ರವಿಯ ಬೆಳಗು, ಆಕಾಶದ ವಿಸ್ತೀರ್ಣ, ವಾಯುವಿನ ಚಲನೆ, ತರುಗುಲ್ಮಲತಾದಿಗಳಲ್ಲಿಯ ತಳಿರು ಪುಷ್ಪ ಷಡುವರ್ಣಂಗಳೆಲ್ಲ ಹಗಲಿನ [ಪೂಜೆ] ಚಂದ್ರಪ್ರಕಾಶ, ನಕ್ಷತ್ರ, ಅಗ್ನಿ, ವಿದ್ಯುದ್ ಆದಿಗಳು ದೀಪ್ತಿಮಯವೆನಿಸಿಪ್ಪುವುಗಳೆಲ್ಲ ಇರುಳಿನ ಪೂಜೆ; ಹಗಲಿರುಳು ನಿನ್ನ ಪೂಜೆಯಲ್ಲಿ ಎನ್ನ ಮರೆದಿಪ್ಪೆನಯ್ಯ ಚೆನ್ನಮಲ್ಲಿಕಾರ್ಜುನ ೧೩೨. ಸಂಸಾರವ ನಿರ್ವಾಣವ ಮಾಡಿ, ಮನವ ವಜ್ರತುರಗವ ಮಾಡಿ, ಜೀವನ ರಾವುತನ ಮಾಡಿ, ಮೇಲಕ್ಕುಪ್ಪುವಡಿಸಲೀಯದೆ, ಮುಂದಕ್ಕೆ ಮುಗ್ಗರಿಸಲೀಯದೆ, ಈ ವಾರುವನ ದಳದ ಮೇಲೆ ಅಟ್ಟಿ ಮುಟ್ಟಿ ಹಾರಿ ಬರಸೆಳೆದು ನಿಲಿಸಲರಿಯದೆ ಪವನಬಣ್ಣದ ಕೇಸರಿಯ ತೊತ್ತಳದುಳಿವುತ್ತಿಪ್ಪುದಿದಾರಯ್ಯ? ಅಂಗಡಿಯ ರಾಜಬೀದಿಯೋಳಗೆ ರತ್ನಶೆಟ್ಟಿಯ ಮಾಣಿಕ್ಯ ಬಿದ್ದರೆ ಥಳಥಳನೆ ಹೊಳೆವ ಪ್ರಜ್ವಳಿತವ ಕಾಣದೆ ಹಳಹಳನೆ ಹಳಚುತ್ತಿಪ್ಪುದಿದಾರಯ್ಯ? ಹೃದಯಸ್ಥಾನದ ಧೂಪಗುಂಡಿಗೆಯಲ್ಲಿ ಆಧಾರಸ್ಥಾನದಿಂಗಳ ಮತ್ತೊಂದು ಬಂದು, ಪರಿಣಾಮವೆಂಬ ಧೂಪವನಿಕ್ಕಿ ವಾಯುವಿನ ಸಂಬಂಧವರಿಯದೆ ವಾಯುವ ಮೇಲಕ್ಕೆತ್ತಲು ಗಗನಕ್ಕೆ ತಾಗುವುದು, ತಾಗಲಿಕೆ ಅಲ್ಲಿರ್ದ ಅಮೃತದ ಕೊಡನೊಡೆದು ಕೆಳಗಣ ಹೃದಯಸ್ಥಾನದ ಮೇಲೆ ಬೀಳೆ, ಮರೆಸಿದ ಮಾಣಿಕ್ಯವ ಕಾಣಬಹುದು, ಇದನಾರು ಬಲ್ಲರೆಂದರೆ ಹಮ್ಮಳಿದು ಇಹಪರವನರಿದು ಪಂಚೇಂದ್ರಿಯದ ಇಂಗಿತವನರಿದ ಶರಣ ಬಸವಣ್ಣನಲ್ಲದೆ ಈ ಪ್ರಾಣಘಾತವ ಮಾಡುವರೆತ್ತ ಬಲ್ಲರಯ್ಯ, ಚೆನ್ನಮಲ್ಲಿಕಾರ್ಜುನ ೧೩೩. ಲಿಂಗಕ್ಕೆ ಶರಣೆಂದು ಪೂಜಿ

ಅಕ್ಕನ ವಚನಗಳು - 121 ರಿಂದ 130 ರವರೆಗೆ

೧೨೧. ಹಸಿವೇ ನೀನು ನಿಲ್ಲು, ನಿಲ್ಲು, ತೃಷೆಯೇ ನೀನು ನಿಲ್ಲು ನಿಲ್ಲು ನಿದ್ರೆಯೇ ನೀನು ನಿಲ್ಲು ನಿಲ್ಲು, ಕಾಮವೇ ನೀನು ನಿಲ್ಲು ನಿಲ್ಲು ಕ್ರೋಧವೇ ನೀನು ನಿಲ್ಲು ನಿಲ್ಲು, ಮೋಹವೇ ನೀನು ನಿಲ್ಲು ನಿಲ್ಲು ಲೋಭವೇ ನೀನು ನಿಲ್ಲು ನಿಲ್ಲು, ಮದವೇ ನೀನು ನಿಲ್ಲು ನಿಲ್ಲು ಮಚ್ಚರವೇ ನೀನು ನಿಲ್ಲು ನಿಲ್ಲು, ಸಚರಾಚರವೇ ನೀನು ನಿಲ್ಲು ನಿಲ್ಲು ನಾನು ಚೆನ್ನಮಲ್ಲಿಕಾರ್ಜುನದೇವರ ಅವಸರದ ಓಲೆಯನೊಯ್ಯುತ್ತಲಿದ್ದೇನೆ ಶರಣಾರ್ಥಿ ೧೨೨. ಹೆದರದಿರು ಮನವೇ, ಬೆದರದಿರು ಮನವೇ ನಿಜವನರಿತು ನಿಶ್ಚಿಂತವಾಗಿರು ಫಲವಾದ ಮರನ ಇಡುವುದೊಂದು ಕೋಟಿ ಎಲವದ ಮರನ ಇಡುವರೊಬ್ಬರ ಕಾಣೆ ಭಕ್ತಿಯುಳ್ಳವರ ಬೈವರೊಂದು ಕೋಟಿ, ಭಕ್ತಿಯಿಲ್ಲದವ ಬೈವರೊಬ್ಬರ ಕಾಣೆ ನಿಮ್ಮ ಶರಣರ ನುಡಿಯೆ ಎನಗೆ ಗತಿಸೋಪಾನ, ಚೆನ್ನಮಲ್ಲಿಕಾರ್ಜುನ ೧೨೩. ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದರೆ ಕನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ! ಬೊಬ್ಬುಲಿಯನೇರಿದ ಮರ್ಕಟನಂತೆ ಹಣ್ಣ ಮೆಲಲಿಲ್ಲ, ಕುಳ್ಳಿರೆ ಠಾವಿಲ್ಲ! ನಾನು ಸರ್ವಸಂಗಪರಿತ್ಯಾಗ ಮಾಡಿದವಳಲ್ಲ ನಿಮ್ಮ ಕೂಡಿ ಕುಲವಳಿದವಳಲ್ಲ ಚೆನ್ನಮಲ್ಲಿಕಾರ್ಜುನ ೧೨೪. ಕೈಸಿರಿಯ ದಂಡವ ಕೊಳಬಹುದಲ್ಲದೆ ಮೈಸಿರಿಯ ದಂಡವ ಕೊಳಲುಂಟೆ? ಉಟ್ಟಂತ ಉಡಿಗೆತೊಡಿಗೆಯನೆಲ್ಲ ಸೆಳೆದುಕೊಳಬಹುದಲ್ಲದೆ ಮುಚ್ಚಿ ಮುಸುಕಿರ್ದ ನಿರ್ವಾಣವ ಸೆಳೆದುಲೊಳಬಹುದೇ? ಚೆನ್ನಮಲ್ಲಿಕಾರ್ಜುನದೇವರ ಬೆಳಗನುಟ್ಟು ಲಜ್ಜೆಗೆಟ್ಟವಳಿಗೆ ಉಡಿಗೆತೊಡಿಗೆಯ ಹಂಗೇಕೊ ಮರುಳ

ಅಕ್ಕನ ವಚನಗಳು - 111 ರಿಂದ 120 ರವರೆಗೆ

೧೧೧. ಭವಿಸಂಗವಳಿದು ಶಿವಭಕ್ತನಾದ ಬಳಿಕ ಭಕ್ತಂಗೆ ಭವಿಸಂಗವತಿ ಘೋರ ನರಕ ಶರಣಸತಿ-ಲಿಂಗಪತಿಯಾದ ಬಳಿಕ ಶರಣಂಗೆ ಸತಿಸಂಗವತಿಘೋರ ನರಕ ಚೆನ್ನಮಲ್ಲಿಕಾರ್ಜುನ, ಲಿಂಗೈಕ್ಯಂಗೆ ಪ್ರಾಣಗುಣವಳಿಯದವರ ಸಂಗವೇ ಭಂಗ ೧೧೨. ಹೂವು ಕಂದಿದಲ್ಲಿ ಪರಿಮಳವನರಸುವರೇ? [ಎನ್ನ ತಂದೆ] ಕಂದನಲ್ಲಿ ಕುಂದನರಸುವರೇ? ಎಲೆ ದೇವ, ಸ್ನೇಹವಿದ್ದ ಠಾವಿನೊಳು ದ್ರೋಹವಾದ ಬಳಿಕ ಮರಳಿ ಸದ್ಗುಣವನರಸುವರೇನಯ್ಯ? ನೀ ಎನ್ನ ತಂದೆ, ಹೂವು ಕಂದಿದಲ್ಲಿ [ಪರಿಮಳವನರಸುವರೇ?] ಕಂದನಲ್ಲಿ [ಕುಂದನರಸುವರೇ?] ಎಲೆ ದೇವ, ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೇ? ಗುರುವೇ ಹೂವು ಕಂದಿದಲ್ಲಿ [ಪರಿಮಳವನರಸುವರೇ?] [ಕಂದನಲ್ಲಿ ಕುಂದನರಸುವರೇ?] ಕೇಳಯ್ಯ ಶ್ರೀಶೈಲ ಚೆನ್ನಮಲ್ಲಿಕಾರ್ಜುನ, ಹೊಳೆಯಳಿದ ಬಳಿಕ ಅಂಬಿಗಂಗೇನುಂಟು? ಹೂವು ಕಂದಿದಲ್ಲಿ [ಪರಿಮಳವನರಸುವರೇ?] [ಕಂದನಲ್ಲಿ ಕುಂದನರಸುವರೇ?] ೧೧೩. ಕಂಗಳಲ್ಲಿ ಕಾಂಬೆನೆಂದು ಕತ್ತಲೆಯ ಹೊಕ್ಕುಡೆಂತಹುದಯ್ಯ? ಬೆಟ್ಟದ ತುದಿಯ ಮೆಟ್ಟಿಲೆಂದು ಹಳ್ಳಕೊಳ್ಳಂಗಳಲ್ಲಿ ಇಳಿದೊಡೆಂತಹುದಯ್ಯ? ನೀನಿಕ್ಕಿದ ಸಯಿದಾನವನೊಲ್ಲದೆ ಬೇರೆ ಬಯಸಿದೊಡೆಂತಹುದಯ್ಯ? ಚೆನ್ನಮಲ್ಲಿಕಾರ್ಜುನನ ಘನವನರಿಯಲೆಂದು ಕಿರುಕುಳಕ್ಕೆ ಸಂದೊಡೆಂತಹುದಯ್ಯ? ೧೧೪. ಒಳಗಣ ಗಂಡನವ್ವಾ, ಹೊರಗಣ ಮಿಂಡನವ್ವಾ! ಎರಡನೂ ನಡೆಸಲು [ಬಾರದವ್ವ]! ಚೆನ್ನಮಲ್ಲಿಕಾರ್ಜುನಯ್ಯ, ಬಿಲ್ಲು [ಬೆಳವಲಕಾಯನೊಂದಾಗಿ] ಹಿಡಿಯಲು ಬಾರದಯ್ಯ!! ೧೧೫. ಚಿನ್ನಕ್ಕರಿಸಿನ ಚಿನ್ನಕ್

ಅಕ್ಕನ ವಚನಗಳು - 101 ರಿಂದ 110 ರವರೆಗೆ

೧೦೧. ಕಂಗಳೊಳಗೆ ತೊಳಗಿ ಬೆಳಗುವ ದಿವ್ಯರೂಪನ ಕಂಡು ಮೈಮರೆದೆನವ್ವ ಮಣಿಮುಕುಟದ ಫಣಿ-ಕಂಕಣದ ನಗೆಮೊಗದ ಸುಲಿಪಲ್ಲ ಸೊಬಗನ ಕಂಡು ಮನಸೋತೆನವ್ವ ಇಂತಾಗಿ ಚೆನ್ನಮಲ್ಲಿಕಾರ್ಜುನನೆನ್ನ ಮದುವಣಿಗ ಆನು ಮದುವಣಿಗಿ ಕೇಳಾ ತಾಯೆ ೧೦೨. ಮನಮನ ತಾರ್ಕಣೆಯ ಕಂಡು ಅನುಭವಿಸಲು ನೆನಹೇ ಘನವಹುದಲ್ಲದೆ ಅದು ಹವಣದಲ್ಲಿ ನಿಲ್ಲುವುದೇ? ಎಲೆ ಅವ್ವ, ನೀನು ಮರುಳವ್ವೆ! ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಗೊಲಿದು ಸಲೆ ಮಾರುವೋದೇನು ನಿನ್ನ ತಾಯಿತನವನೊಲ್ಲೆ ಹೋಗೇ! ೧೦೩. ಲಿಂಗವನೂ ಪುರಾತನರನೂ ಅನ್ಯರ ಮನೆಯೊಳಯಿಂಕೆ ಹೋಗಿ ಹೊಗಳುವರು ತಮ್ಮದೊಂದು ಉದರ ಕಾರಣ ಲಿಂಗವೂ ಪುರಾತನರೂ ಅಲ್ಲಿಗೆ ಬರಬಲ್ಲರೆ? ಅನ್ಯವನೆ ಮರೆದು, ನಿಮ್ಮ ನೆನೆವರ ಎನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನಯ್ಯ! ೧೦೪. ಗುಣ-ದೋಷ ಸಂಪಾದನೆಯ ಮಾಡುವನ್ನಕ್ಕ ಕಾಮದ ಒಡಲು ಕ್ರೋಧದ ಗೊತ್ತು ಲೋಭದ ಇಕ್ಕೆ ಮೋಹದ ಮಣ್ದಿರ ಮದದಾವರಣ ಮತ್ಸರದ ಹೊದಿಕೆ ಆ ಭಾವವರತಲ್ಲದೆ ಚೆನ್ನಮಲ್ಲಿಕಾರ್ಜುನನ ಅರಿವುದಕ್ಕೆ ಇಂಬಿಲ್ಲ ಕಾಣಿರಣ್ಣ ೧೦೫. ಕಡೆಗೆ ಮಾಡದ ಭಕ್ತಿ ಧೃಡವಿಲ್ಲದಾಳುತನ ಮೃಡನೊಲಿಯ ಹೇಳಿದರೆ ಎಂತೊಲಿವನಯ್ಯ? ಮಾಡಲಾಗದಳಿಮನವ ಮಾಡಿದರೆ ಮನದೊಡೆಯ ಬಲ್ಲನೈಸೆ ವಿರಳವಿಲ್ಲದ ಮಣಿಯ ಪವಣಿಸಿಹೆನೆಂದೆಡೆ ದುರುಳ ಚೆನ್ನಮಲ್ಲಿಕಾರ್ಜುನಯ್ಯನೆಂತೊಲಿವನಯ್ಯ ೧೦೬. ಬೆಟ್ಟದ ಮೇಲೊಂದು ಮನೆಯ ಮ

ಅಕ್ಕನ ವಚನಗಳು - 91 ರಿಂದ 100 ರವರೆಗೆ

೯೧. ಇಹಕೊಬ್ಬ ಗಂಡನೆ? ಪರಕೊಬ್ಬ ಗಂಡನೆ? ಲೌಕಿಕಕ್ಕೊಬ್ಬ ಗಂಡನೆ? ಪಾರಮಾರ್ಥಕ್ಕೊಬ್ಬ ಗಂಡನೆ? ನನ್ನ ಗಂಡ ಚೆನ್ನಮಲ್ಲಿಕಾರ್ಜುನದೇವರಲ್ಲದೆ ಮಿಕ್ಕಿದ ಗಂಡರೆಲ್ಲ ಮುಗಿಲ ಮರೆಯ ಬಣ್ಣದ ಬೊಂಬೆಯಂತೆ ೯೨. ರತ್ನದ ಸಂಕೋಲೆಯಾದರೆ ತೊಡರಲ್ಲವೆ? ಮುತ್ತಿನ ಬಲೆಯಾದರೆ ಬಂಧನವಲ್ಲವೆ? ಚಿನ್ನದ ಕತ್ತಿಯಲ್ಲಿ ತಲೆಯ ಹೊಯ್ದರೆ ಸಾಯದಿಪ್ಪರೆ? ಲೋಕದ ಭಜನೆಯ ಭಕ್ತಿಯಲ್ಲಿ ಸಿಲುಕಿದರೆ ಜನನಮರಣ ಬಿಡುವುದೇ ಚೆನ್ನಮಲ್ಲಿಕಾರ್ಜುನ? ೯೩. ಎರದ ಮುಳ್ಳಿನಂತೆ ಪರಗಂಡರೆನಗವ್ವ ಸೋಂಕಲಮ್ಮೆ ಸುಳಿಯಲಮ್ಮೆ ನಂಬಿ ನೆಚ್ಚಿ ಮಾತಾಡಲಮ್ಮೆನವ್ವ ಚೆನ್ನಮಲ್ಲಿಕಾರ್ಜುನನಲ್ಲದುಳಿದ ಗಂಡರ ಉರದಲ್ಲಿ ಮುಳ್ಳುಂಟೆಂದು ನಾನಪ್ಪಲಮ್ಮೆನವ್ವ ೯೪. ಗುರುವಿನಿಂದ ಲಿಂಗವ ಕಂಡೆ, ಜಂಗಮವ ಕಂಡೆ ಗುರುವಿನಿಂದ ಪಾದೋದಕವ ಕಂಡೆ, ಪ್ರಸಾದವ ಕಂಡೆ ಗುರುವಿನಿಂದ ನನ್ನ ನಾ ಕಂಡೆ, ಚೆನ್ನಮಲ್ಲಿಕಾರ್ಜುನ ೯೫. ತರಳಿಯ ಹುಳು ತನ್ನ ಸ್ನೇಹಕ್ಕೆ ಮನೆಯ ಮಾಡಿ ತನ್ನ ನೂಲು ತನ್ನನೇ ಸುತ್ತಿ ಸಾವಂತೆ- ಎನಗೂ ಮನೆಯೇ? ಎನಗೂ ಧನವೇ? ಎನ್ನ ಮನೆಮಠ ಕನಸ ಕಂಡುಕಣ್ತೆರೆದಂತಾಯಿತ್ತು ಎನ್ನ ಮನದ ಸಂಸಾರವ ಮಾಣಿಸಾ ಚೆನ್ನಮಲ್ಲಿಕಾರ್ಜುನ ೯೬. ತನುವನುವಾಯಿತ್ತು, ಮನವನುವಾಯಿತ್ತು ಪ್ರಾಣವನುವಾಯಿತ್ತು ಮುನಿದು ಬಾರದ ಪರಿಯಿನ್ನೆಂತು ಹೇಳಾ! ಎನ್ನ ಪ್ರಾಣದಲ್ಲಿ ಸಂದು, ಎನ್ನ ಮನಕ್ಕೆ ಮನವಾಗಿ ನಿಂದ ಎನ್

ಅಕ್ಕನ ವಚನಗಳು - 81 ರಿಂದ 90 ರವರೆಗೆ

೮೧. ಅಯ್ಯ ದೂರದಲಿರ್ದೆಹೆಯೆಂದು ಬಾಯಾರಿ ಬಳಲುತ್ತಿದ್ದೆನಯ್ಯ ನಾನು ಅಯ್ಯ ಸಾರೆ ಬಂದು ನೀನೆನ್ನ ಕರಸ್ಥಲದಲಿ ಮೂರ್ತಿಗೊಂಡರೆ ಇನ್ನಾರತಿಯೆಲ್ಲ ನಿನ್ನಲ್ಲಿ ಲಿಂಗಯ್ಯ ಆಲಿ ನಿಮ್ಮಲ್ಲಿ ನೆಟ್ಟವು ನೋಡಯ್ಯ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮನೆನ್ನ ಕರಸ್ಥಲದಲ್ಲಿ ನೋಡಿ ನೋಡಿ ಕಂಗಳೇ ಪ್ರಾಣವಾಗಿದ್ದೆನಯ್ಯ ೮೨. ನಾನು ನಿನಗೊಲಿದೆ, ನೀನು ಎನಗೊಲಿದೆ ನೀನೆನ್ನನಗಲದಿಪ್ಪೆ, ನಾನಿನ್ನಗಲದಿಪ್ಪೆನಯ್ಯಾ ನಿನಗೆ ಎನಗೆ ಬೇರೊಂದು ಠಾವುಂಟೆ ನೀನು ಕರುಣಿಯೆಂಬುದು ಬಲ್ಲೆನು ನೀನಿರಿಸಿದ ಗತಿಯೊಳಗಿಪ್ಪವಳಾನು ನೀನೆ ಬಲ್ಲೆ ಚೆನ್ನಮಲ್ಲಿಕಾರ್ಜುನ ೮೩. ಅಯ್ಯ ನೀ ಕೇಳಿದರೆ ಕೇಳು, ಕೇಳದಿದ್ದರೆ ಮಾಣು ನಾ ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯ ಅಯ್ಯ ನೀನೊಲಿದರೆ ಒಲಿ, ಒಲಿಯದಿದ್ದರೆ ಮಾಣು ನಾ ನಿನ್ನ ಪೂಜಿಸಿದಲ್ಲದೆ ಸೈರಿಸಲಾರೆನಯ್ಯ ಅಯ್ಯ ನೀ ಮೆಚ್ಚಿದರೆ ಮೆಚ್ಚು, ಮೆಚ್ಚದಿದ್ದರೆ ಮಾಣು ನಾ ನಿನ್ನನಪ್ಪಿದಲ್ಲದೆ ಸೈರಿಸಲಾರೆನಯ್ಯ ಅಯ್ಯ ನೀ ನೋಡಿದರೆ ನೋಡು, ನೋಡದಿದ್ದರೆ ಮಾಣು ನಾ ನಿನ್ನ ನೋಡಿ ಹಿಗ್ಗಿ ಹಾರೈಸಿದಲ್ಲದೆ ಸೈರಿಸಲಾರೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ ನಾ ನಿಮ್ಮ ಪೂಜಿಸಿ ಹರುಷದಲೋಲಾಡುವೆನಯ್ಯ ೮೪. ಕಾಣುತ್ತ ಕಾಣುತ್ತ ಕಂಗಳ ಮುಚ್ಚಿದೆ ನೋಡವ್ವ ಕೇಳುತ್ತ ಕೇಳುತ್ತ ಮೈಮರೆದೊರಗಿದೆ ನೋಡವ್ವ ಹಾಸಿದ ಹಾಸಿಗೆ ಹಂಗಿಲ್ಲದೇ ಹೋಯಿತ್ತು ಕೇಳವ್ವ ಚೆನ್ನಮಲ್ಲಿಕಾರ್ಜುನ ದೇವರ ದೇವನಂ ಕೂಡುವ ಕೂಟವ ನಾನೇನಂದರಿಯದೇ ಮರೆದೆ

ಅಕ್ಕನ ವಚನಗಳು - 71 ರಿಂದ 80 ರವರೆಗೆ

೭೧. ಬಲ್ಲಿದ ಹಗೆಹ ತೆಗೆವನ್ನಬರ ಬಡವರ ಹರಣ ಹಾರಿ ಹೋದ ತೆರನಂತಾಯಿತ್ತು ನೀ ಕಾಡಿ ಕಾಡಿ ನೋಡವನ್ನಬರ ಎನಗಿದು ವಿಧಿಯೇ ಹೇಳಾ ತಂದೆ ! ತೂರುವಾರುವನ್ನಬರ ಒಮ್ಮೆ ಗಾಳಿಗೆ ಹಾರಿ ಹೋದ ತೆರನಂತಾಯಿತ್ತು ಎನಗೆ ನೀನಾವ ಪರಿಯಲ್ಲಿ ಕರುಣಿಸುವೆಯಯ್ಯ ಚೆನ್ನಮಲ್ಲಿಕಾರ್ಜುನ ? ೭೨. ಒಮ್ಮೆ ಕಾಮನ ಕಾಲಹಿಡಿವೆ, ಮತ್ತೂಮ್ಮೆ ಚಂದ್ರಮಂಗೆ ಸೆರಗೊಡ್ಡಿ ಬೇಡುವೆ ಸುಡಲೀ ವಿರಹವ ! ನಾನಾರಿಗೆ ಧೃತಿಗೆಡುವೆ ಚೆನ್ನಮಲ್ಲಿಕಾರ್ಜುನದೇವನೆನ್ನನೊಲ್ಲದ ಕಾರಣ ಎಲ್ಲರಿಗೆ ಹಂಗಿತಿಯಾದೆನವ್ವ ! ೭೩. ಚಿಲಿಮಿಲಿ ಎಂದೋದುವ ಗಿಳಿಗಳಿರಾ! ನೀವು ಕಾಣಿರೆ? ನೀವು ಕಾಣಿರೆ? ಸರವೆತ್ತಿ ಪಾಡುವ ಕೋಗಿಲೆಗಳಿರಾ ! ನೀವು ಕಾಣಿರೆ? ನೀವು ಕಾಣಿರೆ? ಎರಗಿ ಬಂದಾಡುವ ತುಂಬಿಗಳಿರಾ ! ನೀವು ಕಾಣಿರೆ? ನೀವು ಕಾಣಿರೆ? ಕೊಳನ ತಡಿಯಾಡುವ ಹಂಸಗಳಿರಾ ! ನೀವು ಕಾಣಿರೆ? ನೀವು ಕಾಣಿರೆ? ಗಿರಿಗಹ್ವರದೊಳಗಾಡುವ ನವಿಲುಗಳಿರಾ ! ನೀವು ಕಾಣಿರೆ? ನೀವು ಕಾಣಿರೆ? ಚೆನ್ನಮಲ್ಲಿಕಾರ್ಜುನನೆಲ್ಲಿದ್ದಹನೆಂಬುದ ಬಲ್ಲೆಡೆ ನೀವು ಹೇಳಿರೇ ! ೭೪. ಅಳಿಸಂಕುಳವೆ, ಮಾಮರವೇ, ಬೆಳದಿಂಗಳೇ, ಕೋಗಿಲೆಯೇ, ನಿಮ್ಮನ್ನೆಲ್ಲರನೂ ಒಂದು ಬೇಡುವೆನು ಎನ್ನೊಡೆಯ ಚೆನ್ನಮಲ್ಲಿಕಾರ್ಜುನ ದೇವರ ಕಂಡಡೆ ಕರೆದು ತೋರಿರೆ ೭೫. ವನವೆಲ್ಲ ನೀವೆ ವನದೊಳಗಣ ದೇವತರುವೆಲ್ಲ ನೀವೆ ತರುವಿನೊಳಗಾಡುವ ಖಗಮೃಗವೆಲ್ಲ ನೀವೆ ಚೆನ್ನಮಲ್ಲಿಕಾರ್ಜುನ ಸರ್ವಭರಿತನಾಗಿ ಎನಗೇಕೆ ಮುಖದೋರೆ?

ಅಕ್ಕನ ವಚನಗಳು - 61 ರಿಂದ 70 ರವರೆಗೆ

೬೧. ಪೃಥ್ವಿಯ ಗೆಲಿದ ಏಲೇಶ್ವರನ ನಾನು ಕಂಡೆ ಭಾವಭ್ರಮೆಯ ಗೆಲಿದ ಬ್ರಹ್ಮೇಶ್ವರನ ನಾನು ಕಂಡೆ ಸತ್ವ-ರಜ-ತಮ-ತ್ರಿವಿಧವ ಗೆಲಿದ ತ್ರಿಪುರಾಂತಕನ ಕಂಡೆ ಅಂತರಂಗ-ಆತ್ಮಜ್ಞಾನದಿಂದ ಜ್ಯೋತಿಸಿದ್ಧಯ್ಯನ ನಾನು ಕಂಡೆ ಇವರೆಲ್ಲರ ಮಧ್ಯಸ್ಥಾನ ಪ್ರಾಣಲಿಂಗವೆಂದು ಸುಜ್ಞಾನದಲ್ಲಿ ತೋರಿದ ಆ ಬಸವಣ್ಣನ ಪ್ರಸಾದದಿಂದ ಚೆನ್ನಮಲ್ಲಿಕಾರ್ಜುನನ ಕಂಡೆನಯ್ಯ ೬೨. ಅಪಾರ ಗಂಭೀರದ ಅಂಬುಧಿಯಲ್ಲಿ ತಾರಾಪಥವ ನೋಡಿ ನಡೆಯೆ ಭೈತ್ರದಿಂದ ದ್ವೀಪಾಂತರಕ್ಕೆ ಸಕಲಪದಾರ್ಥನವೆಯ್ದಿಸುವುದು ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ ತುರ್ಯಸಂಭಾಷಣೆಯನರಿದಡೆ ಮುನ್ನಿನಲ್ಲಿಗೆಯ್ದಿಸುವುದು ೬೩. ಕ್ರೀಯೊಳ್ಳುಡೊಂತೊಂದಾಸೆ ಸದ್ಭಕ್ತರ ನುಡಿಗಡಣ ಉಳ್ಳೊಡಂತೊಂದಾಸೆ ಶ್ರೀಗಿರಿಯನೇರಿ ನಿಮ್ಮ ಬೆರೆಸಿದರೆ ಎನ್ನಾಸೆಗೆ ಕಡೆಯೇ ಅಯ್ಯ? ಆವಾಸೆಯೂ ಇಲ್ಲದೆ ನಿಮ್ಮ ನಂಬಿ ಬಂದು ಕೆಟ್ಟೆನಯ್ಯ ೬೪. ಆರೂ ಇಲ್ಲದವಳೆಂದು ಅಳಿಗೊಳಲು ಬೇಡ ಕಂಡಯ್ಯ ಏನ ಮಾಡಿದೆಡೆಯೂ ನಾನಂಜುವಳಲ್ಲ! ತರಗೆಲೆಯ ಮೆಲಿದು ನಾನಿಹೆನು ಸುರಗಿಯ ಮೇಲೆರಗಿ ನಾನಿಹೆನು ಚೆನ್ನಮಲ್ಲಿಕಾರ್ಜುನಯ್ಯ ಕರ ಕಡೆ ನೋಡಿದಡೆ ಒಡಲನೂ ಪ್ರಾಣವನೂ ನಿಮಗೊಪ್ಪಿಸಿ ಶುದ್ಧಳಿಹೆನು ೬೫. ಕಿಡಿಕಿಡಿ ಕೆದರಿದಡೆ ಎನಗೆ ಹಸಿವು ತೃಷೆ ಅಡಗಿತ್ತೆಂಬೆನು ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು ಚೆನ್ನಮಲ್ಲಿಕಾರ್ಜುನಯ್ಯ, ಶಿರ ಹರಿದು ಬಿದ್ದಡೆ ಪ್ರಾಣ ನ

ಅಕ್ಕನ ವಚನಗಳು - 51 ರಿಂದ 60 ರವರೆಗೆ

೫೧. ಅಂಗ ಲಿಂಗವ ವೇಧಿಸಿ ಅಂಗ ಲಿಂಗದೊಳಗಾಯಿತ್ತು ಮನ ಲಿಂಗವ ವೇಧಿಸಿ ಮನ ಲಿಂಗದೊಳಗಾಯಿತ್ತು ಭಾವ ಲಿಂಗವ ವೇಧಿಸಿ ಭಾವ ಲಿಂಗದೊಳಗಾಯಿತ್ತು ಚೆನ್ನಮಲ್ಲಿಕಾರ್ಜುನ, ನಿಮ್ಮ ಒಲುಮೆಯ ಸಂಗದಲ್ಲಿರ್ದು ಸ್ವಯಂಲಿಂಗಿಯಾದೆನು ೫೨. ನಿನ್ನರಿಕೆಯ ನರಕವೇ ಮೋಕ್ಷ ನೋಡಯ್ಯ ನಿನ್ನರಿಯದ ಮುಕ್ತಿಯೇ ನರಕ ಕಂಡಯ್ಯ ನೀನೊಲ್ಲದ ಸುಖವೇ ದುಃಖ ಕಂಡಯ್ಯ ನೀನೊಲಿದ ದುಃಖವೇ ಪರಮಸುಖ ಕಂಡಯ್ಯ ಚೆನ್ನಮಲ್ಲಿಕಾರ್ಜುನಯ್ಯ ನೀ ಕಟ್ಟಿ ಕೆಡಹಿದ ಬಂಧನವೇ ನಿರ್ಬಂಧನವೆಂದಿಪ್ಪೆನು ೫೩. ಹಾಲು ತುಪ್ಪವ ನುಂಗಿ ಬೇರಾಗಬಲ್ಲುದೆ? ಸೂರ್ಯಕಾಂತದಗ್ನಿಯನಾರು ಭೇದಿಸಬಲ್ಲರು? ಅಪಾರಮಹಿಮ ಚೆನ್ನಮಲ್ಲಿಕಾರ್ಜುನನೆನ್ನೊಳಡಗಿಪ್ಪ ಪರಿಯ ಬೇರಿಲ್ಲದೆ ಕಂಡು ಕಣ್ತೆರೆದೆನು ೫೪. ಘನವ ಕಂಡೆ, ಅನುವ ಕಂಡೆ ಆಯತ-ಸ್ವಾಯತ-ಸನ್ನಿಹಿತ ಸುಖವ ಕಂಡೆ ಅರಿವನರಿದು ಮರಹ ಮರೆದೆ ಕುರುಹಿನ ಮೋಹದ ಮರವೆಯನೀಡಾಡಿದೆ ಚೆನ್ನಮಲ್ಲಿಕಾರ್ಜುನ, ನಿಮ್ಮನರಿದು ಸೀಮೆಗೆಟ್ಟೆನು ೫೫. ಕ್ರೀಗಳು ಮುಟ್ಟಲರಿಯವು ನಿಮ್ಮನೆಂತು ಪೂಜಿಸುವೆ? ನಾದ-ಬಿಂದುಗಳು ಮುಟ್ಟಲರಿಯವು ನಿಮ್ಮನೆಂತು ಹಾಡುವೆ? ಕಾಯ ಮುಟ್ಟುವೊಡೆ ಕಾಣಬಾರದ ಘನವು ನಿಮ್ಮನೆಂತು ಕರಸ್ಥಲದಲಿ ಧರಿಸುವೆ? ಚೆನ್ನಮಲ್ಲಿಕಾರ್ಜುನಯ್ಯ, ನಾನೇನೆಂದರಿಯದೆ ನಿಮ್ಮ ನೋಡಿ ನೋಡಿ ಸೈವೆರೆಗಾಗುತಿರ್ದೆನು ೫೬. ಸಜ್ಜನವಾಗಿ ಮಜ್ಜನಕ್ಕೆರೆವೆ ಶಾಂತಳ

ಅಕ್ಕನ ವಚನಗಳು - 41 ರಿಂದ 50 ರವರೆಗೆ

೪೧. ಶ್ರೀ ಗುರುಲಿಂಗದೇವರು ತಮ್ಮ ಹಸ್ತವ ತಂದು ಎನ್ನ ಮಸ್ತಕದ ಮೇಲೆ ಇರಿಸಿದಾಗಳೇ ಎನ್ನ ಭವಂ ನಾಸ್ತಿಯಾಯಿತ್ತು! ಎನ್ನ ತನ್ನಂತೆ ಮಾಡಿದ! ಎನಗೆ-ತನಗೆ ತೆರಹಿಲ್ಲದಂತೆ ಮಾಡಿ ತೋರಿದನು ನೋಡಾ! ತನ್ನ ಕರಸ್ಥಲದಲ್ಲಿದ್ದ ಮಹಾಲಿಂಗವನು ಎನ್ನ ಕರಸ್ಥಲದಲ್ಲಿ ಮೂರ್ತಿಗೊಳಿಸಿದ! ಎನ್ನ ಕರಸ್ಥಲದಲ್ಲಿದ್ದ ಮಹಾಲಿಂಗವನು ಎನ್ನ ಮನಸ್ಥಲದಲ್ಲಿ ಮೂರ್ತಿಗೊಳಿಸಿದ! ಎನ್ನ ಮನಸ್ಥಲದಲ್ಲಿದ್ದ ಮಹಾಲಿಂಗವನು ಎನ್ನ ಭಾವಸ್ಥಲದಲ್ಲಿ ಮೂರ್ತಿಗೊಳಿಸಿದ! ಎನ್ನ ಭಾವಸ್ಥಲದಲ್ಲಿದ್ದ ಮಹಾಲಿಂಗವನು ಎನ್ನ ಜ್ಞಾನಸ್ಥಲದಲ್ಲಿ ಮೂರ್ತಿಗೊಳಿಸಿದ! ಎನ್ನ ಜ್ಞಾನಸ್ಥಲದಲ್ಲಿದ್ದ ಮಹಾಲಿಂಗವನು ಎನ್ನ ಸರ್ವಾಂಗದೊಳಹೊರಗೆ ತೆರಹಿಲ್ಲದಳವಡಿಸಿದ ನಮ್ಮ ಗುರುಲಿಂಗದೇವ ಚೆನ್ನಮಲ್ಲಿಕಾರ್ಜುನ ೪೨. ನಿತ್ಯವೆನ್ನ ಮನೆಗೆ ನಡೆದು ಬಂದಿತ್ತು ಮುಕ್ತಿಯೆನ್ನ ಮನೆಗೆ ನಡೆದು ಬಂದಿತ್ತು ಜಯ ಜಯ ಗುರು ನಮೋ ಪರಮ ಗುರುವೆ ನಮೋ ನಮೋ ಚೆನ್ನಮಲ್ಲಿಕಾರ್ಜುನನ ತಂದೆನಗೆ ತೋರಿ ಕೊಟ್ಟ ಗುರುವೆ ನಮೋ ನಮೋ ೪೩. ನರ-ಜನ್ಮವ ತೊಡೆದು ಹರ-ಜನ್ಮವ ಮಾಡಿದ ಗುರುವೆ ಭವಬಂಧನವ ಬಿಡಿಸಿ ಪರಮಸುಖವ ತೋರಿದ ಗುರುವೆ ಭವಿ ಎಂಬುದ ತೊಡೆದು ಭಕ್ತೆ ಎಂದೆನಿಸಿದ ಗುರುವೆ ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕೆ ಕೊಟ್ಟ ಗುರುವೆ ನಮೋ ನಮೋ ೪೪. ಸಂಸಾರಸಾಗರದೊಳಗೆ ಬಿದ್ದೆ ನೋಡಾ ನಾನು ಸಂಸಾರ ನಿಸ್ಸಾರವೆಂದು ತೋರಿದನೆನಗೆ ಗುರು ಅಂಗ ವಿಕಾರದ ಸಂಗವ ನಿಲಿಸಿ ಲಿಂಗವನಂಗದ ಮೇಲೆ ಸ್ಥಾಪ್ಯವ

ಅಕ್ಕನ ವಚನಗಳು - 31 ರಿಂದ 40 ರವರೆಗೆ

೩೧. ಊರ ಸೀರೆಗೆ ಅಗಸ ತಡಬಡಗೊಂಬಂತೆ ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಎಂದು ನೆನೆನೆನೆದು ನಿಮ್ಮನರಿಯದ ಕಾರಣ ಕೆಮ್ಮನೆ ಕೆಟ್ಟೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ ೩೨. ದೇವ ಎನಗೆ ಭವಿಯ ಸಂಗವೆಂದು ಮಾಣ್ಪುದೆನ್ನ ತಂದೆ ದೇವ ಬೆರಕೆಯಿಲ್ಲದಚ್ಚಬಕುತಿ ಸುಖವದೆಂದು ತಂದೆ ಪೂಜೆಯೊಳಗೆ ಮೆಚ್ಚ ಬೆಚ್ಚ ಮನವನೆಂತು ತೆಗೆವೆನಯ್ಯ ಪೂಜೆಯೊಳಗೆ ನೆಟ್ಟ ದಿಟ್ಟಿಗಳನದೆಂತು ಕೀಳ್ವೆನಯ್ಯ [ಚೆನ್ನಮಲ್ಲಿಕಾರ್ಜುನ] ೩೩. ದೇವ ಶಿವಲಾಂಛನವನೇರಿಸಿಕೊಂಡು ಮನೆಗೆ ಬಂದವರಂ ಕಡೆಗಣಿಸೆ ಎಂತು ನೋಡುತಿರ್ಪೆನ್? ಆವರ್ಗೆ ಸತ್ಕಾರವಂ ಮಾಡಲಿಲ್ಲದಿರ್ದೊಡೆ ಎನ್ನನೀ ಧರೆಯ ಮೇಲಿರಿಸುವ ಕಾರಣವೇನಭವ? ನಿನ್ನವಳೆಂದೆನ್ನ ಮುದ್ದುತನವ ಸಲಿಸುವೊಡಿರಿಸುವುದು ಇಲ್ಲಾ ಕೈಲಸಕ್ಕೆ ಕೊಂಡೊಯ್ವುದು [ಚೆನ್ನಮಲ್ಲಿಕಾರ್ಜುನ] ೩೪. ಅಶನದಾಶಯಂ, ತೃಷೆಯ ತೃಷ್ಣೆಯಂ, ಬೆಸನದ ಬೇಗೆಯಂ, ವಿಷಯದ ವಿಹ್ವಳತೆಯಂ, ತಾಪತ್ರಯದ ಕಲ್ಪನೆಗಳಂ ಗೆಲಿದೆ ಇನ್ನೇನಿನ್ನೇನೆನ್ನಿಚ್ಛೆಯಾದುದು ಚೆನ್ನಮಲ್ಲಿಕಾರ್ಜುನ ನಿನಗಂಜೆನಂಜೆ ೩೫. ಶಿವನೇ, ಉಳಿವ ಕರೆವ ನೇಹವುಂಟೆ? ಸಂಸಾರಕ್ಕಂ ನಿಮ್ಮಲ್ಲಿ ಗೆಡೆಯಾಡುವ ಭಕ್ತಿಯುಂಟೇ? ಏನಯ್ಯ ಶಿವನೇ, ಏನೆಂದು ಪೇಳ್ವೆ ಲಜ್ಜೆಯ ಮಾತ, [ಚೆನ್ನಮಲ್ಲಿಕಾರ್ಜುನ] ೩೬. ಒಳಗೆ ಶೋಧಿಸಿ, ಹೊರಗೆ ಶುದ್ಧವಿಸಿ, ಒಳ-ಹೊರಗೆಂಬ ಉಭಯಶಂಕೆಯ ಕಳೆದು, ಸ್ಫಟಿಕದ