Skip to main content

Posts

Showing posts from January 31, 2011

ಬಸವಣ್ಣನ ವಚನಗಳು - 341 ರಿಂದ 350 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೪೧. ಅರಸು-ವಿಚಾರ, ಸಿರಿಯು-ಶೃಂಗಾರ ಸ್ಥಿರವಲ್ಲ ಮಾನವ! ಕೆಟ್ಟಿತ್ತು ಕಲ್ಯಾಣ ಹಾಳಾಯಿತ್ತು ನೋಡಾ! ಒಬ್ಬ ಜಂಗಮನಭಿಮಾನದಿಂದ ಚಾಳುಕ್ಯರಾಯನಾಳ್ವಿಕೆ ತೆಗೆಯಿತ್ತು ಸಂದಿತ್ತು, ಕೂಡಲಸಂಗಮದೇವ, ನಿನ್ನ ಕವಳಿಗೆಗೆ. ೩೪೨. ಬೇವಿನ ಬೀಜವ ಬಿತ್ತಿ, ಬೆಲ್ಲದ ಕಟ್ಟೆಯ ಕಟ್ಟಿ, ಆಕಳ ಹಾಲನೆರೆದು, ಜೇನುತುಪ್ಪವ ಹೊಯ್ದರೆ ಸಿಹಿಯಾಗಬಲ್ಲುದೆ ಕಹಿಯಹುದಲ್ಲದೆ ? ಶಿವಭಕ್ತರಲ್ಲದವರ ಕೂಡೆ ನುಡಿಯಲಾಗದು ಕೂಡಲಸಂಗಮದೇವ. ೩೪೩. ಮಾರಿ ಮಸಣಿ ಎಂಬವು ಬೇರಿಲ್ಲ ಕಾಣಿರೋ! ಮಾರಿ ಎಂಬುದೇನು ? ಕಂಗಳು ತಪ್ಪಿ ನೋಡಿದರೆ ಮಾರಿ! ನಾಲಿಗೆ ತಪ್ಪಿ ನುಡಿದರೆ ಮಾರಿ! ನಮ್ಮ ಕೂಡಲಸಂಗಯ್ಯನ ನೆನಹ ಮರೆದರೆ ಮಾರಿ! ೩೪೪. ಆಯುಧವಿಕ್ಕಿದವಂಗೆ ವೀರದ ಮಾತೇಕೆ ? ಲಿಂಗವು ಅಂತರಿಸಿದವಂಗೆ ಒಳುನುಡಿಯೇಕೆ ? ಐದೆಯರ ಪೋಚಿ ಇಲ್ಲದವಳಿಗೆ ಸೌಭಾಗ್ಯದ ಹೂವಿನ ಬಟ್ಟೇಕೆ ? ಸತ್ಯನಲ್ಲದವಂಗೆ ನಿತ್ಯನೇಮವೇಕೆ ? ಕರ್ತಾರ, ನಿನ್ನ ಒಲವಿಲ್ಲದವಂಗೆ ಶಂಭುವಿನ ಬಂಧುಗಳೇಕೆ ? ಕೂಡಲಸಂಗಮದೇವಯ್ಯ ನೀವಿಲ್ಲದವಂಗೆ ಶಿವಾಚಾರದ ಮಾತೇಕೆ ? ೩೪೫. ಸಿಂಗದ ನಡು ಮುರಿಯಲಾ ಸಿಂಗವೇಬಾತೆ! ಸೊಂಡಿಲು ಮುರಿದರೆ ಆ ಗಜವೇ