Skip to main content

Posts

Showing posts from February 10, 2011

ಬಸವಣ್ಣನ ವಚನಗಳು - 441 ರಿಂದ 450 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೪೧. ಅರಿದರಿದು ಸಮಗಾಣಿಸಬಾರದು ? ತ್ರಾಸಿನ ಕಟ್ಟಳೆಯಂತಿನಿತು ವೆಗ್ಗಳವಾದರೆ ಈಶ್ವರನು ಒಡೆಯಿಕ್ಕದೆ ಮಾಣುವನೆ ? ಪಾತ್ರಾಪಾತ್ರವೆಂದು ಕಂಡರೆ ಶಿವನೆಂತು ಮೆಚ್ಚುವನೊ ? ಜೀವಜೀವಾತ್ಮವ ಸರಿಯೆಂದು ಕಂಡರೆ ಸಮವೇದಿಸದಿಪ್ಪನೇ ಶಿವನು ? ತನ್ನ ಮನದಲ್ಲಿ "ಯತ್ರ ಜೀವಸ್ತತ್ರ ಶಿವ"ನೆಂದು ಸರ್ವಜೀವದಯಾಪಾರಿಯಾದರೆ ಕೂಡಲಸಂಗಮದೇವನು ಕೈಲಾಸದಿಂದ ಬಂದು ಎತ್ತಿಕೊಳ್ಳದಿಪ್ಪನೆ ? ೪೪೨. ಮುತ್ತು ಉದಕದಲಾಗದು, ಉದಕ ಮುತ್ತಿನೊಲಾಗದು, ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ! ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕಲ್ಲದೆ, ಕರ್ತೃ ಕೂಡಲಸಂಗಮದೇವರ ಒಲವಿನ ದಯದ ಚಿತ್ತವಿಡಿದಂಗಲ್ಲದೆ ಶಿವತತ್ತ್ವ ಸಾಹಿತ್ಯವಾಗದು. ೪೪೩. ಚಂದ್ರಕಾಂತದ ಶಿಲೆಯಲ್ಲಿ ಜಲವಿಲ್ಲದನ್ನಕ ಶೈತ್ಯವ ತೋರುವ ಪರಿಯೆಂತೋ ? ಸೂರ್ಯಕಾಂತದ ಶಿಲೆಯಲ್ಲಿ ಅಗ್ನಿಯಿಲ್ಲದನ್ನಕ ಉಷ್ಣವ ತೋರುವ ಪರಿಯೆಂತೋ ? ಶರಣಂಗೆ ಭಕ್ತಿಕಾಯವಿಲ್ಲದನ್ನಕ ಕೂಡಲಸಂಗನನರಿವ ಪರಿಯೆಂತೋ ? ೪೪೪. ಮುನ್ನೂರರುವತ್ತು ನಕ್ಷತ್ರಕ್ಕೆ ಬಾಯ ಬಿಟ್ಟುಕೊಂಡಿಪ್ಪುದೇ ಸಿಂಪು ? ಅದು ಸ್ವಾತಿಗಲ್ಲದೆ ಬಾಯ್ದೆರೆಯದು ಕೇಳಾ ಕೇಳು ತಂ