ಬಸವಣ್ಣನ ವಚನಗಳು - 11 ರಿಂದ 20 ರವರೆಗೆ ೧೧. ಸಂಸಾರವೆಂಬ ಸರ್ಪ ಮುಟ್ಟಲು ಪಂಚೇಂದ್ರಿಯವಿಷಯವೆಂಬ ವಿಷದಿಂದಾನು ಮುಂದುಗೆಟ್ಟೆನಯ್ಯ, ಆನು ಹೊರಳಿ ಬೀಳುತ್ತಿದ್ದೆನಯ್ಯ; "ಓಂ ನಮಶ್ಶಿವಾಯ" ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ ಕೂಡಲಸಂಗಮದೇವ. ೧೨. ಎಂದೋ, ಸಂಸಾರದ ದಂದುಗ ಹಿಂಗುವುದೆನಗೆಂದೋ ? ಮನದಲ್ಲಿ ಪರಿಣಾಮವಹುದೆನಗಿನ್ನೆಂದೊ ? ಕೂಡಲಸಂಗಮದೇವಾ ಇನ್ನೆಂದೋ ಪರಮಸಂತೋಷದಲಿಹುದೆನಗೆಂದೋ ? ೧೩. ಕಾಲಲಿ ಕಟ್ಟಿದ ಗುಂಡು, ಕೊರಳಲಿ ಕಟ್ಟಿದ ಬೆಂಡು! ತೇಲಲೀಯದು ಗುಂಡು, ಮುಳುಗಲೀಯದು ಬೆಂಡು! ಇಂತಪ್ಪ ಸಂಸಾರಶರಧಿಯ ದಾಂಟಿಸಿ ಕಾಲಾಂತಕನೇ ಕಾಯೋ, ಕೂಡಲಸಂಗಯ್ಯ! ೧೪. ಲೇಸ ಕಂಡು ಮನ ಬಯಸಿ ಬಯಸಿ ಆಶೆ ಮಾಡಿದರಿಲ್ಲ ಕಂಡಯ್ಯ. ತಾಳಮರಕ್ಕೆ ಕೈಯ್ಯ ನೀಡಿ, ಮೇಲ ನೋಡಿ ಗೋಣು ನೊಂದುದಯ್ಯ. ಕೂಡಲಸಂಗಮದೇವ ಕೇಳಯ್ಯ ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯ. ೧೫. ಚಂದ್ರೋದಯಕ್ಕೆ ಅಂಬುಧಿ ಹೆಚ್ಚುವುದಯ್ಯ. ಚಂದ್ರ ಕುಂದೆ ಕುಂದುವುದಯ್ಯ, ಚಂದ್ರಂಗೆ ರಾಹು ಅಡ್ಡ ಬಂದಲ್ಲಿ ಅಂಬುಧಿ ಬೊಬ್ಬಿಟ್ಟಿತ್ತೇ ಅಯ್ಯ ? ಅಂಬುಧಿಯ ಮುನಿ ಆಪೋಶನವ ಕೊಂಡಲ್ಲಿ ಚಂದ್ರಮನಡ್ಡ ಬಂದನೆ ಅಯ್ಯ ? ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ ಜಗದ್ ನಂಟ ನೀನೇ ಅಯ್ಯ ಕೂಡಲಸಂಗಮದೇವ. ೧೬. ಒಲೆ ಹತ್ತಿ ಉರಿದರೆ ನಿಲ ಬಹುದಲ್ಲದೆ ಧರೆ ಹತ್ತಿ ಉರಿದರೆ ನಿಲ ಬಾರದು. ಏರಿ ನೀರುಂಬಡೆ, ಬೇಲಿ ಕೈಯ ಮೇವಡೆ ನಾರಿ ತನ್ನ ಮನೆಯಲ್ಲಿ ಕಳ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು