Skip to main content

Posts

ಬಸವಣ್ಣನ ವಚನಗಳು - 91 ರಿಂದ 100 ರವರೆಗೆ

ಬಸವಣ್ಣನ ವಚನಗಳು - 91 ರಿಂದ 100 ರವರೆಗೆ ೯೧. ಪರಷ ಮುಟ್ಟಿದ ಬಳಿಕ ಕಬ್ಬುನವಾಗದು ನೋಡಾ! ಲಿಂಗ(ವ) ಮುಟ್ಟಿದ ಬಳಿಕ ಕುಚಿತ್ತಾಚಾರವಾಗದು ನೋಡಾ ಕೂಡಲಸಂಗನ ಶರಣರು ಅನ್ಯವನರಿಯರಾಗಿ. ೯೨. ದೇವಲೋಕ ಮರ್ತ್ಯಲೋಕವೆಂಬುದು ಬೇರೆ ಮತ್ತುಂಟೆ ? ಇಹಲೋಕದೊಳಗೇ ಮತ್ತನಂತಲೋಕ! ಶಿವಲೋಕ ಶಿವಾಚಾರವಯ್ಯ, ಶಿವಭಕ್ತನಿದ್ದ ಠಾವೇ ದೇವಲೋಕ, ಭಕ್ತನಂಗಳವೇ ವಾರಣಾಸಿ, ಶಿವಭಕ್ತನ ಕಾಯವೇ ಕೈಲಾಸ, ಇದು ಸತ್ಯ ಕೂಡಲಸಂಗಮದೇವ. ೯೩. ಕಟ್ಟಿದಿರಲ್ಲಿ ಶಿವಭಕ್ತನ ಕಂಡು, ದೃಷ್ಟಿಯಾರೆ ಮನಮುಟ್ಟಿ ನೋಡಿ ಶರಣೆಂದರೆ ಹುಟ್ಟೇಳು ಜನ್ಮದ ಪಾಪ ಬಿಟ್ಟು ಹೋಹವು ನೋಡಾ! ಮುಟ್ಟಿ ಚರಣಕ್ಕೆರಗಿದರೆ, ತನು ಒಪ್ಪಿದಂತಿಹುದು ಪರುಷ ಮುಟ್ಟಿದಂತೆ. ಕರ್ತೃ ಕೂಡಲಸಂಗನ ಶರಣರ ಸಂಗವು! ಮತ್ತೆ ಭವಮಾಲೆಯ ಹೊದ್ದಲೀಯದು ನೋಡಾ! ೯೪. ಆರಾರ ಸಂಗವೇನೇನ ಮಾಡದಯ್ಯ! ಕೀಡೆ ಕುಂಡಲಿಗನಾಗದೇನಯ್ಯ ? ಚಂದನದ ಸನ್ನಿಧಿಯಲ್ಲಿ, ಪರಿಮಳ ತಾಗಿ ಬೇವು-ಬೊಬ್ಬುಲಿ-ತರಿಯ ಗಂಧಂಗಳಾಗವೆ ? ನಮ್ಮ ಕೂಡಲಸಂಗನ ಶರಣರ ಸನ್ನಿಧಿಯಲ್ಲಿದ್ದು ಕರ್ಮ ನಿರ್ಮಳವಾಗದಿಹುದೇ ? ೯೫. ಹಾವಿನ ಡೊಂಕು ಹುತ್ತಕ್ಕೆ ಸಸಿನ. ನದಿಯ ಡೊಂಕು ಸಮುದ್ರಕ್ಕೆ ಸಸಿನ. ನಮ್ಮ ಕೂಡಲಸಂಗನ ಶರಣರ ಡೊಂಕು ಲಿಂಗಕ್ಕೆ ಸಸಿನ. ೯೬. ಆಳಿಗೊಂಡಿಹರೆಂದು ಅಂಜಲದೇಕೆ ? ನಾಸ್ತಿಕವಾಡಿಹರೆಂದು ನಾಚಲದೇಕೆ ? ಆರಾದಡಾಗಲಿ ಶ್ರೀ ಮಹಾದೇವಂಗೆ ಶರಣೆನ್ನಿ. ಏನೂ ಅರಿಯೆನೆಂದು ಮೋನಗೊಂಡಿರಬೇಡ ಕೂಡಲಸಂಗಮದೇವರ ...

ಬಸವಣ್ಣನ ವಚನಗಳು - 81 ರಿಂದ 90 ರವರೆಗೆ

ಬಸವಣ್ಣನ ವಚನಗಳು - 81 ರಿಂದ 90 ರವರೆಗೆ ೮೧. ಏತ ತಲೆವಾಗಿದರೇನು ? ಗುರುಭಕ್ತನಾಗಬಲ್ಲುದೆ ? ಇಕ್ಕುಳ ಕೈ ಮುಗಿದರೇನು ? ಭೃತ್ಯಾಚಾರಿಯಾಗಬಲ್ಲುದೆ ? ಗಿಳಿಯೋದಿದರೇನು ? ಲಿಂಗವೇದಿಯಾಗಬಲ್ಲುದೆ ? ಕೂಡಲಸಂಗನ ಶರಣರು ಬಂದ ಬರವ, ನಿಂದ ನಿಲವ ಅನಂಗಸಂಗಿಗಳೆತ್ತ ಬಲ್ಲರು ? ೮೨. ಒಲವಿಲ್ಲದ ಪೂಜೆ, ನೇಹವಿಲ್ಲದ ಮಾಟ; ಆ ಪೂಜೆಯು, ಆ ಮಾಟವು ಚಿತ್ರದ ರೂಹು ಕಾಣಿರಣ್ಣ! ಚಿತ್ರದ ಕಬ್ಬು ಕಾಣಿರಣ್ಣ! ಅಪ್ಪಿದರೆ ಸುಖವಿಲ್ಲ, ಮೆಲಿದರೆ ಸವಿಯಿಲ್ಲ; ಕೂಡಲಸಂಗಮದೇವ, ನಿಜವಿಲ್ಲದವನ ಭಕ್ತಿಯಿಂತುಟು! ೮೩. ಹಬ್ಬಕ್ಕೆ ತಂದ ಹರಕೆಯ ಕುರಿ ತೋರಣಕ್ಕೆ ತಂದ ತಳಿರ ಮೇಯಿತ್ತು! ಕೊಂದಹರೆಂಬುದನರಿಯದೆ ಬೆಂದೊಡಲ ಹೊರೆಯ ಹೋಯಿತ್ತು! ಅದಂದೆ ಹುಟ್ಟಿತು, ಅದಂದೆ ಹೊಂದಿತ್ತು. ಕೊಂದವರುಳಿದರೆ ಕೂಡಲಸಂಗಮದೇವ ? ೮೪. ಹಾವಿನ ಬಾಯಿ ಕಪ್ಪೆ ಹಸಿದು ತಾ ಹಾರುವ ನೊಣಕಾಸೆ ಮಾಡುವಂತೆ, ಶೂಲವನೇರುವ ಕಳ್ಳ ಹಾಲು ತುಪ್ಪವ ಕುಡಿದು ಮೇಲಿನ್ನೇಸು ಕಾಲ ಬದುಕುವನೋ ?! ಕೆಡುವೊಡಲ ನೆಚ್ಚಿ, ಕಡುಹುಸಿಯನೆ ಹುಸಿದು ಒಡಲ ಹೊರೆವವರ ಮೆಚ್ಚ ನಮ್ಮ ಕೂಡಲಸಂಗಮದೇವ. ೮೫. ಅರತವಡಗದು. ಕ್ರೋಧ ತೊಲಗದು; ಕ್ರೂರಕುಭಾಷೆ ಕುಹುಕ ಬಿಡದನ್ನಕ ನೀನೆತ್ತಲು ? ಶಿವನೆತ್ತಲು ? ಹೋಗತ್ತ ಮರುಳೆ! ಭವರೋಗವೆಂಬ ತಿಮಿರ ತಿಳಿಯದನ್ನಕ ಕೂಡಲಸಂಗಯ್ಯನೆತ್ತ ? ನೀನೆತ್ತ ? ಮರುಳೇ! ೮೬. ಹಾವು ತಿಂದವರ ನುಡಿಸ ಬಹುದು! ಗರ ಹೊಡೆದವರ ನುಡಿಸ ಬಹುದು! ಸಿರಿಗರ ಹೊ...

ಬಸವಣ್ಣನ ವಚನಗಳು - 71 ರಿಂದ 80 ರವರೆಗೆ

ಬಸವಣ್ಣನ ವಚನಗಳು - 71 ರಿಂದ 80 ರವರೆಗೆ ೭೧. ಅಳೆಯುತ್ತ ಅಳೆಯುತ್ತ ಬಳಲುವರಲ್ಲದೆ ಕೊಳಗ ಬಳಲುವುದೇ ? ನಡೆಯುತ್ತ ನಡೆಯುತ್ತ ಬಳಲುವರಲ್ಲದೆ, ಬಟ್ಟೆ ಬಳಲುವುದೆ ? ಶ್ರವವ ಮಾಡುತ್ತ ಮಾಡುತ್ತ ಬಳಲುವರಲ್ಲದೆ ಕೋಲು ಬಳಲುವುದೆ ? ನಿಜವನರಿಯದ ಭಕ್ತ ಬಳಲುವನಲ್ಲದೆ, ಲಿಂಗ ಬಳಲುವುದೆ ? ಕೂಡಲಸಂಗಮದೇವ, ಅರಸರಿಯದ ಬಿಟ್ಟಿಯೋಪಾದಿ! ೭೨. ಧರಣಿಯ ಮೇಲೊಂದು ಹಿರಿದಪ್ಪ ಅಂಗಡಿಯನಿಕ್ಕಿ ಹರದ ಕುಳ್ಳಿರ್ದ ನಮ್ಮ ಮಹದೇವಸೆಟ್ಟಿ. ಒಮ್ಮನವಾದರೆ ಒಡನೆ ನುಡಿವನು; ಇಮ್ಮನವಾದರೆ ನುಡಿಯನು. ಕಾಣಿಯ ಸೋಲ; ಅರ್ಧ ಕಾಣಿಯ ಗೆಲ್ಲ. ಜಾಣ ನೋಡವ್ವ ನಮ್ಮ ಕೂಡಲಸಂಗಮದೇವ. ೭೩. ನಂಬರು, ನಚ್ಚರು; ಬರಿದೆ ಕರೆವರು; ನಂಬಲರಿಯರೀ ಲೋಕದ ಮನುಜರು! ನಂಬಿ ಕರೆದಡೆ, "ಓ" ಎನ್ನನೇ ಶಿವನು ? ನಂಬದೆ, ನಚ್ಚದೆ ಬರಿದೆ ಕರೆವರ ಕೊಂಬ ಮೆಟ್ಟಿ ಕೂಗೆಂದ ಕೂಡಲಸಂಗಮದೇವ. ೭೪. ಹುತ್ತವ ಬಡಿದರೆ ಉರಗ ಸಾವುದೆ ಘೋರತಪವ ಮಾಡಿದರೇನು ಅಂತರಂಗ-ಆತ್ಮಶುದ್ಧಿಯಿಲ್ಲದವರನೆಂತು ನಂಬುವನಯ್ಯ ಕೂಡಲಸಂಗಮದೇವ ? ೭೫. ಮೇರು ಗುಣವನರಸುವುದೇ ಕಾಗೆಯಲ್ಲಿ ? ಪರುಷ ಗುಣವನರಸುವುದೇ ಕಬ್ಬುನದಲ್ಲಿ ? ಸಾಧು ಗುಣವನರಸುವನೇ ಅವಗುಣಿಯಲ್ಲಿ ? ಚಂದನ ಗುಣವನರಸುವುದೇ ತರುಗಳಲ್ಲಿ ? ಸರ್ವಗುಣಸಂಪನ್ನ ಲಿಂಗವೇ, ನೀನೆನ್ನಲ್ಲಿ ಅವಗುಣವನರಸುವುದೇ, ಕೂಡಲಸಂಗಮದೇವ! ೭೬ ಸಾರ, ಸಜ್ಜನರ ಸಂಗವ ಮಾಡುವುದು! ದೂರ, ದುರ್ಜನರ ಸಂಗ ಬೇಡವಯ್ಯ! ಆವ ಹಾವಾದರೇನು ...

ಬಸವಣ್ಣನ ವಚನಗಳು - 61 ರಿಂದ 70 ರವರೆಗೆ

ಬಸವಣ್ಣನ ವಚನಗಳು - 61 ರಿಂದ 70 ರವರೆಗೆ  ೬೧. ಓಡೆತ್ತ ಬಲ್ಲುದೋ ಅವಲಕ್ಕಿಯ ಸವಿಯ ? ಕೋಡಗ ಬಲ್ಲುದೇ ಸೆಳೆಮಂಚದ ಸುಖವ ? ಕಾಗೆ ನಂದನವನದೊಳಗಿದ್ದರೇನು, ಕೋಗಿಲೆಯಾಗಬಲ್ಲುದೇ ? ಕೊಳನ ತಡಿಯಲೊಂದು ಹೊರಸು ಕುಳಿತಿದ್ದರೇನು ಕಳಹಂಸೆಯಾಗಬಲ್ಲುದೇ ಕೂಡಲಸಂಗಮದೇವ ? ೬೨. ಎನಿಸು ಕಾಲ ಕಲ್ಲು ನೀರೊಳಗಿದ್ದರೇನು, ನೆನೆದು ಮೃದುವಾಗಬಲ್ಲುದೆ ? ಎನಿಸುಕಾಲ ನಿಮ್ಮ ಪೂಜಿಸಿ ಏವೆನಯ್ಯಾ ಮನದಲ್ಲಿ ದೃಢವಿಲ್ಲದನ್ನಕ ? ನಿಧಾನವ ಕಾಯ್ದಿದ್ದ ಬೆಂತರನ ವಿಧಿ ಎನಗಾಯಿತ್ತು ಕಾಣಾ ಕೂಡಲಸಂಗಮದೇವ. ೬೩. ಕೂಸುಳ್ಳ ಸೂಳೆ ಧನದಾಸೆಗೊತ್ತೆಗೊಂಡರೆ ಕೂಸಿಂಗಿಲ್ಲ, ಬೊಜಗಂಗಿಲ್ಲ; ಕೂಸನೊಮ್ಮೆ ಸಂತವಿಡುವಳು, ಬೊಜಗನನೊಮ್ಮೆ ನೆರೆವಳು; ಧನದಾಸೆ ಬಿಡದು ಕೂಡಲಸಂಗಮದೇವ. ೬೪. ಎರದೆಲೆಯಂತೆ ಒಳಗೊಂದು ಹೊರಗೊಂದಾದರೆ ಮೆಚ್ಚುವನೆ ? ತಾನು ತನ್ನಂತೆ! ನುಡಿ ಎರಡಾದರೆ ಮೆಚ್ಚುವನೆ ? ತಾನು ತನ್ನಂತೆ! ನಡೆ ಎರಡಾದರೆ ಮೆಚ್ಚುವನೆ ? ತಾನು ತನ್ನಂತೆ! ಉಡುವಿನ ನಾಲಗೆಯಂತೆ ಎರಡಾದರೆ ಮೆಚ್ಚುವನೇ ? ಕೂಡಲಸಂಗಮದೇವ ತಾನು ತನ್ನಂತೆ! ೬೫. ಭಕ್ತರ ಕಂಡರೆ ಬೋಳಪ್ಪಿರಯ್ಯ; ಸವಣರ ಕಂಡರೆ ಬತ್ತಲೆಯಪ್ಪಿರಯ್ಯ ಹಾರುವರ ಕಂಡರೆ ಹರಿನಾಮವೆಂಬಿರಯ್ಯ; ಅವರವರ ಕಂಡರೆ ಅವರವರಂತೆ ಸೂಳೆಗೆ ಹುಟ್ಟಿದವರ ತೋರದಿರಯ್ಯ. ಕೂಡಲಸಂಗಯ್ಯನ ಪೂಜಿಸಿ ಅನ್ಯದೈವಂಗಳಿಗೆರಗಿ ಭಕ್ತರೆನಿಸಿಕೊಂಬ ಅಜ್ಞಾನಿಗಳ ನಾನೇನೆಂಬೆನಯ್ಯ! ೬೬. ಗಂಡ ಶಿವಲಿಂಗದೇವರ ಭ...