Skip to main content

Posts

Showing posts from September 9, 2010

ಬಸವಣ್ಣನ ವಚನಗಳು - 181 ರಿಂದ 190 ರವರೆಗೆ

೧೮೧. ಉದಯಾಸ್ತಮಾನವೆನ್ನ ಬೆಂದ ಬಸಿರಿಂಗೆ ಕುದಿಯಲಲ್ಲದೆ, ನಿಮ್ಮ ನೆನೆಯಲು ತೆರಹಿಲ್ಲವಯ್ಯ. ಎಂತೊ ಲಿಂಗ ತಂದೆ, ಎಂತಯ್ಯ ಎನ್ನ ಪೂರ್ವಲಿಖಿತ ? ಬೆರಣಿಯನಾಯಲಲ್ಲದೆ ಅಟ್ಟುಣ್ಣ ತೆರಹಿಲ್ಲೆನಗೆ! ನೀ ಕರುಣಿಸು ಕೂಡಲಸಂಗಮದೇವ. ೧೮೨. ಬೆಲ್ಲವ ತಿಂದ ಕೋಡಗದಂತೆ ಸಿಹಿಯ ನೆನೆಯದಿರಾ ಮನವೆ! ಕಬ್ಬ ತಿಂದ ನರಿಯಂತೆ ಹಿಂದಕ್ಕೆಳಸದಿರಾ ಮನವೇ! ಗಗನವನಡರಿದ ಕಾಗೆಯಂತೆ ದೆಸೆದೆಸೆಗೆ ಹಂಬಲಿಸದಿರಾ ಮನವೇ! ಕೂಡಲಸಂಗನ ಶರಣರ ಕಂಡು ಲಿಂಗವೆಂದೇ ನಂಬು ಮನವೇ! ೧೮೩. ಒಡೆಯನ ಕಂಡರೆ ಕಳ್ಳನಾಗದಿರಾ ಮನವೆ! ಭವದ ಬಾಧೆಯ ತಪ್ಪಿಸಿಕೊಂಬಡೆ ನೀನು ನಿಯತವಾಗಿ ಭಯಭರಿತನಾಗಿ, ಅಹಂಕಾರಿಯಾಗದೆ ಶರಣೆನ್ನು ಮನವೇ! ಕೂಡಲಸಂಗನ ಶರಣರಲ್ಲಿ ಭಕ್ತಿಯ ನೋನುವಡೆ ಕಿಂಕರನಾಗಿ ಬದುಕು ಮನವೇ. ೧೮೪. ಕೋಟ್ಯನುಕೋಟಿ ಜಪವ ಮಾಡಿ ಕೋಟಲೆಗೊಳ್ಳಲೆದೇಕೆ ಮನವೇ ?! ಕಿಂಚಿತು ಗೀತ ಒಂದನಂತಕೋಟಿ ಜಪ! ಜಪವೆಂಬುದೇಕೆ ಮನವೇ ? ಕೂಡಲಸಂಗನ ಶರಣರ ಕಂಡು ಆಡಿ, ಹಾಡಿ ಬದುಕು ಮನವೇ! ೧೮೫. ಮನವೇ ನಿನ್ನ ಜನನದ ಪರಿಭವವ ಮರೆದೆಯಲ್ಲಾ! ಮನವೇ, ಲಿಂಗವ ನಂಬು ಕಂಡಾ! ಮನವೇ, ಜಂಗಮವ ನಂಬು ಕಂಡಾ! ಮನವೇ, ಕೂಡಲಸಂಗಮದೇವರ ಬಿಡದೆ ಬೆಂಬತ್ತು ಕಂಡಾ! ೧೮೬. ಕೊಡುವಾತ ಸಂಗ, ಕೊಂಬಾತ ಸಂಗ ಕಾಣಿರೆಲವೋ! ನರಮಾನವರು ಕೊಡುವರೆಂಬವನ ಬಾಯಲ್ಲಿ ಬಾಲಹುಳುಗಳು ಸುರಿಯವೆ ? ಮೂರು