Skip to main content

Posts

Showing posts from March 21, 2011

ಅಕ್ಕನ ವಚನಗಳು - 321 ರಿಂದ 330 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೨೧. ಕಳವಳದ ಮನವು ತಲೆಕೆಳಗಾದುದವ್ವ ಸುಳಿದು ಬೀಸುವ ಗಾಳಿ ಉರಿಯಾಯಿತವ್ವ ಬೆಳದಿಂಗಳು ಬಿಸಿಲಾಯಿತ್ತು ಕೆಳದಿ ಹೊಳಲ ಸುಂಕಿಗನಂತೆ ತೊಳಲುತಿದ್ದೆನವ್ವ ತಿಳುಹೌ ಬುದ್ಧಿಯ ಹೇಳಿ ಕರೆತಾರೆಲೆಗವ್ವ ಚೆನ್ನಮಲ್ಲಿಕಾರ್ಜುನಂಗೆ ಎರಡರ ಮುನಿಸವ್ವ ೩೨೨. ಇಂದೆನ್ನ ಮನೆಗೆ ಗಂಡ ಬಂದಹನೆಲೆಗವ್ವ ನಿಮನಿಮಗೆಲ್ಲ ಶೃಂಗಾರವ ಮಾಡಿಕೊಳ್ಳಿ ಚೆನ್ನಮಲ್ಲಿಕಾರ್ಜುನನೀಗಳೇ ಬಂದಹನು ಇದಿರುಗೊಳ್ಳ ಬನ್ನಿರೇ ಅವ್ವಗಳಿರಾ! ೩೨೩. ಬಂದಹನೆಂದು ಬಟ್ಟೆಯ ನೋಡಿ ಬಾರದಿದ್ದರೆ ಕರಗಿ ಕೊರಗಿದೆನವ್ವ ತಡವಾದರೆ ಬಡವಾದೆ ತಾಯೆ ಚೆನ್ನಮಲ್ಲಿಕಾರ್ಜುನ ಒಂದಿರುಳಗಲಿದರೆ ತೆಕ್ಕೆ ಸಡಿಲಿದ ಜಕ್ಕವಕ್ಕಿಯಂತಾದೆನವ್ವ ೩೨೪. ಕೂಡಿ ಕೂಡುವ ಸುಖದಿಂದ ಒಪ್ಪಚ್ಚಿ ಅಗಲಿ ಕೂಡುವ ಸುಖ ಲೇಸು ಕೆಳದಿ! ಒಚ್ಚತ ಅಗಲಿರೆ, ಕಾಣದೆ ಇರಲಾರೆ, ಎನ್ನ ದೇವ ಚೆನ್ನಮಲ್ಲಿಕಾರ್ಜುನನ ಅಗಲಿ ಅಗಲದ ಸುಖವೆಂದಪ್ಪುದೋ! ೩೨೫. ಉರಿಯ [ಪಳಿಯನೆ] ಉಡಿಸಿ, ಊರಿಂದ ಹೊರಗಿರಿಸಿ ಕರೆಯಲಟ್ಟಿದ ಸಖಿಯ ನೆರೆದ ನೋಡೆಲೆಗವ್ವ ತುರ್ಯಾವಸ್ಥೆಯಲ್ಲಿ ತೂಗಿ ತೂಗಿ ನೋಡಿ ಕರೆ ನೊಂದೆ ನೋಡವ್ವ ಅವಸ್ಥೆಯಿಂದ ಹಿರಿದು ದುಃಖದಲ್ಲಿ ಬೆಂದೆ ಕರಿ ಬೆ