Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೩೮೧. ಸುಖ ಬಂದರೆ ಪುಣ್ಯದ ಫಲವೆನ್ನೆನು, ದುಃಖ ಬಂದರೆ ಪಾಪದ ಫಲವೆನ್ನೆನು, ನೀ ಮಾಡಿದಡಾಯಿತ್ತೆನ್ನೆನು, ಕರ್ಮಕ್ಕೆ ಕರ್ತೃವೇ ಕಡೆಯೆನ್ನೆನು, ಉದಾಸೀನವಿಡಿದು ಶರಣೆನ್ನೆನು ಕೂಡಲಸಂಗಮದೇವ. ನೀ ಮಾಡಿದುಪದೇಶವು ಎನಗೀ ಪರಿಯಲಿ! ಸಂಸಾರವ ಸವೆಯ ಬಳಸುವೆನು. ೩೮೨. ಕಾಯದ ಕಳವಳಕಂಜಿ ಕಾಯಯ್ಯ ಎನ್ನೆನು. ಜೀವನೋಪಾಯಕಂಜಿ ಈಯಯ್ಯ ಎನ್ನೆನು. 'ಯದ್ಭಾವಂ ತದ್ಭವತಿ' ಉರಿ ಬರಲಿ, ಸಿರಿ ಬರಲಿ ಬೇಕು ಬೇಡೆನ್ನೆನಯ್ಯ! ಆನು ನಿಮ್ಮ ಹಾರೆನು, ಮಾನವರ ಬೇಡೆನು; ಆಣೆ, ನಿಮ್ಮಾಣೆ ಕೂಡಲಸಂಗಮದೇವ. ೩೮೩. ನಾಳೆ ಬಪ್ಪುದು ನಮಗಿಂದೇ ಬರಲಿ. ಇಂದು ಬಪ್ಪುದು ನಮಗೀಗಲೇ ಬರಲಿ. ಇದಕಾರಂಜುವರು ? ಇದಕಾರಳುಕುವರು- 'ಜಾತಸ್ಯ ಮರಣಂ ಧ್ರುವಂ' ಎಂದುದಾಗಿ ? ನಮ್ಮ ಕೂಡಲಸಂಗಮದೇವ ಬರೆದ ಬರಹವ ತಪ್ಪಿಸುವಡೆ ಹರಿಬ್ರಹ್ಮಾದಿಗಳಿಗಳವಲ್ಲ ? ೩೮೪. ಕಳ ಹೋದರೆ ಕನ್ನದುಳಿಯ ಹಿಡಿವೆ. ಬಂದಿವಿಡಿದರೆ ನಿಮ್ಮಿಂದ ಮುಂದೆ ನಡೆವೆ, ಮನಭೀತಿ ಮನಶಂಕೆಗೊಂಡೆನಾದರೆ, ನಿಮ್ಮಾಣೆ ನಿಮ್ಮ ಪುರಾತರಾಣೆ. ಆಳ್ದರ ನಡೆ ಸದಾಚಾರವೆನ್ನದಿದ್ದರೆ ಕಟ್ಟಾಳು ಶಿಷ್ಟತನಕ್ಕೆ ಹೋಹ ಕಷ್ಟವ ನೋಡಾ ಕೂಡಲ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು