Skip to main content

Posts

Showing posts from February 16, 2011

ಅಕ್ಕನ ವಚನಗಳು - 1 ರಿಂದ 10 ರವರೆಗೆ

೧. ಅಘಟಿತ-ಘಟಿತನ ಒಲವಿನ ಶಿಶು ಕಟ್ಟಿದೆನು ಜಗಕ್ಕೆ ಬಿರುದನು ಕಾಮ-ಕ್ರೋಧ-ಲೋಭ-ಮೋಹ-ಮದ-ಮತ್ಸರಂಗಳಿಗೆ ಇಕ್ಕಿದೆನು ಕಾಲಲ್ಲಿ ತೊಡರನು ಗುರುಕೃಪೆಯೆಂಬ ತಿಗುರನಿಕ್ಕಿ ಮಹಾಶರಣೆಂಬ ತಿಲಕವನಿಕ್ಕಿ ಶಿವಶರಣೆಂಬ ಅಲಗ ಕೊಂಡು ನಿನ್ನ ಕೊಲುವೆ ಗೆಲುವೆ! ಬಿಡು ಬಿಡು ಕರ್ಮವೇ, ನಿನ್ನ ಕೊಲ್ಲದೇ ಮಾಣೆನು!! ಕಡೆಹಿಸಿಕೊಳ್ಪದೆನ್ನ ನುಡಿಯ ಕೇಳಾ- ಕೆಡದ ಶಿವಶರಣೆಂಬ ಅಲಗನೆ ಕೊಂಡು ನಿನ್ನ ಕೊಲುವೆ ಗೆಲುವೆ ನಾನು! ಬ್ರಹ್ಮಪಾಶವೆಂಬ ಕಳನನೆ ಸವರಿ ವಿಷ್ಣುಮಾಯೆಯೆಂಬ ಎಡಗೋಲ ನೂಕಿ ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿಕಾಡುವೆ ನಾನು. ೨. ನೆಲದ ಮರೆಯ ನಿಧಾನದಂತೆ ಫಲದ ಮರೆಯ ರುಚಿಯಂತೆ ಶಿಲೆಯ ಮರೆಯ ಹೇಮದಂತೆ ತಿಲದ ಮರೆಯ ತೈಲದಂತೆ ಮರದ ಮರೆಯ ತೇಜಿದಂತೆ ಭಾವದ ಮರೆಯ ಬ್ರಹ್ಮನಾಗಿಪ್ಪ ಚೆನ್ನಮಲ್ಲಿಕಾರ್ಜುನನ ನಿಲವನಾರೂ ಅರಿಯಬಾರದು! ೩. ಈಳೆ-ನಿಂಬೆ-ಮಾವು-ಮಾದಲಕ್ಕೆ ಹುಳಿನೀರೆರೆದವರಾರಯ್ಯ? ಕಬ್ಬು-ಬಾಳೆ-ನಾರಿವಾಳಕ್ಕೆ ಸಿಹಿನೀರೆರೆದವರಾರಯ್ಯ? ಕಳವೆ-ಶಾಲಿಗೆ ಓಗರದ ಉದಕವನೆರೆದವರಾರಯ್ಯ? ಮರುಗ-ಮಲ್ಲಿಗೆ-ಪಚ್ಚೆ-ಮುಡಿವಾಳಕ್ಕೆ ಪರಿಮಳದುದಕವನೆರೆದವರಾರಯ್ಯ? ಇಂತೀ ಜಲ ಒಂದೆ, ನೆಲ ಒಂದೆ, ಆಕಾಶ ಒಂದೆ! ಒಂದೇ ಜಲವು ಹಲವು ದ್ರವ್ಯಂಗಳ ಕೂಡಿ ತನ್ನ ಪರಿ ಬೇರಾಗಿಹ ಹಾಂಗೆ ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನು ಹಲವು ಜಗಂಗಳ ಕೂಡಿಕೊಂಡಿದ್ದರೇನು? ತನ್ನ ಪರಿ ಬೇರೆ! ೪. ತನ್ನ ವಿನೋದಕ್ಕೆ ತಾನೇ ಸೃಜಿಸಿದ ಜಗತ್ತ!