Skip to main content

Posts

Showing posts from July 6, 2010

ಬಸವಣ್ಣನ ವಚನಗಳು - 41 ರಿಂದ 50 ರವರೆಗೆ

ಬಸವಣ್ಣನ ವಚನಗಳು - 41 ರಿಂದ 50 ರವರೆಗೆ ೪೧. ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯ ತಂದೆ, ಸುತ್ತಿ ಸುಳಿದು ನೋಡದಂತೆ ಅಂಧಕನ ಮಾಡಯ್ಯ ತಂದೆ. ಮತ್ತೊಂದ ಕೇಳದಂತೆ ಕಿವುಡನ ಮಾಡಯ್ಯ ತಂದೆ. ನಿಮ್ಮ ಶರಣರ ಪಾದವಲ್ಲದೆ ಅನ್ಯವಿಷಯಕ್ಕೆಳಸದಂತೆ ಇರಿಸು ಕೂಡಲಸಂಗಮದೇವ. ೪೨. ಎನ್ನ ವಾಮ-ಕ್ಷೇಮ ನಿಮ್ಮದಯ್ಯ ಎನ್ನ ಹಾನಿ-ವೃದ್ಧಿ ನಿಮ್ಮದಯ್ಯ ಎನ್ನ ಮಾನಾಪಮಾನವು ನಿಮ್ಮದಯ್ಯ ಬಳ್ಳಿಗೆ ಕಾಯಿ ದಿಮ್ಮಿತ್ತೆ ? ಕೂಡಲಸಂಗಮದೇವ. ೪೩. ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯ. ಇವ ನಮ್ಮವ, ಇವ ನಮ್ಮವ, ಇವನಮ್ಮವನೆಂದೆನಿಸಯ್ಯ ಕೂಡಲಸಂಗಮದೇವಯ್ಯ ನಿಮ್ಮ ಮನೆಯ ಮಗನೆಂದೆನಿಸಯ್ಯ. ೪೪. ನರ ಕೂರಂಬಿನಲೆಚ್ಚ; ಅವಂಗೊಲಿದೆಯಯ್ಯ ಅರಳಂಬಿನಲೆಚ್ಚ ಕಾಮನನುರಹಿದೆಯಯ್ಯ. ಇರುಳು ಹಗಲೆನ್ನದೆ ಪ್ರಾಣಘಾತವ ಮಾಡಿದ ಬೇಡನ ಕೈಲಾಸಕೊಯ್ದೆಯಯ್ಯ. ಎನ್ನನೇತಕೆ ಒಲ್ಲೆ ಕೂಡಲಸಂಗಮದೇವ ? ೪೫. ನೀನೊಲಿದರೆ ಕೊರಡು ಕೊನರುವುದಯ್ಯ. ನೀನೊಲಿದರೆ ಬರಡು ಹಯನಹುದಯ್ಯ. ನೀನೊಲಿದರೆ ವಿಷವಮೃತವಹುದಯ್ಯ. ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು ಕೂಡಲಸಂಗಮದೇವ. ೪೬. ಆಶೆಯೆಂಬ ಪಾಶದಲ್ಲಿ ಭವಬಂಧನವಾಗಿದ್ದೆನಯ್ಯ. ಸಕೃತೂ ನಿಮ್ಮ ನೆನೆಯಲೆನಗೆ ತೆರೆಹಿಲ್ಲವಯ್ಯ. ಕರುಣಾಕರ, ಅಭಯಕರ, ವರದಾನಿ ಕರುಣಿಸಯ್ಯ. ಸಂಸಾರಬಂಧವನು ಮಾಣಿಸಿ ಎನಗೆ ಕೃಪೆ ಮಾಡಿ ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸಯ್ಯ ಭಕ್ತಜನಮನೋವಲ್ಲಭ ಕೂಡಲಸಂಗಮದೇವ. ೪೭.