Skip to main content

Posts

Showing posts from January, 2011

ಬಸವಣ್ಣನ ವಚನಗಳು - 341 ರಿಂದ 350 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೪೧. ಅರಸು-ವಿಚಾರ, ಸಿರಿಯು-ಶೃಂಗಾರ ಸ್ಥಿರವಲ್ಲ ಮಾನವ! ಕೆಟ್ಟಿತ್ತು ಕಲ್ಯಾಣ ಹಾಳಾಯಿತ್ತು ನೋಡಾ! ಒಬ್ಬ ಜಂಗಮನಭಿಮಾನದಿಂದ ಚಾಳುಕ್ಯರಾಯನಾಳ್ವಿಕೆ ತೆಗೆಯಿತ್ತು ಸಂದಿತ್ತು, ಕೂಡಲಸಂಗಮದೇವ, ನಿನ್ನ ಕವಳಿಗೆಗೆ. ೩೪೨. ಬೇವಿನ ಬೀಜವ ಬಿತ್ತಿ, ಬೆಲ್ಲದ ಕಟ್ಟೆಯ ಕಟ್ಟಿ, ಆಕಳ ಹಾಲನೆರೆದು, ಜೇನುತುಪ್ಪವ ಹೊಯ್ದರೆ ಸಿಹಿಯಾಗಬಲ್ಲುದೆ ಕಹಿಯಹುದಲ್ಲದೆ ? ಶಿವಭಕ್ತರಲ್ಲದವರ ಕೂಡೆ ನುಡಿಯಲಾಗದು ಕೂಡಲಸಂಗಮದೇವ. ೩೪೩. ಮಾರಿ ಮಸಣಿ ಎಂಬವು ಬೇರಿಲ್ಲ ಕಾಣಿರೋ! ಮಾರಿ ಎಂಬುದೇನು ? ಕಂಗಳು ತಪ್ಪಿ ನೋಡಿದರೆ ಮಾರಿ! ನಾಲಿಗೆ ತಪ್ಪಿ ನುಡಿದರೆ ಮಾರಿ! ನಮ್ಮ ಕೂಡಲಸಂಗಯ್ಯನ ನೆನಹ ಮರೆದರೆ ಮಾರಿ! ೩೪೪. ಆಯುಧವಿಕ್ಕಿದವಂಗೆ ವೀರದ ಮಾತೇಕೆ ? ಲಿಂಗವು ಅಂತರಿಸಿದವಂಗೆ ಒಳುನುಡಿಯೇಕೆ ? ಐದೆಯರ ಪೋಚಿ ಇಲ್ಲದವಳಿಗೆ ಸೌಭಾಗ್ಯದ ಹೂವಿನ ಬಟ್ಟೇಕೆ ? ಸತ್ಯನಲ್ಲದವಂಗೆ ನಿತ್ಯನೇಮವೇಕೆ ? ಕರ್ತಾರ, ನಿನ್ನ ಒಲವಿಲ್ಲದವಂಗೆ ಶಂಭುವಿನ ಬಂಧುಗಳೇಕೆ ? ಕೂಡಲಸಂಗಮದೇವಯ್ಯ ನೀವಿಲ್ಲದವಂಗೆ ಶಿವಾಚಾರದ ಮಾತೇಕೆ ? ೩೪೫. ಸಿಂಗದ ನಡು ಮುರಿಯಲಾ ಸಿಂಗವೇಬಾತೆ! ಸೊಂಡಿಲು ಮುರಿದರೆ ಆ ಗಜವೇ

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಬಸವಣ್ಣನ ವಚನಗಳು - 321 ರಿಂದ 330 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೨೧. ಮೊರನ ಗೋಟಿಗೆ ಬಪ್ಪ ಕಿರುಕುಳದೈವಕ್ಕೆ ಕುರಿಯನಿಕ್ಕಿಹೆವೆಂದು ನಲಿನಲಿದಾಡುವರು. ಕುರಿ ಸತ್ತು ಕಾವುದೆ ಹರ ಮುಳಿದವರ ? ಕುರಿ ಬೇಡ, ಮರಿ ಬೇಡ ಬರಿಯ ಪತ್ರೆಯ ತಂದು ಮರೆಯದೇ ಪೂಜಿಸು ನಮ್ಮ ಕೂಡಲಸಂಗಮದೇವನ. ೩೨೨. ಮಡಕೆ ದೈವ, ಮೊರ ದೈವ, ಬೀದಿಯ ಕಲ್ಲು ದೈವ, ಹಣಿಗೆ ದೈವ, ಬಿಲ್ಲ ನಾರಿ ದೈವ--ಕಾಣಿರೊ! ಕೊಳಗ ದೈವ, ಗಿಣ್ಣಿಲು ದೈವ--ಕಾಣಿರೊ! ದೈವ ದೈವವೆಂದು ಕಾಲಿಡಲಿಂಬಿಲ್ಲ! ದೇವನೊಬ್ಬನೆ ಕೂಡಲಸಂಗಮದೇವ. ೩೨೩. ಋಣ ತಪ್ಪಿದ ಹೆಂಡಿರಲ್ಲಿ, ಗುಣ ತಪ್ಪಿದ ನಂಟರಲ್ಲಿ, ಜೀವವಿಲ್ಲದ ದೇಹದಲ್ಲಿ ಫಲವೇನೋ ? ಆಳ್ದನೊಲ್ಲದಾಳಿನಲ್ಲಿ, ಸಿರಿತೊಲಗಿದರಸಿನಲ್ಲಿ ವರವಿಲ್ಲದ ದೈವದಲ್ಲಿ ಫಲವೇನೋ ? ಕಳಿದ ಹೂವಿನಲ್ಲಿ ಕಂಪನು, ಉಳಿದ ಸೊಳೆಯಲ್ಲಿ ಪೆಂಪನು, ಕೊಳೆಚೆನೀರಿನಲ್ಲಿ ಗುಣ್ಪನರಸುವಿರಿ! ಮರುಳೆ, ವರಗುರು ವಿಶ್ವಕ್ಕೆಲ್ಲ ಗಿರಿಜಾಮನೋವಲ್ಲಭ ಪರಮ ಕಾರುಣಿಕ ನಮ್ಮ ಕೂಡಲಸಂಗಮದೇವ. ೩೨೪. ಗುಡಿಯೊಳಗಿದ್ದು ಗುಡಿಯ ನೇಣ ಕೊಯ್ದರೆ ಗುಡಿಯ ದಡಿ ಬಿದ್ದು ಹಲ್ಲು ಹೋಹುದು ನೋಡಾ! ಪೊಡವಿಗೀಶ್ವರನ ಗರ್ಭವಾಸದೊಳಗಿದ್ದು ನುಡಿವರು ಮತ್ತೊಂದು ದೈವ ಉಂಟೆಂದು! ತುಡುಗುಣಿ ನ

ಬಸವಣ್ಣನ ವಚನಗಳು - 311 ರಿಂದ 320 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೧೧. ಸಕಲ-ನಿಷ್ಕಲವ ಕೂಡಿಕೊಂಡಿಪ್ಪೆಯಾಗಿ ಸಕಲ ನೀನೆ, ನಿಷ್ಕಲ ನೀನೇ ಕಂಡಯ್ಯ! ವಿಶ್ವತಶ್ಚಕ್ಷು ನೀನೇ ದೇವ! ವಿಶ್ವತೋಬಾಹು ನೀನೇ ದೇವ ವಿಶ್ವತೋಮುಖ ನೀನೇ ದೇವ! ಕೂಡಲಸಂಗಮದೇವ. ೩೧೨. ಎತ್ತೆತ್ತ ನೋಡಿದಡತ್ತತ್ತ ನೀನೇ ದೇವ! ಸಕಲ ವಿಸ್ತಾರದ ರೂಹು ನೀನೇ ದೇವ. ವಿಶ್ವತಶ್ಚಕ್ಷು ನೀನೇ ದೇವ, ವಿಶ್ವತೋಮುಖ ನೀನೇ ದೇವ. ವಿಶ್ವತೋಬಾಹು ನೀನೇ ದೇವ. ವಿಶ್ವತೋಪಾದ ನೀನೇ ದೇವ. ಕೂಡಲಸಂಗಮದೇವ. ೩೧೩. ಹರನ ಕೊರಳಲ್ಲಿಪ್ಪ ಕರೋಟಿಮಾಲೆಯ ಶಿರದ ಲಿಖಿತವ ಕಂಡು, ಮರುಳುತಂಡಗಳು ಓದಿನೋಡಿ "ಇವನಜ, ಇವ ಹರಿ, ಇವ ಸುರಪತಿ ಇವ ಧರಣೀಂದ್ರ, ಇವನಂತಕ"ನೆಂದು ಹರುಷದಿಂದ ಸರಸವಾಡುವುದ ಹರ ನೋಡಿ ಮುಗುಳುನಗೆಯ ನಗುತ್ತಿದ್ದನು! ಕೂಡಲಸಂಗಮದೇವ. ೩೧೪. ಅದುರಿತು ಪಾದಘಾತದಿಂದ ಧರೆ! ಬಿದಿರಿದವು ಮಕುಟ ತಾಗಿ ತಾರಕಿಗಳು ಉದುರಿದವು ಕೈತಾಗಿ ಲೋಕಂಗಳೆಲ್ಲ! "ಮಹೀ ಪಾದಾಘಾತಾದ್ವ್ರಜತಿ ಸಹಸಾ ಸಂಶಯಪದಂ ಪದಂ ವಿಷ್ಣೋರ್ಭ್ರಾಮ್ಯದ್ಭುಜಪರಿಘರುಗ್ಣಗ್ರಹಗಣಂ! ಮುಹರ್ದ್ಯೌರ್ಧ್ವಸ್ತಾತ್ಯಂತ್ಯನಿಭೃತಜಟಾತಾಟಿತತಟಾ ಜಗದ್ರಕ್ಷಾಯೈ ತ್ವಂ ನನು ವಹಸಿ ಭೌಮಾಂ ಚ ವಿಭುತಾಂ"

ಬಸವಣ್ಣನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮ ಸಂಗವಳಿದು, ಅನುಭಾವ ಸಂಗದಲುಳಿದವರನಗಲಲಾರೆ, ಶಿವಂಗೆ ಮಿಗೆ ಒಲಿದವರನು ನಾನು ಅಗಲಲಾರೆ ಕಾಣಾ ಕೂಡಲಸಂಗಮದೇವ. ೩೦೨. ಭಕ್ತಿರತಿಯ ವಿಕಲತೆಯ ಯುಕುತಿಯನೇನ ಬೆಸಗೊಂಬಿರಯ್ಯ ? ಕಾಮಿಗುಂಟೇ ಲಜ್ಜೆ ನಾಚಿಕೆ ? ಕಾಮಿಗುಂಟೇ ಮಾನಾಪಮಾನವು ? ಕೂಡಲಸಂಗನ ಶರಣರಿಗೊಲಿದ ಮರುಳನನೇನ ಬೆಸಗೊಂಬಿರಯ್ಯ ? ೩೦೩. ಸಕ್ಕರೆಯ ಕೊಡನ ತುಂಬಿ ಹೊರಗ ಸವಿದರೆ ರುಚಿಯುಂಟೆ ? ತಕ್ಕೈಸಿ ಭುಜತುಂಬಿ, ಲಿಂಗಸ್ಪರ್ಶನವ ಮಾಡದೆ, ಅಕ್ಕಟಾ, ಸಂಸಾರ ವೃಥಾ ಹೋಯಿತ್ತಲ್ಲ! ಅದೇತರ ಭಕ್ತಿ ? ಅದೇತರ ಯುಕ್ತಿ ? ಕೂಡಿಕೊ! ಕೂಡಲಸಂಗಮದೇವ. ೩೦೪. ಪರಚಿಂತೆ ಎಮಗೇಕಯ್ಯ ? ನಮ್ಮ ಚಿಂತೆ ಎಮಗೆ ಸಾಲದೆ ? ಕೂಡಲಸಂಗಯ್ಯ ಒಲಿದಾನೋ ಒಲಿಯನೋ ಎಂಬ ಚಿಂತೆ ಹಾಸಲುಂಟು ಹೊದಿಯಲುಂಟು! ೩೦೫. ಲಜ್ಜೆಗೆಟ್ಟೆನು, ನಾಣುಗೆಟ್ಟೆನು, ಕುಲಗೆಟ್ಟೆನು, ಛಲಗೆಟ್ಟೆನು, ಸಂಗಾ, ನಿಮ್ಮ ಪೂಜಿಸಿ ಭವಗೆಟ್ಟೆನು ನಾನಯ್ಯ! ಕೂಡಲಸಂಗಮದೇವಯ್ಯ, ನಿಮ್ಮ ಮುಟ್ಟಿ ಹುಟ್ಟುಗೆಟ್ಟೆನು ನಾನಯ್ಯ! ೩೦೬. ಮಾಡುವ ಭಕ್ತನ ಕಾಯ ಬಾಳೆಯ ಕಂಬದಂತಿರಬೇಕು! ಮೆಲ್ಲಮೆಲ್ಲನೆ ಹೊರೆಯೆತ್ತಿ ನೋಡಿದರೆ ಒಳಗೆ ಕೆಚ್ಚಿಲ್ಲದಿರಬೇಕು!

ಬಸವಣ್ಣನ ವಚನಗಳು - 291 ರಿಂದ 300 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೯೧. ಮಂಡೆಯ ಬೋಳಿಸಿಕೊಂಡು ಗಂಡುದೊತ್ತುವೊಕ್ಕೆನಯ್ಯ. ಲಜ್ಜೆಗೆಟ್ಟಾದರೂ ಲಿಂಗವನೊಲಿಸುವೆ. ನಾಣುಗೆಟ್ಟಾದರೂ ಲಿಂಗವನೊಲಿಸುವೆ. ಕೆಲದ ಸಂಸಾರಿಗಳು ನಗುತಿದ್ದರಿರಲಿ. ಕೂಡಲಸಂಗಮದೇವ ಶರಣಾಗತಿವೊಕ್ಕೆನಯ್ಯ. ೨೯೨. ಎನಗೆ ನಿಮ್ಮ ನೆನಹಾದಾಗವೇ ಉದಯ! ಎನಗೆ ನಿಮ್ಮ ಮರಹಾದಾಗವೇ ಅಸ್ತಮಾನ! ಎನಗೆ ನಿಮ್ಮ ನೆನಹವೇ ಜೀವ! ಎನಗೆ ನಿಮ್ಮ ನೆನಹವೇ ಪ್ರಾಣ ಕಾಣ ತಂದೆ! ಸ್ವಾಮಿ, ಎನ್ನ ಹೃದಯದಲ್ಲಿ ನಿಮ್ಮ ಚರಣದುಂಡಿಗೆಯನೊತ್ತಯ್ಯ! ವದನದಲ್ಲಿ ಪಂಚಾಕ್ಷರಿಯ ಬರೆಯಯ್ಯ ಕೂಡಲಸಂಗಮದೇವ. ೨೯೩. ಎನ್ನ ಕಾಯವ ದಂಡಿಗೆಯ ಮಾಡಯ್ಯ, ಎನ್ನ ಶಿರವ ಸೋರೆಯ ಮಾಡಯ್ಯ, ಎನ್ನ ನರವ ತಂತಿಯ ಮಾಡಯ್ಯ, ಎನ್ನ ಬೆರಲ ಕಡ್ಡಿಯ ಮಾಡಯ್ಯ, ಬತ್ತೀಸ ರಾಗವ ಹಾಡಯ್ಯ, ಉರದಲೊತ್ತಿ ಬಾಜಿಸು ಕೂಡಲಸಂಗಮದೇವ. ೨೯೪. ಮನಕ್ಕೆ ಮನೋಹರವಲ್ಲದ ಗಂಡರು ಮನಕ್ಕೆ ಬಾರರು ಕೇಳವ್ವ ಕೆಳದಿ. ಪನ್ನಗಭೂಷಣನಲ್ಲದ ಗಂಡರು ಇನ್ನೆನಗಾಗದ ಮೋರೆ ನೋಡವ್ವ! ಕನ್ನೆಯಂದಿನ ಕೂಟ: ಚಿಕ್ಕಂದಿನ ಬಾಳುವೆ, ನಿಮ್ಮಾಣೆಯಯ್ಯ ಕೂಡಲಸಂಗಮದೇವ. ೨೯೫. ಜಗವೆಲ್ಲಾ ಅರಿಯಲು ಎನಗೊಬ್ಬ ಗಂಡನುಂಟು! ಆನು ಮುತ್ತೈದೆ; ಆನು ನಿಟ್ಟೈದೆ. ಕೂಡಲಸಂಗಮದೇ

ಬಸವಣ್ಣನ ವಚನಗಳು - 281 ರಿಂದ 290 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೮೧. ಎನ್ನ ಜನ್ಮವ ತೊಡೆದ ನೀ ಧರ್ಮಿ! ಎನ್ನ ಜನ್ಮವನತಿಗಳೆದ ನೀ ಧರ್ಮಿ! ಎನ್ನ ಭವಬಂಧನವ ನೀಕರಿಸಿದೆಯಾಗಿ ಶಿವನೇ ಗತಿಯೆಂದು ನಂಬಿದೆನಯ್ಯ. ಎನ್ನಷ್ಟಮದಂಗಳ ಸುಟ್ಟುರುಹಿದೆಯಾಗಿ ಕಟ್ಟುಗ್ರದಿಂದ ನಿಮ್ಮ ಶ್ರೀಚರಣವ ಕಂಡೆ. ಸೃಷ್ಟಿಪ್ರತಿಪಾಲಕ ನಿಮ್ಮ ನಾ ನಂಬಿದೆ ಕರುಣಿಸು ಕೂಡಲಸಂಗಮದೇವ. ೨೮೨. ಭವರೋಗವೈದ್ಯನೆಂದು ನಾ ನಿಮ್ಮ ಮರೆವೊಕ್ಕೆ, ಭಕ್ತಿದಾಯಕ ನೀನು, ಕರುಣಿಸು ಲಿಂಗತಂದೆ. ಜಯ ಜಯ ಶ್ರೀ ಮಹಾದೇವ, ಜಯ ಜಯ ಶ್ರೀ ಮಹಾದೇವ, ಎನುತಿದ್ದಿತೆನ್ನ ಮನವು; ಕೂಡಲಸಂಗಮದೇವಂಗೆ ಶರಣೆನುತಿದ್ದಿತೆನ್ನ ಮನವು. ೨೮೩. ಅಂಗೈಯೊಳಗಣ ಲಿಂಗವ ನೋಡುತ್ತ ಕಂಗಳು ಕಡೆಗೋಡಿವರಿವುತ್ತ ಸುರಿವುತ್ತ ಎಂದಿಪ್ಪೆನೋ ?! ನೋಟವೇ ಪ್ರಾಣವಾಗಿ ಎಂದಿಪ್ಪೆನೋ! ಕೂಟವೇ ಪ್ರಾಣವಾಗಿ ಎಂದಿಪ್ಪೆನೋ! ಎನ್ನಂಗ ವಿಕಾರದ ಸಂಗವಳಿದು ಕೂಡಲಸಂಗಯ್ಯ ಲಿಂಗಯ್ಯ ಲಿಂಗವೆನುತ್ತ ಎಂದಿಪ್ಪೆನೋ !? ೨೮೪. ಎದೆ ಬಿರಿವನ್ನಕ, ಮನ ದಣಿವನ್ನಕ ನಾಲಗೆ ನಲಿನಲಿದೋಲಾಡುವನ್ನಕ ನಿಮ್ಮ ನಾಮಾಮೃತವ ತಂದಿರಿಸು ಕಂಡ ಎಲೆ ಹರನೆ ಎಲೆ ಶಿವನೆ! ನಿಮ್ಮ ನಾಮಾಮೃತವ ತಂದಿರಿಸು ಕಂಡಾ ಬಿರಿಮುಗುಳಂತೆ ಎನ್ನ ಹೃದಯ ನಿಮ್ಮ ಶ್ರೀ

ಬಸವಣ್ಣನ ವಚನಗಳು - 271 ರಿಂದ 280 ರವರೆಗೆ

೨೭೧. ಆವನಾದರೇನು ? ಶ್ರೀಮಹಾದೇವನ ನೆನೆವನ ಬಾಯ ತಂಬುಲವ ಮೆಲುವೆ, ಬೀಳುಡಿಗೆಯ ಕಾಯ್ದು ಬದುಕುವೆ ಕೂಡಲಸಂಗಮದೇವ. ೨೭೨. ನಾನು ಹೊತ್ತ ಹುಳ್ಳಿಯನಂಬಲಿಗೆ ಕೊಂಬವರಿಲ್ಲ ನೋಡಯ್ಯ. ಆನು ನಿಮ್ಮ ಶರಣರ ಒಕ್ಕುದನುಂಡು ಬದುಕುವೆನಯ್ಯ. ಮೇರುವ ಸಾರಿದ ಕಾಗೆ ಹೊಂಬಣ್ಣವಪ್ಪುದು ತಪ್ಪದು ಕೂಡಲಸಂಗಮದೇವ. ೨೭೩. ದಾಸಿಯ ವರ್ಗದಲ್ಲಿಪ್ಪೆನು ಶಿವಶರಣರ ಮನೆಯಲ್ಲಿ. ಅವರೊಕ್ಕುದನುಂಡು, ಮಿಕ್ಕುದನಾಯ್ದುಕೊಂಡಿಪ್ಪ ಕಾರಣ- ಕಾಲ ಮುಟ್ಟಲಮ್ಮದು, ಕಲ್ಪಿತ ತೊಡೆಯಿತ್ತು; ಭವಬಂಧನ ಹಿಂಗಿತ್ತು, ಕರ್ಮನಿರ್ಮಳವಾಯಿತ್ತು. ಅವರ ತೊತ್ತಿನ ತೊತ್ತಿನ ಪಡಿದೊತ್ತಿನ ಮಗನೆಂದು ಕೂಡಲಸಂಗಮದೇವನು ಇತ್ತ ಬಾ ಎಂದೆತ್ತಿಕೊಂಡನು. ೨೭೪ ಜನ್ಮ ಜನ್ಮಕ್ಕೆ ಹೋಗಲೀಯದೆ, "ಸೋಹಂ" ಎಂದೆನಿಸದೆ, 'ದಾಸೋಹಂ' ಎಂದೆನಿಸಯ್ಯ. ಲಿಂಗಜಂಗಮದ ಪ್ರಸಾದವ ತೋರಿ ಬದುಕಿಸಯ್ಯ ಕೂಡಲಸಂಗಮದೇವ. ೨೭೫. ಕರ್ತರು ನಿಮ್ಮ ಗಣಂಗಳು, ಎನ್ನ ತೊತ್ತ ಮಾಡಿ ಸಲಹಿದ ಸುಖವು ಸಾಲೋಕ್ಯ, ಸಾಮೀಪ್ಯ, ಸಾರೂಪ್ಯ, ಸಾಯುಜ್ಯದುಂತುಟಲ್ಲ ಕೇಳಿರಯ್ಯ, ಕೂಡಲಸಂಗನ ಶರಣರು ತಮ್ಮ ಒಕ್ಕುದನಿಕ್ಕಿ ಸಲಹಿದ ಸುಖವು. ೨೭೬. ತೊತ್ತಿಂಗೆ ಬಲ್ಲಹನೊಲಿದರೆ ಪದವಿಯನೀಯದೆ ಮಾಬನೆ ? ಅಯ್ಯ, ಜೇಡರ ದಾಸಯ್ಯಂಗೊಲಿದಾತ ಮತ್ತೊಬ್ಬ ದೇವನೆ ? ಅಯ್ಯ, ಮಾದರ ಚೆನ್ನಯ್ಯಂಗೆ ಡೋಹರಕಕ್ಕಯ್ಯಂಗೆ, ತೆಲುಗ ಜೊಮ್ಮಯ್ಯಂಗೆ ಒಲಿದಾತ ಮತ್ತೊಬ್ಬ ದೇವನೆ ? ಅಯ್ಯ, ಎನ್ನ ಮನದ ಪಂಚೇಂದ್ರಿಯ ನಿಮ್ಮತ್ತಲ

ಬಸವಣ್ಣನ ವಚನಗಳು - 261 ರಿಂದ 270 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೬೧. ಓಡುವಾತ ಲೆಂಕನಲ್ಲ, ಬೇಡುವಾತ ಭಕ್ತನಲ್ಲ! ಓಡಲಾಗದು ಲೆಂಕನು ಬೇಡಲಾಗದು ಭಕ್ತನು! ಓಡೆನಯ್ಯ, ಬೇಡೆನಯ್ಯ ಕೂಡಲಸಂಗಮದೇವ. ೨೬೨. ಎಲ್ಲಿ ನೋಡಿರಲ್ಲಿ ಮನವೆಳಸಿದರೆ ಆಣೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ! ಪರವಧುವನು ಮಾದೇವಿಯೆಂದೇ ಕಾಬೆ ಕೂಡಲಸಂಗಮದೇವ. ೨೬೩. ಹರಿವ ಹಾವಿಂಗಂಜೆ, ಉರಿಯ ನಾಲಗೆಗಂಜೆ! ಸುರಗಿಯ ಮೊನೆಗಂಜೆ! ಒಂದಕ್ಕಂಜುವೆ, ಒಂದಕ್ಕಳುಕುವೆ; ಪರಧನ ಪರಸ್ತ್ರೀಯೆಂಬೀ ಜೂಬಿಂಗಂಜುವೆ! ಮುನ್ನಂಜದ ರಾವಣನೇ ವಿಧಿಯಾದ ಅಂಜುವೆನಯ್ಯ, ಕೂಡಲಸಂಗಮದೇವ! ೨೬೪. ಅಸುರನೈಶ್ವರ್ಯವನೆಣಿಸುವಡೆ- ಸೀತೆಗೆ ಸರಿ-ಮಿಗಿಲೆನಿಸುವ ಸತಿಯರುಂಟು ಕೋಟಿ! ಮತಿವಂತ ಶಿರಃಪ್ರಧಾನರೆಂಟು ಕೋಟಿ! ಲೆಕ್ಕವಿಲ್ಲದ ದಳವು! ಲಕ್ಷ ಕುಮಾರರು! ದಿಕ್ಪಾಲಕರವನ ಮನೆಯ ಬಂಧನದಲಿಪ್ಪರು ಸುರಸತಿಯರನೆಲ್ಲರನಾತ ಸೆರೆಮಾಡಿಯಾಳಿದ! ಶಿವನೇ ನೀ ಕರುಣಿಸಿದಂತಿರದೆ ಪರವಧುವಿನ ಬೇಟವವನ ಪ್ರಾಣವ ಕೊಂಡಿತ್ತು. ಇದನರಿತು ಪರವಧುವಿಗೆಳಸುವವರ ಕಂಡು ಗರುಡ ಕಂಡ ಸರ್ಪ ಧರೆಗಿಳಿವಂತೆ ಅಡಗಿಪ್ಪೆನಯ್ಯ ಕೂಡಲಸಂಗಮದೇವ. ೨೬೫. ಒಂದಕೊಂಬತ್ತ ನುಡಿದು ಕಣ್ಣ ಕೆಚ್ಚನೆ ಮಾಡಿ, ಗಂಡುಗೆದರಿ ಮುಡುಹಿಕ್ಕಿ ಕೆಲೆವರ ಕಂಡ

ಬಸವಣ್ಣನ ವಚನಗಳು - 251 ರಿಂದ 260 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೫೧. ಆರಾಧನೆಯ ಮಾಡಿದರೆ ಅಮೃತದ ಬೆಳಸು. ವಿರೋಧಿಸಿದರೆ ವಿಷದ ಬೆಳಸು. ಇದು ಕಾರಣ, ಲಿಂಗ ಜಂಗಮಕ್ಕಂಜಲೇಬೇಕು. ಸ್ಥಾವರ-ಜಂಗಮ ಒಂದೆಂದರಿದರೆ ಕೂಡಲಸಂಗಮದೇವ ಶರಣಾಸನ್ನಿಹಿತನು. ೨೫೨. ಜಂಗಮ ನಿಂದೆಯ ಮಾಡಿ, ಲಿಂಗವ ಪೂಜಿಸುವ ಭಕ್ತನ ಅಂಘವಣೆ ಎಂತೋ ? ಶಿವಶಿವ, ನಿಂದಿಸುವ ಪೂಜಿಸುವ ಪಾತಕವಿದ ಕೇಳಲಾಗದು! "ಗುರುವಿನ ಗುರು ಜಂಗಮ" ಇಂತೆಂದುದು ಕೂಡಲಸಂಗನ ವಚನ. ೨೫೩. ಅರಸರ ಕಂಡು ತನ್ನ ಪುರುಷನ ಮರೆತರೆ ಮರನೇರಿ ಕಯ್ಯ ಬಿಟ್ಟಂತಾದೆನಯ್ಯ! ಇಹಲೋಕಕ್ಕೆ ದೂರ, ಪರಲೋಕಕ್ಕೆ ದೂರ ನಮ್ಮ ಕೂಡಲಸಂಗಮದೇವಯ್ಯ ಜಂಗಮಮುಖಲಿಂಗವಾದ ಕಾರಣ. ೨೫೪. ಲಿಂಗದಲ್ಲಿ ದಿಟವನರಸುವಡೆ ಜಂಗಮವ ನೆರೆ ನಂಬುವುದು. ನಡೆ ಲಿಂಗ, ನುಡಿ ಲಿಂಗ ಮುಖ ಲಿಂಗವೆಂದೆ ನಂಬೊ. ಯತ್ರ ಮಾಹೇಶ್ವರಸ್ತತ್ರಾಸನ್ನಹಿತನಾಗಿ, ಅಧರ ತಾಗಿದ ರುಚಿಯನು ಉದರ ತಾಗಿದ ಸುಖವ ಉಂಬ-ಉಡುವ ಕೂಡಲಸಂಗಮದೇವ ಜಂಗಮಮುಖದಲ್ಲಿ. ೨೫೫. ಎಂಬತ್ತುನಾಲ್ಕುಲಕ್ಷ ಮುಖದೊಳಗೊಂದೇ ಮುಖವಾಗಿ ಕಾಡಿ ನೋಡೆನ್ನನು, ಬೇಡಿ ನೋಡೆನ್ನನು ಬೇಡದಿದ್ದರೆ, ಅಯ್ಯ, ನಿಮಗೆ ಪ್ರಮಥರಾಣೆ! ನೀನಾವ ಮುಖದಲ್ಲಿ ಬಂದು ಬೇಡಿದರೀವೆನು ಕೂಡಲಸಂಗಮದ

ಬಸವಣ್ಣನ ವಚನಗಳು - 241 ರಿಂದ 250 ರವರೆಗೆ

೨೪೧. ಭಿತ್ತಿಯಿಲ್ಲದೆ ಬರೆಯಬಹುದೆ ಚಿತ್ತಾರವ ? ಬಿತ್ತಿ ಬೆಳೆಯಬಹುದೆ ಧರೆಯಿಲ್ಲದೆ ? ಜಂಗಮವಿಲ್ಲದೆ ಮಾಡಬಹುದೆ, ರೂಢೀಶನ ಭೇದಿಸಬಹುದೆ ? ಒಡಲಿಲ್ಲದ ನಿರಾಳಕರ್ತೃ ಕೂಡಲಸಂಗಮದೇವ ಜಂಗಮಮುಖಲಿಂಗವಾದನಾಗಿ ಮತ್ತೊಂದನರಿಯೆನಯ್ಯ. ೨೪೨. ಕೆಂಡದಲ್ಲಿಟ್ಟರೆ ಕೈ ಬೆಂದುದೆಂಬರು; ಕೊಂಡಿಟ್ಟವನ ಕೈ ಮುನ್ನವೇ ಬೆಂದುದು! ನೊಂದೆ ನಾನು ನೊಂದೆನಯ್ಯ. ಬೆಂದೆ ನಾನು ಬೆಂದೆನಯ್ಯ. ಕೂಡಲಸಂಗನ ಶರಣರ ಕಂಡು ಕಾಣದಂತಿದ್ದರೆ ಅಂದೇ ಬೆಂದೆನಯ್ಯ. ೨೪೩. ಲಾಂಛನವ ಕಂಡು ನಂಬುವೆ, ಅವರಂತರಂಗವ ನೀವೇ ಬಲ್ಲಿರಿ. ತೊತ್ತಿಂಗೆ ತೊತ್ತುಗೆಲಸವಲ್ಲದೆ ಅರಸರ ಸುದ್ದಿ ಎಮಗೇಕಯ್ಯ ? ರತ್ನಮೌಕ್ತಿಕದಚ್ಚು ಕೂಡಲಸಂಗಮದೇವ, ನಿಮ್ಮ ಶರಣರು. ೨೪೪. ಎಡದ ಕೈಯಲ್ಲಿ ನಿಗಳವನಿಕ್ಕಿ, ಬಲದ ಕೈಯ್ಯ ಕಡಿದುಕೊಂಡರೆ, ನೋಯದಿಪ್ಪುದೇ, ಅಯ್ಯ ? ಪ್ರಾಣ ಒಂದಾಗಿ ದೇಹ ಬೇರಿಲ್ಲ. ಲಿಂಗವ ಪೂಜಿಸಿ ಜಂಗಮವನುದಾಸೀನ ಮಾಡಿದರೆ ಬೆಂದೆನಯ್ಯ ನಾನು, ಕೂಡಲಸಂಗಮದೇವ. ೨೪೫. ತನುವ ನೋಯಿಸಿ, ಮನವ ಬಳಲಿಸಿ ನಿಮ್ಮ ಪಾದವಿಡಿದವರೊಳರೆ ? ಈ ನುಡಿ ಸುಡದಿಹುದೆ ? ಕೂಡಲಸಂಗಮದೇವ, ಶಿವಭಕ್ತರ ನೋವೇ ಅದು ಲಿಂಗದ ನೋವು! ೨೪೬. ಕುದುರೆ ಸತ್ತಿಗೆಯವರ ಕಂಡರೆ ಹೊರಳಿಬಿದ್ದು ಕಾಲ ಹಿಡಿವರಯ್ಯ. ಬಡಭಕ್ತರು ಬಂದರೆ, ಎಡೆಯಿಲ್ಲ ಅತ್ತ ಸನ್ನಿ ಎಂಬರು. ಎನ್ನೊಡೆಯ ಕೂಡಲಸಂಗಯ್ಯನವರ ತಡೆಗೆಡಹಿ ಮೂಗ ಕೊಯ್ಯದೆ ಮಾಬನೆ ? ೨೪೭. ಅಡ್ಡದೊಡ್ಡ ನಾನಲ್ಲಯ್ಯ. ದೊಡ್ಡ ಬಸಿರು ಎನಗಿಲ್ಲವಯ್ಯ. ದೊಡ್ಡವರನಲ್ಲದೆ ನಿಮ್ಮ ಶರಣರು ಮನ್ನಿಸರಯ್ಯ. ಹ

ಬಸವಣ್ಣನ ವಚನಗಳು - 231 ರಿಂದ 240 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೩೧. ಸಾಸವೆಯ ಮೇಲೆ ಸಾಗರವರಿದಂತಾಯಿತಯ್ಯ! ಆನಂದದಿಂದ ನಲಿನಲಿದಾಡುವೆನು. ಆನಂದದಿಂದ ಕುಣಿಕುಣಿದಾಡುವೆನು. ಕೂಡಲಸಂಗನ ಶರಣರು ಬಂದರೆ ಉಬ್ಬಿಕೊಬ್ಬಿ ಹರುಷದಲೋಲಾಡುವೆನು. ೨೩೨. ಎಳ್ಳಿಲ್ಲದ ಗಾಣವನಾಡಿದ ಎತ್ತಿನಂತಾಯಿತ್ತೆನ್ನ ಭಕ್ತಿ! ಉಪ್ಪ ಅಪ್ಪುವಿನಲ್ಲಿ ಅದ್ದಿ ಮೆಲಿದಂತಾಯಿತ್ತೆನ್ನ ಭಕ್ತಿ! ಕೂಡಲಸಂಗಮದೇವ, ಅನು ಮಾಡಿದೆನೆಂಬೀ ಕಿಚ್ಚು ಸಾಲದೆ ? ೨೩೩. ಧ್ಯಾನಮೌನವೆಂಬ ಶಸ್ತ್ರವ ಹಿಡಿಯಲಾರದೆ ಅಹಂಕಾರಧಾರೆಯ ಮೊನೆಯಲಗೆಂಬ ಶಸ್ತ್ರವ ಹಿಡಿದು ಕೆಟ್ಟೆನಯ್ಯ! ಅಂಜುವೆನಂಜುವೆನಯ್ಯ! ಜಂಗಮ-ಲಿಂಗವೆಂಬ ಭಾಷೆ ಪಲ್ಲಟವಾಯಿತ್ತು! ಇನ್ನು-ಜಂಗಮಲಿಂಗವೆಂಬ ಶಿಕ್ಷಾಶಸ್ತ್ರದಲ್ಲಿ, ಎನ್ನ ಹೊಯ್ದು ಬಯ್ದು ರಕ್ಷಿಸುವುದು ಕೂಡಲಸಂಗಮದೇವ! ೨೩೪. ಎನ್ನಲ್ಲಿ ಭಕ್ತಿ ಸಾಸವೆಯ ಷಡ್ಭಾಗದಿನಿತಿಲ್ಲ; ಎನ್ನ ಭಕ್ತನೆಂಬರು; ಎನ್ನ ಸಮಯಾಚಾರಿ ಎಂದೆಂಬರು. ನಾನೇನು ಪಾಪವ ಮಾಡಿದೆನೋ! ಬೆಳೆಯದ ಮುನ್ನವೇ ಮೊಳೆಯ ಕೊಯ್ವರೆ ಹೇಳಯ್ಯ ? ಇರಿಯದ ವೀರ ಇಲ್ಲದ ಸೊಬಗುವ ಎಲ್ಲ ಒಡೆಯರು ಏರಿಸಿ ನುಡಿವರು! ಎನಗಿದು ವಿಧಿಯೇ ಕೂಡಲಸಂಗಮದೇವ ? ೨೩೫. ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ ಹೊಗಳ

ಬಸವಣ್ಣನ ವಚನಗಳು - 221 ರಿಂದ 230 ರವರೆಗೆ

೨೨೧. ಮೇಲಾಗಲೊಲ್ಲೆ ಕೀಳಾಗಲೊಲ್ಲದೆ! ಕೀಳಿಂಗಲ್ಲದೆ ಹಯನು ಕರೆವುದೆ ? ಮೇಲಾಗಿ ನರಕದಲೋಲಾಡಲಾರೆನು! ನಿಮ್ಮ ಶರಣರ ಪಾದಕ್ಕೆ ಕೀಳಾಗಿರಿಸು ಮಹಾದಾನಿ ಕೂಡಲಸಂಗಮದೇವ. ೨೨೨. ಕಾಗೆ ವಿಷ್ಟಿಸುವ ಹೊನ್ನಕಳಶವಹುದರಿಂದ, ಒಡೆಯರು ಜೋಗೈಸುವ ಚಮ್ಮಾವುಗೆಯ ಮಾಡಯ್ಯ. ಅಯ್ಯ, ನಿಮ್ಮ ಶರಣರ ಪಾದಕ್ಕೆ ಚಮ್ಮಾವುಗೆಯ ಮಾಡಯ್ಯ. "ಕರ್ಮಾವಲಂಬಿನಃ ಕೇಚಿತ್ ಕೇಚಿತ್ ಜ್ಞಾನಾವಲಂಬಿನಃ ವಯಂತು ಶಿವಭಕ್ತಾನಾಂ ಪಾದರಕ್ಷಾವಲಂಬಿನಃ" ಕೂಡಲಸಂಗಮದೇವ ನಿಮ್ಮ ಸೆರಗೊಡ್ಡಿ ಬೇಡುವೆನು ಇದೊಂದೇ ವರವ ಕರುಣಿಸಯ್ಯ. ೨೨೩. ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ, ಅಂಬುಜಕ್ಕೆ ಭಾನುವಿನ ಉದಯದ ಚಿಂತೆ. ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ. ಎನಗೆ ನಮ್ಮ ಕೂಡಲಸಂಗಮದೇವರ ನೆನೆವುದೇ ಚಿಂತೆ! ೨೨೪. ಹೊಲಬುಗೆಟ್ಟ ಶಿಶು ತನ್ನ ತಾಯನರಸುವಂತೆ, ಬಳಿದಪ್ಪಿದ ಪಶು ತನ್ನ ಹಿಂಡನರಸುವಂತೆ, ಬಯಸುತ್ತಿದ್ದೆನಯ್ಯ ನಿಮ್ಮ ಭಕ್ತರ ಬರವನು! ಬಯಸುತ್ತಿದ್ದೆನಯ್ಯ ನಿಮ್ಮ ಶರಣರ ಬರವನು! ದಿನಕರನುದಯಕ್ಕೆ ಕಮಳ ವಿಕಸಿತವಾದಂತೆ ಎನಗೆ ನಿಮ್ಮ ಶರಣರ ಬರವು ಕೂಡಲಸಂಗಮದೇವ. ೨೨೫. ಸೂರ್ಯನುದಯ ತಾವರೆಗೆ ಜೀವಾಳ! ಚಂದ್ರಮನುದಯ ನೈದಿಲೆಗೆ ಜೀವಾಳ! ಕೂಪರ ಠಾವಿನಲ್ಲಿ ಕೂಟ-ಜೀವಾಳವಯ್ಯ. ಒಲಿದ ಠಾವಿನಲ್ಲಿ ನೋಟ-ಜೀವಾಳವಯ್ಯ. ಕೂಡಲಸಂಗನ ಶರಣರ ಬರವೆನಗೆ ಪ್ರಾಣ-ಜೀವಾಳವಯ್ಯ. ೨೨೬. ಕಂಡರೆ ಮನೋಹರವಯ್ಯ, ಕಾಣದಿದ್ದರೆ ಅವಸ್ಥೆ ನೋಡಯ್ಯ. ಹಗಲು ಇರುಳಹುದು; ಇರುಳು ಹಗಲಹುದು. ಇರುಳು ಹಗಲೊಂದು ಜುಗ ಮೇಲೆ ಕೆಡೆದಂ

ಬಸವಣ್ಣನ ವಚನಗಳು - 211 ರಿಂದ 220 ರವರೆಗೆ

೨೧೧. ಮಾವಿನ ಕಾಯೊಳಗೊಂದು ಎಕ್ಕೆಯ ಕಾಯಿ ನಾನಯ್ಯ! ನಾನು ಭಕ್ತನೆಂತೆಂಬೆ ನಿಮ್ಮ ಶರಣರ ಮುಂದೆ ನಾಚಿಕೆಯಿಲ್ಲದೆ ? ಕೂಡಲಸಂಗನ ಶರಣರ ಮುಂದೆ ನಾನೆಂತು ಭಕ್ತನಪ್ಪೆನಯ್ಯ ?! ೨೧೨. ಮರದ ನೆಳಲಲ್ಲಿದ್ದು ತನ್ನ ನೆಳಲನರಸುವರೆ ? ನಿಮ್ಮ ಶರಣರ ಮುಂದೆ ನಾನೇತರ ಭಕ್ತನಯ್ಯ! ನಿಮ್ಮ ಶರಣರ ಮುಂದೆ ನಾನೇತರ ಯುಕ್ತನಯ್ಯ! ನಾನು ಭಕ್ತನೆಂಬ ನುಡಿ ಸುಡದೆ ಕೂಡಲಸಂಗಮದೇವ. ೨೧೩. ಎನಗಿಂತ ಕಿರಿಯರಿಲ್ಲ! ಶಿವಭಕ್ತರಿಗಿಂತ ಹಿರಿಯರಿಲ್ಲ. ನಿಮ್ಮ ಪಾದ ಸಾಕ್ಷಿ ಎನ್ನ ಮನ ಸಾಕ್ಷಿ! ಕೂಡಲಸಂಗಮದೇವಾ ಎನಗಿದೇ ದಿಬ್ಯ. ೨೧೪. ಅರ್ಚಿಸಲರಿಯೆ, ಪೂಜಿಸಲರಿಯೆ, ನಿಚ್ಚ ನಿಚ್ಚ ಶಿವರಾತ್ರಿಯ ನಾ ಮಾಡಲರಿಯೆ! ಕಪ್ಪಡಿವೇಷದಿಂದಾನು ಬಂದಾಡುವೆ. ಕಪ್ಪಡಿವೇಷದಿಂದ, ಈಶ, ನಿಮ್ಮ ದಾಸರ ದಾಸಿಯ ದಾಸ ನಾನಯ್ಯ. ನಿಮ್ಮ ವೇಷಧಾರಿಯ ಮನೆಯ ಪಂಗುಳ ನಾನಯ್ಯ. ಕೂಡಲಸಂಗಮದೇವ, ನಿಮ್ಮ ಲಾಂಛನವ ಧರಿಸಿಪ್ಪ ಉದರಪೋಷಕ ನಾನಯ್ಯ. ೨೧೫. ಅಪ್ಪನು ಡೋಹರ ಕಕ್ಕಯ್ಯನಾಗಿ, ಮುತ್ತಯ್ಯ ಚೆನ್ನಯ್ಯನಾದರೆ ಆನು ಬದುಕೆನೆ ? ಮತ್ತಾ ಶ್ವಪಚಯ್ಯನ ಸನ್ನಿಧಿಯಿಂದ ಭಕ್ತಿಯ ಸದ್ಗುಣವ ನಾನರಿಯೆನೆ ? ಕಷ್ಟಜಾತಿಜನ್ಮದಲ್ಲಿ ಜನಿಯಿಸಿದೆ ಎನ್ನ, ಎನಗಿದು ವಿಧಿಯೇ ಕೂಡಲಸಂಗಮದೇವ ? ೨೧೬. ಉತ್ತಮ ಕುಲದಲ್ಲಿ ಹುಟ್ಟಿದೆನೆಂಬ ಕಷ್ಟತನದ ಹೊರೆಯ ಹೊರಿಸಿದಿರಯ್ಯ! ಕಕ್ಕಯನೊಕ್ಕುದನಿಕ್ಕ ನೋಡಯ್ಯ, ದಾಸಯ್ಯ ಶಿವದಾನವನೆರೆಯ ನೋಡಯ್ಯ. ಮನ್ನಣೆಯ ಚೆನ್ನಯ್ಯನೆನ್ನುವ ಮನ್ನಿಸ. ಉನ್ನತಮಹಿಮ ಕೂಡಲಸಂಗಮದೇವಾ ಶಿವಧೋ! ಶಿವಧೋ!! ೨೧೭. ಸೆಟ್

ಬಸವಣ್ಣನ ವಚನಗಳು - 201 ರಿಂದ 210 ರವರೆಗೆ

೨೦೧. ಊರ ಸೀರೆಗೆ ಅಸಗ ಬಡಿವಡೆದಂತೆ ಹೊನ್ನೆನ್ನದು, ಹೆಣ್ಣೆನ್ನದು, ಮಣ್ಣೆನ್ನದು, ಎಂದು ಮರುಳಾದೆ. ನಿಮ್ಮನರಿಯದ ಕಾರಣ, ಕೆಮ್ಮನೆ ಕೆಟ್ಟೆ ಕೂಡಲಸಂಗಮದೇವ. ೨೦೨. ಕಾಂಚನವೆಂಬ ನಾಯ ನೆಚ್ಚಿ ನಿಮ್ಮ ನಾನು ಮರೆದೆನಯ್ಯ. ಕಾಂಚನಕ್ಕೆ ವೇಳೆಯಲ್ಲದೆ, ಲಿಂಗಕ್ಕೆ ವೇಳೆಯಿಲ್ಲ! ಹಡಕಿಗೆ ಮೆಚ್ಚಿದ ಸೊಣಗನಮೃತದ ರುಚಿಯ ಬಲ್ಲುದೇ ? ಕೂಡಲಸಂಗಮದೇವ. ೨೦೩. ಹಗೆಹದಲ್ಲಿ ಬಿದ್ದವರ ಮೇಲೆ ಒರಳ ನೂಂಕುವರೆ ? ಕೋಳದ ಮೇಲೆ ಸಂಕಲೆಯನಿಕ್ಕುವರೆ ? ಬೆಂದ ಹುಣ್ಣ ಕಂಬಿಯಲ್ಲಿ ಕೀಸುವರೆ ? ಕೂಡಲಸಂಗಯ್ಯ ಕಾಡುವ ಕಾಟ ಸಿರಿಯಾಳಂಗಲ್ಲದೆ ಸೈರಿಸಬಹುದೆ ? ೨೦೪. ಮಾತಿನಲ್ಲಿ ಶ್ರೋತ್ರಸುಖವ ನುಡಿಯಬಹುದಲ್ಲದೆ, ಮಾಡುವ ಸತ್ಕ್ರಿಯೆಯಿಂದ ಭಕ್ತನೆನಿಸಲು ಬಾರದು. ಅರ್ಥಪ್ರಾಣಾಭಿಮಾನವಾರಿಗೆಯು ಸಮನಿಸದು, ಲಿಂಗಮುಖದಲುದಯವಾದ ಶರಣಂಗಲ್ಲದೆ, ಅಯ್ಯ, ಕೂಡಲಸಂಗನ ಶರಣರ ಭಕ್ತಿಭಂಡಾರವು ಎನಗೆಂತು ಸಾಧ್ಯವಪ್ಪುದು, ಹೇಳೆನ್ನ ತಂದೆ. ೨೦೫. ಬಾಣಮಯೂರರಂತೆ ಬಣ್ಣಿಸಲರಿಯೆ ಸಿರಿಯಾಳನಂತೆ ಉಣಲಿಕ್ಕಲರಿಯೆ ದಾಸಿಮಯ್ಯನಂತೆ ಉಡಕೊಡಲರಿಯೆ ಉಂಡುಟ್ಟು ಕೊಟ್ಟರೆ ಮುಯ್ಯಿಗೆ ಮುಯ್ಯೆನಿಸಿತ್ತು, ಎನಗೆ ಕೊಟ್ಟರೆ ಧರ್ಮ ಕೂಡಲಸಂಗಮದೇವ. ೨೦೬. ಎನ್ನ ತಪ್ಪನಂತಕೋಟಿ ನಿಮ್ಮ ಸೈರಣೆಗೆ ಲೆಕ್ಕವಿಲ್ಲಯ್ಯ. ಇನ್ನು ತಪ್ಪಿದೆನಾದರೆ ನಿಮ್ಮ ಪಾದವೇ ದಿವ್ಯ ಕೂಡಲಸಂಗಮದೇವಯ್ಯ, ನಿಮ್ಮ ಪ್ರಮಥರ ಮುಂದೆ ಕಿನ್ನರಿ ಬೊಮ್ಮಣ್ಣನೇ ಸಾಕ್ಷಿ! ೨೦೭. ಅಡಿಗಡಿಗೆ ಎನ್ನ ಮನವ ಜಡಿದು ನೋಡ