Skip to main content

Posts

Showing posts from February 15, 2011

ಬಸವಣ್ಣನ ವಚನಗಳು - 491 ರಿಂದ 500 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೪೯೧. ಅರತುದಯ್ಯ ಅಂಗಗುಣ, ಒರೆತುದಯ್ಯ ಭಕ್ತಿರಸ! ಆವರಿಸಿತಯ್ಯ ಅಂಗ ಲಿಂಗವನು! ಏನೆಂದರಿಯೆನಯ್ಯ ಲೋಕ-ಲೌಕಿಕದ ಮದವ, ಕೂಡಲಸಂಗಮದೇವ, ನಿಮ್ಮ ಕರುಣವೆನ್ನನೆಡೆಗೊಂಡಿತ್ತಾಗಿ! ೪೯೨. ಪೂಜೆಯುಳ್ಳನ್ನಬರ ಲಿಂಗವ ಹಾಡಿದೆ! ಮಾಟವುಳ್ಳನ್ನಬರ ಜಂಗಮವ ಹಾಡಿದೆ! ಜಿಹ್ವೆಯುಳ್ಳನ್ನಬರ ಪ್ರಸಾದವ ಹಾಡಿದೆ! ಈ ತ್ರಿವಿಧ ನಾಸ್ತಿಯಾದ ಬಳಿಕ ಎನ್ನ ನಾ ಹಾಡಿಕೊಂಡೆ ಕಾಣಾ ಕೂಡಲಸಂಗಮದೇವ. ೪೯೩. ಮರಳು ತಲೆ, ಹುರುಳು ತಲೆ ನೀನೇ ದೇವ ಹೆಂಗೂಸು ಗಂಡುಗೂಸೂ ನೀನೇ ದೇವ ಎಮ್ಮಕ್ಕನ ಗಂಡ ನೀನೇ ದೇವ, ಕೂಡಲಸಂಗಮದೇವ, ಭ್ರಾಂತಳಿದು ಭಾವ ನಿಂದುದಾಗಿ. ೪೯೪. ಉಮಾದಿನಾಥರು ಕೋಟಿ, ಪಂಚವಕ್ತ್ರರು ಕೋಟಿ, ನಂದಿವಾಹನರೊಂದು ಕೋಟಿ ನೋಡಯ್ಯ! ಸದಾಶಿವರೊಂದು ಕೋಟಿ ಗಂಗೆವಾಳುಕಸಮಾರುದ್ರರು ಇವರೆಲ್ಲರು ಕೂಡಲಸಂಗನ ಸಾನ್ನಿಧ್ಯರಲ್ಲದೆ ಸಮರಸವೇದ್ಯರೊಬ್ಬರೂ ಇಲ್ಲ! ೪೯೫. ಬಯಲ ರೂಪಮಾಡಬಲ್ಲಾತನೇ ಶರಣನು, ಆ ರೂಪ ಬಯಲಮಾಡಬಲ್ಲಾತನೇ ಲಿಂಗಾನುಭಾವಿ. ಬಯಲ ರೂಪಮಾಡಲರಿಯದಿದ್ದರೆ ಎಂತು ಶರಣನೆಂಬೆ ? ಆ ರೂಪ ಬಯಲ ಮಾಡಲರಿಯದಿದ್ದರೆ ಎಂತು ಲಿಂಗಾನುಭಾವಿಯೆಂಬೆ ? ಈ ಉಭಯವೊಂದಾದರೆ ನಿಮ್ಮಲ್ಲಿ ತೆರ