Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೩೨೧. ಮೊರನ ಗೋಟಿಗೆ ಬಪ್ಪ ಕಿರುಕುಳದೈವಕ್ಕೆ ಕುರಿಯನಿಕ್ಕಿಹೆವೆಂದು ನಲಿನಲಿದಾಡುವರು. ಕುರಿ ಸತ್ತು ಕಾವುದೆ ಹರ ಮುಳಿದವರ ? ಕುರಿ ಬೇಡ, ಮರಿ ಬೇಡ ಬರಿಯ ಪತ್ರೆಯ ತಂದು ಮರೆಯದೇ ಪೂಜಿಸು ನಮ್ಮ ಕೂಡಲಸಂಗಮದೇವನ. ೩೨೨. ಮಡಕೆ ದೈವ, ಮೊರ ದೈವ, ಬೀದಿಯ ಕಲ್ಲು ದೈವ, ಹಣಿಗೆ ದೈವ, ಬಿಲ್ಲ ನಾರಿ ದೈವ--ಕಾಣಿರೊ! ಕೊಳಗ ದೈವ, ಗಿಣ್ಣಿಲು ದೈವ--ಕಾಣಿರೊ! ದೈವ ದೈವವೆಂದು ಕಾಲಿಡಲಿಂಬಿಲ್ಲ! ದೇವನೊಬ್ಬನೆ ಕೂಡಲಸಂಗಮದೇವ. ೩೨೩. ಋಣ ತಪ್ಪಿದ ಹೆಂಡಿರಲ್ಲಿ, ಗುಣ ತಪ್ಪಿದ ನಂಟರಲ್ಲಿ, ಜೀವವಿಲ್ಲದ ದೇಹದಲ್ಲಿ ಫಲವೇನೋ ? ಆಳ್ದನೊಲ್ಲದಾಳಿನಲ್ಲಿ, ಸಿರಿತೊಲಗಿದರಸಿನಲ್ಲಿ ವರವಿಲ್ಲದ ದೈವದಲ್ಲಿ ಫಲವೇನೋ ? ಕಳಿದ ಹೂವಿನಲ್ಲಿ ಕಂಪನು, ಉಳಿದ ಸೊಳೆಯಲ್ಲಿ ಪೆಂಪನು, ಕೊಳೆಚೆನೀರಿನಲ್ಲಿ ಗುಣ್ಪನರಸುವಿರಿ! ಮರುಳೆ, ವರಗುರು ವಿಶ್ವಕ್ಕೆಲ್ಲ ಗಿರಿಜಾಮನೋವಲ್ಲಭ ಪರಮ ಕಾರುಣಿಕ ನಮ್ಮ ಕೂಡಲಸಂಗಮದೇವ. ೩೨೪. ಗುಡಿಯೊಳಗಿದ್ದು ಗುಡಿಯ ನೇಣ ಕೊಯ್ದರೆ ಗುಡಿಯ ದಡಿ ಬಿದ್ದು ಹಲ್ಲು ಹೋಹುದು ನೋಡಾ! ಪೊಡವಿಗೀಶ್ವರನ ಗರ್ಭವಾಸದೊಳಗಿದ್ದು ನುಡಿವರು ಮತ್ತೊಂದು ದೈವ ಉಂಟೆಂದು! ತುಡುಗು...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು