Skip to main content

Posts

Showing posts from February 6, 2011

ಬಸವಣ್ಣನ ವಚನಗಳು - 401 ರಿಂದ 410 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೦೧. ಒಡೆಯರೊಡವೆಯ ಕೊಂಡರೆ ಕಳ್ಳಂಗಳಲಾಯಿತ್ತೆಂಬ ಗಾದೆಯೆನಗಿಲ್ಲಯ್ಯ. ಇಂದೆನ್ನ ವಧುವ, ನಾಳೆನ್ನ ಧನವ, ನಾಡಿದೆನ್ನ ತನುವ ಬೇಡರೇಕಯ್ಯ ? ಕೂಡಲಸಂಗಮದೇವ, ಆನು ಮಾಡಿದುದಲ್ಲದೆ ಬಯಸಿದ ಬಯಕೆ ಸಲುವುದೇ ಅಯ್ಯ ? ೪೦೨. ಸಮಚಿತ್ತವೆಂಬ ನೇಮದ ಹಲಗೆಯ ಹಿಡಿದು, ಶಿವಚಿತ್ತವೆಂಬ ಕೂರಲಗ ಕೊಂಡು ಶರಣಾರ್ಥಿಯೆಂಬ ಶ್ರವಗಲಿತಡೆ ಆಳುತನಕ್ಕೆ ದೆಸೆಯಪ್ಪೆ ನೋಡಾ! ಮಾರಂಕ-ಜಂಗಮ ಮನೆಗೆ ಬಂದಲ್ಲಿ ಇದಿರೆತ್ತಿ ನಡೆವುದು; ಕೂಡಲಸಂಗಮದೇವನನೊಲಿಸುವಡಿದು ಚಿಹ್ನ. ೪೦೩. ಅಟ್ಟಟ್ಟಿಕೆಯ ಮಾತನಾಡಲದೇಕೋ ? ಮುಟ್ಟಿ ಬಂದುದಕ್ಕಂಜಲದೇಕೋ ? ಕಾದಿದಲ್ಲದೆ ಮಾಣೆನು, ಓಡಿದರೆ ಭಂಗ ಹಿಂಗದಾಗಿ; ಕೂಡಲಸಂಗಮದೇವ ಎನ್ನ ಭಂಗ ನಿಮ್ಮದಾಗಿ! ೪೦೪. ನೀನಿರಿಸಿದ ಮನದಲ್ಲಿ ನಾನಂಜೆನಯ್ಯ. ಮನವು ಮಹಾಘನಕ್ಕೆ ಶರಣಾಗತಿವೊಕ್ಕುದಾಗಿ! ನೀನಿರಿಸಿದ ಧನದಲ್ಲಿ ನಾನಂಜೆನಯ್ಯ, ಧನವು ಸತಿಸುತಮಾತಾಪಿತರಿಗೆ ಹೋಗದಾಗಿ! ನೀನಿರಿಸಿದ ತನುವಿನಲ್ಲಿ ನಾನಂಜೆನಯ್ಯ, ಸರ್ವಾರ್ಪಿತದಲ್ಲಿ ತನು ನಿಯತಪ್ರಸಾದಭೋಗಿಯಾಗಿ! ಇದು ಕಾರಣ ವೀರಧೀರ ಸಮಗ್ರನಾಗಿ ಕೂಡಲಸಂಗಮದೇವಯ್ಯ ನಿಮಗಾನಂಜೆನು! ೪೦೫. ಬತ್ತೀಸಾಯುಧದಲ್ಲಿ ಅಭ