Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು