Skip to main content

Posts

Showing posts from January 25, 2011

ಬಸವಣ್ಣನ ವಚನಗಳು - 281 ರಿಂದ 290 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೮೧. ಎನ್ನ ಜನ್ಮವ ತೊಡೆದ ನೀ ಧರ್ಮಿ! ಎನ್ನ ಜನ್ಮವನತಿಗಳೆದ ನೀ ಧರ್ಮಿ! ಎನ್ನ ಭವಬಂಧನವ ನೀಕರಿಸಿದೆಯಾಗಿ ಶಿವನೇ ಗತಿಯೆಂದು ನಂಬಿದೆನಯ್ಯ. ಎನ್ನಷ್ಟಮದಂಗಳ ಸುಟ್ಟುರುಹಿದೆಯಾಗಿ ಕಟ್ಟುಗ್ರದಿಂದ ನಿಮ್ಮ ಶ್ರೀಚರಣವ ಕಂಡೆ. ಸೃಷ್ಟಿಪ್ರತಿಪಾಲಕ ನಿಮ್ಮ ನಾ ನಂಬಿದೆ ಕರುಣಿಸು ಕೂಡಲಸಂಗಮದೇವ. ೨೮೨. ಭವರೋಗವೈದ್ಯನೆಂದು ನಾ ನಿಮ್ಮ ಮರೆವೊಕ್ಕೆ, ಭಕ್ತಿದಾಯಕ ನೀನು, ಕರುಣಿಸು ಲಿಂಗತಂದೆ. ಜಯ ಜಯ ಶ್ರೀ ಮಹಾದೇವ, ಜಯ ಜಯ ಶ್ರೀ ಮಹಾದೇವ, ಎನುತಿದ್ದಿತೆನ್ನ ಮನವು; ಕೂಡಲಸಂಗಮದೇವಂಗೆ ಶರಣೆನುತಿದ್ದಿತೆನ್ನ ಮನವು. ೨೮೩. ಅಂಗೈಯೊಳಗಣ ಲಿಂಗವ ನೋಡುತ್ತ ಕಂಗಳು ಕಡೆಗೋಡಿವರಿವುತ್ತ ಸುರಿವುತ್ತ ಎಂದಿಪ್ಪೆನೋ ?! ನೋಟವೇ ಪ್ರಾಣವಾಗಿ ಎಂದಿಪ್ಪೆನೋ! ಕೂಟವೇ ಪ್ರಾಣವಾಗಿ ಎಂದಿಪ್ಪೆನೋ! ಎನ್ನಂಗ ವಿಕಾರದ ಸಂಗವಳಿದು ಕೂಡಲಸಂಗಯ್ಯ ಲಿಂಗಯ್ಯ ಲಿಂಗವೆನುತ್ತ ಎಂದಿಪ್ಪೆನೋ !? ೨೮೪. ಎದೆ ಬಿರಿವನ್ನಕ, ಮನ ದಣಿವನ್ನಕ ನಾಲಗೆ ನಲಿನಲಿದೋಲಾಡುವನ್ನಕ ನಿಮ್ಮ ನಾಮಾಮೃತವ ತಂದಿರಿಸು ಕಂಡ ಎಲೆ ಹರನೆ ಎಲೆ ಶಿವನೆ! ನಿಮ್ಮ ನಾಮಾಮೃತವ ತಂದಿರಿಸು ಕಂಡಾ ಬಿರಿಮುಗುಳಂತೆ ಎನ್ನ ಹೃದಯ ನಿಮ್ಮ ಶ್ರೀ