Skip to main content

Posts

Showing posts from February, 2011

ಅಕ್ಕನ ವಚನಗಳು - 21 ರಿಂದ 30 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೧. ಅಲ್ಲೆಂದೊಡೆ ಉಂಟೆಂಬುದೀ ಮಾಯೇ, ಒಲ್ಲೆನೆಂದೆಡೆ ಬಿಡದೀ ಮಾಯೇ, ಎನಗಿದು ವಿಧಿಯೇ? ಚೆನ್ನಮಲ್ಲಿಕಾರ್ಜುನಯ್ಯ, ಒಪ್ಪಿ ಮರೆವೊಕ್ಕೊಡೆ ಮತ್ತುಂಟೆ ಕಾಯಯ್ಯ ಶಿವಧೋ! ೨೨. ಕಾಯ ಮೀಸಲಾಗಿ ನಿನಗರ್ಪಿತವಾಯಿತ್ತು ಕರಣ ಮೀಸಲಾಗಿ ನಿನಗರ್ಪಿತವಾಯಿತ್ತು, ಆನೊಂದರಿಯೆನಯ್ಯ ಎನ್ನ ಗತಿ ನೀನಾಗಿ, ಎನ್ನ ಮತಿ ನೀನಾಗಿ, ಪ್ರಾಣ ನಿನಗರ್ಪಿತವಾಯಿತ್ತು, ನೀನಲ್ಲದೆ ಪೆರತೊಂದ ನೆನೆದರೆ ಆಣೆ ನಿಮ್ಮಾಣೆ ಚೆನ್ನಮಲ್ಲಿಕಾರ್ಜುನ ೨೩. ಹಿಂದಣ ಹಳ್ಳ, ಮುಂದಣ ತೊರೆ, ಸಲ್ಲುವ ಪರಿಯೆಂತು ಹೇಳಾ! ಹಿಂದಣ ಕೆರೆ, ಮುಂದಣ ಬಲೆ ಹದುಳವಿನ್ನೆಲ್ಲಿಯದು ಹೇಳಾ ನೀನಿಕ್ಕಿದ ಮಾಯೆ ಕೊಲುತಿಪ್ಪುದು ಕಾಯಯ್ಯ ಕಾಯಯ್ಯ ಚೆನ್ನಮಲ್ಲಿಕಾರ್ಜುನ ೨೪. ಭವಭವದಲಿ ತೊಳಲಿ ಬಳಲಿತ್ತೆನ್ನ ಮನ ಆನೇವೆನಯ್ಯ, ಹಸಿದುಂಡೊಡೆ, ಉಂಡು ಹಸಿವಾಯಿತ್ತು ಇಂದು ನೀನೊಲಿದೆಯಾಗಿ ಎನಗೆ ಅಮೃತದ ಆಪ್ಯಾಯನವಾಯಿತ್ತು ಇದು ಕಾರಣ ನೀನಿಕ್ಕಿದ ಮಾಯೆಯನಿನ್ನು ಮೆಟ್ಟಿದೆನಾದೊಡೆ ಆಣೆ ನಿಮ್ಮಾಣೆ ಚೆನ್ನಮಲ್ಲಿಕಾರ್ಜುನ ೨೫. ಹರಿಯ ನುಂಗಿತ್ತು ಮಾಯೆ! ಅಜನ ನುಂಗಿತ್ತು ಮಾಯೆ! ಇಂದ್ರನ ನುಂಗಿತ್ತು ಮಾಯೆ! ಚಂದ್ರನ ನುಂಗಿತ್ತು ಮಾಯೆ!

ಅಕ್ಕನ ವಚನಗಳು - 11 ರಿಂದ 20 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೧೧. ನೀರಕ್ಷೀರದಂತೆ ನೀನಿಪ್ಪೆಯಾಗಿ ಆವುದು ಮುಂದು, ಆವುದು ಹಿಂದು ಎಂದರಿಯೆನು ಆವುದು ಕರ್ತೃ, ಆವುದು ಭೃತ್ಯನೆಂದರಿಯೆನು ಆವುದು ಘನ, ಆವುದು ಕಿರಿದೆಂದರಿಯೆನು ಚೆನ್ನಮಲ್ಲಿಕಾರ್ಜುನಯ್ಯ, ನಿನ್ನನೊಲಿದು ಕೊಂಡಾಡಿದರೆ ಇರುಹೆ ರುದ್ರನಾಗದೆ ಹೇಳಯ್ಯ ೧೨. ಎನ್ನ ಕಾಯ ಮಣ್ಣು, ಜೀವ ಬಯಲು ಆವುದ ಹಿಡಿವೆನಯ್ಯ ದೇವ? ನಿಮ್ಮನಾವ ಪರಿಯಲ್ಲಿ ನೆನೆವೆನಯ್ಯ? ಎನ್ನ ಮಾಯವನು ಮಾಣಿಸಯ್ಯ ಚೆನ್ನಮಲ್ಲಿಕಾರ್ಜುನಯ್ಯ ೧೩. ಆವಾಗಳೂ ನನ್ನ ಮನ ಉದರಕ್ಕೆ ಹರಿವುದು ಕಾಣಲಾರೆನಯ್ಯ ನಿಮ್ಮುವನು ಭೇದಿಸಲಾರೆನಯ್ಯ ನಿಮ್ಮ ಮಾಯೆಯನು ಮಾಯದ ಸಂಸಾರದಲ್ಲಿ ಸಿಲುಕಿದೆನು ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಹೊದ್ದುವಂತೆ ಮಾಡಾ ನಿಮ್ಮ ಧರ್ಮ ೧೪. ಕಲ್ಲ ಹೊಕ್ಕರೆ ಕಲ್ಲ ಬಿರಿಸಿದೆ ಗಿರಿಯ ಹೊಕ್ಕರೆ ಗಿರಿಯ ಬಿರಿಸಿದೆ ಭಾಪು ಸಂಸಾರವೇ, ಬೆನ್ನಿಂದ ಬೆನ್ನ ಹತ್ತಿ ಬಂದೆ ಚೆನ್ನಮಲ್ಲಿಕಾರ್ಜುನಯ್ಯ, ಇನ್ನೇವೆನಿನ್ನೇವೆ!? ೧೫. ಸಂಸಾರವೆಂಬ ಹಗೆಯಯ್ಯ, ತಂದೆ, ಎನ್ನ ವಂಶವಂಶ ತಪ್ಪದೆ ಅರಸಿಕೊಂಡು ಬರುತ್ತಿದೆಯಯ್ಯ ಎನ್ನುವನರಸಿಯರಸಿ ಹಿಡಿದು ಕೊಲ್ಲುತ್ತಿದೆಯಯ್ಯ ನಿಮ್ಮ ಮರೆವೊಕ್ಕೆ ಕಾಯಯ್

ಅಕ್ಕನ ವಚನಗಳು - 1 ರಿಂದ 10 ರವರೆಗೆ

೧. ಅಘಟಿತ-ಘಟಿತನ ಒಲವಿನ ಶಿಶು ಕಟ್ಟಿದೆನು ಜಗಕ್ಕೆ ಬಿರುದನು ಕಾಮ-ಕ್ರೋಧ-ಲೋಭ-ಮೋಹ-ಮದ-ಮತ್ಸರಂಗಳಿಗೆ ಇಕ್ಕಿದೆನು ಕಾಲಲ್ಲಿ ತೊಡರನು ಗುರುಕೃಪೆಯೆಂಬ ತಿಗುರನಿಕ್ಕಿ ಮಹಾಶರಣೆಂಬ ತಿಲಕವನಿಕ್ಕಿ ಶಿವಶರಣೆಂಬ ಅಲಗ ಕೊಂಡು ನಿನ್ನ ಕೊಲುವೆ ಗೆಲುವೆ! ಬಿಡು ಬಿಡು ಕರ್ಮವೇ, ನಿನ್ನ ಕೊಲ್ಲದೇ ಮಾಣೆನು!! ಕಡೆಹಿಸಿಕೊಳ್ಪದೆನ್ನ ನುಡಿಯ ಕೇಳಾ- ಕೆಡದ ಶಿವಶರಣೆಂಬ ಅಲಗನೆ ಕೊಂಡು ನಿನ್ನ ಕೊಲುವೆ ಗೆಲುವೆ ನಾನು! ಬ್ರಹ್ಮಪಾಶವೆಂಬ ಕಳನನೆ ಸವರಿ ವಿಷ್ಣುಮಾಯೆಯೆಂಬ ಎಡಗೋಲ ನೂಕಿ ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿಕಾಡುವೆ ನಾನು. ೨. ನೆಲದ ಮರೆಯ ನಿಧಾನದಂತೆ ಫಲದ ಮರೆಯ ರುಚಿಯಂತೆ ಶಿಲೆಯ ಮರೆಯ ಹೇಮದಂತೆ ತಿಲದ ಮರೆಯ ತೈಲದಂತೆ ಮರದ ಮರೆಯ ತೇಜಿದಂತೆ ಭಾವದ ಮರೆಯ ಬ್ರಹ್ಮನಾಗಿಪ್ಪ ಚೆನ್ನಮಲ್ಲಿಕಾರ್ಜುನನ ನಿಲವನಾರೂ ಅರಿಯಬಾರದು! ೩. ಈಳೆ-ನಿಂಬೆ-ಮಾವು-ಮಾದಲಕ್ಕೆ ಹುಳಿನೀರೆರೆದವರಾರಯ್ಯ? ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿನೀರೆರೆದವರಾರಯ್ಯ? ಕಳವೆ-ಶಾಲಿಗೆ ಓಗರದ ಉದಕವನೆರೆದವರಾರಯ್ಯ? ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ ಪರಿಮಳದುದಕವನೆರೆದವರಾರಯ್ಯ? ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ! ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ ತನ್ನ ಪರಿ ಬೇರಾಗಿಹ ಹಾಂಗೆ ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು ಹಲವು ಜಗಂಗಳ ಕೂಡಿಕೊಂಡಿದ್ದರೇನು? ತನ್ನ ಪರಿ ಬೇರೆ! ೪. ತನ್ನ ವಿನೋದಕ್ಕೆ ತಾನೇ ಸೃಜಿಸಿದ ಜಗತ್ತ!

ಬಸವಣ್ಣನ ವಚನಗಳು - 491 ರಿಂದ 500 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೯೧. ಅರತುದಯ್ಯ ಅಂಗಗುಣ, ಒರೆತುದಯ್ಯ ಭಕ್ತಿರಸ! ಆವರಿಸಿತಯ್ಯ ಅಂಗ ಲಿಂಗವನು! ಏನೆಂದರಿಯೆನಯ್ಯ ಲೋಕ-ಲೌಕಿಕದ ಮದವ, ಕೂಡಲಸಂಗಮದೇವ, ನಿಮ್ಮ ಕರುಣವೆನ್ನನೆಡೆಗೊಂಡಿತ್ತಾಗಿ! ೪೯೨. ಪೂಜೆಯುಳ್ಳನ್ನಬರ ಲಿಂಗವ ಹಾಡಿದೆ! ಮಾಟವುಳ್ಳನ್ನಬರ ಜಂಗಮವ ಹಾಡಿದೆ! ಜಿಹ್ವೆಯುಳ್ಳನ್ನಬರ ಪ್ರಸಾದವ ಹಾಡಿದೆ! ಈ ತ್ರಿವಿಧ ನಾಸ್ತಿಯಾದ ಬಳಿಕ ಎನ್ನ ನಾ ಹಾಡಿಕೊಂಡೆ ಕಾಣಾ ಕೂಡಲಸಂಗಮದೇವ. ೪೯೩. ಮರಳು ತಲೆ, ಹುರುಳು ತಲೆ ನೀನೇ ದೇವ ಹೆಂಗೂಸು ಗಂಡುಗೂಸೂ ನೀನೇ ದೇವ ಎಮ್ಮಕ್ಕನ ಗಂಡ ನೀನೇ ದೇವ, ಕೂಡಲಸಂಗಮದೇವ, ಭ್ರಾಂತಳಿದು ಭಾವ ನಿಂದುದಾಗಿ. ೪೯೪. ಉಮಾದಿನಾಥರು ಕೋಟಿ, ಪಂಚವಕ್ತ್ರರು ಕೋಟಿ, ನಂದಿವಾಹನರೊಂದು ಕೋಟಿ ನೋಡಯ್ಯ! ಸದಾಶಿವರೊಂದು ಕೋಟಿ ಗಂಗೆವಾಳುಕಸಮಾರುದ್ರರು ಇವರೆಲ್ಲರು ಕೂಡಲಸಂಗನ ಸಾನ್ನಿಧ್ಯರಲ್ಲದೆ ಸಮರಸವೇದ್ಯರೊಬ್ಬರೂ ಇಲ್ಲ! ೪೯೫. ಬಯಲ ರೂಪಮಾಡಬಲ್ಲಾತನೇ ಶರಣನು, ಆ ರೂಪ ಬಯಲಮಾಡಬಲ್ಲಾತನೇ ಲಿಂಗಾನುಭಾವಿ. ಬಯಲ ರೂಪಮಾಡಲರಿಯದಿದ್ದರೆ ಎಂತು ಶರಣನೆಂಬೆ ? ಆ ರೂಪ ಬಯಲ ಮಾಡಲರಿಯದಿದ್ದರೆ ಎಂತು ಲಿಂಗಾನುಭಾವಿಯೆಂಬೆ ? ಈ ಉಭಯವೊಂದಾದರೆ ನಿಮ್ಮಲ್ಲಿ ತೆರ

ಬಸವಣ್ಣನ ವಚನಗಳು - 481 ರಿಂದ 490 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೮೧. ದಿಟ ಮಾಡಿ ಪೂಜಿಸಿದರೆ ಸಟೆ ಮಾಡಿ ಕಳೆವೆ. ಸಟೆ ಮಾಡಿ ಪೂಜಿಸಿದರೆ ದಿಟ ಮಾಡಿ ಕಳೆವೆ. ಏನೆಂಬೆನೆಂತೆಂಬೆ! ಸುಖಕ್ಕೆ ತುಂಬಿದ ದೀವಿಗೆ ಮನೆಯೆಲ್ಲವ ಸುಟ್ಟಂತೆ ಆನು ಮಾಡಿದ ಭಕ್ತಿ ಎನಗಿಂತಾಯಿತ್ತು ಕೂಡಲಸಂಗಮದೇವ. ೪೮೨. ಎಂಬತ್ತೆಂಟು ಪವಾಡವ ಮೆರೆದು ಹಗರಣದ ಚೋಹದಂತಾಯಿತ್ತೆನ್ನ ಭಕ್ತಿ; ತನುವಿನೊಳಗೆ ಮನ ಸಿಲುಕದೆ, ಮನದೊಳಗೆ ತನು ಸಿಲುಕದೆ ತನು ಅಲ್ಲಮನಲ್ಲಿ ಸಿಲುಕಿತ್ತು! ಮನ ಚೆನ್ನಬಸವಣ್ಣನಲ್ಲಿ ಸಿಲುಕಿತ್ತು ನಾನೇತರಲ್ಲಿ ನೆನೆವೆನಯ್ಯ ಕೂಡಲಸಂಗಮದೇವ ? ! ೪೮೩. ಬಸವ ಬಾರಯ್ಯ, ಮರ್ತ್ಯಲೋಕದೊಳಗೆ ಭಕ್ತರುಂಟೆ ಹೇಳಯ್ಯ ? ಮತ್ತಾರು ಇಲ್ಲಯ್ಯ, ಮತ್ತಾರು ಇಲ್ಲಯ್ಯ ! ನಾನೊಬ್ಬನೇ ಭಕ್ತನು, ಮರ್ತ್ಯಲೋಕದೊಳಗಣ ಭಕ್ತರೆಲ್ಲರೂ ಜಂಗಮಲಿಂಗ ನೀನೇ ಅಯ್ಯ ಕೂಡಲಸಂಗಮದೇವ!! ೪೮೪. ಭಕ್ತ, ಮಾಹೇಶ್ವರ, ಪ್ರಸಾದಿ, ಪ್ರಾಣಲಿಂಗ, ಶರಣನೈಕ್ಯನು ಮೆಲ್ಲಮೆಲ್ಲನೆ ಆದೆನೆಂಬನ್ನಬರ, ನಾನು ವಜ್ರದೇಹಿಯೆ ? ನಾನೇನು ಅಮೃತವ ಸೇವಿಸಿದೆನೆ ? ನಾನು ಮರುಜೇವಣಿಯ ಕೊಂಡೆನೆ ? ನುಡಿದ ನುಡಿಯೊಳಗೆ ಷಡುಸ್ಥಲ ಬಂದು ನನ್ನ ಮನವನಿಂಬುಗೊಳದಿದ್ದರೆ ಸುಡುವೆನೀ ತನುವ ಕೂಡಲಸಂಗಮದೇವ

ಬಸವಣ್ಣನ ವಚನಗಳು - 471 ರಿಂದ 480 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೭೧. ಲಗ್ನವೆಲ್ಲಿಯದೋ ವಿಘ್ನವೆಲ್ಲಿಯದೋ ಸಂಗಯ್ಯ ? ದೋಷವೆಲ್ಲಿಯದೋ ದುರಿತವೆಲ್ಲಿಯದೋ ಸಂಗಯ್ಯ ? ನಿಮ್ಮ ಮಾಣದೆ ನೆನೆವಂಗೆ ಭವಕರ್ಮವೆಲ್ಲಿಯದೋ ಕೂಡಲಸಂಗಯ್ಯ! ೪೭೨. ಶರಣ ನಿದ್ರೆಗೈದರೆ ಜಪ ಕಾಣಿರೋ! ಶರಣನೆದ್ದು ಕುಳಿತರೆ ಶಿವರಾತ್ರಿ ಕಾಣಿರೋ! ಶರಣ ನಡೆದುದೇ ಪಾವನ ಕಾಣಿರೋ! ಶರಣ ನುಡಿದುದೇ ಶಿವತತ್ವಕಾಣಿರೋ ಕೂಡಲಸಂಗನ ಶರಣನ ಕಾಯವೇ ಕೈಲಾಸ ಕಾಣಿರೋ! ೪೭೩. ಸಮುದ್ರ ಘನವೆಂಬೆನೆ ? ಧರೆಯ ಮೇಲಡಗಿತ್ತು! ಧರೆ ಘನವೆಂಬೆನೆ ? ನಾಗೇಂದ್ರನ ಫಣಾಮಣಿಯ ಮೇಲಡಗಿತ್ತು! ನಾಗೇಂದ್ರ ಘನವೆಂಬೆನೆ ? ಪಾರ್ವತಿಯ ಕಿರುಗುಣಿಕೆಯ ಮುದ್ರಿಕೆಯಾಯಿತ್ತು! ಅಂಥ ಪಾರ್ವತಿ ಘನವೆಂಬೆನೆ ? ಪರಮೇಶ್ವರನ ಅರ್ಧಾಂಗಿಯಾದಳು! ಅಂಥ ಪರಮೇಶ್ವರ ಘನವೆಂಬೆನೆ ? ನಮ್ಮ ಕೂಡಲಸಂಗನ ಶರಣರ ಮನದ ಕೊನೆಯ ಮೊನೆಯ ಮೇಲಡಗಿದನು! ೪೭೪. ನೆಲನೊಂದೇ ಹೊಲೆಗೇರಿ, ಶಿವಾಲಯಕ್ಕೆ! ಜಲವೊಂದೇ ಶೌಚಾಚಮನಕ್ಕೆ! ಕುಲವೊಂದೇ ತನ್ನ ತಾನರಿದವಂಗೆ! ಫಲವೊಂದೇ ಷಡುದರ್ಶನ ಮುಕ್ತಿಗೆ! ನಿಲವೊಂದೇ, ಕೂಡಲಸಂಗಮದೇವ, ನಿಮ್ಮನರಿದವಂಗೆ. ೪೭೫. ಅಯ್ಯಾ, ಸಜ್ಜನ ಸದ್ಭಕ್ತರ ಸಂಗದಿಂದ ಮಹಾನುಭಾವರ ಕಾಣಬಹುದು! ಮಹಾನು

ಬಸವಣ್ಣನ ವಚನಗಳು - 461 ರಿಂದ 470 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೬೧. ಅಡಿಗಡಿಗೆ ಸ್ಥಾನನಿಧಿ! ಅಡಿಗಡಿಗೆ ದಿವ್ಯಕ್ಷೇತ್ರ! ಅಡಿಗಡಿಗೆ ನಿಧಿಯು ನಿಧಾನ! ನೋಡಾ! ಆತನಿರವೇ ಅವಿಮುಕ್ತ ಕ್ಷೇತ್ರ, ಕೂಡಲಸಂಗನ ಶರಣ ಸ್ವತಂತ್ರನಾಗಿ. ೪೬೨. ಧನದಲ್ಲಿ ಶುಚಿ, ಪ್ರಾಣದಲ್ಲಿ ನಿರ್ಭಯ ಇದಾವಂಗಳವಡುವುದಯ್ಯ ? ನಿಧಾನ ತಪ್ಪಿ ಬಂದರೆ ಒಲ್ಲೆನೆಂಬವರಿಲ್ಲ! ಪ್ರಮಾದವಶ ಬಂದರೆ ಹುಸಿಯೆನೆಂಬವರಿಲ್ಲ! ನಿರಾಶೆ, ನಿರ್ಭಯ, ಕೂಡಲಸಂಗಮದೇವ, ನೀನೊಲಿದ ಶರಣಂಗಲ್ಲದಿಲ್ಲ! ೪೬೩. ಹಲಬರ ನುಂಗಿದ ಹಾವಿಂಗೆ ತಲೆ-ಬಾಲವಿಲ್ಲ ನೋಡಾ! ಕೊಲುವುದು ತ್ರೈಜಗವೆಲ್ಲವ! ತನಗೆ ಬೇರೆ ಪ್ರಳಯವಿಲ್ಲ!! ನಾಕಡಿಯನೆಯ್ದದು, ಲೋಕದ ಕಡೆಯನೇ ಕಾಬುದು! ಸೂಕ್ಷ್ಮಪಥದಲ್ಲಿ ನಡೆವುದು, ತನಗೆ ಬೇರೊಡಲಿಲ್ಲ! ಅಹಂಕಾರವೆಂಬ ಗಾರುಡಿಗನ ನುಂಗಿತ್ತು ಕೂಡಲಸಂಗನ ಶರಣರಲ್ಲದುಳಿದವರ. ೪೬೪. ಉಂಬ ಬಟ್ಟಲು ಬೇರೆ ಕಂಚಲ್ಲ! ನೋಡುವ ದರ್ಪಣ ಬೇರೆ ಕಂಚಲ್ಲ! ಭಾಂಡ, ಭಾಜನ ಒಂದೆ! ಬೆಳಗೆ ಕನ್ನಡಿಯೆನಿಸಿತ್ತಯ್ಯ! ಅರಿದರೆ ಶರಣನು, ಮರೆದರೆ ಮಾನವನು! ಮರೆಯದೆ ಪೂಜಿಸು ಕೂಡಲಸಂಗನ. ೪೬೫. ಕೆರೆ ಹಳ್ಳ ಭಾವಿಗಳು ಮೈದೆಗೆದರೆ ಗುಳ್ಳೆ, ಗೊರಚೆ, ಚಿಪ್ಪು ಕಾಣಬಹವು! ವಾರಿಧಿ ಮೈದೆಗೆದರೆ ರತ

ಬಸವಣ್ಣನ ವಚನಗಳು - 451 ರಿಂದ 460 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೫೧. ಭೂತ ಒಲಿದು ಆತ್ಮನ ಸೋಂಕಿದ ಬಳಿಕ ಭೂತದ ಗುಣವಲ್ಲದೆ, ಆತ್ಮನ ಗುಣವುಂಟೆ ? ಗುರುಕಾರುಣ್ಯವಾಗಿ, ಹಸ್ತಮಸ್ತಕಸಂಯೋಗವಾದ ಬಳಿಕ ಗುರುಲಿಂಗಜಂಗಮವೇ ಗತಿಯಾಗಿದ್ದೆ ಕೂಡಲಸಂಗಮದೇವ. ೪೫೨. ಮಾಡುವಾತ ನಾನಲ್ಲಯ್ಯ, ನೀಡುವಾತ ನಾನಲ್ಲಯ್ಯ, ಬೇಡುವಾತ ನಾನಲ್ಲಯ್ಯ, ನಿಮ್ಮ ಕಾರುಣ್ಯವಲ್ಲದೆ, ಎಲೆ ದೇವಾ! ಮನೆಯ ತೊತ್ತಲಸಿದರೆ ಒಡತಿ ಮಾಡಿಕೊಂಬಂತೆ ನಿನಗೆ ನೀ ಮಾಡಿಕೋ ಕೂಡಲಸಂಗಮದೇವಾ! ೪೫೩. ಪರಿಯಾಣವೇ ಭಾಜನವೆಂಬರು ಪರಿಯಾಣ ಭಾಜನವಲ್ಲ ಲಿಂಗಕ್ಕೆ! ತನ್ನ ಮನವೇ ಭಾಜನ! ಪ್ರಾಣವನು ಬೀಸರವೋಗದೆ ಮೀಸಲಾಗರ್ಪಿಸಬಲ್ಲಡೆ, ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ. ೪೫೪. ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯ. ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯ. ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯ. ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯ. ಕೂಡಲಸಂಗನ ಶರಣರನುಭಾವದಿಂದ ಎನ್ನ ಭವದ ಕೇಡು ನೋಡಯ್ಯ. ೪೫೫. ಆಲಿಕಲ್ಲ ಹರಳಿನಂತೆ, ಅರಗಿನ ಪುತ್ಥಳಿಯಂತೆ ತನು ಕರಗಿ ನೆರೆವ ಸುಖವ ನಾನೇನೆಂಬ! ಕಡೆಗೋಡಿವರಿದವೆನಗಯ್ಯ ನಯನದ ಸುಖಜಲಂಗಳು! ನಮ್ಮ ಕೂಡಲಸಂಗಮದೇವರ ಮುಟ್ಟಿ ನೆರೆವ

ಬಸವಣ್ಣನ ವಚನಗಳು - 441 ರಿಂದ 450 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೪೧. ಅರಿದರಿದು ಸಮಗಾಣಿಸಬಾರದು ? ತ್ರಾಸಿನ ಕಟ್ಟಳೆಯಂತಿನಿತು ವೆಗ್ಗಳವಾದರೆ ಈಶ್ವರನು ಒಡೆಯಿಕ್ಕದೆ ಮಾಣುವನೆ ? ಪಾತ್ರಾಪಾತ್ರವೆಂದು ಕಂಡರೆ ಶಿವನೆಂತು ಮೆಚ್ಚುವನೊ ? ಜೀವಜೀವಾತ್ಮವ ಸರಿಯೆಂದು ಕಂಡರೆ ಸಮವೇದಿಸದಿಪ್ಪನೇ ಶಿವನು ? ತನ್ನ ಮನದಲ್ಲಿ "ಯತ್ರ ಜೀವಸ್ತತ್ರ ಶಿವ"ನೆಂದು ಸರ್ವಜೀವದಯಾಪಾರಿಯಾದರೆ ಕೂಡಲಸಂಗಮದೇವನು ಕೈಲಾಸದಿಂದ ಬಂದು ಎತ್ತಿಕೊಳ್ಳದಿಪ್ಪನೆ ? ೪೪೨. ಮುತ್ತು ಉದಕದಲಾಗದು, ಉದಕ ಮುತ್ತಿನೊಲಾಗದು, ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ! ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕಲ್ಲದೆ, ಕರ್ತೃ ಕೂಡಲಸಂಗಮದೇವರ ಒಲವಿನ ದಯದ ಚಿತ್ತವಿಡಿದಂಗಲ್ಲದೆ ಶಿವತತ್ತ್ವ ಸಾಹಿತ್ಯವಾಗದು. ೪೪೩. ಚಂದ್ರಕಾಂತದ ಶಿಲೆಯಲ್ಲಿ ಜಲವಿಲ್ಲದನ್ನಕ ಶೈತ್ಯವ ತೋರುವ ಪರಿಯೆಂತೋ ? ಸೂರ್ಯಕಾಂತದ ಶಿಲೆಯಲ್ಲಿ ಅಗ್ನಿಯಿಲ್ಲದನ್ನಕ ಉಷ್ಣವ ತೋರುವ ಪರಿಯೆಂತೋ ? ಶರಣಂಗೆ ಭಕ್ತಿಕಾಯವಿಲ್ಲದನ್ನಕ ಕೂಡಲಸಂಗನನರಿವ ಪರಿಯೆಂತೋ ? ೪೪೪. ಮುನ್ನೂರರುವತ್ತು ನಕ್ಷತ್ರಕ್ಕೆ ಬಾಯ ಬಿಟ್ಟುಕೊಂಡಿಪ್ಪುದೇ ಸಿಂಪು ? ಅದು ಸ್ವಾತಿಗಲ್ಲದೆ ಬಾಯ್ದೆರೆಯದು ಕೇಳಾ ಕೇಳು ತಂ

ಬಸವಣ್ಣನ ವಚನಗಳು - 431 ರಿಂದ 440 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೩೧. ಶಿವಾಚಾರವೆಂಬುದೊಂದು ಬಾಳ ಬಾಯಿಧಾರೆ ಲಿಂಗ ಮೆಚ್ಚಬೇಕು; ಜಂಗಮ ಮೆಚ್ಚಬೇಕು ಪ್ರಸಾದ ಮೆಚ್ಚಿ ತನ್ನಲ್ಲಿ ಸ್ವಾಯತವಾಗಿರಬೇಕು. ಬಿಚ್ಚಿ ಬೇರಾದರೆ ಮೆಚ್ಚ ನಮ್ಮ ಕೂಡಲಸಂಗಮದೇವ. ೪೩೨. ಆವಾವ ಭಾವದಲ್ಲಿ ಶಿವನ ನಂಬಿದ ಶರಣರು ಎಂತಿದ್ದರೇನಯ್ಯ ? ಆವಾವ ಭಾವದಲ್ಲಿ ಶಿವನ ನಂಬಿದ ಮಹಿಮರು ಎಂತಿದ್ದರೇನಯ್ಯ ? ಸುಚರಿತ್ರರೆಂತಿದ್ದರೇನಯ್ಯ ? ಅವಲೋಹವ ಕಳೆವ ಪರುಷವೆಂತಿದ್ದರೇನಯ್ಯ ? ಕೂಡಲಸಂಗನ ಶರಣರು ರಸದ ವಾರಿಧಿಗಳು ಎಂತಿದ್ದರೇನಯ್ಯ ? ೪೩೩. ನಡೆ ಚೆನ್ನ, ನುಡಿ ಚೆನ್ನ, ಎಲ್ಲಿ ನೋಡಿದರಲ್ಲಿ ಚೆನ್ನ! ಪ್ರಮಥರೊಳಗೆ ಚೆನ್ನ, ಪುರಾತರೊಳಗೆ ಚೆನ್ನ! ಪ್ರಸಾದಿಗಳೊಳಗೆ ಚೆನ್ನ! ಸವಿದು ನೋಡಿ ಅಂಬಲಿ ರುಚಿಯಾಯಿತ್ತೆಂದು ಕೂಡಲಸಂಗಮದೇವರಿಗೆ ಬೇಕಾಯಿತ್ತೆಂದು ಕೈದೆಗೆದ ನಮ್ಮ ಚೆನ್ನ! ೪೩೪. ಲಿಂಗವಿಕಾರಿಗೆ ಅಂಗವಿಕಾರವೆಂಬುದಿಲ್ಲ. ಜಂಗಮವಿಕಾರಿಗೆ ಧನವಿಕಾರವೆಂಬುದಿಲ್ಲ. ಪ್ರಸಾದವಿಕಾರಿಗೆ ಮನವಿಕಾರವೆಂಬುದಿಲ್ಲ. ಇಂತೀ ತ್ರಿವಿಧಗುಣವನರಿದಾತನು ಅಚ್ಚಲಿಂಗೈಕ್ಯನು ಕೂಡಲಸಂಗಮದೇವ. ೪೩೫. ಪ್ರಾಣಲಿಂಗಪ್ರತಿಗ್ರಾಹಕನಾದ ಬಳಿಕ ಲಿಂಗವಿರಹಿತವಾಗಿ ನಡೆವ ಪರಿಯೆಂತೊ ?

ಬಸವಣ್ಣನ ವಚನಗಳು - 421 ರಿಂದ 430 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೨೧. ಸೂಳೆಗೆ ಮೆಚ್ಚಿ ಸೂಳೆಯ ಬಂಟರೆಂಜಲ ತಿಂಬುದೀ ಲೋಕವೆಲ್ಲ! ಅಡಗ ವೆಚ್ಚಿ ಸೊಣಗನೆಂಜಲ ತಿಂಬುದೀ ಲೋಕವೆಲ್ಲ! ಲಿಂಗವ ಮೆಚ್ಚಿ ಜಂಗಮಪ್ರಸಾದವ ಕೊಂಬರ ನೋಡಿ ನಗುವವರ ಕುಂಭೀಪಾಕ ನಾಯಕನರಕದಲಿಕ್ಕುವ ಕೂಡಲಸಂಗಮದೇವ. ೪೨೨. ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ ? ಕುಲವುಂಟೇ ಜಂಗಮವಿದ್ದೆಡೆಯಲ್ಲಿ ? ಎಂಜಲುಂಟೇ ಪ್ರಸಾದವಿದ್ದೆಡೆಯಲ್ಲಿ ? ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ. ನಿಷ್ಕಳಂಕ, ನಿಜೈಕ್ಯ, ತ್ರಿವಿಧನಿರ್ಣಯ ಕೂಡಲಸಂಗಮದೇವ, ನಿಮ್ಮ ಶರಣರಿಗಲ್ಲದಿಲ್ಲ. ೪೨೩. ಹುತ್ತದ ಮೇಲಣ ರಜ್ಜು ಮುಟ್ಟಿದರೆ ಸಾವರು ಶಂಕಿತರಾದವರು! ಸರ್ಪದಷ್ಟವಾದರೆಯೂ ಸಾಯರು ನಿಶ್ಶಂಕಿತರಾದವರು! ಕೂಡಲಸಂಗಮದೇವಯ್ಯ, ಶಂಕಿತಂಗೆ ಪ್ರಸಾದ ಕಾಳಕೂಟವಿಷವು! ೪೨೪. ನಂಬಿದರೆ ಪ್ರಸಾದ ನಂಬದಿದ್ದರೆ ವಿಷವು! ತುಡುಕಬಾರದು ನೋಡಾ ಲಿಂಗನ ಪ್ರಸಾದ! ಸಂಗನ ಪ್ರಸಾದ! ಕೂಡಲಸಂಗನ ಪ್ರಸಾದ ಸಿಂಗಿ-ಕಾಳಕೂಟ ವಿಷವು. ೪೨೫. ಪಂಡಿತನಾಗಲಿ ಮೂರ್ಖನಾಗಲಿ ಸಂಚಿತಕರ್ಮ ಉಂಡಲ್ಲದೆ ಬಿಡದು. ಪ್ರಾರಬ್ಧಕರ್ಮ ಭೋಗಿಸಿದಲ್ಲದೆ ಹೋಗದು- ಎಂದು ಶ್ರುತಿ ಸಾರುತ್ತೈದಾವೆ- ನೋಡಾ, ತಾನಾವ ಲೋಕದೊಳಗಿದ್ದರೆಯ

ಬಸವಣ್ಣನ ವಚನಗಳು - 411 ರಿಂದ 420 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೧೧. ಶಿವಲೋಕಕ್ಕೆ ಸರಿ ಬೇರೆ ಲೋಕವಿಲ್ಲ! ಶಿವಮಂತ್ರಕ್ಕೆ ಸರಿ ಬೇರೆ ಮಂತ್ರವಿಲ್ಲ! ಜಗಕ್ಕೆ ಇಕ್ಕಿದೆ ಮುಂಡಿಗೆಯ! ಎತ್ತಿಕೊಳ್ಳಿ, ಕೂಡಲಸಂಗಯ್ಯನೊಬ್ಬನೇ ದೈವವೆಂದು! ೪೧೨. ವೇದ ನಡನಡುಗಿತ್ತು. ಶಾಸ್ತ್ರವಗಲಿ ಕೆಲಕ್ಕೆ ಸಾರಿದ್ದುದಯ್ಯ, ತರ್ಕ ತರ್ಕಿಸಲರಿಯದೆ ಮೂಗುವಟ್ಟಿದ್ದಿತಯ್ಯ, ಆಗಮ ಹೊರತೊಲಗಿ ಆಗಲಿದ್ದಿತಯ್ಯ, ನಮ್ಮ ಕೂಡಲಸಂಗಯ್ಯನು ಚೆನ್ನಯ್ಯನ ಮನೆಯಲುಂಡ ಕಾರಣ! ೪೧೩. ಆರು ಮುನಿದು ನಮ್ಮನೇನ ಮಾಡುವರು ? ಊರು ಮುನಿದು ನಮ್ಮನೆಂತು ಮಾಡುವರು ? ನಮ್ಮ ಕುನ್ನಿಗೆ ಕೂಸ ಕೊಡಬೇಡ! ನಮ್ಮ ಸೊಣಗಂಗೆ ತಣಿಗೆಯಲ್ಲಿಕ್ಕಬೇಡ! ಆನೆಯ ಮೇಲೆ ಹೋಹನ ಶ್ವಾನ ಕಚ್ಚಬಲ್ಲುದೆ ? ನಮಗೆ ನಮ್ಮ ಕೂಡಲಸಂಗನುಳ್ಳನ್ನಕ ? ೪೧೪. ನ್ಯಾಯನಿಷ್ಠುರ! ದಾಕ್ಷಿಣ್ಯಪರ ನಾನಲ್ಲ. ಲೋಕವಿರೋಧಿ! ಶರಣನಾರಿಗಂಜುವನಲ್ಲ, ಕೂಡಲಸಂಗಮದೇವರ ರಾಜತೇಜದಲ್ಲಿಪ್ಪೆನಾಗಿ! ೪೧೫. ಊರ ಮುಂದೆ ಹಾಲ ಹಳ್ಳ ಹರಿಯುತ್ತಿರಲು ? ಓರೆಯಾವಿನ ಬೆನ್ನ ಹರಿಯಲದೇಕಯ್ಯ ? ಲಜ್ಜೆಗೆಡಲೇಕೆ ? ನಾಣುಗೆಡಲೇಕೆ ? ಕೂಡಲಸಂಗಮದೇವಯ್ಯನುಳ್ಳನ್ನಕ ಬಿಜ್ಜಳನ ಭಂಡಾರವೆನಗೇಕಯ್ಯ ? ೪೧೬. ಕಂಡುದಕ್ಕೆಳೆಸೆನೆನ್ನ ಮನದಲ್

ಬಸವಣ್ಣನ ವಚನಗಳು - 401 ರಿಂದ 410 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೦೧. ಒಡೆಯರೊಡವೆಯ ಕೊಂಡರೆ ಕಳ್ಳಂಗಳಲಾಯಿತ್ತೆಂಬ ಗಾದೆಯೆನಗಿಲ್ಲಯ್ಯ. ಇಂದೆನ್ನ ವಧುವ, ನಾಳೆನ್ನ ಧನವ, ನಾಡಿದೆನ್ನ ತನುವ ಬೇಡರೇಕಯ್ಯ ? ಕೂಡಲಸಂಗಮದೇವ, ಆನು ಮಾಡಿದುದಲ್ಲದೆ ಬಯಸಿದ ಬಯಕೆ ಸಲುವುದೇ ಅಯ್ಯ ? ೪೦೨. ಸಮಚಿತ್ತವೆಂಬ ನೇಮದ ಹಲಗೆಯ ಹಿಡಿದು, ಶಿವಚಿತ್ತವೆಂಬ ಕೂರಲಗ ಕೊಂಡು ಶರಣಾರ್ಥಿಯೆಂಬ ಶ್ರವಗಲಿತಡೆ ಆಳುತನಕ್ಕೆ ದೆಸೆಯಪ್ಪೆ ನೋಡಾ! ಮಾರಂಕ-ಜಂಗಮ ಮನೆಗೆ ಬಂದಲ್ಲಿ ಇದಿರೆತ್ತಿ ನಡೆವುದು; ಕೂಡಲಸಂಗಮದೇವನನೊಲಿಸುವಡಿದು ಚಿಹ್ನ. ೪೦೩. ಅಟ್ಟಟ್ಟಿಕೆಯ ಮಾತನಾಡಲದೇಕೋ ? ಮುಟ್ಟಿ ಬಂದುದಕ್ಕಂಜಲದೇಕೋ ? ಕಾದಿದಲ್ಲದೆ ಮಾಣೆನು, ಓಡಿದರೆ ಭಂಗ ಹಿಂಗದಾಗಿ; ಕೂಡಲಸಂಗಮದೇವ ಎನ್ನ ಭಂಗ ನಿಮ್ಮದಾಗಿ! ೪೦೪. ನೀನಿರಿಸಿದ ಮನದಲ್ಲಿ ನಾನಂಜೆನಯ್ಯ. ಮನವು ಮಹಾಘನಕ್ಕೆ ಶರಣಾಗತಿವೊಕ್ಕುದಾಗಿ! ನೀನಿರಿಸಿದ ಧನದಲ್ಲಿ ನಾನಂಜೆನಯ್ಯ, ಧನವು ಸತಿಸುತಮಾತಾಪಿತರಿಗೆ ಹೋಗದಾಗಿ! ನೀನಿರಿಸಿದ ತನುವಿನಲ್ಲಿ ನಾನಂಜೆನಯ್ಯ, ಸರ್ವಾರ್ಪಿತದಲ್ಲಿ ತನು ನಿಯತಪ್ರಸಾದಭೋಗಿಯಾಗಿ! ಇದು ಕಾರಣ ವೀರಧೀರ ಸಮಗ್ರನಾಗಿ ಕೂಡಲಸಂಗಮದೇವಯ್ಯ ನಿಮಗಾನಂಜೆನು! ೪೦೫. ಬತ್ತೀಸಾಯುಧದಲ್ಲಿ ಅಭ

ಬಸವಣ್ಣನ ವಚನಗಳು - 391 ರಿಂದ 400 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೯೧. ಒಡವೆ-ಭಂಡಾರ-ಕಡವರ-ದ್ರವ್ಯವ ಬಡ್ಡಿಯ ವ್ಯವಹಾರಕ್ಕೆ ಕೊಟ್ಟು ಮನೆಯ ಗೊಂಟಿನಲ್ಲಿ ಹೊಯ್ದುಕೊಂಡಿದ್ದೆನಾದರೆ ಅದು ಎನ್ನರ್ಥವಲ್ಲ! ಅನರ್ಥವೆಂಬೆ!! ಸಂಗಮ ದೇವ, ನೀ ಜಂಗಮರೂಪಾಗಿ ಬಂದು ಆ ಧನವನು ನೀ ಬಲ್ಲಂತೆನ್ನ ಮುಂದೆ ಸೂರೆಗೊಳ್ಳುತ್ತಿರಲು ನಾ ಬೇಕು-ಬೇಡೆಂದು ಮನದಲ್ಲಿ ಮರುಗಿದೆನಾದರೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಮನದೊಡೆಯ, ನೀನೆ ಬಲ್ಲೆ! ಕಾಮನೇಮವೆಂಬ ಸಿಂಧುಬಲ್ಲಾಳನ ವಧುವ ಸರ್ವಭುವನದೊಡೆಯ ಸಂಗಮದೇವರು ಬೇಡುವಂತಲ್ಲ- ಎನ್ನ ಸತಿ ನೀಲಲೋಚನೆ ಪೃಥ್ವಿಗಗ್ಗಳೆ ಚೆಲುವೆ ಆಕೆಯನು, ಸಂಗಮದೇವ, ನೀ ಜಂಗಮರೂಪಾಗಿ ಬಂದು ಎನ್ನ ಮುಂದೆ ಸಂಗವ ಮಾಡುತ್ತಿರಲು ಎನ್ನೊಡನಿದ್ದ ಸತಿಯೆಂದು ವಾಯಕ್ಕೆ ಮರುಗಿದೆನಾದರೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ ಮನದೊಡೆಯ, ನೀನೆ ಬಲ್ಲೆ! ಪ್ರತ್ಯಕ್ಷವಾಗಿ ಸಿರಿಯಾಳ-ಚಂಗಳೆಯರ ಮನೆಗೆ ಬಂದು ಅವರ ಮಗನ ಬೇಡುವಂತಲ್ಲ- ಸಂಗಮ ದೇವ, ನಿಮ್ಮ ಹೆಸರ ಚಿಕ್ಕಸಂಗಯ್ಯನಿದ್ದಹನು ನೀ ಜಂಗಮರೂಪಾಗಿ ಬಂದು ಅವನ ಹಿಡಿದು ಎನ್ನ ಮುಂದೆ ಹೆಡಗುಡಿಯ ಕಟ್ಟಿ ಚಿನಿಖಂಡವ ಮಾಡಿ ಬಾಣಸವ ಮಾಡುವಾಗಲು ಎನ್ನುದರದಲ್ಲಿ ಬಂದ ಪುತ್ರನೆಂದು ವಾಯಕ್ಕೆ ಮರುಗಿದೆನಾದಡೆ ನಿ

ಬಸವಣ್ಣನ ವಚನಗಳು - 381 ರಿಂದ 390 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೮೧. ಸುಖ ಬಂದರೆ ಪುಣ್ಯದ ಫಲವೆನ್ನೆನು, ದುಃಖ ಬಂದರೆ ಪಾಪದ ಫಲವೆನ್ನೆನು, ನೀ ಮಾಡಿದಡಾಯಿತ್ತೆನ್ನೆನು, ಕರ್ಮಕ್ಕೆ ಕರ್ತೃವೇ ಕಡೆಯೆನ್ನೆನು, ಉದಾಸೀನವಿಡಿದು ಶರಣೆನ್ನೆನು ಕೂಡಲಸಂಗಮದೇವ. ನೀ ಮಾಡಿದುಪದೇಶವು ಎನಗೀ ಪರಿಯಲಿ! ಸಂಸಾರವ ಸವೆಯ ಬಳಸುವೆನು. ೩೮೨. ಕಾಯದ ಕಳವಳಕಂಜಿ ಕಾಯಯ್ಯ ಎನ್ನೆನು. ಜೀವನೋಪಾಯಕಂಜಿ ಈಯಯ್ಯ ಎನ್ನೆನು. 'ಯದ್ಭಾವಂ ತದ್ಭವತಿ' ಉರಿ ಬರಲಿ, ಸಿರಿ ಬರಲಿ ಬೇಕು ಬೇಡೆನ್ನೆನಯ್ಯ! ಆನು ನಿಮ್ಮ ಹಾರೆನು, ಮಾನವರ ಬೇಡೆನು; ಆಣೆ, ನಿಮ್ಮಾಣೆ ಕೂಡಲಸಂಗಮದೇವ. ೩೮೩. ನಾಳೆ ಬಪ್ಪುದು ನಮಗಿಂದೇ ಬರಲಿ. ಇಂದು ಬಪ್ಪುದು ನಮಗೀಗಲೇ ಬರಲಿ. ಇದಕಾರಂಜುವರು ? ಇದಕಾರಳುಕುವರು- 'ಜಾತಸ್ಯ ಮರಣಂ ಧ್ರುವಂ' ಎಂದುದಾಗಿ ? ನಮ್ಮ ಕೂಡಲಸಂಗಮದೇವ ಬರೆದ ಬರಹವ ತಪ್ಪಿಸುವಡೆ ಹರಿಬ್ರಹ್ಮಾದಿಗಳಿಗಳವಲ್ಲ ? ೩೮೪. ಕಳ ಹೋದರೆ ಕನ್ನದುಳಿಯ ಹಿಡಿವೆ. ಬಂದಿವಿಡಿದರೆ ನಿಮ್ಮಿಂದ ಮುಂದೆ ನಡೆವೆ, ಮನಭೀತಿ ಮನಶಂಕೆಗೊಂಡೆನಾದರೆ, ನಿಮ್ಮಾಣೆ ನಿಮ್ಮ ಪುರಾತರಾಣೆ. ಆಳ್ದರ ನಡೆ ಸದಾಚಾರವೆನ್ನದಿದ್ದರೆ ಕಟ್ಟಾಳು ಶಿಷ್ಟತನಕ್ಕೆ ಹೋಹ ಕಷ್ಟವ ನೋಡಾ ಕೂಡಲ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ

ಬಸವಣ್ಣನ ವಚನಗಳು - 361 ರಿಂದ 370 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೬೧. ಕೋಣನ ಹೇರಿಗೆ ಕುನ್ನಿ ಬಸುಗುತ್ತಬಡುವಂತೆ ತಾವು ನಂಬರು, ನಂಬುವರನು ನಂಬಲೀಯರು! ತಾವು ಮಾಡರು, ಮಾಡುವರನು ಮಾಡಲೀಯರು! ಮಾಡುವ ಭಕ್ತರ ಕಂಡು ಸೈರಿಸಲಾರದವರ ಕೂಗಿಡೆ ಕೂಗಿಡೆ ನರಕದಲ್ಲಿಕ್ಕುವ ಕೂಡಲಸಂಗಮದೇವ. ೩೬೨. ಚೇಳಿಂಗೆ ಬಸುರಾಯಿತ್ತೆ ಕಡೆ! ಬಾಳೆಗೆ ಫಲವಾಯಿತ್ತೆ ಕಡೆ ನೋಡಾ ! ರಣರಂಗದಲ್ಲಿ ಕಾದುವ ಓಲೆಯಕಾರಂಗೆ ಓಸರಿಸಿತ್ತೆ ಕಡೆ! ಮಾಡುವ ಭಕ್ತಂಗೆ ಮನಹೀನವಾದರೆ ಅದೇ ಕಡೆ ಕೂಡಲಸಂಗಮದೇವ. ೩೬೩. ಹುಲಿಯ ಹಾಲು ಹುಲಿಗಲ್ಲದೆ ಹೊಲದ ಹುಲ್ಲೆಗುಣಬಾರದು ಕಲಿಯ ಕಾಲ ತೊಡರು ಛಲದಾಳಿಂಗಲ್ಲದೆ ಇಕ್ಕಬಾರದು. ಅಳಿಮನದಾಸೆಯವರ ಮೂಗ ಹಲುದೋರ ಕೊಯ್ವ ಕೂಡಲಸಂಗಮದೇವ. ೩೬೪. ಅಲಗಲಗು ಮೋಹಿದಲ್ಲದೆ ಕಲಿತನವ ಕಾಣಬಾರದು. ನುಡಿವ ನುಡಿ ಜಾರಿದರೆ ಮನಕ್ಕೆ ಮನ ನಾಚಬೇಕು. ಶಬ್ದಗಟ್ಟಿಯತನದಲ್ಲಿ ಎಂತಪ್ಪುದಯ್ಯ ಭಕ್ತಿ ? ಪಾಪಿಯ ಕೂಸನೆತ್ತಿದಂತೆ- ಕೂಡಲಸಂಗಮದೇವರ ಭಕ್ತಿ ಅಳಿಮನದವರಿಗೆ ಅಳವಡದಯ್ಯ! ೩೬೫. ಹರಬೀಜವಾದರೆ ಹಂದೆ ತಾನಪ್ಪನೇ ? ಒರೆಯ ಬಿಚ್ಚಿ ಇರಿಯದವರ ಲೋಕ ಮೆಚ್ಚುವುದೆ ? ಚಲ್ಲಣವುಟ್ಟು ಕೈಯ ಪಟ್ಟೆಹವಿಡಿದು ಗರುಡಿಯ ಕಟ್ಟಿ ಶ್ರಮವ ಮಾಡುವ- ಅಂತೆ ತನ್

ಬಸವಣ್ಣನ ವಚನಗಳು - 351 ರಿಂದ 360 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೫೧. ತೊರೆಯ ಮೀವ ಅಣ್ಣಗಳಿರಾ, ತೊರೆಯ ಮೀವ ಸ್ವಾಮಿಗಳಿರಾ, ತೊರೆಯಿಂ ಭೋ, ತೊರೆಯಿಂ ಭೋ! ಪರನಾರಿಯ ಸಂಗವ ತೊರೆಯಿಂ ಭೋ! ಪರಧನದಾಮಿಷವ ತೊರೆಯಿಂ ಭೋ! ಇವ ತೊರೆಯದೇ, ಹೋಗಿ ತೊರೆಯ ಮಿಂದರೆ ಬರುದೊರೆ ಹೋಹುದು ಕೂಡಲಸಂಗಮದೇವ. ೩೫೨. ಹುತ್ತವ ಕಂಡಲ್ಲಿ ಹಾವಾಗಿ, ನೀರ ಕಂಡಲ್ಲಿ ಹೊಳೆಯಾದವನ ಮೆಚ್ಚುವನೆ ? ಬಾರದ ಭವಕ್ಕೆ ಬರಿಸುವನಲ್ಲದೆ ಮೆಚ್ಚುವನೆ ? ಅಘೋರ ನರಕವನುಣಿಸುವನಲ್ಲದೆ ಮೆಚ್ಚುವನೆ ? ಅಟಮಟದ ಭಕ್ತರ ಕಂಡರೆ ಕೋಟಲೆಗೊಳಿಸುವನು ಕೂಡಲಸಂಗಯ್ಯನು. ೩೫೩. ಕುಳ್ಳಿದ್ದು ಲಿಂಗವ ಪೂಜಿಸಿ ಅಲ್ಲದಾಟವನಾಡುವರಯ್ಯ; ಬೆಳ್ಳೆತ್ತಿನ ಮರೆಯಲ್ಲಿದ್ದು ಹುಲ್ಲೆಗೆ ಅಂಬ ತೊಡುವಂತೆ! ಕಳ್ಳ-ಹಾದರಿಗರ ಕೈಯಲು ಪೂಜೆಯ ಕೊಳ್ಳ ನಮ್ಮ ಕೂಡಲಸಂಗಮದೇವ. ೩೫೪. ತನುಶುಚಿಯಿಲ್ಲದವನ ದೇಹಾರವೇಕೆ ? ದೇವರು ಕೊಡನೆಂಬ ಭ್ರಾಂತೇಕೆ ? ಮನಕ್ಕೆ ಮನವೇ ಸಾಕ್ಷಿ ಸಾಲದೆ ಲಿಂಗ ತಂದೆ ?! ಹೇಂಗೆ ಮನ ಹಾಂಗೆ ಘನ! ತಪ್ಪದು ಕೂಡಲಸಂಗಮದೇವ. ೩೫೫. ನೂರನೋದಿ ನೂರ ಕೇಳಿದರೇನು ? ಆಶೆ ಹರಿಯದು, ರೋಷ ಬಿಡದು! ಮಜ್ಜನಕ್ಕೆರೆದು ಫಲವೇನು ? ಮಾತಿನಂತೆ ಮನವಿಲ್ಲದ ಜಾತಿ-ಡೊಂಬರ ನೋಡಿ ನಗುವನಯ್ಯ ಕ