Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments. ೨೯೧. ಹುಟ್ಟು-ಹೊರೆಯ ಕಟ್ಟಳೆಯ ಕಳೆದನವ್ವ ಹೊನ್ನು-ಮಣ್ಣಿನ ಮಾಯೆಯ ಮಾಣಿಸಿದನವ್ವ ಎನ್ನ ತನುವಿನ ಲಜ್ಜೆಯನಿಳುಹಿ ಎನ್ನ ಮನದ ಕತ್ತಲೆಯ ಕಳೆದ ಚೆನ್ನಮಲ್ಲಿಕಾರ್ಜುನಯ್ಯನ ಒಳಗಾದವಳನೇನೆಂದು ನುಡಿಯಿಸುವಿರವ್ವ ೨೯೨. ಕಾಯದ ಕಳವಳವ ಕೆಡಿಸಿ ಮನದ ಮಾಯೆಯ ಮಾಣಿಸಿ ಎನ್ನ ಹರಣವ ಮೇಲೆತ್ತಿ ಸಲಹಿದೆಯಯ್ಯ ಶಿವಶಿವಾ ಎನ್ನ ಬಂಧನವ ಬಿಡಿಸಿ ನಿಮ್ಮತ್ತ ತೋರಿದ ಘನವನುಪಮಿಸಬಾರದಯ್ಯ ಇರುಳೋಸರಿಸದ ಜಕ್ಕವಕ್ಕಿಯಂತೆ ನಾನಿಂದು ನಿಮ್ಮ ಶ್ರೀಪಾದವನಿಂಬುಗೊಂಡು ಸುಖದೊಳಗೋಲಾಡುವೆನಯ್ಯ ಚೆನ್ನಮಲ್ಲಿಕಾರ್ಜುನ ೨೯೩. ಅಯ್ಯ, ನೀನೆನ್ನ ಮೊರೆಯನಾಲಿಸಿದೊಡಾಲಿಸು ಆಲಿಸದಿರ್ದೊಡೆ ಮಾಣು ಅಯ್ಯ, ನೀನೆನ್ನ ದುಃಖವ ನೋಡಿದೊಡೆ ನೋಡು ನೋಡದಿರ್ದೊಡೆ ಮಾಣು ಎನಗಿದು ವಿಧಿಯೆ?! ನೀನೊಲ್ಲದೊಡೆ ನಾನೊಲಿಸುವ ಪರಿಯೆಂತಯ್ಯ? ಮಾನವಳಿಸಿ ಮಾರುವೋಗಿ ಮರೆವೊಕ್ಕೊಡೆ ಕೊಂಬ ಪರಿಯೆಂತಯ್ಯ ಚೆನ್ನಮಲ್ಲಿಕಾರ್ಜುನ ೨೯೪. ಮುಡಿ ಬಿಟ್ಟು ಮೊಗ ಬಾಡಿ ತನು ಕರಗಿದವಳ ಎನ್ನನೇಕೆ ನುಡಿಸುವಿರಿ ಎಲೆ ಅಣ್ಣಗಳಿರಾ? ಎನ್ನನೇಕೆ ಕಾಡುವಿರಿ ಎಲೆ ತಂದೆಗಳಿರಾ? ಬಲುಹಳಿದು, ಭವಗೆಟ್ಟು ಛಲವಳಿದು ಭಕ್ತೆಯಾಗಿ ಚೆನ್ನಮಲ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು