Skip to main content

Posts

Showing posts from October 24, 2010

ಅಕ್ಕನ ವಚನಗಳು - 141 ರಿಂದ 150 ರವರೆಗೆ

೧೪೧. ಐದು ಪರಿಯ ಬಣ್ಣವ ತಂದುಕೊಟ್ಟರೆ ನಾಲ್ಕು ಮೊಲೆಯ ಹಸುವಾಯಿತ್ತು ಹಸುವಿನ ಬಸರಲ್ಲಿ ಕರು ಹುಟ್ಟಿತ್ತು ಕರುವ ಮುಟ್ಟಲೀಯದೆ ಹಾಲು ಕರೆದುಕೊಂಡರೆ ಕರ ರುಚಿಯಾಗಿತ್ತು ಮಧುರ ತಲೆಗೇರಿ, ಅರ್ಥ ನೀಗಾಡಿ ಆ ಕರುವಿನ ಬೆಂಬಳಿವಿಡಿದು ಭವ ಹರಿಯಿತ್ತು ಚೆನ್ನಮಲ್ಲಿಕಾರ್ಜುನ ೧೪೨. ರವಿಯ ಕಾಳಗವ ಗೆಲಿದು ಒಂಬತ್ತು ಬಾಗಿಲ ಮುರಿದು ಅಷ್ಟಧವಳಾರಮಂ ಸುಟ್ಟು, ಮೇಲುಪ್ಪರಿಗೆಯ ಮೆಟ್ಟಿ ಅಲ್ಲ-ಅಹುದು, ಉಂಟು-ಇಲ್ಲ, ಬೇಕು-ಬೇಡ ಎಂಬ ಆರರತಾತನೇ ಗುರು ಗುರು ತಾನೇ ಬೇರಿಲ್ಲ ದ್ವಯಕಮಲದಲ್ಲಿ ಉದಯವಾದ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣ ಸಂಗನ ಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು ೧೪೩. ಹುಟ್ಟದ ಯೋನಿಯಲ್ಲಿ ಹುಟ್ಟಿಸಿ, ಬಾರದ ಭವಂಗಳಲಿ ಬರಿಸಿ, ಉಣ್ಣದ ಊಟವನುಣಿಸಿ ವಿಧಿಯೊಳಗಾಗಿಸುವ ಕೇಳಿರಣ್ಣ! ತನ್ನವರೆಂದರೆ ಮನ್ನಿಸುವನೇ ಶಿವನು? ಹತ್ತಿರಿದ್ದ ಭೃಂಗಿಯ ಚರ್ಮವ ಕಿತ್ತೀಡಾಡಿಸಿದನು ಮತ್ತೆ ಕೆಲವರ ಬಲ್ಲನೇ? ಇದನರಿದು ಬಿಡದಿರು ಚೆನ್ನಮಲ್ಲಿಕಾರ್ಜುನನಿಂತಹ ಸಿತಗನವ್ವ! ೧೪೪. ಬಯಲಿಂದ ಹುಟ್ಟಿದ ಪರವೆಂಬ ತಾಯಿಗೆ ಐವರು ಮಕ್ಕಳು ಜನಿಸಿದರೆಂತೆಂಬೆ?! ಒಬ್ಬ ಭಾವದರೂಪ, ಒಬ್ಬ ಪ್ರಾಣದರೂಪ, ಒಬ್ಬನೈಮುಖನಾಗಿ ವಿಶ್ವಕ್ಕೆ ಕಾಯರೂಪಾದ ಇಬ್ಬರು ಉತ್ಪತ್ತಿಸ್ಥಿತಿಗೆ ಕಾರಣರಾದರು ಐಮುಗನರಮನೆ ಸುಖವಿಲ್ಲೆಂದರಿದವನಾಗಿ ಇನ್ನು ಕೈಲಾಸವನು ಹೊಗೆ ಹೊಗೆ! ಮರ್ತ್ಯಕ್ಕೆ ಅಡಿಯಿಡೆನು ಚೆನ್ನಮಲ್ಲಿಕಾರ್ಜುನದೇವ ನೀನೆ ಸಾ