Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೮೧. ಕಲ್ಲಹೊತ್ತು ಕಡಲೊಳಗೆ ಮುಳುಗಿದೊಡೆ ಎಡರಿಂಗೆ ಕಡೆಯುಂಟೇ ಅವ್ವ? ಉಂಡು ಹಸಿವಾಯಿತ್ತೆಂದೊಡೆ ಭಂಗವೆಂಬೆ ಕಂಡ ಕಂಡ ಠಾವಿನಲ್ಲಿ ಮನ ಬೆಂದೊಡೆ ಗಂಡ ಮಲ್ಲಿಕಾರ್ಜುನಯ್ಯನೆಂತೊಲಿವೆನಯ್ಯ ೨೮೨. ಉಡುವೆ ನಾನು ಲಿಂಗಕ್ಕೆಂದು ತೊಡುವೆ ನಾನು ಲಿಂಗಕ್ಕೆಂದು ಮಾಡುವೆ ನಾನು ಲಿಂಗಕ್ಕೆಂದು ನೋಡುವೆ ನಾನು ಲಿಂಗಕ್ಕೆಂದು ಎನ್ನಂತರಂಗ ಬಹಿರಂಗಗಳು ಲಿಂಗಕ್ಕಾಗಿ ಮಾಡಿಯೂ ಮಾಡದಂತಿಪ್ಪೆ ನೋಡಾ! ಆನೆನ್ನ ಚೆನ್ನಮಲ್ಲಿಕಾರ್ಜುನನೊಳಗಾಗಿ ಹತ್ತರೊಳಗೆ ಹನ್ನೊಂದಾಗಿಪ್ಪುದನೇನ ಹೇಳುವೆನವ್ವ? ೨೮೩. ಸಾವಿಲ್ಲದ ಕೇಡಿಲ್ಲದ ಚೆಲುವಂಗಾನೊಲಿದೆನವ್ವ ಎಡೆಯಿಲ್ಲದ ಕಡೆಯಿಲ್ಲದ ತೆರಹಿಲ್ಲದ ಕುರುಹಿಲ್ಲದ ಚೆಲುವಂಗಾನೊಲಿದೆನವ್ವ ಭವವಿಲ್ಲದ ಭಯವಿಲ್ಲದ ಚೆಲುವಂಗಾನೊಲಿದೆ ಕುಲಸೀಮೆಯಿಲ್ಲದ ನಿಸ್ಸೀಮ ಚೆಲುವಂಗಾನೊಲಿದೆ ಇದುಕಾರಣ ಚೆನ್ನಮಲ್ಲಿಕಾರ್ಜುನ ಚೆಲುವ ಗಂಡನೆನಗೆ ಈ ಸಾವ ಕೆಡುವ ಗಂಡರನೊಯ್ದು [ಒಲೆಯೊಳಗಿಕ್ಕು ತಾಯೆ] ೨೮೪. ಅಯ್ಯ, ಪರಾತ್ಪರ ಸತ್ಯಸದಾಚಾರ ಗುರುಲಿಂಗ- ಜಂಗಮದ ಶ್ರೀಚರಣವನ್ನು ಹಿಂದೆ ಹೇಳದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು