Skip to main content

Posts

Showing posts from February 5, 2011

ಬಸವಣ್ಣನ ವಚನಗಳು - 391 ರಿಂದ 400 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೯೧. ಒಡವೆ-ಭಂಡಾರ-ಕಡವರ-ದ್ರವ್ಯವ ಬಡ್ಡಿಯ ವ್ಯವಹಾರಕ್ಕೆ ಕೊಟ್ಟು ಮನೆಯ ಗೊಂಟಿನಲ್ಲಿ ಹೊಯ್ದುಕೊಂಡಿದ್ದೆನಾದರೆ ಅದು ಎನ್ನರ್ಥವಲ್ಲ! ಅನರ್ಥವೆಂಬೆ!! ಸಂಗಮ ದೇವ, ನೀ ಜಂಗಮರೂಪಾಗಿ ಬಂದು ಆ ಧನವನು ನೀ ಬಲ್ಲಂತೆನ್ನ ಮುಂದೆ ಸೂರೆಗೊಳ್ಳುತ್ತಿರಲು ನಾ ಬೇಕು-ಬೇಡೆಂದು ಮನದಲ್ಲಿ ಮರುಗಿದೆನಾದರೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಮನದೊಡೆಯ, ನೀನೆ ಬಲ್ಲೆ! ಕಾಮನೇಮವೆಂಬ ಸಿಂಧುಬಲ್ಲಾಳನ ವಧುವ ಸರ್ವಭುವನದೊಡೆಯ ಸಂಗಮದೇವರು ಬೇಡುವಂತಲ್ಲ- ಎನ್ನ ಸತಿ ನೀಲಲೋಚನೆ ಪೃಥ್ವಿಗಗ್ಗಳೆ ಚೆಲುವೆ ಆಕೆಯನು, ಸಂಗಮದೇವ, ನೀ ಜಂಗಮರೂಪಾಗಿ ಬಂದು ಎನ್ನ ಮುಂದೆ ಸಂಗವ ಮಾಡುತ್ತಿರಲು ಎನ್ನೊಡನಿದ್ದ ಸತಿಯೆಂದು ವಾಯಕ್ಕೆ ಮರುಗಿದೆನಾದರೆ ನಿಮ್ಮಾಣೆ ನಿಮ್ಮ ಪ್ರಮಥರಾಣೆ ಮನದೊಡೆಯ, ನೀನೆ ಬಲ್ಲೆ! ಪ್ರತ್ಯಕ್ಷವಾಗಿ ಸಿರಿಯಾಳ-ಚಂಗಳೆಯರ ಮನೆಗೆ ಬಂದು ಅವರ ಮಗನ ಬೇಡುವಂತಲ್ಲ- ಸಂಗಮ ದೇವ, ನಿಮ್ಮ ಹೆಸರ ಚಿಕ್ಕಸಂಗಯ್ಯನಿದ್ದಹನು ನೀ ಜಂಗಮರೂಪಾಗಿ ಬಂದು ಅವನ ಹಿಡಿದು ಎನ್ನ ಮುಂದೆ ಹೆಡಗುಡಿಯ ಕಟ್ಟಿ ಚಿನಿಖಂಡವ ಮಾಡಿ ಬಾಣಸವ ಮಾಡುವಾಗಲು ಎನ್ನುದರದಲ್ಲಿ ಬಂದ ಪುತ್ರನೆಂದು ವಾಯಕ್ಕೆ ಮರುಗಿದೆನಾದಡೆ ನಿ