Skip to main content

Posts

Showing posts from July 7, 2010

ಸರ್ವಜ್ಞನ ವಚನಗಳು - 61 ರಿಂದ 70

ಸರ್ವಜ್ಞನ ವಚನಗಳು -  61 ರಿಂದ 70 ೬೧. ಒಮ್ಮನದ ಶಿವಪೂಜೆ ಗಮ್ಮನೆ ಮಾಡುವದು ಇಮ್ಮನವ ಪಿಡಿದು ಕೆಡಬೇಡ ವಿಧಿವಶವು ಸರಿಮ್ಮನೇ ಕೆಡಗು ಸರ್ವಜ್ಞ ೬೨. ಅಷ್ಟವಿಧದರ್ಚನೆಯ ನೆಷ್ಟು ಮಾಡಿದರೇನು? ನಿಷ್ಠೆ ನೆಲೆಗೊಳದೆ ಭಜಿಸುವಾ ಪೂಜೆ ತಾ ನಷ್ಟ ಕಾಣಯ್ಯ ಸರ್ವಜ್ಞ ೬೩. ಇಷ್ಟಲಿಂಗದಿ ಮನವ ನೆಟ್ಟನೆಯ ನಿಲಿಸದಲೆ ಕಷ್ಟಭ್ರಮೆಗಳಲಿ ಮುಳುಗಿದನು ಕರ್ಮದಾ ಬಟ್ಟೆಗೆ ಹೋಹ ಸರ್ವಜ್ಞ ೬೪. ಎಷ್ಟು ಬಗೆಯಾರತಿಯ ಮುಟ್ಟಿಸಿದ ಫಲವೇನು? ನಿಷ್ಠೆಯಿಲ್ಲದವನ ಶಿವಪೂಜೆ ಹಾಳೂರ ಕೊಟ್ಟಗುರಿದಂತೆ ಸರ್ವಜ್ಞ ೬೫. ಒಸೆದೆಂಟು ದಿಕ್ಕಿನಲ್ಲಿ ಮಿಸುನಿ ಗಿಣ್ಣಲು ಗಿಂಡಿ ಹಸಿದು ಮಾಡುವನ ಪೂಜೆಯದು ಬೋಗಾರ ಪಸರ ವಿಟ್ಟಂತೆ ಸರ್ವಜ್ಞ ೬೬. ಬತ್ತಿ ಹೆತ್ತುಪ್ಪವನು ಹತ್ತಿಸಿದ ಫಲವೇನು? ನಿತ್ಯ ನೆಲೆಗೊಳದೆ ಭಜಿಸುವಾ ಪೂಜೆ ತಾ ಹತ್ತಿಗೇಡೆಂದ ಸರ್ವಜ್ಞ ೬೭. ಎಣಿಸುತಿರ್ಪುದು ಬಾಯಿ ಪೊಣರುತಿರ್ಪುದು ಬೆರಳು ಕ್ಷಣಕ್ಕೊಮ್ಮೆ ಒಂದನೆಣಿಸುವಾ ಜಪಕೊಂದು ಕುಣಿಕೆಯುಂಟೆಂದ ಸರ್ವಜ್ಞ ೬೮. ಎಣಿಸುತಿರ್ಪುದು ಬೆರಳು ಗುಣಿಸುತಿರ್ಪುದು ಜಿಹ್ವೆ ಮನಹೋಗಿ ಹಲವ ನೆನೆದರದು ಹಾಳೂರ ಶುನಕನಂತಕ್ಕು ಸರ್ವಜ್ಞ ೬೯. ಕೊಲುವ ಕೈಯೊಳು ಪೂಜೆ, ಮೆಲುವ ಬಾಯೊಳು ಮಂತ್ರ ಸಲೆ ಪಾಪವೆರೆದ ಮನದೊಳಗೆ ಪೂಜಿಪನೆ ಹೊಲೆಯ ಕಾಣಯ್ಯ ಸರ್ವಜ್ಞ ೭೦. ಲಿಂಗಪೂಜಿಸುವಾತ ಜಂಗಮಕ್ಕೆ ನೀಡಿದೊಡೆ ಲಿಂಗದಾ ಕ್ಷೇಮ ಘನವಾಗಿ ಆ ಲಿಂಗ ಹಿಂಗದಿರುತಿಹುದು ಸರ್ವಜ್ಞ

ಬಸವಣ್ಣನ ವಚನಗಳು - 51 ರಿಂದ 60 ರವರೆಗೆ

ಬಸವಣ್ಣನ ವಚನಗಳು - 51 ರಿಂದ 60 ರವರೆಗೆ ೫೧. ನೀರಿಂಗೆ ನೈದಿಲೇ ಶೃಂಗಾರ, ಊರಿಂಗೆ ಆರವೆಯೇ ಶೃಂಗಾರ, ಸಮುದ್ರಕ್ಕೆ ತೆರೆಯೇ ಶೃಂಗಾರ ನಾರಿಗೆ ಗುಣವೇ ಶೃಂಗಾರ ಗಗನಕ್ಕೆ ಚಂದ್ರಮನೇ ಶೃಂಗಾರ ನಮ್ಮ ಕೂಡಲಸಂಗನ ಶರಣರಿಗೆ ನೊಸಲ ವಿಭೂತಿಯೇ ಶೃಂಗಾರ. ೫೨. ಅಕಟಕಟಾ ಬೆಡಗುಬಿನ್ನಾಣವೇನೋ ?! 'ಓಂ ನಮಶ್ಶಿವಾಯ' ಎಂಬುದೇ ಮಂತ್ರ! 'ಓಂ ನಮಶ್ಶಿವಾಯ' ಎಂಬುದೇ ತಂತ್ರ! ನಮ್ಮ ಕೂಡಲಸಂಗಮದೇವರ ಮಾಣದೆ ನೆನವುದೇ ಮಂತ್ರ! ೫೩. ಎಮ್ಮವರು ಬೆಸಗೊಂಡರೆ ಶುಭಲಗ್ನವೆಂದೆನ್ನಿರಯ್ಯ ರಾಶಿ ಕೂಟ ಋಣ ಸಂಬಂಧ ಉಂಟೆಂದು ಹೇಳಿರಯ್ಯ ನಾಳಿನ ದಿನಕಿಂದಿನ ದಿನ ಲೇಸೆಂದು ಹೇಳಿರಯ್ಯ ಚಂದ್ರಬಲ ತಾರಾಬಲ ಉಂಟೆಂದು ಹೇಳಿರಯ್ಯ ಕೂಡಲಸಂಗಮದೇವನ ಪೂಜಿಸಿದ ಫಲ ನಿಮ್ಮದಯ್ಯ. ೫೪. ತಾಳಮರದ ಕೆಳಗೆ ಒಂದು ಹಾಲ ಹರವಿಯಿದ್ದರೆ ಅದ ಹಾಲ ಹರವಿಯೆನ್ನರು: ಸುರೆಯ ಹರವಿಯೆಂಬರು. ಈ ಭಾವಸಂದೆಯವ ಮಾಣಿಸಾ ಕೂಡಲಸಂಗಮದೇವ. ೫೫. ಕುಂಬಳ ಕಾಯಿಗೆ ಕಬ್ಬುನದ ಕಟ್ಟ ಕೊಟ್ಟರೆ ಕೊಳೆವುದಲ್ಲದೆ ಅದು ಬಲುಹಾಗ ಬಲ್ಲುದೆ ? ಅಳಿಮನದವಂಗೆ ದೀಕ್ಷೆಯ ಕೊಟ್ಟರೆ ಭಕ್ತಿಯೆಂತಹುದು ? ಮುನ್ನಿನಂತೆ, ಕೂಡಲಸಂಗಯ್ಯ! ಮನಹೀನನ ಮೀಸಲ ಕಾಯ್ದಿರಿಸಿದಂತೆ!! ೫೬. ಸಗಣಿಯ ಬೆನಕನ ಮಾಡಿ ಸಂಪಿಗೆಯರಳಲ್ಲಿ ಪೂಜಿಸಿದರೆ ರಂಜನೆಯಹುದಲ್ಲದೆ, ಅದರ ಗಂಜಳ ಬಿಡದಣ್ಣ! ಮಣ್ಣ ಪ್ರತಿಮೆಯ ಮಾಡಿ ಮಜ್ಜನಕ್ಕೆರೆದರೆ ನಿಚ್ಚ ಕೆಸರಹುದಲ್ಲದೆ ಅದರಚ್ಚಿಗ ಬಿಡದಣ್ಣ!! ಲೋಕದ