Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೫೨. ಊಡಿದಡುಣ್ಣದು, ನೀಡಿದಡರಿಯದು ಕಾಣದು ಬೇಡದು, ಒಲಿಯದು ನೋಡಾ ಊಡಿದರುಂಡು ನೀಡೀದಡೊಲಿದು ಬೇಡಿದ ವರವ ಕೊಡುವ ಜಂಗಮಲಿಂಗದ ಪಾದವ ಹಿಡಿದು ಬದುಕಿದೆ ಕಾಣಾ ಚೆನ್ನಮಲ್ಲಿಕಾರ್ಜುನ ೨೫೩. ಕಾಯ ಪ್ರಸಾದವೆನ್ನ ಮನ ಪ್ರಸಾದವೆನ್ನ ಪ್ರಾಣ ಪ್ರಸಾದವೆನ್ನ ಭಾವ ಪ್ರಸಾದವೆನ್ನ ಸೈಧಾನ ಪ್ರಸಾದವೆನ್ನ ಸಮಭೋಗ ಪ್ರಸಾದವೆನ್ನ ಚೆನ್ನಮಲ್ಲಿಕಾರ್ಜುನಯ್ಯ ನಿಮ್ಮ ಪ್ರಸಾದವ ಹಾಸಿ ಹೊದಿಸಿಕೊಂಡಿಪ್ಪೆ ೨೫೪. ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ ಅಸ್ತಮಾನದಿಂದ ಮೇಲೆ ಜಿತೇಂದ್ರಿಯರಿಲ್ಲ ವಿಧಿಯ ಮೀರುವ ಅಮರರಿಲ್ಲ ಕ್ಷುಧೆ-ವ್ಯಸನ-ವಿಧಿಗಂಜಿ ನಾ ನಿಮ್ಮ ಮರೆವೊಕ್ಕು ಚೆನ್ನಮಲ್ಲಿಕಾರ್ಜುನ ಬದುಕಿದೆ ೨೫೫. ಅರಿದೆನೆಂದೆಡೆ ಅರಿಯಬಾರದು ನೋಡಾ ಘನಕ್ಕೆ ಘನ ತಾನೆ ನೋಡಾ ಚೆನ್ನಮಲ್ಲಿಕಾರ್ಜುನನ ನಿರ್ಣಯವಿಲ್ಲದೆ ಸೋತೆನು ೨೫೬. ಎನ್ನಂತೆ ಪುಣ್ಯಂಗೆಯ್ದವರುಂಟೆ? ಎನ್ನಂತೆ ಭಾಗ್ಯಂಗೆಯ್ದವರುಂಟೆ? ಕಿನ್ನರನಂತಪ್ಪ ಸೋದರನೆನಗೆ ಏಳೇಳು ಜನ್ಮದಲ್ಲಿ ಶಿವಭಕ್ತರೇ ಬಂಧುಗಳೆನಗೆ ಚೆನ್ನಮಲ್ಲಿಕಾರ್ಜುನನಂತಪ್ಪ ಗಂಡ ನೋಡಾ ಎನಗೆ ೨೫೭. ಅಯ್ಯಾ ನಿಮ್ಮ ಶರಣರು ಮೆಟ್ಟಿದ ಧರೆ ಪಾವನವಯ್ಯ ಅಯ್...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು