Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೩೧. ಸಾಸವೆಯ ಮೇಲೆ ಸಾಗರವರಿದಂತಾಯಿತಯ್ಯ! ಆನಂದದಿಂದ ನಲಿನಲಿದಾಡುವೆನು. ಆನಂದದಿಂದ ಕುಣಿಕುಣಿದಾಡುವೆನು. ಕೂಡಲಸಂಗನ ಶರಣರು ಬಂದರೆ ಉಬ್ಬಿಕೊಬ್ಬಿ ಹರುಷದಲೋಲಾಡುವೆನು. ೨೩೨. ಎಳ್ಳಿಲ್ಲದ ಗಾಣವನಾಡಿದ ಎತ್ತಿನಂತಾಯಿತ್ತೆನ್ನ ಭಕ್ತಿ! ಉಪ್ಪ ಅಪ್ಪುವಿನಲ್ಲಿ ಅದ್ದಿ ಮೆಲಿದಂತಾಯಿತ್ತೆನ್ನ ಭಕ್ತಿ! ಕೂಡಲಸಂಗಮದೇವ, ಅನು ಮಾಡಿದೆನೆಂಬೀ ಕಿಚ್ಚು ಸಾಲದೆ ? ೨೩೩. ಧ್ಯಾನಮೌನವೆಂಬ ಶಸ್ತ್ರವ ಹಿಡಿಯಲಾರದೆ ಅಹಂಕಾರಧಾರೆಯ ಮೊನೆಯಲಗೆಂಬ ಶಸ್ತ್ರವ ಹಿಡಿದು ಕೆಟ್ಟೆನಯ್ಯ! ಅಂಜುವೆನಂಜುವೆನಯ್ಯ! ಜಂಗಮ-ಲಿಂಗವೆಂಬ ಭಾಷೆ ಪಲ್ಲಟವಾಯಿತ್ತು! ಇನ್ನು-ಜಂಗಮಲಿಂಗವೆಂಬ ಶಿಕ್ಷಾಶಸ್ತ್ರದಲ್ಲಿ, ಎನ್ನ ಹೊಯ್ದು ಬಯ್ದು ರಕ್ಷಿಸುವುದು ಕೂಡಲಸಂಗಮದೇವ! ೨೩೪. ಎನ್ನಲ್ಲಿ ಭಕ್ತಿ ಸಾಸವೆಯ ಷಡ್ಭಾಗದಿನಿತಿಲ್ಲ; ಎನ್ನ ಭಕ್ತನೆಂಬರು; ಎನ್ನ ಸಮಯಾಚಾರಿ ಎಂದೆಂಬರು. ನಾನೇನು ಪಾಪವ ಮಾಡಿದೆನೋ! ಬೆಳೆಯದ ಮುನ್ನವೇ ಮೊಳೆಯ ಕೊಯ್ವರೆ ಹೇಳಯ್ಯ ? ಇರಿಯದ ವೀರ ಇಲ್ಲದ ಸೊಬಗುವ ಎಲ್ಲ ಒಡೆಯರು ಏರಿಸಿ ನುಡಿವರು! ಎನಗಿದು ವಿಧಿಯೇ ಕೂಡಲಸಂಗಮದೇವ ? ೨೩೫. ಎನ್ನವರೆನಗೊಲಿದು ಹೊನ್ನಶೂಲದಲ್ಲಿಕ್ಕಿದರೆನ್ನ ಹೊಗಳ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು