Skip to main content

Posts

Showing posts from January 26, 2011

ಬಸವಣ್ಣನ ವಚನಗಳು - 291 ರಿಂದ 300 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೯೧. ಮಂಡೆಯ ಬೋಳಿಸಿಕೊಂಡು ಗಂಡುದೊತ್ತುವೊಕ್ಕೆನಯ್ಯ. ಲಜ್ಜೆಗೆಟ್ಟಾದರೂ ಲಿಂಗವನೊಲಿಸುವೆ. ನಾಣುಗೆಟ್ಟಾದರೂ ಲಿಂಗವನೊಲಿಸುವೆ. ಕೆಲದ ಸಂಸಾರಿಗಳು ನಗುತಿದ್ದರಿರಲಿ. ಕೂಡಲಸಂಗಮದೇವ ಶರಣಾಗತಿವೊಕ್ಕೆನಯ್ಯ. ೨೯೨. ಎನಗೆ ನಿಮ್ಮ ನೆನಹಾದಾಗವೇ ಉದಯ! ಎನಗೆ ನಿಮ್ಮ ಮರಹಾದಾಗವೇ ಅಸ್ತಮಾನ! ಎನಗೆ ನಿಮ್ಮ ನೆನಹವೇ ಜೀವ! ಎನಗೆ ನಿಮ್ಮ ನೆನಹವೇ ಪ್ರಾಣ ಕಾಣ ತಂದೆ! ಸ್ವಾಮಿ, ಎನ್ನ ಹೃದಯದಲ್ಲಿ ನಿಮ್ಮ ಚರಣದುಂಡಿಗೆಯನೊತ್ತಯ್ಯ! ವದನದಲ್ಲಿ ಪಂಚಾಕ್ಷರಿಯ ಬರೆಯಯ್ಯ ಕೂಡಲಸಂಗಮದೇವ. ೨೯೩. ಎನ್ನ ಕಾಯವ ದಂಡಿಗೆಯ ಮಾಡಯ್ಯ, ಎನ್ನ ಶಿರವ ಸೋರೆಯ ಮಾಡಯ್ಯ, ಎನ್ನ ನರವ ತಂತಿಯ ಮಾಡಯ್ಯ, ಎನ್ನ ಬೆರಲ ಕಡ್ಡಿಯ ಮಾಡಯ್ಯ, ಬತ್ತೀಸ ರಾಗವ ಹಾಡಯ್ಯ, ಉರದಲೊತ್ತಿ ಬಾಜಿಸು ಕೂಡಲಸಂಗಮದೇವ. ೨೯೪. ಮನಕ್ಕೆ ಮನೋಹರವಲ್ಲದ ಗಂಡರು ಮನಕ್ಕೆ ಬಾರರು ಕೇಳವ್ವ ಕೆಳದಿ. ಪನ್ನಗಭೂಷಣನಲ್ಲದ ಗಂಡರು ಇನ್ನೆನಗಾಗದ ಮೋರೆ ನೋಡವ್ವ! ಕನ್ನೆಯಂದಿನ ಕೂಟ: ಚಿಕ್ಕಂದಿನ ಬಾಳುವೆ, ನಿಮ್ಮಾಣೆಯಯ್ಯ ಕೂಡಲಸಂಗಮದೇವ. ೨೯೫. ಜಗವೆಲ್ಲಾ ಅರಿಯಲು ಎನಗೊಬ್ಬ ಗಂಡನುಂಟು! ಆನು ಮುತ್ತೈದೆ; ಆನು ನಿಟ್ಟೈದೆ. ಕೂಡಲಸಂಗಮದೇ