Skip to main content

Posts

Showing posts from October 16, 2010

ಅಕ್ಕನ ವಚನಗಳು - 61 ರಿಂದ 70 ರವರೆಗೆ

೬೧. ಪೃಥ್ವಿಯ ಗೆಲಿದ ಏಲೇಶ್ವರನ ನಾನು ಕಂಡೆ ಭಾವಭ್ರಮೆಯ ಗೆಲಿದ ಬ್ರಹ್ಮೇಶ್ವರನ ನಾನು ಕಂಡೆ ಸತ್ವ-ರಜ-ತಮ-ತ್ರಿವಿಧವ ಗೆಲಿದ ತ್ರಿಪುರಾಂತಕನ ಕಂಡೆ ಅಂತರಂಗ-ಆತ್ಮಜ್ಞಾನದಿಂದ ಜ್ಯೋತಿಸಿದ್ಧಯ್ಯನ ನಾನು ಕಂಡೆ ಇವರೆಲ್ಲರ ಮಧ್ಯಸ್ಥಾನ ಪ್ರಾಣಲಿಂಗವೆಂದು ಸುಜ್ಞಾನದಲ್ಲಿ ತೋರಿದ ಆ ಬಸವಣ್ಣನ ಪ್ರಸಾದದಿಂದ ಚೆನ್ನಮಲ್ಲಿಕಾರ್ಜುನನ ಕಂಡೆನಯ್ಯ ೬೨. ಅಪಾರ ಗಂಭೀರದ ಅಂಬುಧಿಯಲ್ಲಿ ತಾರಾಪಥವ ನೋಡಿ ನಡೆಯೆ ಭೈತ್ರದಿಂದ ದ್ವೀಪಾಂತರಕ್ಕೆ ಸಕಲಪದಾರ್ಥನವೆಯ್ದಿಸುವುದು ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ ತುರ್ಯಸಂಭಾಷಣೆಯನರಿದಡೆ ಮುನ್ನಿನಲ್ಲಿಗೆಯ್ದಿಸುವುದು ೬೩. ಕ್ರೀಯೊಳ್ಳುಡೊಂತೊಂದಾಸೆ ಸದ್ಭಕ್ತರ ನುಡಿಗಡಣ ಉಳ್ಳೊಡಂತೊಂದಾಸೆ ಶ್ರೀಗಿರಿಯನೇರಿ ನಿಮ್ಮ ಬೆರೆಸಿದರೆ ಎನ್ನಾಸೆಗೆ ಕಡೆಯೇ ಅಯ್ಯ? ಆವಾಸೆಯೂ ಇಲ್ಲದೆ ನಿಮ್ಮ ನಂಬಿ ಬಂದು ಕೆಟ್ಟೆನಯ್ಯ ೬೪. ಆರೂ ಇಲ್ಲದವಳೆಂದು ಅಳಿಗೊಳಲು ಬೇಡ ಕಂಡಯ್ಯ ಏನ ಮಾಡಿದೆಡೆಯೂ ನಾನಂಜುವಳಲ್ಲ! ತರಗೆಲೆಯ ಮೆಲಿದು ನಾನಿಹೆನು ಸುರಗಿಯ ಮೇಲೆರಗಿ ನಾನಿಹೆನು ಚೆನ್ನಮಲ್ಲಿಕಾರ್ಜುನಯ್ಯ ಕರ ಕಡೆ ನೋಡಿದಡೆ ಒಡಲನೂ ಪ್ರಾಣವನೂ ನಿಮಗೊಪ್ಪಿಸಿ ಶುದ್ಧಳಿಹೆನು ೬೫. ಕಿಡಿಕಿಡಿ ಕೆದರಿದಡೆ ಎನಗೆ ಹಸಿವು ತೃಷೆ ಅಡಗಿತ್ತೆಂಬೆನು ಮುಗಿಲು ಹರಿದು ಬಿದ್ದಡೆ ಎನಗೆ ಮಜ್ಜನಕ್ಕೆರೆದರೆಂಬೆನು ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು ಚೆನ್ನಮಲ್ಲಿಕಾರ್ಜುನಯ್ಯ, ಶಿರ ಹರಿದು ಬಿದ್ದಡೆ ಪ್ರಾಣ ನ