Skip to main content

Posts

Showing posts from July 8, 2010

ಬಸವಣ್ಣನ ವಚನಗಳು - 61 ರಿಂದ 70 ರವರೆಗೆ

ಬಸವಣ್ಣನ ವಚನಗಳು - 61 ರಿಂದ 70 ರವರೆಗೆ  ೬೧. ಓಡೆತ್ತ ಬಲ್ಲುದೋ ಅವಲಕ್ಕಿಯ ಸವಿಯ ? ಕೋಡಗ ಬಲ್ಲುದೇ ಸೆಳೆಮಂಚದ ಸುಖವ ? ಕಾಗೆ ನಂದನವನದೊಳಗಿದ್ದರೇನು, ಕೋಗಿಲೆಯಾಗಬಲ್ಲುದೇ ? ಕೊಳನ ತಡಿಯಲೊಂದು ಹೊರಸು ಕುಳಿತಿದ್ದರೇನು ಕಳಹಂಸೆಯಾಗಬಲ್ಲುದೇ ಕೂಡಲಸಂಗಮದೇವ ? ೬೨. ಎನಿಸು ಕಾಲ ಕಲ್ಲು ನೀರೊಳಗಿದ್ದರೇನು, ನೆನೆದು ಮೃದುವಾಗಬಲ್ಲುದೆ ? ಎನಿಸುಕಾಲ ನಿಮ್ಮ ಪೂಜಿಸಿ ಏವೆನಯ್ಯಾ ಮನದಲ್ಲಿ ದೃಢವಿಲ್ಲದನ್ನಕ ? ನಿಧಾನವ ಕಾಯ್ದಿದ್ದ ಬೆಂತರನ ವಿಧಿ ಎನಗಾಯಿತ್ತು ಕಾಣಾ ಕೂಡಲಸಂಗಮದೇವ. ೬೩. ಕೂಸುಳ್ಳ ಸೂಳೆ ಧನದಾಸೆಗೊತ್ತೆಗೊಂಡರೆ ಕೂಸಿಂಗಿಲ್ಲ, ಬೊಜಗಂಗಿಲ್ಲ; ಕೂಸನೊಮ್ಮೆ ಸಂತವಿಡುವಳು, ಬೊಜಗನನೊಮ್ಮೆ ನೆರೆವಳು; ಧನದಾಸೆ ಬಿಡದು ಕೂಡಲಸಂಗಮದೇವ. ೬೪. ಎರದೆಲೆಯಂತೆ ಒಳಗೊಂದು ಹೊರಗೊಂದಾದರೆ ಮೆಚ್ಚುವನೆ ? ತಾನು ತನ್ನಂತೆ! ನುಡಿ ಎರಡಾದರೆ ಮೆಚ್ಚುವನೆ ? ತಾನು ತನ್ನಂತೆ! ನಡೆ ಎರಡಾದರೆ ಮೆಚ್ಚುವನೆ ? ತಾನು ತನ್ನಂತೆ! ಉಡುವಿನ ನಾಲಗೆಯಂತೆ ಎರಡಾದರೆ ಮೆಚ್ಚುವನೇ ? ಕೂಡಲಸಂಗಮದೇವ ತಾನು ತನ್ನಂತೆ! ೬೫. ಭಕ್ತರ ಕಂಡರೆ ಬೋಳಪ್ಪಿರಯ್ಯ; ಸವಣರ ಕಂಡರೆ ಬತ್ತಲೆಯಪ್ಪಿರಯ್ಯ ಹಾರುವರ ಕಂಡರೆ ಹರಿನಾಮವೆಂಬಿರಯ್ಯ; ಅವರವರ ಕಂಡರೆ ಅವರವರಂತೆ ಸೂಳೆಗೆ ಹುಟ್ಟಿದವರ ತೋರದಿರಯ್ಯ. ಕೂಡಲಸಂಗಯ್ಯನ ಪೂಜಿಸಿ ಅನ್ಯದೈವಂಗಳಿಗೆರಗಿ ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯ! ೬೬. ಗಂಡ ಶಿವಲಿಂಗದೇವರ ಭಕ್ತ,