Skip to main content

Posts

Showing posts from September 6, 2010

ಬಸವಣ್ಣನ ವಚನಗಳು - 151 ರಿಂದ 160 ರವರೆಗೆ

೧೫೧. ಬರಬರ ಭಕ್ತಿ ಅರೆಯಾಯಿತ್ತು ಕಾಣಿರಣ್ಣ! ಮೊದಲ ದಿನ ಹಣೆ ಮುಟ್ಟಿ, ಮರುದಿನ ಕೈ ಮುಟ್ಟಿ, ಮೂರೆಂಬ ದಿನಕೆ ತೂಕಡಿಕೆ ಕಾಣಿರಣ್ಣಾ. ಹಿಡಿದುದ ಬಿಡದಿದ್ದರೆ ತಡಿಗೆ ಚಾಚುವ ಅಲ್ಲದಿದ್ದರೆ ನಡುನೀರಲದ್ದುವ ನಮ್ಮ ಕೂಡಲಸಂಗ್ದೇವ. ೧೫೨. ಬೆಟ್ಟದ ಬಿದಿರೇ ನೀನು ಅಟ್ಟಕ್ಕೆ ಏಣಿಯಾದೆ! ಕಾಲು ಮುರಿದವರಿಗೆ ಊರುಗೋಲಾದೆ! ಬಿದಿರಿಂ ಭೋ! ಅಯ್ಯ, ಬಿದಿರಿಂ ಭೋ! ಬಿದಿರ ಫಲವನುಂಬರೆ ಬಿದಿರಿಂ ಭೊ; ಬಿದಿರಲಂದಣವಕ್ಕು ಬಿದಿರೆ ಸತ್ತಿಗೆಯಕ್ಕು, ಬಿದಿರಲೀ ಗುಡಿಯು ಗುಡಾರಂಗಳಕ್ಕು, ಬಿದಿರಲೀ ಸಕಲಸಂಪದವೆಲ್ಲ! ಬಿದಿರದವರ ಮೆಚ್ಚ ನಮ್ಮ ಕೂಡಲಸಂಗಮದೇವ. ೧೫೩. ಉಂಬಾಗಳಿಲ್ಲೆನ್ನ, ಉಡುವಾಗಳಿಲ್ಲೆನ್ನ ಬಂಧುಗಳು ಬಂದಾಗಳಿಲ್ಲೆನ್ನ; ಲಿಂಗಕ್ಕೆ ಇಲ್ಲೆಂಬ, ಜಂಗಮಕ್ಕೆ ಇಲ್ಲೆಂಬ, ಬಂದ ಪುರಾತರಿಗೆ ಇಲ್ಲೆಂಬ; ಸಾವಾಗ ದೇಹವ ದೇಗುಲಕ್ಕೊಯ್ಯೆಂಬ ದೇವರಿಗೆ ಹೆಣ ಬಿಟ್ಟಿ ಹೇಳಿತ್ತೆ, ಕೂಡಲಸಂಗಮದೇವ ? ೧೫೪. ಪಾಪಿಯ ಧನ ಪ್ರಾಯಶ್ಚಿತ್ತಕ್ಕಲ್ಲದೆ, ಸತ್ಪಾತ್ರಕ್ಕೆ ಸಲ್ಲದಯ್ಯ! ನಾಯ ಹಾಲು ನಾಯಿಂಗಲ್ಲದೆ, ಪಂಚಾಮೃತಕ್ಕೆ ಸಲ್ಲದಯ್ಯ! ನಮ್ಮ ಕೂಡಲಸಂಗನ ಶರಣರಿಗಲ್ಲದೆ ಮಾಡುವ ಅರ್ಥ ವ್ಯರ್ಥ ಕಂಡಯ್ಯ. ೧೫೫. ಹತ್ತು ಮತ್ತರ ಭೂಮಿ, ಬತ್ತುವ ಹಯನ, ನಂದಾದೀವಿಗೆಯ ನಡೆಸಿಹೆನೆಂಬವರ ಮುಖವ ನೋಡಲಾಗದು! ಅವರ ನುಡಿಯ ಕೇಳಲಾಗದು; ಅಂಡಜ-ಸ್ವೇದಜ-ಉದ್ಬಿಜ-ಜರಾಯುಜವೆಂಬ ಚತುರಶೀತಿ ಲಕ್ಷಪ್ರಾಣಿಗಳಿಗೆ ಭವಿತವ್ಯವ ಕೊಟ್ಟವರಾರೋ ?! ಒಡೆಯರಿ