Skip to main content

Posts

Showing posts from July 9, 2010

ಬಸವಣ್ಣನ ವಚನಗಳು - 71 ರಿಂದ 80 ರವರೆಗೆ

ಬಸವಣ್ಣನ ವಚನಗಳು - 71 ರಿಂದ 80 ರವರೆಗೆ ೭೧. ಅಳೆಯುತ್ತ ಅಳೆಯುತ್ತ ಬಳಲುವರಲ್ಲದೆ ಕೊಳಗ ಬಳಲುವುದೇ ? ನಡೆಯುತ್ತ ನಡೆಯುತ್ತ ಬಳಲುವರಲ್ಲದೆ, ಬಟ್ಟೆ ಬಳಲುವುದೆ ? ಶ್ರವವ ಮಾಡುತ್ತ ಮಾಡುತ್ತ ಬಳಲುವರಲ್ಲದೆ ಕೋಲು ಬಳಲುವುದೆ ? ನಿಜವನರಿಯದ ಭಕ್ತ ಬಳಲುವನಲ್ಲದೆ, ಲಿಂಗ ಬಳಲುವುದೆ ? ಕೂಡಲಸಂಗಮದೇವ, ಅರಸರಿಯದ ಬಿಟ್ಟಿಯೋಪಾದಿ! ೭೨. ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ ಹರದ ಕುಳ್ಳಿರ್ದ ನಮ್ಮ ಮಹದೇವಸೆಟ್ಟಿ. ಒಮ್ಮನವಾದರೆ ಒಡನೆ ನುಡಿವನು; ಇಮ್ಮನವಾದರೆ ನುಡಿಯನು. ಕಾಣಿಯ ಸೋಲ; ಅರ್ಧ ಕಾಣಿಯ ಗೆಲ್ಲ. ಜಾಣ ನೋಡವ್ವ ನಮ್ಮ ಕೂಡಲಸಂಗಮದೇವ. ೭೩. ನಂಬರು, ನಚ್ಚರು; ಬರಿದೆ ಕರೆವರು; ನಂಬಲರಿಯರೀ ಲೋಕದ ಮನುಜರು! ನಂಬಿ ಕರೆದಡೆ, "ಓ" ಎನ್ನನೇ ಶಿವನು ? ನಂಬದೆ, ನಚ್ಚದೆ ಬರಿದೆ ಕರೆವರ ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ. ೭೪. ಹುತ್ತವ ಬಡಿದರೆ ಉರಗ ಸಾವುದೆ ಘೋರತಪವ ಮಾಡಿದರೇನು ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ ಕೂಡಲಸಂಗಮದೇವ ? ೭೫. ಮೇರು ಗುಣವನರಸುವುದೇ ಕಾಗೆಯಲ್ಲಿ ? ಪರುಷ ಗುಣವನರಸುವುದೇ ಕಬ್ಬುನದಲ್ಲಿ ? ಸಾಧು ಗುಣವನರಸುವನೇ ಅವಗುಣಿಯಲ್ಲಿ ? ಚಂದನ ಗುಣವನರಸುವುದೇ ತರುಗಳಲ್ಲಿ ? ಸರ್ವಗುಣಸಂಪನ್ನ ಲಿಂಗವೇ, ನೀನೆನ್ನಲ್ಲಿ ಅವಗುಣವನರಸುವುದೇ, ಕೂಡಲಸಂಗಮದೇವ! ೭೬ ಸಾರ, ಸಜ್ಜನರ ಸಂಗವ ಮಾಡುವುದು! ದೂರ, ದುರ್ಜನರ ಸಂಗ ಬೇಡವಯ್ಯ! ಆವ ಹಾವಾದರೇನು