Skip to main content

Posts

Showing posts from March 22, 2011

ಅಕ್ಕನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ಶಿವಗಣಂಗಳ ಮನೆಯಂಗಳ ವಾರಣಾಸಿಯೆಂಬುದು ಹುಸಿಯೇ ಪುರಾತನರ ಮನೆಯ ಅಂಗಳದಲ್ಲಿ ಅಷ್ಟಾಷಷ್ಟಿತೀರ್ಥಂಗಳು ನೆಲೆಸಿಪ್ಪವಾಗಿ? ಅದೆಂತೆಂದಡೆ: ಕೇದಾರಸ್ಯೋದಕೇ ಪೀತೇ ವಾರಣಸ್ಯಾಂ ಮೃತೇ ಸತಿ ಶೀಶೈಲ ಶಿಖರೇ ದೃಷ್ಟೇ ಪುನರ್ಜನ್ಮ ನ ವಿದ್ಯತೇ ಎಂಬ ಶಬ್ದಕ್ಕಧಿಕವು ಸುತ್ತಿಬರಲು ಶ್ರೀಶೈಲ, ಕೆಲಬಲದಲ್ಲಿ ಕೇದಾರ ಅಲ್ಲಿಂದ ಹೊರಗೆ ವಾರಣಾಸಿ ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ ಎನ್ನ ದೇವ ಚೆನ್ನಮಲ್ಲಿಕಾರ್ಜುನ ನಿಮ್ಮ ಭಕ್ತರ ಮನೆಯಂಗಳ ವಾರಣಾಸಿಯಿಂದ ಗುಂಜಿಯಧಿಕ ನೋಡಾ! ೩೩೨. ನಿನ್ನ ಅಂಗದಾಚಾರವ ಕಂಡು ಎನಗೆ ಲಿಂಗಸಂಗವಾಯಿತ್ತಯ್ಯ, ಬಸವಣ್ಣ ನಿನ್ನ ಮನದ ಸುಜ್ಞಾನವ ಕಂಡು ಎನಗೆ ಜಂಗಮಸಂಬಂಧವಾಯಿತ್ತಯ್ಯ, ಬಸವಣ್ಣ ನಿನ್ನ ಸದ್ಭಕ್ತಿಯ ತಿಳಿದು ಎನಗೆ ನಿಜಸಾಧ್ಯವಾಯಿತ್ತಯ್ಯ, ಬಸವಣ್ಣ ಚೆನ್ನಮಲ್ಲಿಕಾರ್ಜುನನ ಹೆಸರಿಟ್ಟ ಗುರು ನೀನಾದ ಕಾರಣ ನಾನೆಂಬುದಿಲ್ಲವಯ್ಯ ಬಸವಣ್ಣ ೩೩೩. ಅಯ್ಯ, ನಿಮ್ಮಾನುಭಾವಿಗಳ ಸಂಗದಿಂದ ಎನ್ನ ತನು ಶುದ್ಧವಾಯಿತ್ತು! ಅಯ್ಯ, ನಿಮ್ಮ ಅನುಭಾವಿಗಳು ಎನ್ನನೊರೆದೊರೆದು, ಕಡಿಕಡಿದು, ಅರೆದರೆದು ಅನುಮಾಡಿದ ಕಾರಣ ಎನ್ನ ಮನ ಶುದ್ಧವಾಯಿತ್ತು!