Skip to main content

Posts

Showing posts from October 15, 2010

ಅಕ್ಕನ ವಚನಗಳು - 51 ರಿಂದ 60 ರವರೆಗೆ

೫೧. ಅಂಗ ಲಿಂಗವ ವೇಧಿಸಿ ಅಂಗ ಲಿಂಗದೊಳಗಾಯಿತ್ತು ಮನ ಲಿಂಗವ ವೇಧಿಸಿ ಮನ ಲಿಂಗದೊಳಗಾಯಿತ್ತು ಭಾವ ಲಿಂಗವ ವೇಧಿಸಿ ಭಾವ ಲಿಂಗದೊಳಗಾಯಿತ್ತು ಚೆನ್ನಮಲ್ಲಿಕಾರ್ಜುನ, ನಿಮ್ಮ ಒಲುಮೆಯ ಸಂಗದಲ್ಲಿರ್ದು ಸ್ವಯಂಲಿಂಗಿಯಾದೆನು ೫೨. ನಿನ್ನರಿಕೆಯ ನರಕವೇ ಮೋಕ್ಷ ನೋಡಯ್ಯ ನಿನ್ನರಿಯದ ಮುಕ್ತಿಯೇ ನರಕ ಕಂಡಯ್ಯ ನೀನೊಲ್ಲದ ಸುಖವೇ ದುಃಖ ಕಂಡಯ್ಯ ನೀನೊಲಿದ ದುಃಖವೇ ಪರಮಸುಖ ಕಂಡಯ್ಯ ಚೆನ್ನಮಲ್ಲಿಕಾರ್ಜುನಯ್ಯ ನೀ ಕಟ್ಟಿ ಕೆಡಹಿದ ಬಂಧನವೇ ನಿರ್ಬಂಧನವೆಂದಿಪ್ಪೆನು ೫೩. ಹಾಲು ತುಪ್ಪವ ನುಂಗಿ ಬೇರಾಗಬಲ್ಲುದೆ? ಸೂರ್ಯಕಾಂತದಗ್ನಿಯನಾರು ಭೇದಿಸಬಲ್ಲರು? ಅಪಾರಮಹಿಮ ಚೆನ್ನಮಲ್ಲಿಕಾರ್ಜುನನೆನ್ನೊಳಡಗಿಪ್ಪ ಪರಿಯ ಬೇರಿಲ್ಲದೆ ಕಂಡು ಕಣ್ತೆರೆದೆನು ೫೪. ಘನವ ಕಂಡೆ, ಅನುವ ಕಂಡೆ ಆಯತ-ಸ್ವಾಯತ-ಸನ್ನಿಹಿತ ಸುಖವ ಕಂಡೆ ಅರಿವನರಿದು ಮರಹ ಮರೆದೆ ಕುರುಹಿನ ಮೋಹದ ಮರವೆಯನೀಡಾಡಿದೆ ಚೆನ್ನಮಲ್ಲಿಕಾರ್ಜುನ, ನಿಮ್ಮನರಿದು ಸೀಮೆಗೆಟ್ಟೆನು ೫೫. ಕ್ರೀಗಳು ಮುಟ್ಟಲರಿಯವು ನಿಮ್ಮನೆಂತು ಪೂಜಿಸುವೆ? ನಾದ-ಬಿಂದುಗಳು ಮುಟ್ಟಲರಿಯವು ನಿಮ್ಮನೆಂತು ಹಾಡುವೆ? ಕಾಯ ಮುಟ್ಟುವೊಡೆ ಕಾಣಬಾರದ ಘನವು ನಿಮ್ಮನೆಂತು ಕರಸ್ಥಲದಲಿ ಧರಿಸುವೆ? ಚೆನ್ನಮಲ್ಲಿಕಾರ್ಜುನಯ್ಯ, ನಾನೇನೆಂದರಿಯದೆ ನಿಮ್ಮ ನೋಡಿ ನೋಡಿ ಸೈವೆರೆಗಾಗುತಿರ್ದೆನು ೫೬. ಸಜ್ಜನವಾಗಿ ಮಜ್ಜನಕ್ಕೆರೆವೆ ಶಾಂತಳ