Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೧೧. ಅಂಗಸಂಗಿಯಾಗಿ ಸಂಬಂಧಿಯಲ್ಲ ಲಿಂಗದೊಳಗಾಪ್ಯಾಯಿನಿಯಾಗಿ ಇತರ ಸು- ಖಂಗಳ ಬಿಟ್ಟು ಕಳೆದು ಸಮನ ಸಾರಾಯನಾದ ಶರಣನು ||ಪಲ್ಲವ|| ಗುರುಕರುಣಸಂಗದಿಂದ ಶಿಷ್ಯನಿಂತು ಕರದಲ್ಲಿ ಹುಟ್ಟಿದನು ಕರಣಸಹಿತ ಅವಗ್ರಾಹಿಯಾಗಿ ಘಾಳಿ ಸುಳುಹಡಗಿದ ಶರಣನು ||೧|| ಆಸೆಯೆಂಬ ಹದನುಳುಹಾಗಿ ಹಿಡಿದ ಛಲ ಬಿಡದೆಂಬ ಬೇರೂರಿ ಸಂಕಲ್ಪವಿಕಲ್ಪಗಳೆರಡೂ ಇಲ್ಲದೆ ನಿಃಕಳಂಕನಾದನು ಶರಣನು ||೨|| ಮಾಡುವವರ ಕಂಡು ಮಾಡುವವನಲ್ಲ ಮಾಡದವರ ಕಂಡು ಮಾಡದವನಲ್ಲ ತಾ ಮಾಡುವ ಮಾಟಕೆ ತವಕಿಗನಾಗಿಪ್ಪ ಹಿಂದುಮುಂದರಿಯದ ಶರಣನು ||೩|| ಎಲ್ಲವು ತಾನೆಂಬ ಕರುಣಾಕರನಲ್ಲ ನಿಃಕರುಣಿಯಾಗಿ ಜಡದೇಹಿಯಲ್ಲ ಭೋಗಿಪ ಭೋಗಂಗಳಾಮಿಷ ತಾಮಸ ವಿಷಯವಿರಹಿತನು ಶರಣನು ||೪|| ಘನವನಿಂಬುಗೊಂಡ ಮನದ ಬೆಂಬಳಿವಿಡಿದುಳೆದಲ್ಲಿ ನಿಜವಾಗಿ ನಿಂದನು ತಾನೆಂಬುದಿಲ್ಲ ನಿರಂತರ ಸದ್ಗುರು ಚೆನ್ನಮಲ್ಲಿಕಾರ್ಜುನ ನಿಮ್ಮ ಶರಣ ಬಸವಣ್ಣನು ||೫|| ೨೧೨. ಅಂಗದಲ್ಲಿ ಲಿಂಗಸಂಗ ಲಿಂಗದಲ್ಲಿ ಅಂಗಸಂಗ ಮಾಡಿದನೆಂದರೆ ಎನ್ನಗಾವ ಜಂಜಡವಿಲ್ಲ ಚೆನ್ನಮಲ್ಲಿಕಾರ್ಜುನನ ಸ್ನೇಹದಲ್ಲಿ ನಿನ್ನ ಕರುಣದ ಶಿಶು ನಾನು ಕಾಣ ಸಂಗನಬಸವಣ್ಣ ೨೧೩. ಲಿ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು