Skip to main content

Posts

Showing posts from January 23, 2011

ಬಸವಣ್ಣನ ವಚನಗಳು - 261 ರಿಂದ 270 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೬೧. ಓಡುವಾತ ಲೆಂಕನಲ್ಲ, ಬೇಡುವಾತ ಭಕ್ತನಲ್ಲ! ಓಡಲಾಗದು ಲೆಂಕನು ಬೇಡಲಾಗದು ಭಕ್ತನು! ಓಡೆನಯ್ಯ, ಬೇಡೆನಯ್ಯ ಕೂಡಲಸಂಗಮದೇವ. ೨೬೨. ಎಲ್ಲಿ ನೋಡಿರಲ್ಲಿ ಮನವೆಳಸಿದರೆ ಆಣೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ! ಪರವಧುವನು ಮಾದೇವಿಯೆಂದೇ ಕಾಬೆ ಕೂಡಲಸಂಗಮದೇವ. ೨೬೩. ಹರಿವ ಹಾವಿಂಗಂಜೆ, ಉರಿಯ ನಾಲಗೆಗಂಜೆ! ಸುರಗಿಯ ಮೊನೆಗಂಜೆ! ಒಂದಕ್ಕಂಜುವೆ, ಒಂದಕ್ಕಳುಕುವೆ; ಪರಧನ ಪರಸ್ತ್ರೀಯೆಂಬೀ ಜೂಬಿಂಗಂಜುವೆ! ಮುನ್ನಂಜದ ರಾವಣನೇ ವಿಧಿಯಾದ ಅಂಜುವೆನಯ್ಯ, ಕೂಡಲಸಂಗಮದೇವ! ೨೬೪. ಅಸುರನೈಶ್ವರ್ಯವನೆಣಿಸುವಡೆ- ಸೀತೆಗೆ ಸರಿ-ಮಿಗಿಲೆನಿಸುವ ಸತಿಯರುಂಟು ಕೋಟಿ! ಮತಿವಂತ ಶಿರಃಪ್ರಧಾನರೆಂಟು ಕೋಟಿ! ಲೆಕ್ಕವಿಲ್ಲದ ದಳವು! ಲಕ್ಷ ಕುಮಾರರು! ದಿಕ್ಪಾಲಕರವನ ಮನೆಯ ಬಂಧನದಲಿಪ್ಪರು ಸುರಸತಿಯರನೆಲ್ಲರನಾತ ಸೆರೆಮಾಡಿಯಾಳಿದ! ಶಿವನೇ ನೀ ಕರುಣಿಸಿದಂತಿರದೆ ಪರವಧುವಿನ ಬೇಟವವನ ಪ್ರಾಣವ ಕೊಂಡಿತ್ತು. ಇದನರಿತು ಪರವಧುವಿಗೆಳಸುವವರ ಕಂಡು ಗರುಡ ಕಂಡ ಸರ್ಪ ಧರೆಗಿಳಿವಂತೆ ಅಡಗಿಪ್ಪೆನಯ್ಯ ಕೂಡಲಸಂಗಮದೇವ. ೨೬೫. ಒಂದಕೊಂಬತ್ತ ನುಡಿದು ಕಣ್ಣ ಕೆಚ್ಚನೆ ಮಾಡಿ, ಗಂಡುಗೆದರಿ ಮುಡುಹಿಕ್ಕಿ ಕೆಲೆವರ ಕಂಡ