Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೪೧. ತನು ಶುದ್ಧವಾಯಿತ್ತು ಶಿವಭಕ್ತರೊಕ್ಕುದ ಕಂಡೆನ್ನ ಮನ ಶುದ್ಧವಾಯಿತ್ತು ಅಸಂಖ್ಯಾತರ ನೆನೆದೆನ್ನ ಕಂಗಳು ಶುದ್ಧವಾಯಿತ್ತು ಸಕಲಗಣಂಗಳ ನೋಡಿಯೆನ್ನ ಶ್ರೋತ್ರ ಶುದ್ಧವಾಯಿತ್ತು ಅವರ ಕೀರ್ತಿಯ ಕೇಳಿಯೆನ್ನ ಘ್ರಾಣ ಶುದ್ಧವಾಯಿತ್ತು ನಿಮ್ಮ ಪಾದಾರ್ಪಿತ ಪರಿಮಳವ ವಾಸಿಸಿಯೆನ್ನ ಜಿಹ್ವೆ ಶುದ್ಧವಾಯಿತ್ತು ನಿಮ್ಮ ಶರಣರೊಕ್ಕುದ ಕೊಂಡೆನಾಗಿ ಭಾವನೆಯೆನಗಿದು ಜೀವನ ಕೇಳಾ ಲಿಂಗ ತಂದೆ ನೆಟ್ಟನೆ ನಿಮ್ಮ ಮನ ಮುಟ್ಟಿ ಪೂಜಿಸಿ ಭವಗೆಟ್ಟೆ ನಾನು ಚೆನ್ನಮಲ್ಲಿಕಾರ್ಜುನ ೨೪೨. ಕುಲಮದವೆಂಬುದಿಲ್ಲ ಅಯೋನಿಸಂಭವನಾಗಿ ಛಲಮದವೆಂಬುದಿಲ್ಲ ಪ್ರತಿದೂರನಾಗಿ ಧನಮದವೆಂಬುದಿಲ್ಲ ತ್ರಿಕರಣಶುದ್ಧನಾಗಿ ವಿದ್ಯಾಮದವೆಂಬುದಿಲ್ಲ ಅಸಾಧ್ಯವ ಸಾಧಿಸಿದೆನಾಗಿ ಮತ್ತಾವ ಮದವಿಲ್ಲ ನೀನವಗವಿಸಿದ ಕಾರಣ ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮ ಶರಣ ಅಕಾಯಚರಿತ್ರನಾಗಿ ೨೪೩. ಉದಯಾಸ್ತಮಾನವೆಂಬೆರಡು ಕೊಳಗದಲ್ಲಿ ಆಯುಷ್ಯವೆಂಬ ರಾಶಿಯ ಅಳೆದು ತೀರದ ಮುನ್ನ ಶಿವನ ನೆನೆಯಿರೇ! ಶಿವನ ನೆನೆಯಿರೇ! ಈ ಜನ್ಮ ಬಳಿಕಿಲ್ಲ ಚೆನ್ನಮಲ್ಲಿಕಾರ್ಜುನದೇವರ ದೇವ ಪಂಚಮಹಾಪಾತಕರೆಲ್ಲ ಮುಕ್ತಿವಡೆದರು ೨೪೪. ಕರುವಿನ ರೂಹು ಅ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು