Skip to main content

Posts

Showing posts from March 9, 2011

ಅಕ್ಕನ ವಚನಗಳು - 201 ರಿಂದ 210 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೦೧. ಭಕ್ತೆ ಏನಪ್ಪೆನಯ್ಯ ಕರ್ತೃ-ಭೃತ್ಯತ್ವವ ನಾನರಿಯೆ ಮಾಹೇಶ್ವರಿ ಏನಪ್ಪೆನಯ್ಯ? ವ್ರತ-ನೇಮ-ಛಲವ ನಾನರಿಯೆ ಪ್ರಸಾದಿ ಏನಪ್ಪೆನಯ್ಯ? ಅರ್ಪಿತಾನರ್ಪಿತವೆಂಬ ಭೇದವ ನಾನರಿಯೆ ಪ್ರಾಣಲಿಂಗಿ ಏನಪ್ಪೆನಯ್ಯ? ಅನುಭಾವದ ಗಮನವ ನಾನರಿಯೆ ಶರಣೆ ಏನೆಪ್ಪೆನಯ್ಯ? ಶರಣಸತಿ-ಲಿಂಗಪತಿಯೆಂಬ ಭಾವವ ನಾನರಿಯೆ ಐಕ್ಯೆ ಏನೆಪ್ಪೆನಯ್ಯ? ಬೆರಸಿದ ಭೇದವ ನಾನರಿಯೆ ಚೆನ್ನಮಲ್ಲಿಕಾರ್ಜುನಯ್ಯ, ಷಟ್ಸ್ಥಲದಲ್ಲಿ ನಿಸ್ಥಲವಾಗಿಪ್ಪೆನು ೨೦೨. ಬಸವಣ್ಣ, ಎನ್ನ ಭಕ್ತಿ ನಿಮ್ಮ ಧರ್ಮ ಎನ್ನ ಜ್ಞಾನ ಪ್ರಭುದೇವರ ಧರ್ಮ ಎನ್ನ ಪರಿಣಾಮ ಚೆನ್ನಬಸವಣ್ಣನ ಧರ್ಮ ಇಂತೀ ಮೂವರೂ ಒಂದೊಂದ ಕೊಟ್ಟ ಕಾರಣ ಎನಗೆ ಮೂರು ಭಾವವಾಯಿತ್ತು ಆ ಮೂರು ಭಾವವ ನಿಮ್ಮಲ್ಲಿ ಸಮರ್ಪಿಸಿದ ಕಾರಣ ಚೆನ್ನಮಲ್ಲಿಕಾರ್ಜುನಯ್ಯನ ನೆನಹಾದಲ್ಲಿ ನಿಮ್ಮ ಕರುಣದ ಕಂದನು ಕಾಣಾ ಚೆನ್ನಬಸವಣ್ಣ ೨೦೩. ಸಂಗನ ಬಸವಣ್ಣನ ಪಾದವ ಕಂಡೆನಾಗಿ ಎನ್ನಂಗ ನಾಸ್ತಿಯಾಯಿತ್ತು ಚೆನ್ನಬಸವಣ್ಣನ ಪಾದವ ಕಂಡೆನಾಗಿ ಎನ್ನ ಪ್ರಾಣ ನಾಸ್ತಿಯಾಯಿತ್ತು ಪ್ರಭುವೇ ! ನಿಮ್ಮ ಶ್ರೀಚರಣಕ್ಕೆ ಶರಣೆಂದೆನಾಗಿ ಎನಗೆ ಅರಿವು ಸ್ವಯವಾಯಿತ್ತು ಚೆನ್ನಮಲ್ಲಿಕಾರ್ಜುನಯ್ಯ, ನಿ