ಬಸವಣ್ಣನ ವಚನಗಳು - 91 ರಿಂದ 100 ರವರೆಗೆ ೯೧. ಪರಷ ಮುಟ್ಟಿದ ಬಳಿಕ ಕಬ್ಬುನವಾಗದು ನೋಡಾ! ಲಿಂಗ(ವ) ಮುಟ್ಟಿದ ಬಳಿಕ ಕುಚಿತ್ತಾಚಾರವಾಗದು ನೋಡಾ ಕೂಡಲಸಂಗನ ಶರಣರು ಅನ್ಯವನರಿಯರಾಗಿ. ೯೨. ದೇವಲೋಕ ಮರ್ತ್ಯಲೋಕವೆಂಬುದು ಬೇರೆ ಮತ್ತುಂಟೆ ? ಇಹಲೋಕದೊಳಗೇ ಮತ್ತನಂತಲೋಕ! ಶಿವಲೋಕ ಶಿವಾಚಾರವಯ್ಯ, ಶಿವಭಕ್ತನಿದ್ದ ಠಾವೇ ದೇವಲೋಕ, ಭಕ್ತನಂಗಳವೇ ವಾರಣಾಸಿ, ಶಿವಭಕ್ತನ ಕಾಯವೇ ಕೈಲಾಸ, ಇದು ಸತ್ಯ ಕೂಡಲಸಂಗಮದೇವ. ೯೩. ಕಟ್ಟಿದಿರಲ್ಲಿ ಶಿವಭಕ್ತನ ಕಂಡು, ದೃಷ್ಟಿಯಾರೆ ಮನಮುಟ್ಟಿ ನೋಡಿ ಶರಣೆಂದರೆ ಹುಟ್ಟೇಳು ಜನ್ಮದ ಪಾಪ ಬಿಟ್ಟು ಹೋಹವು ನೋಡಾ! ಮುಟ್ಟಿ ಚರಣಕ್ಕೆರಗಿದರೆ, ತನು ಒಪ್ಪಿದಂತಿಹುದು ಪರುಷ ಮುಟ್ಟಿದಂತೆ. ಕರ್ತೃ ಕೂಡಲಸಂಗನ ಶರಣರ ಸಂಗವು! ಮತ್ತೆ ಭವಮಾಲೆಯ ಹೊದ್ದಲೀಯದು ನೋಡಾ! ೯೪. ಆರಾರ ಸಂಗವೇನೇನ ಮಾಡದಯ್ಯ! ಕೀಡೆ ಕುಂಡಲಿಗನಾಗದೇನಯ್ಯ ? ಚಂದನದ ಸನ್ನಿಧಿಯಲ್ಲಿ, ಪರಿಮಳ ತಾಗಿ ಬೇವು-ಬೊಬ್ಬುಲಿ-ತರಿಯ ಗಂಧಂಗಳಾಗವೆ ? ನಮ್ಮ ಕೂಡಲಸಂಗನ ಶರಣರ ಸನ್ನಿಧಿಯಲ್ಲಿದ್ದು ಕರ್ಮ ನಿರ್ಮಳವಾಗದಿಹುದೇ ? ೯೫. ಹಾವಿನ ಡೊಂಕು ಹುತ್ತಕ್ಕೆ ಸಸಿನ. ನದಿಯ ಡೊಂಕು ಸಮುದ್ರಕ್ಕೆ ಸಸಿನ. ನಮ್ಮ ಕೂಡಲಸಂಗನ ಶರಣರ ಡೊಂಕು ಲಿಂಗಕ್ಕೆ ಸಸಿನ. ೯೬. ಆಳಿಗೊಂಡಿಹರೆಂದು ಅಂಜಲದೇಕೆ ? ನಾಸ್ತಿಕವಾಡಿಹರೆಂದು ನಾಚಲದೇಕೆ ? ಆರಾದಡಾಗಲಿ ಶ್ರೀ ಮಹಾದೇವಂಗೆ ಶರಣೆನ್ನಿ. ಏನೂ ಅರಿಯೆನೆಂದು ಮೋನಗೊಂಡಿರಬೇಡ ಕೂಡಲಸಂಗಮದೇವರ ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು