Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು