Skip to main content

Posts

ಸರ್ವಜ್ಞನ ವಚನಗಳು - 61 ರಿಂದ 70

ಸರ್ವಜ್ಞನ ವಚನಗಳು -  61 ರಿಂದ 70 ೬೧. ಒಮ್ಮನದ ಶಿವಪೂಜೆ ಗಮ್ಮನೆ ಮಾಡುವದು ಇಮ್ಮನವ ಪಿಡಿದು ಕೆಡಬೇಡ ವಿಧಿವಶವು ಸರಿಮ್ಮನೇ ಕೆಡಗು ಸರ್ವಜ್ಞ ೬೨. ಅಷ್ಟವಿಧದರ್ಚನೆಯ ನೆಷ್ಟು ಮಾಡಿದರೇನು? ನಿಷ್ಠೆ ನೆಲೆಗೊಳದೆ ಭಜಿಸುವಾ ಪೂಜೆ ತಾ ನಷ್ಟ ಕಾಣಯ್ಯ ಸರ್ವಜ್ಞ ೬೩. ಇಷ್ಟಲಿಂಗದಿ ಮನವ ನೆಟ್ಟನೆಯ ನಿಲಿಸದಲೆ ಕಷ್ಟಭ್ರಮೆಗಳಲಿ ಮುಳುಗಿದನು ಕರ್ಮದಾ ಬಟ್ಟೆಗೆ ಹೋಹ ಸರ್ವಜ್ಞ ೬೪. ಎಷ್ಟು ಬಗೆಯಾರತಿಯ ಮುಟ್ಟಿಸಿದ ಫಲವೇನು? ನಿಷ್ಠೆಯಿಲ್ಲದವನ ಶಿವಪೂಜೆ ಹಾಳೂರ ಕೊಟ್ಟಗುರಿದಂತೆ ಸರ್ವಜ್ಞ ೬೫. ಒಸೆದೆಂಟು ದಿಕ್ಕಿನಲ್ಲಿ ಮಿಸುನಿ ಗಿಣ್ಣಲು ಗಿಂಡಿ ಹಸಿದು ಮಾಡುವನ ಪೂಜೆಯದು ಬೋಗಾರ ಪಸರ ವಿಟ್ಟಂತೆ ಸರ್ವಜ್ಞ ೬೬. ಬತ್ತಿ ಹೆತ್ತುಪ್ಪವನು ಹತ್ತಿಸಿದ ಫಲವೇನು? ನಿತ್ಯ ನೆಲೆಗೊಳದೆ ಭಜಿಸುವಾ ಪೂಜೆ ತಾ ಹತ್ತಿಗೇಡೆಂದ ಸರ್ವಜ್ಞ ೬೭. ಎಣಿಸುತಿರ್ಪುದು ಬಾಯಿ ಪೊಣರುತಿರ್ಪುದು ಬೆರಳು ಕ್ಷಣಕ್ಕೊಮ್ಮೆ ಒಂದನೆಣಿಸುವಾ ಜಪಕೊಂದು ಕುಣಿಕೆಯುಂಟೆಂದ ಸರ್ವಜ್ಞ ೬೮. ಎಣಿಸುತಿರ್ಪುದು ಬೆರಳು ಗುಣಿಸುತಿರ್ಪುದು ಜಿಹ್ವೆ ಮನಹೋಗಿ ಹಲವ ನೆನೆದರದು ಹಾಳೂರ ಶುನಕನಂತಕ್ಕು ಸರ್ವಜ್ಞ ೬೯. ಕೊಲುವ ಕೈಯೊಳು ಪೂಜೆ, ಮೆಲುವ ಬಾಯೊಳು ಮಂತ್ರ ಸಲೆ ಪಾಪವೆರೆದ ಮನದೊಳಗೆ ಪೂಜಿಪನೆ ಹೊಲೆಯ ಕಾಣಯ್ಯ ಸರ್ವಜ್ಞ ೭೦. ಲಿಂಗಪೂಜಿಸುವಾತ ಜಂಗಮಕ್ಕೆ ನೀಡಿದೊಡೆ ಲಿಂಗದಾ ಕ್ಷೇಮ ಘನವಾಗಿ ಆ ಲಿಂಗ ಹಿಂಗದಿರುತಿಹುದು ಸರ್ವಜ್ಞ

ಬಸವಣ್ಣನ ವಚನಗಳು - 51 ರಿಂದ 60 ರವರೆಗೆ

ಬಸವಣ್ಣನ ವಚನಗಳು - 51 ರಿಂದ 60 ರವರೆಗೆ ೫೧. ನೀರಿಂಗೆ ನೈದಿಲೇ ಶೃಂಗಾರ, ಊರಿಂಗೆ ಆರವೆಯೇ ಶೃಂಗಾರ, ಸಮುದ್ರಕ್ಕೆ ತೆರೆಯೇ ಶೃಂಗಾರ ನಾರಿಗೆ ಗುಣವೇ ಶೃಂಗಾರ ಗಗನಕ್ಕೆ ಚಂದ್ರಮನೇ ಶೃಂಗಾರ ನಮ್ಮ ಕೂಡಲಸಂಗನ ಶರಣರಿಗೆ ನೊಸಲ ವಿಭೂತಿಯೇ ಶೃಂಗಾರ. ೫೨. ಅಕಟಕಟಾ ಬೆಡಗುಬಿನ್ನಾಣವೇನೋ ?! 'ಓಂ ನಮಶ್ಶಿವಾಯ' ಎಂಬುದೇ ಮಂತ್ರ! 'ಓಂ ನಮಶ್ಶಿವಾಯ' ಎಂಬುದೇ ತಂತ್ರ! ನಮ್ಮ ಕೂಡಲಸಂಗಮದೇವರ ಮಾಣದೆ ನೆನವುದೇ ಮಂತ್ರ! ೫೩. ಎಮ್ಮವರು ಬೆಸಗೊಂಡರೆ ಶುಭಲಗ್ನವೆಂದೆನ್ನಿರಯ್ಯ ರಾಶಿ ಕೂಟ ಋಣ ಸಂಬಂಧ ಉಂಟೆಂದು ಹೇಳಿರಯ್ಯ ನಾಳಿನ ದಿನಕಿಂದಿನ ದಿನ ಲೇಸೆಂದು ಹೇಳಿರಯ್ಯ ಚಂದ್ರಬಲ ತಾರಾಬಲ ಉಂಟೆಂದು ಹೇಳಿರಯ್ಯ ಕೂಡಲಸಂಗಮದೇವನ ಪೂಜಿಸಿದ ಫಲ ನಿಮ್ಮದಯ್ಯ. ೫೪. ತಾಳಮರದ ಕೆಳಗೆ ಒಂದು ಹಾಲ ಹರವಿಯಿದ್ದರೆ ಅದ ಹಾಲ ಹರವಿಯೆನ್ನರು: ಸುರೆಯ ಹರವಿಯೆಂಬರು. ಈ ಭಾವಸಂದೆಯವ ಮಾಣಿಸಾ ಕೂಡಲಸಂಗಮದೇವ. ೫೫. ಕುಂಬಳ ಕಾಯಿಗೆ ಕಬ್ಬುನದ ಕಟ್ಟ ಕೊಟ್ಟರೆ ಕೊಳೆವುದಲ್ಲದೆ ಅದು ಬಲುಹಾಗ ಬಲ್ಲುದೆ ? ಅಳಿಮನದವಂಗೆ ದೀಕ್ಷೆಯ ಕೊಟ್ಟರೆ ಭಕ್ತಿಯೆಂತಹುದು ? ಮುನ್ನಿನಂತೆ, ಕೂಡಲಸಂಗಯ್ಯ! ಮನಹೀನನ ಮೀಸಲ ಕಾಯ್ದಿರಿಸಿದಂತೆ!! ೫೬. ಸಗಣಿಯ ಬೆನಕನ ಮಾಡಿ ಸಂಪಿಗೆಯರಳಲ್ಲಿ ಪೂಜಿಸಿದರೆ ರಂಜನೆಯಹುದಲ್ಲದೆ, ಅದರ ಗಂಜಳ ಬಿಡದಣ್ಣ! ಮಣ್ಣ ಪ್ರತಿಮೆಯ ಮಾಡಿ ಮಜ್ಜನಕ್ಕೆರೆದರೆ ನಿಚ್ಚ ಕೆಸರಹುದಲ್ಲದೆ ಅದರಚ್ಚಿಗ ಬಿಡದಣ್ಣ!! ಲೋಕದ ...

ಬಸವಣ್ಣನ ವಚನಗಳು - 41 ರಿಂದ 50 ರವರೆಗೆ

ಬಸವಣ್ಣನ ವಚನಗಳು - 41 ರಿಂದ 50 ರವರೆಗೆ ೪೧. ಅತ್ತಲಿತ್ತ ಹೋಗದಂತೆ ಹೆಳವನ ಮಾಡಯ್ಯ ತಂದೆ, ಸುತ್ತಿ ಸುಳಿದು ನೋಡದಂತೆ ಅಂಧಕನ ಮಾಡಯ್ಯ ತಂದೆ. ಮತ್ತೊಂದ ಕೇಳದಂತೆ ಕಿವುಡನ ಮಾಡಯ್ಯ ತಂದೆ. ನಿಮ್ಮ ಶರಣರ ಪಾದವಲ್ಲದೆ ಅನ್ಯವಿಷಯಕ್ಕೆಳಸದಂತೆ ಇರಿಸು ಕೂಡಲಸಂಗಮದೇವ. ೪೨. ಎನ್ನ ವಾಮ-ಕ್ಷೇಮ ನಿಮ್ಮದಯ್ಯ ಎನ್ನ ಹಾನಿ-ವೃದ್ಧಿ ನಿಮ್ಮದಯ್ಯ ಎನ್ನ ಮಾನಾಪಮಾನವು ನಿಮ್ಮದಯ್ಯ ಬಳ್ಳಿಗೆ ಕಾಯಿ ದಿಮ್ಮಿತ್ತೆ ? ಕೂಡಲಸಂಗಮದೇವ. ೪೩. ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯ. ಇವ ನಮ್ಮವ, ಇವ ನಮ್ಮವ, ಇವನಮ್ಮವನೆಂದೆನಿಸಯ್ಯ ಕೂಡಲಸಂಗಮದೇವಯ್ಯ ನಿಮ್ಮ ಮನೆಯ ಮಗನೆಂದೆನಿಸಯ್ಯ. ೪೪. ನರ ಕೂರಂಬಿನಲೆಚ್ಚ; ಅವಂಗೊಲಿದೆಯಯ್ಯ ಅರಳಂಬಿನಲೆಚ್ಚ ಕಾಮನನುರಹಿದೆಯಯ್ಯ. ಇರುಳು ಹಗಲೆನ್ನದೆ ಪ್ರಾಣಘಾತವ ಮಾಡಿದ ಬೇಡನ ಕೈಲಾಸಕೊಯ್ದೆಯಯ್ಯ. ಎನ್ನನೇತಕೆ ಒಲ್ಲೆ ಕೂಡಲಸಂಗಮದೇವ ? ೪೫. ನೀನೊಲಿದರೆ ಕೊರಡು ಕೊನರುವುದಯ್ಯ. ನೀನೊಲಿದರೆ ಬರಡು ಹಯನಹುದಯ್ಯ. ನೀನೊಲಿದರೆ ವಿಷವಮೃತವಹುದಯ್ಯ. ನೀನೊಲಿದರೆ ಸಕಲ ಪಡಿಪದಾರ್ಥ ಇದಿರಲಿಪ್ಪವು ಕೂಡಲಸಂಗಮದೇವ. ೪೬. ಆಶೆಯೆಂಬ ಪಾಶದಲ್ಲಿ ಭವಬಂಧನವಾಗಿದ್ದೆನಯ್ಯ. ಸಕೃತೂ ನಿಮ್ಮ ನೆನೆಯಲೆನಗೆ ತೆರೆಹಿಲ್ಲವಯ್ಯ. ಕರುಣಾಕರ, ಅಭಯಕರ, ವರದಾನಿ ಕರುಣಿಸಯ್ಯ. ಸಂಸಾರಬಂಧವನು ಮಾಣಿಸಿ ಎನಗೆ ಕೃಪೆ ಮಾಡಿ ನಿಮ್ಮ ಶ್ರೀಪಾದಪದ್ಮದಲ್ಲಿ ಭ್ರಮರನಾಗಿರಿಸಯ್ಯ ಭಕ್ತಜನಮನೋವಲ್ಲಭ ಕೂಡಲಸಂಗಮದೇವ. ೪೭....

ಬಸವಣ್ಣನ ವಚನಗಳು - 31 ರಿಂದ 40 ರವರೆಗೆ

ಬಸವಣ್ಣನ ವಚನಗಳು - 31 ರಿಂದ 40 ರವರೆಗೆ ೩೧. ಆನು ಒಬ್ಬನು; ಸುಡುವರೈವರು. ಮೇಲೆ ಕಿಚ್ಚು ಘನ, ನಿಲಲು ಬಾರದು. ಕಾಡುಬಸವನ ಹುಲಿ ಕೊಂಡೊಯ್ದರೆ ಆರೈಯಲಾಗದೆ ಕೂಡಲಸಂಗಮದೇವ ? ೩೨. ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ, ತಿಳಿಯಲೀಯದು; ಎಚ್ಚರಲೀಯದು. ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯ ಲಿಂಗತಂದೆ. ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ. ೩೩. ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯ; ಪಶುವೇನ ಬಲ್ಲುದು ಹಸುರೆಂದೆಳಸುವುದು ವಿಷಯರಹಿತನ ಮಾಡಿ, ಭಕ್ತಿರಸವ ದಣಿಯ ಮೇಯಿಸಿ ಸುಬುದ್ಧಿಯೆಂಬುದಕವನೆರೆದು ನೋಡಿ ಸಲಹಯ್ಯ ಕೂಡಲಸಂಗಮದೇವ. ೩೪. ಅಯ್ಯ, ಎಳಗರು ತಾಯನರಸಿ ಬಳಲುವಂತೆ ಅಯ್ಯ, ನಿಮ್ಮನರಸಿ ಬಳಲುತ್ತಿದ್ದೇನೆ, ಅಯ್ಯ, ನೀವೆನ್ನ ಮನಕ್ಕೆ ಪ್ರಸನ್ನವ ಮಾಡಿ ಕಾರುಣ್ಯವ ಮಾಡಿರಯ್ಯ! ನೀವೆನ್ನ ಮನಕ್ಕೆ ನೆಲೆವನೆಯಾಗಿ ಕಾರುಣ್ಯವ ಮಾಡಿರಯ್ಯ! ನೀವಿನಿತು ಲೇಸನೀಯಯ್ಯ, ಅಂಬೇ, ಅಂಬೇ, ಕೂಡಲಸಂಗಮದೇವ! ೩೫. ಕೆಸರಲ್ಲಿ ಬಿದ್ದ ಪಶುವಿನಂತೆ ಅನು ದೆಸೆದೆಸೆಗೆ ಬಾಯ ಬಿಡುತಿದ್ದೇನಯ್ಯ ಅಯ್ಯಾ, ಆರೈವರಿಲ್ಲ-- "ಅಕಟಕಟಾ! ಪಶು" ವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ. ೩೬. ಬಡಪಶು ಪಂಕದಲ್ಲಿ ಬಿದ್ದರೆ ಕಾಲ ಬಡಿವುದಲ್ಲದೆ, ಬೇರೆ ಗತಿಯುಂಟೆ ? ಶಿವ ಶಿವಾ! ಹೋದಹೆ, ಹೋದಹೆನಯ್ಯ! ನಿಮ್ಮ ಮನದೆತ್ತಲೆನ್ನ ತೆಗೆಯಯ್ಯ ಪಶುವಾನು, ಪಶುಪತಿ ನೀನು. ತುಡುಗುಣಿಯೆಂ...

ಬಸವಣ್ಣನ ವಚನಗಳು - 21 ರಿಂದ 30 ರವರೆಗೆ

ಬಸವಣ್ಣನ ವಚನಗಳು - 21 ರಿಂದ 30 ರವರೆಗೆ ೨೧. ಅಂದಣವನೇರಿದ ಸೊಣಗನಂತೆ ಕಂಡರೆ ಬಿಡದು ತನ್ನ ಮುನ್ನಿನ ಸ್ವಭಾವವನು ಸುಡು, ಸುಡು; ಮನವಿದು ವಿಷಯಕ್ಕೆ ಹರಿವುದು, ಮೃಡ, ನಿಮ್ಮನನುದಿನ ನೆನೆಯಲೀಯದು. ಎನ್ನೊಡೆಯನೇ, ಕೂಡಲಸಂಗಮದೇವ, ನಿಮ್ಮ ಚರಣವ ನೆನೆವಂತೆ ಕರುಣಿಸು, ಸೆರಗೊಡ್ಡಿ ಬೇಡುವೆ ನಿಮ್ಮ ಧರ್ಮ. ೨೨. ತುಪ್ಪದ ಸವಿಗೆ ಅಲಗ ನೆಕ್ಕುವ ಸೊಣಗನಂತೆನ್ನ ಬಾಳುವೆ ಸಂಸಾರಸಂಗವ ಬಿಡದು ನೋಡೆನ್ನ ಮನವು. ಈ ನಾಯಿತನವ ಮಾಣಿಸು ಕೂಡಲಸಂಗಮದೇವಯ್ಯ ನಿಮ್ಮ ಧರ್ಮ. ೨೩. ಒಂದು ಮೊಲಕ್ಕೆ ನಾಯನೊಂಬತ್ತ ಬಿಟ್ಟಂತೆ ಎನ್ನ ಬಿಡು, ತನ್ನ ಬಿಡೆಂಬುದು ಕಾಯವಿಕಾರ; ಎನ್ನ ಬಿಡು, ತನ್ನ ಬಿಡೆಂಬುದು ಮನೋವಿಕಾರ. ಕರಣೇಂದ್ರಿಯಗಳೆಂಬ ಸೊಣಗ ಮುಟ್ಟದ ಮುನ್ನ ಮನ ನಿಮ್ಮನೆಯ್ದುಗೆ ಕೂಡಲಸಂಗಮದೇವ. ೨೪. ತನ್ನ ವಿಚಾರಿಸಲೊಲ್ಲದು ಇದಿರ ವಿಚಾರಿಸ ಹೋಹುದೀ ಮನವು. ಏನು ಮಾಡುವೆನೀ ಮನವನು: ಎಂತು ಮಾಡುವೆನೀ ಮನವನು- ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಬೆಂದ ಮನವನು ? ೨೫. ತನ್ನಿಚ್ಛೆಯ ನುಡಿದರೆ ಮೆಚ್ಚುವುದೀ ಮನವು. ಇದಿರಿಚ್ಛೆಯ ನುಡಿದರೆ ಮೆಚ್ಚದೀ ಮನವು ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಮನವನು ಕಿಚ್ಚಿನೊಳಿಕ್ಕುವೆನು. ೨೬. ಸುಡಲೀ ಮನವೆನ್ನ (ಮುಡುಬನ) ಮಾಡಿತ್ತು ನಡೆವಲ್ಲಿ; ನುಡಿವಲ್ಲಿ ಅಧಿಕನೆಂದೆನಿಸಿತ್ತು. ಬೆಡಗಿನ ಕೀಲು ಕಳೆದು, ಕೆಡೆದ ಬಳಿಕ, ಕಡುಗೂಪ ಮಡದಿ ತಾ ಮುಟ್ಟಲಮ್ಮಳು; ಒಡಲನುರಿಗೊಂಬುದು: ಒಡವೆಯನರಸು ...

ಬಸವಣ್ಣನ ವಚನಗಳು - 11 ರಿಂದ 20 ರವರೆಗೆ

ಬಸವಣ್ಣನ ವಚನಗಳು - 11 ರಿಂದ 20 ರವರೆಗೆ ೧೧. ಸಂಸಾರವೆಂಬ ಸರ್ಪ ಮುಟ್ಟಲು ಪಂಚೇಂದ್ರಿಯವಿಷಯವೆಂಬ ವಿಷದಿಂದಾನು ಮುಂದುಗೆಟ್ಟೆನಯ್ಯ, ಆನು ಹೊರಳಿ ಬೀಳುತ್ತಿದ್ದೆನಯ್ಯ; "ಓಂ ನಮಶ್ಶಿವಾಯ" ಎಂಬ ಮಂತ್ರವ ಜಪಿಸುತ್ತಿದ್ದೆನಯ್ಯ ಕೂಡಲಸಂಗಮದೇವ. ೧೨. ಎಂದೋ, ಸಂಸಾರದ ದಂದುಗ ಹಿಂಗುವುದೆನಗೆಂದೋ ? ಮನದಲ್ಲಿ ಪರಿಣಾಮವಹುದೆನಗಿನ್ನೆಂದೊ ? ಕೂಡಲಸಂಗಮದೇವಾ ಇನ್ನೆಂದೋ ಪರಮಸಂತೋಷದಲಿಹುದೆನಗೆಂದೋ ? ೧೩. ಕಾಲಲಿ ಕಟ್ಟಿದ ಗುಂಡು, ಕೊರಳಲಿ ಕಟ್ಟಿದ ಬೆಂಡು! ತೇಲಲೀಯದು ಗುಂಡು, ಮುಳುಗಲೀಯದು ಬೆಂಡು! ಇಂತಪ್ಪ ಸಂಸಾರಶರಧಿಯ ದಾಂಟಿಸಿ ಕಾಲಾಂತಕನೇ ಕಾಯೋ, ಕೂಡಲಸಂಗಯ್ಯ! ೧೪. ಲೇಸ ಕಂಡು ಮನ ಬಯಸಿ ಬಯಸಿ ಆಶೆ ಮಾಡಿದರಿಲ್ಲ ಕಂಡಯ್ಯ. ತಾಳಮರಕ್ಕೆ ಕೈಯ್ಯ ನೀಡಿ, ಮೇಲ ನೋಡಿ ಗೋಣು ನೊಂದುದಯ್ಯ. ಕೂಡಲಸಂಗಮದೇವ ಕೇಳಯ್ಯ ನೀನೀವ ಕಾಲಕ್ಕಲ್ಲದಿಲ್ಲ ಕಂಡಯ್ಯ. ೧೫. ಚಂದ್ರೋದಯಕ್ಕೆ ಅಂಬುಧಿ ಹೆಚ್ಚುವುದಯ್ಯ. ಚಂದ್ರ ಕುಂದೆ ಕುಂದುವುದಯ್ಯ, ಚಂದ್ರಂಗೆ ರಾಹು ಅಡ್ಡ ಬಂದಲ್ಲಿ ಅಂಬುಧಿ ಬೊಬ್ಬಿಟ್ಟಿತ್ತೇ ಅಯ್ಯ ? ಅಂಬುಧಿಯ ಮುನಿ ಆಪೋಶನವ ಕೊಂಡಲ್ಲಿ ಚಂದ್ರಮನಡ್ಡ ಬಂದನೆ ಅಯ್ಯ ? ಆರಿಗಾರೂ ಇಲ್ಲ, ಕೆಟ್ಟವಂಗೆ ಕೆಳೆಯಿಲ್ಲ ಜಗದ್ ನಂಟ ನೀನೇ ಅಯ್ಯ ಕೂಡಲಸಂಗಮದೇವ. ೧೬. ಒಲೆ ಹತ್ತಿ ಉರಿದರೆ ನಿಲ ಬಹುದಲ್ಲದೆ ಧರೆ ಹತ್ತಿ ಉರಿದರೆ ನಿಲ ಬಾರದು. ಏರಿ ನೀರುಂಬಡೆ, ಬೇಲಿ ಕೈಯ ಮೇವಡೆ ನಾರಿ ತನ್ನ ಮನೆಯಲ್ಲಿ ಕಳ...

ಬಸವಣ್ಣನ ವಚನಗಳು - 1 ರಿಂದ 10 ರವರೆಗೆ

ಬಸವಣ್ಣನ ವಚನಗಳು - 1 ರಿಂದ 10 ರವರೆಗೆ ೧. ಉದಕದೊಳಗೆ ಬೈಚಿಟ್ಟ ಬೈಕೆಯ ಕಿಚ್ಚಿನಂತೆ ಇದ್ದಿತ್ತು; ಸಸಿಯೊಳಗಣ ರಸದ ರುಚಿಯಂತೆ ಇದ್ದಿತ್ತು; ನನೆಯೊಳಗಣ ಪರಿಮಳದಂತೆ ಇದ್ದಿತ್ತು; ಕೂಡಲಸಂಗಮದೇವರ ನಿಲವು ಕನ್ನೆಯ ಸ್ನೇಹದಂತೆ ಇದ್ದಿತ್ತು. ೨. ಕಾಳಿಯ ಕಂಕಾಳದಿಂದ ಮುನ್ನ ತ್ರಿಪುರ ಸಂಹಾರದಿಂದ ಮುನ್ನ ಹರಿವಿರಿಂಚಿಗಳಿಂದ ಮುನ್ನ ಉಮೆಯ ಕಲ್ಯಾಣದಿಂದ ಮುನ್ನ ಮುನ್ನ, ಮುನ್ನ, ಮುನ್ನ, ಅಂದಂದಿಗೆ ಎಳೆಯ ನೀನು, ಹಳೆಯ ನಾನು ಮಹಾದಾನಿ ಕೂಡಲಸಂಗಮದೇವ. ೩. ಅಯ್ಯಾ, ನೀನು ನಿರಾಕಾರವಾದಲ್ಲಿ ನಾನು ಜ್ಞಾನವೆಂಬ ವಾಹನವಾಗಿದ್ದೆ ಕಾಣಾ. ಅಯ್ಯಾ, ನೀನು ನಾಂಟ್ಯಕ್ಕೆ ನಿಂದಲ್ಲಿ ನಾನು ಚೈತನ್ಯವೆಂಬ ವಾಹನವಾಗಿದ್ದೆ ಕಾಣಾ. ಅಯ್ಯಾ, ನೀನು ಸಾಕಾರವಾಗಿದ್ದಲ್ಲಿ ನಾನು ವೃಷಭನೆಂಬ ವಾಹನವಾಗಿದ್ದೆ ಕಾಣಾ. ಅಯ್ಯಾ, ನೀನೆನ್ನ ಭವವ ಕೊಂದಹೆನೆಂದು ಜಂಗಮಲಾಂಛನವಾಗಿ ಬಂದಲ್ಲಿ ನಾನು ಭಕ್ತನೆಂಬ ವಾಹನವಾಗಿದ್ದೆ ಕಾಣಾ ಕೂಡಲಸಂಗಮದೇವ. ೪. ಕರಿ ಘನ, ಅಂಕುಶ ಕಿರಿದೆನ್ನಬಹುದೆ ? ಬಾರದಯ್ಯ! ಗಿರಿ ಘನ, ವಜ್ರ ಕಿರಿದೆನ್ನಬಹುದೆ ? ಬಾರದಯ್ಯ! ತಮಂಧ ಘನ, ನಿಮ್ಮ ನೆನೆವ ಮನ ಕಿರಿದೆನ್ನಬಹುದೆ ? ಬಾರದಯ್ಯ! ಮರಹು ಘನ, ನಿಮ್ಮ ನೆನೆವ ಮನ ಕಿರಿದೆನ್ನಬಹುದೆ ? ಬಾರದಯ್ಯ! ಕೂಡಲಸಂಗಮದೇವ. ೫. ಸಂಸಾರಸಾಗರದ ತೆರೆ ಕೊಬ್ಬಿ ಮುಖದ ಮೇಲೆ ಅಲೆವುತ್ತಿದೆ ನೋಡಾ! ಸಂಸಾರಸಾಗರ ಉರದುದ್ದವೇ ಹೇಳಾ ? ಸಂಸಾರಸಾಗರ ಕೊರಲುದ್ದವೇ ಹೇಳಾ...