೧೬೧. ಆಯತ-ಸ್ವಾಯತ-ಅನುಭಾವವ ನಾನೆತ್ತ ಬಲ್ಲೆನಯ್ಯಾ ಗುರು-ಲಿಂಗ-ಜಂಗಮಕ್ಕೆ ಅರ್ಥಪ್ರಾಣಾಭಿಮಾನಂಗಳನಿತ್ತ ನಿನ್ನ ಭಕ್ತರ ಭೃತ್ಯರಿಗಾಳಾಗಿಪ್ಪೆನಯ್ಯಾ ನಿಮ್ಮ ಶರಣರ ಸಂಗವನಲ್ಲದೆ ಬೇರೊಂದ ಬಯಸೆನಯ್ಯ ಚೆನ್ನಮಲ್ಲಿಕಾರ್ಜುನ ೧೬೨. ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ [ಕೂರುಮ ದಿಗುದಂತಿ] ದಿಗುವಳಯವ ನುಂಗಿ ನಿಜ ಶೂನ್ಯ ತಾನಾದ ಬಳಿಕ ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬರಬಹುದೇ? ಕಂಗಳ ನೋಟದಲ್ಲಿ ಮನ ಸೊಗಸಿನಲ್ಲಿ ಅನಂಗನ ಧಾಳಿಯನಗಲಿದೆವಣ್ಣ ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಗೊಳಗಹುದೇ? ಎನ್ನ ದೇವ ಚೆನ್ನಮಲ್ಲಿಕಾರ್ಜುನನಲ್ಲದ ಪರಪುರುಷರು ನಮಗಾಗದಣ್ಣ! ೧೬೩. ನಮಗೆ ನಮ್ಮ ಲಿಂಗದ ಚಿಂತೆ ನಮಗೆ ನಮ್ಮ ಭಕ್ತರ ಚಿಂತೆ, ಮನಗೆ ನಮ್ಮ ಆದ್ಯರ ಚಿಂತೆ ನಮಗೆ ನಮ್ಮ ಚೆನ್ನಮಲ್ಲಿಕಾರ್ಜುನನ ಚಿಂತೆಯಲ್ಲದೆ ಲೋಕದ ಮಾತು ನಮಗೇಕಣ್ಣ? ೧೬೪. ನಿಮ್ಮ ನಿಲುವಿಂಗೆ ನೀವು ನಾಚಬೇಡವೆ? ಅನ್ಯರ ಕೈಲಿ ಅಲ್ಲ ಎನಿಸಿಕೊಂಬ ನಡೆ-ನುಡಿಯೇಕೆ? ಅಲ್ಲ ಎನಿಸಿಕೊಂಬುದರಿಂದ, ಆ ಕ್ಷಣವೇ ಸಾವುದು ಲೇಸು ಕಾಣಾ ಚೆನ್ನಮಲ್ಲಿಕಾರ್ಜುನ ೧೬೫. ಶಿವಭಕ್ತರ ರೋಮ ನೊಂದರೆ ಒಡನೆ ಶಿವನು ನೋವ ನೋಡಾ ಶಿವಭಕ್ತರು ಪರಿಣಾಮಿಸಿದರೆ, ಒಡನೆ ಶಿವ ಪರಿಣಆಮಿಸುವ ನೋಡಾ ! ಭಕ್ತದೇಹಿಕ ದೇವ ಎಂಬ ಶ್ರುತಿ ಹೊಗಳುವ ಕಾರಣ ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು ತಾಯಿ ನೊಂದರೆ ಒಡಲ ಶಿಶು ನೋವ ತೆರನಂತೆ ಚೆನ್ನಮಲ್ಲಿಕಾರ್ಜುನ-ತನ್ನ ಭಕ್ತ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು