Skip to main content

Posts

Showing posts from February 11, 2011

ಬಸವಣ್ಣನ ವಚನಗಳು - 451 ರಿಂದ 460 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೫೧. ಭೂತ ಒಲಿದು ಆತ್ಮನ ಸೋಂಕಿದ ಬಳಿಕ ಭೂತದ ಗುಣವಲ್ಲದೆ, ಆತ್ಮನ ಗುಣವುಂಟೆ ? ಗುರುಕಾರುಣ್ಯವಾಗಿ, ಹಸ್ತಮಸ್ತಕಸಂಯೋಗವಾದ ಬಳಿಕ ಗುರುಲಿಂಗಜಂಗಮವೇ ಗತಿಯಾಗಿದ್ದೆ ಕೂಡಲಸಂಗಮದೇವ. ೪೫೨. ಮಾಡುವಾತ ನಾನಲ್ಲಯ್ಯ, ನೀಡುವಾತ ನಾನಲ್ಲಯ್ಯ, ಬೇಡುವಾತ ನಾನಲ್ಲಯ್ಯ, ನಿಮ್ಮ ಕಾರುಣ್ಯವಲ್ಲದೆ, ಎಲೆ ದೇವಾ! ಮನೆಯ ತೊತ್ತಲಸಿದರೆ ಒಡತಿ ಮಾಡಿಕೊಂಬಂತೆ ನಿನಗೆ ನೀ ಮಾಡಿಕೋ ಕೂಡಲಸಂಗಮದೇವಾ! ೪೫೩. ಪರಿಯಾಣವೇ ಭಾಜನವೆಂಬರು ಪರಿಯಾಣ ಭಾಜನವಲ್ಲ ಲಿಂಗಕ್ಕೆ! ತನ್ನ ಮನವೇ ಭಾಜನ! ಪ್ರಾಣವನು ಬೀಸರವೋಗದೆ ಮೀಸಲಾಗರ್ಪಿಸಬಲ್ಲಡೆ, ಕೂಡಿಕೊಂಡಿಪ್ಪ ನಮ್ಮ ಕೂಡಲಸಂಗಮದೇವ. ೪೫೪. ಜ್ಞಾನದ ಬಲದಿಂದ ಅಜ್ಞಾನದ ಕೇಡು ನೋಡಯ್ಯ. ಜ್ಯೋತಿಯ ಬಲದಿಂದ ತಮಂಧದ ಕೇಡು ನೋಡಯ್ಯ. ಸತ್ಯದ ಬಲದಿಂದ ಅಸತ್ಯದ ಕೇಡು ನೋಡಯ್ಯ. ಪರುಷದ ಬಲದಿಂದ ಅವಲೋಹದ ಕೇಡು ನೋಡಯ್ಯ. ಕೂಡಲಸಂಗನ ಶರಣರನುಭಾವದಿಂದ ಎನ್ನ ಭವದ ಕೇಡು ನೋಡಯ್ಯ. ೪೫೫. ಆಲಿಕಲ್ಲ ಹರಳಿನಂತೆ, ಅರಗಿನ ಪುತ್ಥಳಿಯಂತೆ ತನು ಕರಗಿ ನೆರೆವ ಸುಖವ ನಾನೇನೆಂಬ! ಕಡೆಗೋಡಿವರಿದವೆನಗಯ್ಯ ನಯನದ ಸುಖಜಲಂಗಳು! ನಮ್ಮ ಕೂಡಲಸಂಗಮದೇವರ ಮುಟ್ಟಿ ನೆರೆವ