Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೪೧೧. ಶಿವಲೋಕಕ್ಕೆ ಸರಿ ಬೇರೆ ಲೋಕವಿಲ್ಲ! ಶಿವಮಂತ್ರಕ್ಕೆ ಸರಿ ಬೇರೆ ಮಂತ್ರವಿಲ್ಲ! ಜಗಕ್ಕೆ ಇಕ್ಕಿದೆ ಮುಂಡಿಗೆಯ! ಎತ್ತಿಕೊಳ್ಳಿ, ಕೂಡಲಸಂಗಯ್ಯನೊಬ್ಬನೇ ದೈವವೆಂದು! ೪೧೨. ವೇದ ನಡನಡುಗಿತ್ತು. ಶಾಸ್ತ್ರವಗಲಿ ಕೆಲಕ್ಕೆ ಸಾರಿದ್ದುದಯ್ಯ, ತರ್ಕ ತರ್ಕಿಸಲರಿಯದೆ ಮೂಗುವಟ್ಟಿದ್ದಿತಯ್ಯ, ಆಗಮ ಹೊರತೊಲಗಿ ಆಗಲಿದ್ದಿತಯ್ಯ, ನಮ್ಮ ಕೂಡಲಸಂಗಯ್ಯನು ಚೆನ್ನಯ್ಯನ ಮನೆಯಲುಂಡ ಕಾರಣ! ೪೧೩. ಆರು ಮುನಿದು ನಮ್ಮನೇನ ಮಾಡುವರು ? ಊರು ಮುನಿದು ನಮ್ಮನೆಂತು ಮಾಡುವರು ? ನಮ್ಮ ಕುನ್ನಿಗೆ ಕೂಸ ಕೊಡಬೇಡ! ನಮ್ಮ ಸೊಣಗಂಗೆ ತಣಿಗೆಯಲ್ಲಿಕ್ಕಬೇಡ! ಆನೆಯ ಮೇಲೆ ಹೋಹನ ಶ್ವಾನ ಕಚ್ಚಬಲ್ಲುದೆ ? ನಮಗೆ ನಮ್ಮ ಕೂಡಲಸಂಗನುಳ್ಳನ್ನಕ ? ೪೧೪. ನ್ಯಾಯನಿಷ್ಠುರ! ದಾಕ್ಷಿಣ್ಯಪರ ನಾನಲ್ಲ. ಲೋಕವಿರೋಧಿ! ಶರಣನಾರಿಗಂಜುವನಲ್ಲ, ಕೂಡಲಸಂಗಮದೇವರ ರಾಜತೇಜದಲ್ಲಿಪ್ಪೆನಾಗಿ! ೪೧೫. ಊರ ಮುಂದೆ ಹಾಲ ಹಳ್ಳ ಹರಿಯುತ್ತಿರಲು ? ಓರೆಯಾವಿನ ಬೆನ್ನ ಹರಿಯಲದೇಕಯ್ಯ ? ಲಜ್ಜೆಗೆಡಲೇಕೆ ? ನಾಣುಗೆಡಲೇಕೆ ? ಕೂಡಲಸಂಗಮದೇವಯ್ಯನುಳ್ಳನ್ನಕ ಬಿಜ್ಜಳನ ಭಂಡಾರವೆನಗೇಕಯ್ಯ ? ೪೧೬. ಕಂಡುದಕ್ಕೆಳೆಸೆನೆನ್ನ ಮ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು