Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೪೨೧. ಸೂಳೆಗೆ ಮೆಚ್ಚಿ ಸೂಳೆಯ ಬಂಟರೆಂಜಲ ತಿಂಬುದೀ ಲೋಕವೆಲ್ಲ! ಅಡಗ ವೆಚ್ಚಿ ಸೊಣಗನೆಂಜಲ ತಿಂಬುದೀ ಲೋಕವೆಲ್ಲ! ಲಿಂಗವ ಮೆಚ್ಚಿ ಜಂಗಮಪ್ರಸಾದವ ಕೊಂಬರ ನೋಡಿ ನಗುವವರ ಕುಂಭೀಪಾಕ ನಾಯಕನರಕದಲಿಕ್ಕುವ ಕೂಡಲಸಂಗಮದೇವ. ೪೨೨. ಹೊಲೆಯುಂಟೆ ಲಿಂಗವಿದ್ದೆಡೆಯಲ್ಲಿ ? ಕುಲವುಂಟೇ ಜಂಗಮವಿದ್ದೆಡೆಯಲ್ಲಿ ? ಎಂಜಲುಂಟೇ ಪ್ರಸಾದವಿದ್ದೆಡೆಯಲ್ಲಿ ? ಅಪವಿತ್ರದ ನುಡಿಯ ನುಡಿವ ಸೂತಕವೆ ಪಾತಕ. ನಿಷ್ಕಳಂಕ, ನಿಜೈಕ್ಯ, ತ್ರಿವಿಧನಿರ್ಣಯ ಕೂಡಲಸಂಗಮದೇವ, ನಿಮ್ಮ ಶರಣರಿಗಲ್ಲದಿಲ್ಲ. ೪೨೩. ಹುತ್ತದ ಮೇಲಣ ರಜ್ಜು ಮುಟ್ಟಿದರೆ ಸಾವರು ಶಂಕಿತರಾದವರು! ಸರ್ಪದಷ್ಟವಾದರೆಯೂ ಸಾಯರು ನಿಶ್ಶಂಕಿತರಾದವರು! ಕೂಡಲಸಂಗಮದೇವಯ್ಯ, ಶಂಕಿತಂಗೆ ಪ್ರಸಾದ ಕಾಳಕೂಟವಿಷವು! ೪೨೪. ನಂಬಿದರೆ ಪ್ರಸಾದ ನಂಬದಿದ್ದರೆ ವಿಷವು! ತುಡುಕಬಾರದು ನೋಡಾ ಲಿಂಗನ ಪ್ರಸಾದ! ಸಂಗನ ಪ್ರಸಾದ! ಕೂಡಲಸಂಗನ ಪ್ರಸಾದ ಸಿಂಗಿ-ಕಾಳಕೂಟ ವಿಷವು. ೪೨೫. ಪಂಡಿತನಾಗಲಿ ಮೂರ್ಖನಾಗಲಿ ಸಂಚಿತಕರ್ಮ ಉಂಡಲ್ಲದೆ ಬಿಡದು. ಪ್ರಾರಬ್ಧಕರ್ಮ ಭೋಗಿಸಿದಲ್ಲದೆ ಹೋಗದು- ಎಂದು ಶ್ರುತಿ ಸಾರುತ್ತೈದಾವೆ- ನೋಡಾ, ತಾನಾವ ಲೋಕದೊಳಗಿದ್...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು