Skip to main content

Posts

Showing posts from March 12, 2011

ಅಕ್ಕನ ವಚನಗಳು - 231 ರಿಂದ 240 ರವರೆಗೆ

೨೩೧. ತನುವ ಮೀರಿತ್ತು, ಮನವ ಮೀರಿತ್ತು ಮಹವ ಮೀರಿತ್ತು ಅಲ್ಲಿಂದತ್ತ ಭಾವಿಸುವ ಭಾವಕರಿಲ್ಲಾಗಿ ತಾರ್ಕಣೆಯಿಲ್ಲ ಚೆನ್ನಮಲ್ಲಿಕಾರ್ಜುನಯ್ಯ ಬೆರಸಲಿಲ್ಲದ ನಿಜತತ್ವವು ೨೩೨. ಆಧಾರ-ಸ್ವಾಧಿಷ್ಠಾನ-ಮಣಿಪೂರಕ- ಅನಾಹುತ-ವಿಶುದ್ಧಿ-ಆಜ್ಞೇಯವ ನುಡಿದರೇನು? ಆದಿಯನಾದಿಯ [ಸುದ್ದಿಯ] ಕೇಳಿದಡೇನು, ಹೇಳಿದಡೇನು ತನ್ನಲ್ಲಿದ್ದುದ ತಾನರಿಯದನ್ನಕ್ಕರ ಉನ್ಮನಿರಭಸದ ಮನ ಪವನದ ಮೇಲೆ ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲಯದವರು? ೨೩೩. ನಿತ್ಯವೆಂಬ ನಿಜಪದವೆನ್ನ ಹತ್ತೆ ಸಾರ್ದುದ ಕಂಡ ಬಳಿಕ ಚಿತ್ತ ಕರಗಿ ಮನ ಕೊರಗಿ ಹೃದಯವರಳಿತು ನೋಡಯ್ಯ ಒತ್ತಿ ಬಿಗಿದ ಸೆರೆಯೊಳಗೆ ಅತ್ತಿತ್ತಲೆಂದರಿಯದೆ ಚೆನ್ನಮಲ್ಲಿಕಾರ್ಜುನನ ಪಾದದಲ್ಲಿ ಮರೆದೊರಗಿದೆ ನೋಡಯ್ಯ ೨೩೪. ಆಶೆಯಾಮಿಷವಳಿದು ಹುಸಿ ವಿಷಯಂಗಳೆಲ್ಲಾ ಹಿಂಗಿ ಸಂಶಯಸಂಬಂಧ ವಿಸಂಬಂಧವಾಯಿತ್ತು ನೋಡಾ ಎನ್ನ ಮನದೊಳಗೆ ಘನಪರಿಣಾಮವ ಕಂಡು ಮನ ಮಗ್ನವಾಯಿತ್ತಯ್ಯ ಚೆನ್ನಮಲ್ಲಿಕಾರ್ಜುನ, ನಿಮ್ಮ ಶರಣ ಪ್ರಭುದೇವರ ಕರುಣದಿಂದ ಬದುಕಿದೆನಯ್ಯ ೨೩೫. ಆದಿಅನಾದಿಯ ನಿತ್ಯಾನಿತ್ಯವ ತಿಳಿಯಲರಿಯದೆ ವಾಯಕ್ಕೆ ಪರಬ್ರಹ್ಮವ ನುಡಿವ ವಾಯುಪ್ರಾಣಿಗಳವರೆತ್ತ ಬಲ್ಲರೋ ಆ ಪರಬ್ರಹ್ಮದ ನಿಲವ? ಅದೆಂತೆಂದಡೆ ಆದಿಯೇ ದೇಹ, ಅನಾದಿಯೇ ನಿರ್ದೇಹ ಆದಿಯೇ ಸಕಲ, ಅನಾದಿಯೇ ನಿಷ್ಕಲ ಆದಿಯೇ ಜಡ, ಅನಾದಿಯೇ ಅಜಡ ಆದಿಯೇ ಕಾಯ, ಅನಾದಿಯೇ ಪ್ರಾಣ ಈ ಎರಡರ ಯೋಗವ ಭೇದಿಸಿ ತನ್ನಿಂದ ತಾ ತಿಳಿದು ನೋಡಲು ಆದಿಸಂಬಂಧಮಪ್ಪ ಭೂ