Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೬೧. ಅಂಗದೊಳಗೆ ಅಂಗವಾಗಿ ಅಂಗಲಿಂಗೈಕ್ಯವ ಮಾಡಿದೆ ಮನದೊಳಗೆ ಮನವಾಗಿ ಮನ ಲಿಂಗೈಕ್ಯವ ಮಾಡಿದೆ ಭಾವದೊಳಗೆ ಭಾವವಾಗಿ ಭಾವಲಿಂಗೈಕ್ಯವ ಮಾಡಿದೆ ಅರಿವಿನೊಳಗೆ ಅರಿವಾಗಿ ಜ್ಞಾನಲಿಂಗೈಕ್ಯವ ಮಾಡಿದೆ ಕ್ರೀಗಳೆಲ್ಲವ ನಿಲಿಸಿ ಕ್ರಿಯಾತೀತವಾಗಿ ನಿವೃತ್ತಿಲಿಂಗೈಕ್ಯವ ಮಾಡಿದೆ ನಾನೆಂಬುದ ನಿಲಿಸಿ ನೀನೆಂಬುದ ಕೆಡಿಸಿ ಉಭಯಲಿಂಗೈಕ್ಯವ ಮಾಡಿದೆ ಚೆನ್ನಮಲ್ಲಿಕಾರ್ಜುನನೊಳಗೆ ನಾನಳಿದೆನಾಗಿ ಲಿಂಗವೆಂಬ ಘನವು ಎನ್ನಲ್ಲಿ ಅಳಿಯಿತ್ತು [=ಉಳಿಯಿತ್ತು?] ಕಾಣಾ ಸಂಗನಬಸವಣ್ಣ ೨೬೨. ಎನ್ನ ಭಕ್ತಿ ನಿಮ್ಮ ಧರ್ಮ ಎನ್ನ ಜ್ಞಾನ ಪ್ರಭುದೇವರ ಧರ್ಮ ಎನ್ನ ಪರಿಣಾಮ ಚೆನ್ನಬಸವಣ್ಣನ ಧರ್ಮ ಈ ಮೂವರೂ ಒಂದೊಂದ ಕೊಟ್ಟರೆನಗೆ- ಮೂರು ಭಾವವಾಯಿತ್ತು ಈ ಮೂರನು ನಿನ್ನಲ್ಲಿ ಸಮರ್ಪಿಸಿದ ಬಳಿಕ ಎನಗಾವ ಜಂಜಡವಿಲ್ಲ ಚೆನ್ನಮಲ್ಲಿಕಾರ್ಜುನದೇವರ ನೆನಹಿನಲ್ಲಿ ನಿನ್ನ ಕರುಣದ ಶಿಶು ನಾನು ಕಾಣಾ ಸಂಗನಬಸವಣ್ಣ ೨೬೩. ಲಿಂಗ ಸುಖಸಂಗದಲ್ಲಿ ಮನ ವೇದ್ಯವಾಯಿತ್ತು ಇನ್ನೆಲ್ಲಿಯದಯ್ಯ ಎನಗೆ ನಿಮ್ಮಲ್ಲಿ ನಿರವಯವು? ಇನ್ನೆಲ್ಲಿಯದಯ್ಯ ನಿಮ್ಮಲ್ಲಿ ಕೂಡುವುದು? ಪರಮಸುಖಪರಿಣಾಮ ಮನ ಮೇರೆದಪ್ಪಿ ನಾನು ನಿಜವನೈದುವ ಠ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು