Skip to main content

Posts

Showing posts from 2011

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 341 ರಿಂದ 350 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೩೪೧. ಮದನನೆಸುಗೆಯಿಂದ ಮುನ್ನ ಚೆನ್ನಮಲ್ಲನ ಮದನಗಿತ್ತಿಯಾದೆ! ಮಿಕ್ಕಿ ನಧಮರೇತಕವ್ವಗಳಿರ? ಮದುವೆಯಹರೆ ಮಗುಳೆ ಕಂಡ ಕಂಡ ಗಂಡರ? ||೧|| ಸಾವು ಸಂಕಟಳಿವುಪಳಿವು ನೋವು ದುಃಖ ದುರಿತರಕ್ತ ಮಾವುಸಸ್ಠಿ ಬಾಲಜಾಡ್ಯ ಜರೆ ರುಜಾನಿಶಂ ಬೇವಸಂಗಳಿಲ್ಲದುರೆ ಸ- ದಾ ವಯಸ್ಸಿನಿಂದಲೆಸವ ಕೋವಿದಂಗೆ ಪೆತ್ತರಿತ್ತರೆನ್ನ ||೨|| ಮಾತೆ ಮುಕುತಿದೆರಹನಾಂತು, ರೀತಿಗೊಲ್ಲು ತಂದೆ, ಬಂಧು- ವ್ರಾತವವನ ಕುಲವನೊಪ್ಪಿ ಕೊಟ್ಟರೆನ್ನನು ಆತಗೊಲ್ಲು ಮದುವೆಯಾದೆ ನಾ ತಳೋದರಿಯರಿರೆಲೆಲೆ ಆತನರಸುತನದ ಘನದ ಬಿನದವೆಂತೆನೆ ||೩|| ಆಳುವವನಿಯವನಿಗಿದೀ ರೇಳು ಲೋಕ, ದುರ್ಗ-ರಜತ ಶೈಳ, ಹರಿವಿರಿಂಚಿ ಸುರಪ ಮುಖವಜೀರರು, ಆಳು ದುನುಜ ಮನುಜ ದಿವಿಜ ವ್ಯಾಳರುಗ್ಘಡಿಸುವ ಭಟ್ಟ ಜಾಳಿ ಚಂಡಕೀರ್ತಿಗಳ್, ಪ್ರಧಾನಿ ಸುರಗುರು ||೪|| ಮಿತ್ರ ಧನದರಾಪ್ತರೇ ಮಿತ್ರ ಗಾತ್ರ ಪ್ರಮಥರತಿ ಕ- ಳತ್ರವೇ ಭವಾನಿ, ರಾಜವಾಜಿ ನಿಗಮವು ಪತ್ರಿರಥ-ಗಣೇಶರೆಸೆವ ಪುತ್ರರಧಿಕಶೈವಧರ್ಮ ಗಾತ್ರ ಲಿಂಗವೀವನಾವ ಪದವನೆಳಸಲು ||೫|| ದಶಭುಜಂಗಳೈದು ವಕ್ತ್ರ ವಸವವಖಿಳ ಕಕುಭ, ಮುಡಿವ ಕುಸ

ಅಕ್ಕನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ಶಿವಗಣಂಗಳ ಮನೆಯಂಗಳ ವಾರಣಾಸಿಯೆಂಬುದು ಹುಸಿಯೇ ಪುರಾತನರ ಮನೆಯ ಅಂಗಳದಲ್ಲಿ ಅಷ್ಟಾಷಷ್ಟಿತೀರ್ಥಂಗಳು ನೆಲೆಸಿಪ್ಪವಾಗಿ? ಅದೆಂತೆಂದಡೆ: ಕೇದಾರಸ್ಯೋದಕೇ ಪೀತೇ ವಾರಣಸ್ಯಾಂ ಮೃತೇ ಸತಿ ಶೀಶೈಲ ಶಿಖರೇ ದೃಷ್ಟೇ ಪುನರ್ಜನ್ಮ ನ ವಿದ್ಯತೇ ಎಂಬ ಶಬ್ದಕ್ಕಧಿಕವು ಸುತ್ತಿಬರಲು ಶ್ರೀಶೈಲ, ಕೆಲಬಲದಲ್ಲಿ ಕೇದಾರ ಅಲ್ಲಿಂದ ಹೊರಗೆ ವಾರಣಾಸಿ ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ ಎನ್ನ ದೇವ ಚೆನ್ನಮಲ್ಲಿಕಾರ್ಜುನ ನಿಮ್ಮ ಭಕ್ತರ ಮನೆಯಂಗಳ ವಾರಣಾಸಿಯಿಂದ ಗುಂಜಿಯಧಿಕ ನೋಡಾ! ೩೩೨. ನಿನ್ನ ಅಂಗದಾಚಾರವ ಕಂಡು ಎನಗೆ ಲಿಂಗಸಂಗವಾಯಿತ್ತಯ್ಯ, ಬಸವಣ್ಣ ನಿನ್ನ ಮನದ ಸುಜ್ಞಾನವ ಕಂಡು ಎನಗೆ ಜಂಗಮಸಂಬಂಧವಾಯಿತ್ತಯ್ಯ, ಬಸವಣ್ಣ ನಿನ್ನ ಸದ್ಭಕ್ತಿಯ ತಿಳಿದು ಎನಗೆ ನಿಜಸಾಧ್ಯವಾಯಿತ್ತಯ್ಯ, ಬಸವಣ್ಣ ಚೆನ್ನಮಲ್ಲಿಕಾರ್ಜುನನ ಹೆಸರಿಟ್ಟ ಗುರು ನೀನಾದ ಕಾರಣ ನಾನೆಂಬುದಿಲ್ಲವಯ್ಯ ಬಸವಣ್ಣ ೩೩೩. ಅಯ್ಯ, ನಿಮ್ಮಾನುಭಾವಿಗಳ ಸಂಗದಿಂದ ಎನ್ನ ತನು ಶುದ್ಧವಾಯಿತ್ತು! ಅಯ್ಯ, ನಿಮ್ಮ ಅನುಭಾವಿಗಳು ಎನ್ನನೊರೆದೊರೆದು, ಕಡಿಕಡಿದು, ಅರೆದರೆದು ಅನುಮಾಡಿದ ಕಾರಣ ಎನ್ನ ಮನ ಶುದ್ಧವಾಯಿತ್ತು!

ಅಕ್ಕನ ವಚನಗಳು - 321 ರಿಂದ 330 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೨೧. ಕಳವಳದ ಮನವು ತಲೆಕೆಳಗಾದುದವ್ವ ಸುಳಿದು ಬೀಸುವ ಗಾಳಿ ಉರಿಯಾಯಿತವ್ವ ಬೆಳದಿಂಗಳು ಬಿಸಿಲಾಯಿತ್ತು ಕೆಳದಿ ಹೊಳಲ ಸುಂಕಿಗನಂತೆ ತೊಳಲುತಿದ್ದೆನವ್ವ ತಿಳುಹೌ ಬುದ್ಧಿಯ ಹೇಳಿ ಕರೆತಾರೆಲೆಗವ್ವ ಚೆನ್ನಮಲ್ಲಿಕಾರ್ಜುನಂಗೆ ಎರಡರ ಮುನಿಸವ್ವ ೩೨೨. ಇಂದೆನ್ನ ಮನೆಗೆ ಗಂಡ ಬಂದಹನೆಲೆಗವ್ವ ನಿಮನಿಮಗೆಲ್ಲ ಶೃಂಗಾರವ ಮಾಡಿಕೊಳ್ಳಿ ಚೆನ್ನಮಲ್ಲಿಕಾರ್ಜುನನೀಗಳೇ ಬಂದಹನು ಇದಿರುಗೊಳ್ಳ ಬನ್ನಿರೇ ಅವ್ವಗಳಿರಾ! ೩೨೩. ಬಂದಹನೆಂದು ಬಟ್ಟೆಯ ನೋಡಿ ಬಾರದಿದ್ದರೆ ಕರಗಿ ಕೊರಗಿದೆನವ್ವ ತಡವಾದರೆ ಬಡವಾದೆ ತಾಯೆ ಚೆನ್ನಮಲ್ಲಿಕಾರ್ಜುನ ಒಂದಿರುಳಗಲಿದರೆ ತೆಕ್ಕೆ ಸಡಿಲಿದ ಜಕ್ಕವಕ್ಕಿಯಂತಾದೆನವ್ವ ೩೨೪. ಕೂಡಿ ಕೂಡುವ ಸುಖದಿಂದ ಒಪ್ಪಚ್ಚಿ ಅಗಲಿ ಕೂಡುವ ಸುಖ ಲೇಸು ಕೆಳದಿ! ಒಚ್ಚತ ಅಗಲಿರೆ, ಕಾಣದೆ ಇರಲಾರೆ, ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಅಗಲಿ ಅಗಲದ ಸುಖವೆಂದಪ್ಪುದೋ! ೩೨೫. ಉರಿಯ [ಪಳಿಯನೆ] ಉಡಿಸಿ, ಊರಿಂದ ಹೊರಗಿರಿಸಿ ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವ ತುರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ ಕರೆ ನೊಂದೆ ನೋಡವ್ವ ಅವಸ್ಥೆಯಿಂದ ಹಿರಿದು ದುಃಖದಲ್ಲಿ ಬೆಂದೆ ಕರಿ ಬೆ

ಅಕ್ಕನ ವಚನಗಳು - 311 ರಿಂದ 320 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೧೧. ನಾಳೆ ಬರುವುದು ನಮಗಿಂದೇ ಬರಲಿ ಇಂದು ಬರುವುದು ನಮಗೀಗಲೇ ಬರಲಿ ಆಗೀಗ ಎನ್ನದಿರು ಚೆನ್ನಮಲ್ಲಿಕಾರ್ಜುನ ೩೧೨. ಕಿಡಿಕಿಡಿ ಕಾರಿದರೆನಗೆ ಹಸಿವು ತೃಷೆ ಅಡಗಿತ್ತೆಂಬೆ ಸಮುದ್ರ ಮೇರೆದಪ್ಪಿದರೆ ಎನಗೆ ಮಜ್ಜನವ ನೀಡಿದರೆಂಬೆ ಮುಗಿಲು ಹರಿದುಬಿದ್ದರೆ ಎನಗೆ ಪುಷ್ಪದ ಅರಳೆಂಬೆ ಶಿರ ಹೋದರೆ ಚೆನ್ನಮಲ್ಲಿಕಾರ್ಜುನದೇವಂಗೆ ಅರ್ಪಿತವೆಂಬೆ ೩೧೩. ಹಿಂಡನಗಲಿ ಹಿಡಿವಡೆದ ಕುಂಜರ ತನ್ನ ವಿಂಧ್ಯವ ನೆನೆವಂತೆ ನೆನೆವೆನೆಯ್ಯ ! ಬಂಧನಕ್ಕೆ ಬಂದ ಗಿಳಿ ತನ್ನ ಬಂಧುವ ನೆನೆವಂತೆ ನೆನೆವೆನೆಯ್ಯ ! ಕಂದ, ನೀನಿತ್ತ ಬಾ ಎಂದು ನೀವು ನಿಮ್ಮಂದವ ತೋರಯ್ಯ ಚೆನ್ನಮಲ್ಲಿಕಾರ್ಜುನ ೩೧೪. ಉದಯದಲೆದ್ದು ನಿಮ್ಮ ನೆನೆವೆನಯ್ಯ ನಿಮ್ಮ ಬರವ ಹಾರುತಿರ್ಪೆನಯ್ಯ ಹಸೆ ಹಂದರವನಿಕ್ಕಿ ನಿಮ್ಮಡಿಗಳಿಗೆಡೆಮಾಡಿಕೊಂಡಿಪ್ಪೆನಯ್ಯಾ ಚೆನ್ನಮಲ್ಲಿಕಾರ್ಜುನ, ನೀನಾವಾಗ ಬಂದಹೆಯೆಂದು ೩೧೫. ಗಿರಿಯಲಲ್ಲದೆ ಹುಲುಮೊರಡಿಯಲಾಡುವುದೇ ನವಿಲು? [ಕೊಳನನಲ್ಲದೆ] ಕಿರುವಳ್ಳಕೆಳಸುವುದೇ ಹಂಸ? ಮಾಮರ ತಳಿತಲ್ಲದೇ ಸ್ವರಗೈಯುವುದೇ ಕೋಗಿಲೆ? ಪರಿಮಳವಿಲ್ಲದ ಪುಷ್ಪಕೆಳಸುವುದೇ ಭ್ರಮರ? ಎನ್ನ ಜೀವ ಚೆನ್ನಮಲ್ಲಿಕಾರ್ಜುನಗ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತೋರಾ

ಅಕ್ಕನ ವಚನಗಳು - 291 ರಿಂದ 300 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೯೧. ಹುಟ್ಟು-ಹೊರೆಯ ಕಟ್ಟಳೆಯ ಕಳೆದನವ್ವ ಹೊನ್ನು-ಮಣ್ಣಿನ ಮಾಯೆಯ ಮಾಣಿಸಿದನವ್ವ ಎನ್ನ ತನುವಿನ ಲಜ್ಜೆಯನಿಳುಹಿ ಎನ್ನ ಮನದ ಕತ್ತಲೆಯ ಕಳೆದ ಚೆನ್ನಮಲ್ಲಿಕಾರ್ಜುನಯ್ಯನ ಒಳಗಾದವಳನೇನೆಂದು ನುಡಿಯಿಸುವಿರವ್ವ ೨೯೨. ಕಾಯದ ಕಳವಳವ ಕೆಡಿಸಿ ಮನದ ಮಾಯೆಯ ಮಾಣಿಸಿ ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯ ಶಿವಶಿವಾ ಎನ್ನ ಬಂಧನವ ಬಿಡಿಸಿ ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯ ಇರುಳೋಸರಿಸದ ಜಕ್ಕವಕ್ಕಿಯಂತೆ ನಾನಿಂದು ನಿಮ್ಮ ಶ್ರೀಪಾದವನಿಂಬುಗೊಂಡು ಸುಖದೊಳಗೋಲಾಡುವೆನಯ್ಯ ಚೆನ್ನಮಲ್ಲಿಕಾರ್ಜುನ ೨೯೩. ಅಯ್ಯ, ನೀನೆನ್ನ ಮೊರೆಯನಾಲಿಸಿದೊಡಾಲಿಸು ಆಲಿಸದಿರ್ದೊಡೆ ಮಾಣು ಅಯ್ಯ, ನೀನೆನ್ನ ದುಃಖವ ನೋಡಿದೊಡೆ ನೋಡು ನೋಡದಿರ್ದೊಡೆ ಮಾಣು ಎನಗಿದು ವಿಧಿಯೆ?! ನೀನೊಲ್ಲದೊಡೆ ನಾನೊಲಿಸುವ ಪರಿಯೆಂತಯ್ಯ? ಮಾನವಳಿಸಿ ಮಾರುವೋಗಿ ಮರೆವೊಕ್ಕೊಡೆ ಕೊಂಬ ಪರಿಯೆಂತಯ್ಯ ಚೆನ್ನಮಲ್ಲಿಕಾರ್ಜುನ ೨೯೪. ಮುಡಿ ಬಿಟ್ಟು ಮೊಗ ಬಾಡಿ ತನು ಕರಗಿದವಳ ಎನ್ನನೇಕೆ ನುಡಿಸುವಿರಿ ಎಲೆ ಅಣ್ಣಗಳಿರಾ? ಎನ್ನನೇಕೆ ಕಾಡುವಿರಿ ಎಲೆ ತಂದೆಗಳಿರಾ? ಬಲುಹಳಿದು, ಭವಗೆಟ್ಟು ಛಲವಳಿದು ಭಕ್ತೆಯಾಗಿ ಚೆನ್ನಮಲ್ಲಿಕ

ಅಕ್ಕನ ವಚನಗಳು - 281 ರಿಂದ 290 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೮೧. ಕಲ್ಲಹೊತ್ತು ಕಡಲೊಳಗೆ ಮುಳುಗಿದೊಡೆ ಎಡರಿಂಗೆ ಕಡೆಯುಂಟೇ ಅವ್ವ? ಉಂಡು ಹಸಿವಾಯಿತ್ತೆಂದೊಡೆ ಭಂಗವೆಂಬೆ ಕಂಡ ಕಂಡ ಠಾವಿನಲ್ಲಿ ಮನ ಬೆಂದೊಡೆ ಗಂಡ ಮಲ್ಲಿಕಾರ್ಜುನಯ್ಯನೆಂತೊಲಿವೆನಯ್ಯ ೨೮೨. ಉಡುವೆ ನಾನು ಲಿಂಗಕ್ಕೆಂದು ತೊಡುವೆ ನಾನು ಲಿಂಗಕ್ಕೆಂದು ಮಾಡುವೆ ನಾನು ಲಿಂಗಕ್ಕೆಂದು ನೋಡುವೆ ನಾನು ಲಿಂಗಕ್ಕೆಂದು ಎನ್ನಂತರಂಗ ಬಹಿರಂಗಗಳು ಲಿಂಗಕ್ಕಾಗಿ ಮಾಡಿಯೂ ಮಾಡದಂತಿಪ್ಪೆ ನೋಡಾ! ಆನೆನ್ನ ಚೆನ್ನಮಲ್ಲಿಕಾರ್ಜುನನೊಳಗಾಗಿ ಹತ್ತರೊಳಗೆ ಹನ್ನೊಂದಾಗಿಪ್ಪುದನೇನ ಹೇಳುವೆನವ್ವ? ೨೮೩. ಸಾವಿಲ್ಲದ ಕೇಡಿಲ್ಲದ ಚೆಲುವಂಗಾನೊಲಿದೆನವ್ವ ಎಡೆಯಿಲ್ಲದ ಕಡೆಯಿಲ್ಲದ ತೆರಹಿಲ್ಲದ ಕುರುಹಿಲ್ಲದ ಚೆಲುವಂಗಾನೊಲಿದೆನವ್ವ ಭವವಿಲ್ಲದ ಭಯವಿಲ್ಲದ ಚೆಲುವಂಗಾನೊಲಿದೆ ಕುಲಸೀಮೆಯಿಲ್ಲದ ನಿಸ್ಸೀಮ ಚೆಲುವಂಗಾನೊಲಿದೆ ಇದುಕಾರಣ ಚೆನ್ನಮಲ್ಲಿಕಾರ್ಜುನ ಚೆಲುವ ಗಂಡನೆನಗೆ ಈ ಸಾವ ಕೆಡುವ ಗಂಡರನೊಯ್ದು [ಒಲೆಯೊಳಗಿಕ್ಕು ತಾಯೆ] ೨೮೪. ಅಯ್ಯ, ಪರಾತ್ಪರ ಸತ್ಯಸದಾಚಾರ ಗುರುಲಿಂಗ- ಜಂಗಮದ ಶ್ರೀಚರಣವನ್ನು ಹಿಂದೆ ಹೇಳದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಅಕ್ಕನ ವಚನಗಳು - 261 ರಿಂದ 270 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೬೧. ಅಂಗದೊಳಗೆ ಅಂಗವಾಗಿ ಅಂಗಲಿಂಗೈಕ್ಯವ ಮಾಡಿದೆ ಮನದೊಳಗೆ ಮನವಾಗಿ ಮನ ಲಿಂಗೈಕ್ಯವ ಮಾಡಿದೆ ಭಾವದೊಳಗೆ ಭಾವವಾಗಿ ಭಾವಲಿಂಗೈಕ್ಯವ ಮಾಡಿದೆ ಅರಿವಿನೊಳಗೆ ಅರಿವಾಗಿ ಜ್ಞಾನಲಿಂಗೈಕ್ಯವ ಮಾಡಿದೆ ಕ್ರೀಗಳೆಲ್ಲವ ನಿಲಿಸಿ ಕ್ರಿಯಾತೀತವಾಗಿ ನಿವೃತ್ತಿಲಿಂಗೈಕ್ಯವ ಮಾಡಿದೆ ನಾನೆಂಬುದ ನಿಲಿಸಿ ನೀನೆಂಬುದ ಕೆಡಿಸಿ ಉಭಯಲಿಂಗೈಕ್ಯವ ಮಾಡಿದೆ ಚೆನ್ನಮಲ್ಲಿಕಾರ್ಜುನನೊಳಗೆ ನಾನಳಿದೆನಾಗಿ ಲಿಂಗವೆಂಬ ಘನವು ಎನ್ನಲ್ಲಿ ಅಳಿಯಿತ್ತು [=ಉಳಿಯಿತ್ತು?] ಕಾಣಾ ಸಂಗನಬಸವಣ್ಣ ೨೬೨. ಎನ್ನ ಭಕ್ತಿ ನಿಮ್ಮ ಧರ್ಮ ಎನ್ನ ಜ್ಞಾನ ಪ್ರಭುದೇವರ ಧರ್ಮ ಎನ್ನ ಪರಿಣಾಮ ಚೆನ್ನಬಸವಣ್ಣನ ಧರ್ಮ ಈ ಮೂವರೂ ಒಂದೊಂದ ಕೊಟ್ಟರೆನಗೆ- ಮೂರು ಭಾವವಾಯಿತ್ತು ಈ ಮೂರನು ನಿನ್ನಲ್ಲಿ ಸಮರ್ಪಿಸಿದ ಬಳಿಕ ಎನಗಾವ ಜಂಜಡವಿಲ್ಲ ಚೆನ್ನಮಲ್ಲಿಕಾರ್ಜುನದೇವರ ನೆನಹಿನಲ್ಲಿ ನಿನ್ನ ಕರುಣದ ಶಿಶು ನಾನು ಕಾಣಾ ಸಂಗನಬಸವಣ್ಣ ೨೬೩. ಲಿಂಗ ಸುಖಸಂಗದಲ್ಲಿ ಮನ ವೇದ್ಯವಾಯಿತ್ತು ಇನ್ನೆಲ್ಲಿಯದಯ್ಯ ಎನಗೆ ನಿಮ್ಮಲ್ಲಿ ನಿರವಯವು? ಇನ್ನೆಲ್ಲಿಯದಯ್ಯ ನಿಮ್ಮಲ್ಲಿ ಕೂಡುವುದು? ಪರಮಸುಖಪರಿಣಾಮ ಮನ ಮೇರೆದಪ್ಪಿ ನಾನು ನಿಜವನೈದುವ ಠಾವ ಹ

ಅಕ್ಕನ ವಚನಗಳು - 251 ರಿಂದ 260 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೫೨. ಊಡಿದಡುಣ್ಣದು, ನೀಡಿದಡರಿಯದು ಕಾಣದು ಬೇಡದು, ಒಲಿಯದು ನೋಡಾ ಊಡಿದರುಂಡು ನೀಡೀದಡೊಲಿದು ಬೇಡಿದ ವರವ ಕೊಡುವ ಜಂಗಮಲಿಂಗದ ಪಾದವ ಹಿಡಿದು ಬದುಕಿದೆ ಕಾಣಾ ಚೆನ್ನಮಲ್ಲಿಕಾರ್ಜುನ ೨೫೩. ಕಾಯ ಪ್ರಸಾದವೆನ್ನ ಮನ ಪ್ರಸಾದವೆನ್ನ ಪ್ರಾಣ ಪ್ರಸಾದವೆನ್ನ ಭಾವ ಪ್ರಸಾದವೆನ್ನ ಸೈಧಾನ ಪ್ರಸಾದವೆನ್ನ ಸಮಭೋಗ ಪ್ರಸಾದವೆನ್ನ ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮ ಪ್ರಸಾದವ ಹಾಸಿ ಹೊದಿಸಿಕೊಂಡಿಪ್ಪೆ ೨೫೪. ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ ಅಸ್ತಮಾನದಿಂದ ಮೇಲೆ ಜಿತೇಂದ್ರಿಯರಿಲ್ಲ ವಿಧಿಯ ಮೀರುವ ಅಮರರಿಲ್ಲ ಕ್ಷುಧೆ-ವ್ಯಸನ-ವಿಧಿಗಂಜಿ ನಾ ನಿಮ್ಮ ಮರೆವೊಕ್ಕು ಚೆನ್ನಮಲ್ಲಿಕಾರ್ಜುನ ಬದುಕಿದೆ ೨೫೫. ಅರಿದೆನೆಂದೆಡೆ ಅರಿಯಬಾರದು ನೋಡಾ ಘನಕ್ಕೆ ಘನ ತಾನೆ ನೋಡಾ ಚೆನ್ನಮಲ್ಲಿಕಾರ್ಜುನನ ನಿರ್ಣಯವಿಲ್ಲದೆ ಸೋತೆನು ೨೫೬. ಎನ್ನಂತೆ ಪುಣ್ಯಂಗೆಯ್ದವರುಂಟೆ? ಎನ್ನಂತೆ ಭಾಗ್ಯಂಗೆಯ್ದವರುಂಟೆ? ಕಿನ್ನರನಂತಪ್ಪ ಸೋದರನೆನಗೆ ಏಳೇಳು ಜನ್ಮದಲ್ಲಿ ಶಿವಭಕ್ತರೇ ಬಂಧುಗಳೆನಗೆ ಚೆನ್ನಮಲ್ಲಿಕಾರ್ಜುನನಂತಪ್ಪ ಗಂಡ ನೋಡಾ ಎನಗೆ ೨೫೭. ಅಯ್ಯಾ ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯ ಅಯ್ಯಾ ನ

ಅಕ್ಕನ ವಚನಗಳು - 241 ರಿಂದ 250 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೪೧. ತನು ಶುದ್ಧವಾಯಿತ್ತು ಶಿವಭಕ್ತರೊಕ್ಕುದ ಕಂಡೆನ್ನ ಮನ ಶುದ್ಧವಾಯಿತ್ತು ಅಸಂಖ್ಯಾತರ ನೆನೆದೆನ್ನ ಕಂಗಳು ಶುದ್ಧವಾಯಿತ್ತು ಸಕಲಗಣಂಗಳ ನೋಡಿಯೆನ್ನ ಶ್ರೋತ್ರ ಶುದ್ಧವಾಯಿತ್ತು ಅವರ ಕೀರ್ತಿಯ ಕೇಳಿಯೆನ್ನ ಘ್ರಾಣ ಶುದ್ಧವಾಯಿತ್ತು ನಿಮ್ಮ ಪಾದಾರ್ಪಿತ ಪರಿಮಳವ ವಾಸಿಸಿಯೆನ್ನ ಜಿಹ್ವೆ ಶುದ್ಧವಾಯಿತ್ತು ನಿಮ್ಮ ಶರಣರೊಕ್ಕುದ ಕೊಂಡೆನಾಗಿ ಭಾವನೆಯೆನಗಿದು ಜೀವನ ಕೇಳಾ ಲಿಂಗ ತಂದೆ ನೆಟ್ಟನೆ ನಿಮ್ಮ ಮನ ಮುಟ್ಟಿ ಪೂಜಿಸಿ ಭವಗೆಟ್ಟೆ ನಾನು ಚೆನ್ನಮಲ್ಲಿಕಾರ್ಜುನ ೨೪೨. ಕುಲಮದವೆಂಬುದಿಲ್ಲ ಅಯೋನಿಸಂಭವನಾಗಿ ಛಲಮದವೆಂಬುದಿಲ್ಲ ಪ್ರತಿದೂರನಾಗಿ ಧನಮದವೆಂಬುದಿಲ್ಲ ತ್ರಿಕರಣಶುದ್ಧನಾಗಿ ವಿದ್ಯಾಮದವೆಂಬುದಿಲ್ಲ ಅಸಾಧ್ಯವ ಸಾಧಿಸಿದೆನಾಗಿ ಮತ್ತಾವ ಮದವಿಲ್ಲ ನೀನವಗವಿಸಿದ ಕಾರಣ ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮ ಶರಣ ಅಕಾಯಚರಿತ್ರನಾಗಿ ೨೪೩. ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ ಆಯುಷ್ಯವೆಂಬ ರಾಶಿಯ ಅಳೆದು ತೀರದ ಮುನ್ನ ಶಿವನ ನೆನೆಯಿರೇ! ಶಿವನ ನೆನೆಯಿರೇ! ಈ ಜನ್ಮ ಬಳಿಕಿಲ್ಲ ಚೆನ್ನಮಲ್ಲಿಕಾರ್ಜುನದೇವರ ದೇವ ಪಂಚಮಹಾಪಾತಕರೆಲ್ಲ ಮುಕ್ತಿವಡೆದರು ೨೪೪. ಕರುವಿನ ರೂಹು ಅರಗಿಳ

ಅಕ್ಕನ ವಚನಗಳು - 231 ರಿಂದ 240 ರವರೆಗೆ

೨೩೧. ತನುವ ಮೀರಿತ್ತು, ಮನವ ಮೀರಿತ್ತು ಮಹವ ಮೀರಿತ್ತು ಅಲ್ಲಿಂದತ್ತ ಭಾವಿಸುವ ಭಾವಕರಿಲ್ಲಾಗಿ ತಾರ್ಕಣೆಯಿಲ್ಲ ಚೆನ್ನಮಲ್ಲಿಕಾರ್ಜುನಯ್ಯ ಬೆರಸಲಿಲ್ಲದ ನಿಜತತ್ವವು ೨೩೨. ಆಧಾರ-ಸ್ವಾಧಿಷ್ಠಾನ-ಮಣಿಪೂರಕ- ಅನಾಹುತ-ವಿಶುದ್ಧಿ-ಆಜ್ಞೇಯವ ನುಡಿದರೇನು? ಆದಿಯನಾದಿಯ [ಸುದ್ದಿಯ] ಕೇಳಿದಡೇನು, ಹೇಳಿದಡೇನು ತನ್ನಲ್ಲಿದ್ದುದ ತಾನರಿಯದನ್ನಕ್ಕರ ಉನ್ಮನಿರಭಸದ ಮನ ಪವನದ ಮೇಲೆ ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲಯದವರು? ೨೩೩. ನಿತ್ಯವೆಂಬ ನಿಜಪದವೆನ್ನ ಹತ್ತೆ ಸಾರ್ದುದ ಕಂಡ ಬಳಿಕ ಚಿತ್ತ ಕರಗಿ ಮನ ಕೊರಗಿ ಹೃದಯವರಳಿತು ನೋಡಯ್ಯ ಒತ್ತಿ ಬಿಗಿದ ಸೆರೆಯೊಳಗೆ ಅತ್ತಿತ್ತಲೆಂದರಿಯದೆ ಚೆನ್ನಮಲ್ಲಿಕಾರ್ಜುನನ ಪಾದದಲ್ಲಿ ಮರೆದೊರಗಿದೆ ನೋಡಯ್ಯ ೨೩೪. ಆಶೆಯಾಮಿಷವಳಿದು ಹುಸಿ ವಿಷಯಂಗಳೆಲ್ಲಾ ಹಿಂಗಿ ಸಂಶಯಸಂಬಂಧ ವಿಸಂಬಂಧವಾಯಿತ್ತು ನೋಡಾ ಎನ್ನ ಮನದೊಳಗೆ ಘನಪರಿಣಾಮವ ಕಂಡು ಮನ ಮಗ್ನವಾಯಿತ್ತಯ್ಯ ಚೆನ್ನಮಲ್ಲಿಕಾರ್ಜುನ, ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯ ೨೩೫. ಆದಿಅನಾದಿಯ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ ಆ ಪರಬ್ರಹ್ಮದ ನಿಲವ? ಅದೆಂತೆಂದಡೆ ಆದಿಯೇ ದೇಹ, ಅನಾದಿಯೇ ನಿರ್ದೇಹ ಆದಿಯೇ ಸಕಲ, ಅನಾದಿಯೇ ನಿಷ್ಕಲ ಆದಿಯೇ ಜಡ, ಅನಾದಿಯೇ ಅಜಡ ಆದಿಯೇ ಕಾಯ, ಅನಾದಿಯೇ ಪ್ರಾಣ ಈ ಎರಡರ ಯೋಗವ ಭೇದಿಸಿ ತನ್ನಿಂದ ತಾ ತಿಳಿದು ನೋಡಲು ಆದಿಸಂಬಂಧಮಪ್ಪ ಭೂ

ಅಕ್ಕನ ವಚನಗಳು - 221 ರಿಂದ 230 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.     ೨೨೧. ಸದ್ಗುರುಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ ತತ್ ಶಿಷ್ಯನ ಮಸ್ತಕದ ಮೇಲೆ ತನ್ನ ಶ್ರೀಹಸ್ತವನಿರಿಸಿದಡೆ ಲೋಹದ ಮೇಲೆ ಪರುಷ ಬಿದ್ದಂತಾಯಿತ್ತಯ್ಯ ಒಪ್ಪುವ ಶ್ರೀವಿಭೂತಿಯ ನೊಸಲಿಂಗೆ ಪಟ್ಟವ ಕಟ್ಟಿದಡೆ ಮುಕ್ತಿಸಾಮ್ರಾಜ್ಯದೊಡೆತನಕ್ಕೆ ಪಟ್ಟವ ಕಟ್ಟಿದಂತಾಯಿತ್ತಯ್ಯ ಸದ್ಯೋಜಾತ-ವಾಮದೇವ-ಅಘೋರ-ತತ್ಪುರುಷ-ಈಶಾನವೆಂಬ ಪಂಚಕಲಶದ ಅಭಿಷೇಕವ ಮಾಡಿಸಲು ಶಿವನ ಕಾರುಣ್ಯಾಮೃತದ ಸೋನೆ ಸುರಿದಂತಾಯಿತ್ತಯ್ಯ ನೆರೆದ ಶಿವಂಗಳ ಮಧ್ಯದಲ್ಲಿ ಮಹಾಲಿಂಗವನು ಕರಸ್ಥಲಾಮಲಕವಾಗಿ ಶಿಷ್ಯನ ಕರಸ್ಥಲಕ್ಕೆ ಇಟ್ಟು, ಅಂಗದಲ್ಲಿ ಪ್ರತಿಷ್ಠಿಸಿ ಪ್ರಣವಪಂಚಾಕ್ಷರಿಯುಪದೇಶವ ಕರ್ಣದಲ್ಲಿ ಹೇಳಿ ಕಂಕಣವ ಕಟ್ಟಿದಲ್ಲಿ ಕಾಯವೇ ಕೈಲಾಸವಾಯಿತ್ತು ಪ್ರಾಣವೇ ಪಂಚಬ್ರಹ್ಮಮಯ ಲಿಂಗವಾಯಿತ್ತು ಇಂದು ಮುಂದ ತೋರಿ ಹಿಂದ ಬಿಡಿಸಿದ ಶ್ರೀಗುರುವಿನ ಸಾನಿದ್ಧ್ಯದಿಂದಾನು ಬದುಕಿದೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ ೨೨೨. ನಮ್ಮ ಮನೆಯಲಿಂದು ಹಬ್ಬ ನಮಗೆ ಸಂದಣಿ ಬಹಳ ಒಮ್ಮೆ ನುಡಿಸ ಹೊತ್ತಿಲ್ಲ ಹೋಗಿ ವಿಷಯಗಳಿರಾ ತನುವೆಂಬ ಮನೆಯೊಳಗೆ ನೆಲಸಿಪ್ಪ ಪರಮಾತ್ಮ ಮನೆಯ ದೇವರ ಹಬ್ಬ! ಆ ಹಬ್ಬಕಿಂದು ನೆನೆಯದೆ ಮಿಂದು ನಡ

ಅಕ್ಕನ ವಚನಗಳು - 211 ರಿಂದ 220 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೧೧. ಅಂಗಸಂಗಿಯಾಗಿ ಸಂಬಂಧಿಯಲ್ಲ ಲಿಂಗದೊಳಗಾಪ್ಯಾಯಿನಿಯಾಗಿ ಇತರ ಸು- ಖಂಗಳ ಬಿಟ್ಟು ಕಳೆದು ಸಮನ ಸಾರಾಯನಾದ ಶರಣನು ||ಪಲ್ಲವ|| ಗುರುಕರುಣಸಂಗದಿಂದ ಶಿಷ್ಯನಿಂತು ಕರದಲ್ಲಿ ಹುಟ್ಟಿದನು ಕರಣಸಹಿತ ಅವಗ್ರಾಹಿಯಾಗಿ ಘಾಳಿ ಸುಳುಹಡಗಿದ ಶರಣನು ||೧|| ಆಸೆಯೆಂಬ ಹದನುಳುಹಾಗಿ ಹಿಡಿದ ಛಲ ಬಿಡದೆಂಬ ಬೇರೂರಿ ಸಂಕಲ್ಪವಿಕಲ್ಪಗಳೆರಡೂ ಇಲ್ಲದೆ ನಿಃಕಳಂಕನಾದನು ಶರಣನು ||೨|| ಮಾಡುವವರ ಕಂಡು ಮಾಡುವವನಲ್ಲ ಮಾಡದವರ ಕಂಡು ಮಾಡದವನಲ್ಲ ತಾ ಮಾಡುವ ಮಾಟಕೆ ತವಕಿಗನಾಗಿಪ್ಪ ಹಿಂದುಮುಂದರಿಯದ ಶರಣನು ||೩|| ಎಲ್ಲವು ತಾನೆಂಬ ಕರುಣಾಕರನಲ್ಲ ನಿಃಕರುಣಿಯಾಗಿ ಜಡದೇಹಿಯಲ್ಲ ಭೋಗಿಪ ಭೋಗಂಗಳಾಮಿಷ ತಾಮಸ ವಿಷಯವಿರಹಿತನು ಶರಣನು ||೪|| ಘನವನಿಂಬುಗೊಂಡ ಮನದ ಬೆಂಬಳಿವಿಡಿದುಳೆದಲ್ಲಿ ನಿಜವಾಗಿ ನಿಂದನು ತಾನೆಂಬುದಿಲ್ಲ ನಿರಂತರ ಸದ್ಗುರು ಚೆನ್ನಮಲ್ಲಿಕಾರ್ಜುನ ನಿಮ್ಮ ಶರಣ ಬಸವಣ್ಣನು ||೫|| ೨೧೨. ಅಂಗದಲ್ಲಿ ಲಿಂಗಸಂಗ ಲಿಂಗದಲ್ಲಿ ಅಂಗಸಂಗ ಮಾಡಿದನೆಂದರೆ ಎನ್ನಗಾವ ಜಂಜಡವಿಲ್ಲ ಚೆನ್ನಮಲ್ಲಿಕಾರ್ಜುನನ ಸ್ನೇಹದಲ್ಲಿ ನಿನ್ನ ಕರುಣದ ಶಿಶು ನಾನು ಕಾಣ ಸಂಗನಬಸವಣ್ಣ ೨೧೩. ಲಿಂಗದಿ