Skip to main content

Posts

Showing posts from March 11, 2011

ಅಕ್ಕನ ವಚನಗಳು - 221 ರಿಂದ 230 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.     ೨೨೧. ಸದ್ಗುರುಸ್ವಾಮಿ ಶಿಷ್ಯಂಗೆ ಅನುಗ್ರಹವ ಮಾಡುವಲ್ಲಿ ತತ್ ಶಿಷ್ಯನ ಮಸ್ತಕದ ಮೇಲೆ ತನ್ನ ಶ್ರೀಹಸ್ತವನಿರಿಸಿದಡೆ ಲೋಹದ ಮೇಲೆ ಪರುಷ ಬಿದ್ದಂತಾಯಿತ್ತಯ್ಯ ಒಪ್ಪುವ ಶ್ರೀವಿಭೂತಿಯ ನೊಸಲಿಂಗೆ ಪಟ್ಟವ ಕಟ್ಟಿದಡೆ ಮುಕ್ತಿಸಾಮ್ರಾಜ್ಯದೊಡೆತನಕ್ಕೆ ಪಟ್ಟವ ಕಟ್ಟಿದಂತಾಯಿತ್ತಯ್ಯ ಸದ್ಯೋಜಾತ-ವಾಮದೇವ-ಅಘೋರ-ತತ್ಪುರುಷ-ಈಶಾನವೆಂಬ ಪಂಚಕಲಶದ ಅಭಿಷೇಕವ ಮಾಡಿಸಲು ಶಿವನ ಕಾರುಣ್ಯಾಮೃತದ ಸೋನೆ ಸುರಿದಂತಾಯಿತ್ತಯ್ಯ ನೆರೆದ ಶಿವಂಗಳ ಮಧ್ಯದಲ್ಲಿ ಮಹಾಲಿಂಗವನು ಕರಸ್ಥಲಾಮಲಕವಾಗಿ ಶಿಷ್ಯನ ಕರಸ್ಥಲಕ್ಕೆ ಇಟ್ಟು, ಅಂಗದಲ್ಲಿ ಪ್ರತಿಷ್ಠಿಸಿ ಪ್ರಣವಪಂಚಾಕ್ಷರಿಯುಪದೇಶವ ಕರ್ಣದಲ್ಲಿ ಹೇಳಿ ಕಂಕಣವ ಕಟ್ಟಿದಲ್ಲಿ ಕಾಯವೇ ಕೈಲಾಸವಾಯಿತ್ತು ಪ್ರಾಣವೇ ಪಂಚಬ್ರಹ್ಮಮಯ ಲಿಂಗವಾಯಿತ್ತು ಇಂದು ಮುಂದ ತೋರಿ ಹಿಂದ ಬಿಡಿಸಿದ ಶ್ರೀಗುರುವಿನ ಸಾನಿದ್ಧ್ಯದಿಂದಾನು ಬದುಕಿದೆನಯ್ಯ ಚೆನ್ನಮಲ್ಲಿಕಾರ್ಜುನಯ್ಯ ೨೨೨. ನಮ್ಮ ಮನೆಯಲಿಂದು ಹಬ್ಬ ನಮಗೆ ಸಂದಣಿ ಬಹಳ ಒಮ್ಮೆ ನುಡಿಸ ಹೊತ್ತಿಲ್ಲ ಹೋಗಿ ವಿಷಯಗಳಿರಾ ತನುವೆಂಬ ಮನೆಯೊಳಗೆ ನೆಲಸಿಪ್ಪ ಪರಮಾತ್ಮ ಮನೆಯ ದೇವರ ಹಬ್ಬ! ಆ ಹಬ್ಬಕಿಂದು ನೆನೆಯದೆ ಮಿಂದು ನಡ