Skip to main content

Posts

Showing posts from July 10, 2010

ಬಸವಣ್ಣನ ವಚನಗಳು - 81 ರಿಂದ 90 ರವರೆಗೆ

ಬಸವಣ್ಣನ ವಚನಗಳು - 81 ರಿಂದ 90 ರವರೆಗೆ ೮೧. ಏತ ತಲೆವಾಗಿದರೇನು ? ಗುರುಭಕ್ತನಾಗಬಲ್ಲುದೆ ? ಇಕ್ಕುಳ ಕೈ ಮುಗಿದರೇನು ? ಭೃತ್ಯಾಚಾರಿಯಾಗಬಲ್ಲುದೆ ? ಗಿಳಿಯೋದಿದರೇನು ? ಲಿಂಗವೇದಿಯಾಗಬಲ್ಲುದೆ ? ಕೂಡಲಸಂಗನ ಶರಣರು ಬಂದ ಬರವ, ನಿಂದ ನಿಲವ ಅನಂಗಸಂಗಿಗಳೆತ್ತ ಬಲ್ಲರು ? ೮೨. ಒಲವಿಲ್ಲದ ಪೂಜೆ, ನೇಹವಿಲ್ಲದ ಮಾಟ; ಆ ಪೂಜೆಯು, ಆ ಮಾಟವು ಚಿತ್ರದ ರೂಹು ಕಾಣಿರಣ್ಣ! ಚಿತ್ರದ ಕಬ್ಬು ಕಾಣಿರಣ್ಣ! ಅಪ್ಪಿದರೆ ಸುಖವಿಲ್ಲ, ಮೆಲಿದರೆ ಸವಿಯಿಲ್ಲ; ಕೂಡಲಸಂಗಮದೇವ, ನಿಜವಿಲ್ಲದವನ ಭಕ್ತಿಯಿಂತುಟು! ೮೩. ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇಯಿತ್ತು! ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ ಹೋಯಿತ್ತು! ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು. ಕೊಂದವರುಳಿದರೆ ಕೂಡಲಸಂಗಮದೇವ ? ೮೪. ಹಾವಿನ ಬಾಯಿ ಕಪ್ಪೆ ಹಸಿದು ತಾ ಹಾರುವ ನೊಣಕಾಸೆ ಮಾಡುವಂತೆ, ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು ಮೇಲಿನ್ನೇಸು ಕಾಲ ಬದುಕುವನೋ ?! ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ. ೮೫. ಅರತವಡಗದು. ಕ್ರೋಧ ತೊಲಗದು; ಕ್ರೂರಕುಭಾಷೆ ಕುಹುಕ ಬಿಡದನ್ನಕ ನೀನೆತ್ತಲು ? ಶಿವನೆತ್ತಲು ? ಹೋಗತ್ತ ಮರುಳೆ! ಭವರೋಗವೆಂಬ ತಿಮಿರ ತಿಳಿಯದನ್ನಕ ಕೂಡಲಸಂಗಯ್ಯನೆತ್ತ ? ನೀನೆತ್ತ ? ಮರುಳೇ! ೮೬. ಹಾವು ತಿಂದವರ ನುಡಿಸ ಬಹುದು! ಗರ ಹೊಡೆದವರ ನುಡಿಸ ಬಹುದು! ಸಿರಿಗರ ಹೊ